ಜಿಎಸ್‌ಟಿ ಬದಲಾವಣೆಯಿಂದ ರಾಜ್ಯಕ್ಕೆ 15 ಸಾವಿರ ಕೋಟಿ ರೂ. ನಷ್ಟ- ಸಿಎಂ ಸಿದ್ದರಾಮಯ್ಯ

ದಿನೇಶ್ ಗುಂಡೂರಾವ್ ಅವರು ಕ್ಷೇತ್ರದ ಅಭಿವೃದ್ಧಿ ಬಗ್ಗೆ ಮಾತ್ರ ಶ್ರಮಿಸುವ ಜನಮುಖಿ ಶಾಸಕರು. ಇವರಿಗೆ ಉತ್ತಮ ಅವಕಾಶಗಳಿವೆ. ಮುಂದಿನ ಚುನಾವಣೆಯಲ್ಲಿ ಹೆಚ್ಚಿನ ಬಹುಮತದಿಂದ ಗೆಲ್ಲಿಸಲೇಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಗಾಂಧಿನಗರ ವಿಧಾನಸಭಾ ಕ್ಷೇತ್ರದ ಚಿಕ್ಕಪೇಟೆಯ ಆಧುನೀಕರಣ ಮತ್ತು ಗಾಂಧಿನಗರ ಕ್ಷೇತ್ರದ ರಸ್ತೆಗಳ ವೈಟ್ ಟಾಪಿಂಗ್ ಕಾಮಗಾರಿಗಳಿಗೆ ಅವರು ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದರು.

ಕೆಂಪೇಗೌಡರ ಕಾಲದಲ್ಲಿ ಪೇಟೆ ಬೀದಿಯಾಗಿದ್ದ ಇಲ್ಲಿನ‌ ಪೇಟೆಗಳು ಈಗಲೂ ಆ ಕಾಲದ ಸ್ವಭಾವವನ್ನೇ ಹೊಂದಿವೆ. ನಾವೊಮ್ಮೆ ಇಲ್ಲಿನ ರಸ್ತೆಗಳ ಅಗಲೀಕರಣದ ಬಗ್ಗೆ ಚಿಂತಿಸಿದ್ದೆವು. ಆದರೆ ದಿನೇಶ್ ಗುಂಡೂರಾವ್ ಅವರು ಒಪ್ಪಲಿಲ್ಲ. ನಮ್ಮ ಜನಗಳಿಗೆ ಸಮಸ್ಯೆ ಆಗುತ್ತದೆ ಸರ್ ಎಂದು ಸ್ಪಷ್ಟವಾಗಿ ನಿರಾಕರಿಸಿ, ರಸ್ತೆ ಅಗಲೀಕರಣ ಮಾಡದೆ, ರಸ್ತೆಗಳ ಆಧುನೀಕರಣ ಮತ್ತು ಚಿಕ್ಕಪೇಟೆಯ ಅಭಿವೃದ್ಧಿಗೆ ಯೋಜನೆ ರೂಪಿಸಿ ಜಾರಿ ಮಾಡಿದ್ದಾರೆ ಎಂದು ಹೇಳಿದರು.

ಬೆಂಗಳೂರು ವಿಪರೀತವಾಗಿ ಬೆಳೆಯುತ್ತಿರುವ ನಗರ. ನಗರದ ಜನಸಂಖ್ಯೆ ಹೆಚ್ಚುತ್ತಿದ್ದು, ಈ ಸವಾಲನ್ನು ಗೆಲ್ಲಲು ಬೆಂಗಳೂರಿನ‌ ರಸ್ತೆಗಳ ಆಧುನೀಕರಣ ಮತ್ತು ಅಭಿವೃದ್ಧಿಗೆ ಹೇರಳವಾದ ಹಣ ಒದಗಿಸುತ್ತಿದ್ದೇವೆ ಎಂದು ತಿಳಿಸಿದರು.

ಬೆಂಗಳೂರಿನ ಮೆಟ್ರೋಗೆ ಶೇ.87 ರಷ್ಟು ಹಣ ಕೊಡುವುದು ನಾವೇ. ಅಂದರೆ ರಾಜ್ಯದ ಜನತೆಯ ಶೇ.87 ರಷ್ಟು ಹಣದಲ್ಲಿ ಮೆಟ್ರೋ ಆಗಿದೆ. ಆದರೆ ಬಿಜೆಪಿಯವರು ಮೆಟ್ರೋ ಕೇಂದ್ರದ ಯೋಜನೆ ಎಂದು ತಿರುಚಿ ಸುಳ್ಳು ಹೇಳುತ್ತಾರೆ ಎಂದರು.

ಜಿಎಸ್‌ಟಿ ಜಾರಿ ಮಾಡಿ 8 ವರ್ಷ ಇಡೀ ಭಾರತೀಯರ ಹಣ ಸುಲಿದಿದ್ದು ಇದೇ ಕೇಂದ್ರ ಸರ್ಕಾರ ಮತ್ತು ಇದೇ ನರೇಂದ್ರ ಮೋದಿ ಅವರು. ಎಂಟು ವರ್ಷ ಸುಲಿಗೆ ಮಾಡಿ ಈಗ ಮೋದಿ ಫೋಟೋ ಹಾಕಿ “ದೀಪಾವಳಿ ಗಿಫ್ಟ್” ಎಂದು ನಾಚಿಕೆ ಇಲ್ಲದೆ ಬೆನ್ನು ತಟ್ಟಿಕೊಳ್ಳುತ್ತಿದ್ದಾರೆ. ಇಂಥಾ ನಕಲಿಗಳಿಗೆ ನೀವು ಓಟು ಹಾಕಿ ಈಗ ಏಕೆ ತಲೆ ಮೇಲೆ ಕೈ ಹೊತ್ತುಕೊಳ್ಳುವಂತಾಗಿದೆ ಎಂದು ಹೇಳಿದರು.

“ದೀಪಾವಳಿ ಗಿಫ್ಟ್” ಎಂದು ಜಾಹಿರಾತು ನೀಡಿರುವ ಮೋದಿ ಸರ್ಕಾರದ ಜಿಎಸ್‌ಟಿ ಬದಲಾವಣೆಯಿಂದ ರಾಜ್ಯಕ್ಕೆ, ರಾಜ್ಯದ ಜನರಿಗೆ 15 ಸಾವಿರ ಕೋಟಿ ರೂಪಾಯಿ ನಷ್ಟವಾಗಿದೆ ಎಂದು ತಿಳಿಸಿದರು.

ಬಿಜೆಪಿ ಅಧಿಕಾರದಲ್ಲಿದ್ದಾಗ ಒಂದೇ ಒಂದು ಹೊಸ ರಸ್ತೆ ನಿರ್ಮಿಸಲಿಲ್ಲ. ಒಂದೇ ಒಂದು ರಸ್ತೆ ಗುಂಡಿ ಮುಚ್ಚಲಿಲ್ಲ. ಈಗ ಇರುವ ರಸ್ತೆಗಳೆಲ್ಲಾ ನಮ್ಮ ಸರ್ಕಾರದ ಕಾಲದಲ್ಲೇ ಆಗಿರುವಂಥವು ಎಂದು ಹೇಳಿದರು.

ಒಂದು ವಾರದಲ್ಲಿ ರಸ್ತೆ ಗುಂಡಿಗಳನ್ನೆಲ್ಲಾ ಮುಚ್ಚಿ ಒಂದು ಲೇಯರ್ ಟಾರ್ ಹಾಕಬೇಕು ಎಂದು ಗ್ರೇಟರ್ ಬೆಂಗಳೂರು ಮುಖ್ಯ ಆಯುಕ್ತ ಮಹೇಶ್ವರ್ ರಾವ್ ಅವರಿಗೆ ಇಲ್ಲಿಯೇ ಸೂಚನೆ ನೀಡುತ್ತಿದ್ದೇನೆ ಎಂದರು.

ಹೊಸ ಹೊಸ ಔಟರ್ ರಿಂಗ್ ರಸ್ತೆ, ಸುರಂಗ ಮಾರ್ಗ, ಫ್ಲೈ ಓವರ್, ಡಬಲ್ ಡೆಕ್ಕರ್ ರಸ್ತೆಗಳು ಸೇರಿ ಬೆಂಗಳೂರಿನ ಅಭಿವೃದ್ಧಿಗೆ ₹1,20,000 ಕೋಟಿ ನೀಡುತ್ತಿದ್ದೇವೆ. ಆದ್ದರಿಂದ ಕೆಲಸ ಮಾಡುವವರ ಪರವಾಗಿ ನೀವು ಗಟ್ಟಿಯಾಗಿ ನಿಲ್ಲಬೇಕು. ದಿನೇಶ್ ಗುಂಡೂರಾವ್ ಅವರಂಥ ಶಾಸಕ ಸಿಕ್ಕಿರುವುದು ನಿಮ್ಮ ಅದೃಷ್ಟ ಎಂದು ತಿಳಿಸಿದರು.

Ramesh Babu

Journalist

Recent Posts

ಹೃದಯವಿದ್ರಾವಕ ಘಟನೆ: ಒಂದೇ ದಿನ ಪತಿ-ಪತ್ನಿ ದಾರುಣ ಸಾವು

ಬೆಳಗಾವಿಯಲ್ಲಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಅರವಳ್ಳಿ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ಒಂದೇ ದಿನ ಪತಿ-ಪತ್ನಿ ದಾರುಣ ಸಾವನ್ನಪ್ಪಿದ್ದಾರೆ. ಅರವಳ್ಳಿ…

5 hours ago

ಮಾರಕಾಸ್ತ್ರಗಳಿಂದ ಶಿಕ್ಷಕಿಯ ಕ್ರೂರ ಹತ್ಯೆ: ಕೊಲೆ ಬಳಿಕ ದುಷ್ಕರ್ಮಿಗಳಿಂದ ಶವಕ್ಕೆ ಬೆಂಕಿ

ಕಲಬುರಗಿ ಜಿಲ್ಲೆಯಲ್ಲಿ ಸರ್ಕಾರಿ ಶಾಲಾ ಶಿಕ್ಷಕಿಯ ಮೇಲೆ ನಡೆದ ಕ್ರೂರ ಹತ್ಯೆ ಪ್ರಕರಣ ಎಲ್ಲರಲ್ಲೂ ಆತಂಕ ಮೂಡಿಸಿದೆ. ಕಮಲಾಪುರ ತಾಲೂಕಿನ…

6 hours ago

ಲಾಕಪ್ ಡೆತ್ ಮತ್ತು ಮರಣದಂಡನೆ….

ಸುಮಾರು ಆರು ವರ್ಷಗಳ ಹಿಂದೆ ಅಂದರೆ 2020ರಲ್ಲಿ ತಮಿಳುನಾಡಿನ ತೂತುಕುಡಿ ಜಿಲ್ಲೆಯಲ್ಲಿ ನಡೆದ ಅಮಾನುಷ ಲಾಕಪ್ ಡೆತ್ ಬಗ್ಗೆ ಬರೆದ…

7 hours ago

ತಂದೆ-ಮಗನ ಲಾಕಪ್ ಡೆತ್ ಕೇಸ್; ತಮಿಳುನಾಡಿನ 9 ಪೊಲೀಸರಿಗೆ ಗಲ್ಲು ಶಿಕ್ಷೆ

2020ರಲ್ಲಿ ತಮಿಳುನಾಡಿನಲ್ಲಿ ನಡೆದ ಸಾತಂಕುಲಂ ಕಸ್ಟಡಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಮದ್ರಾಸ್ ಹೈಕೋರ್ಟ್‌ ಪೀಠವು 9 ಪೊಲೀಸ್ ಸಿಬ್ಬಂದಿಗೆ…

17 hours ago

ಇಂಧನ ತೈಲ ಮತ್ತು ಅನಿಲ ಪೂರೈಕೆ ಸಮಸ್ಯೆ – ರಾಜ್ಯದ ಜನತೆಗೆ ತೀವ್ರ ಸಂಕಷ್ಟ- ಸಚಿವ ಕೆ.ಎಚ್ ಮುನಿಯಪ್ಪ ಪ್ರತಿಕ್ರಿಯೆ

ರಾಜ್ಯದಲ್ಲಿ ಇಂಧನ ತೈಲ ಮತ್ತು ಅನಿಲ ಪೂರೈಕೆಯ ಸಮಸ್ಯೆ ಗಂಭೀರ ಸ್ವರೂಪ ಪಡೆದಿರುವ ಹಿನ್ನೆಲೆಯಲ್ಲಿ, ಆಹಾರ, ನಾಗರಿಕ ಸರಬರಾಜು ಮತ್ತು…

17 hours ago

ಆಟೋ ಎಲ್‌ಪಿಜಿಗಾಗಿ ಸಾಲುಗಟ್ಟಿ ನಿಂತ ನೂರಾರು ಆಟೋಗಳು

ಆಟೋ ಎಲ್‌ಪಿಜಿಗಾಗಿ ಡಿಕ್ರಾಸ್ ರಸ್ತೆಯ ಸೂಪರ್ ಗ್ಯಾಸ್ ಬಂಕ್ ಬಳಿ ನೂರಾರು ಆಟೋಗಳು ಸಾಲುಗಟ್ಟಿ ನಿಂತಿವೆ. ಆಟೋ ಎಲ್ಪಿಜಿ ಇಲ್ಲದೆ…

20 hours ago