Categories: ಕೋಲಾರ

ಜಿಪಂ ಮಾಜಿ ಸದಸ್ಯ ರಾಮಚಂದ್ರ ಕಾಂಗ್ರೆಸ್ ತೊರೆದು ಜೆಡಿಎಸ್‌ ಸೇರ್ಪಡೆ

ಕೋಲಾರ: ಕಾಂಗ್ರೆಸ್ ಪಕ್ಷದಿಂದ ಬಲಗೈ ಸಮುದಾಯಕ್ಕೆ ನಿರಂತರವಾಗಿ ಅನ್ಯಾಯ ಮಾಡಿಕೊಂಡು ಬರಲಾಗಿದ್ದು, ನಮ್ಮ ಸಮುದಾಯಕ್ಕೆ ಬೆಂಬಲವಾಗಿದ್ದ ಕೆ.ಎಚ್.ಮುನಿಯಪ್ಪರಿಗೂ ಟಿಕೆಟ್ ನೀಡದ ಹಿನ್ನೆಲೆಯಲ್ಲಿ ಬೇಸತ್ತು ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾಗಿರುವುದಾಗಿ ಬಂಗಾರಪೇಟೆ ವಿಧಾನಸಭಾ ಕ್ಷೇತ್ರದ ಪ್ರಭಾವಿ ಮುಖಂಡ ರಾಮಚಂದ್ರ ತಿಳಿಸಿದರು.

ನಗರದ ಪತ್ರಕರ್ತರ ಭವನದಲ್ಲಿ ಶನಿವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಜಿಪಂ ಮಾಜಿ ಸದಸ್ಯ, ತಾಪಂನಲ್ಲಿ 10 ವರ್ಷ ಸದಸ್ಯ, ಉಪಾಧ್ಯಕ್ಷ, ಅಧ್ಯಕ್ಷನಾಗಿ ಸೇವೆ ಮಾಡಿದ್ದೇನೆ. ನಾನು ಎಲ್ಲ ಸಮಾಜದ ಮುಖಂಡರೊಂದಿಗೆ ಉತ್ತಮವಾಗಿ ನಡೆದುಕೊಂಡಿದ್ದೇನೆ ಕೆ.ಎಚ್.ಮುನಿಯಪ್ಪ ಜತೆಗೆ 25 ವರ್ಷ ಸುದೀರ್ಘವಾಗಿ ಕೆಲಸ ಮಾಡಿದ್ದು, ಲೋಕಸಭೆ ಚುನಾವಣೆಯಲ್ಲಿ ಅವರಿಗೆ ಟಿಕೆಟ್ ಸಿಗದ ಹಿನ್ನೆಲೆಯಲ್ಲಿ ಹಾಗೂ ಬಲಗೈ ಸಮುದಾಯಕ್ಕೆ ಕಾಂಗ್ರೆಸ್ ಪಕ್ಷದಿಂದ ನಿರಂತರ ಅನ್ಯಾಯವಾಗುತ್ತಿರುವ ಬಗ್ಗೆ ನಿಯೋಗ ತೆರಳಿ ಕಾಂಗ್ರೆಸ್ ನಾಯಕರ ಬಳಿ ಮನವಿ ಮಾಡಿದರೂ ಪ್ರಯೋಜನವಾಗಲಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಕರೆ ಮಾಡಿ ಜೆಡಿಎಸ್ ಪಕ್ಷಕ್ಕೆ ಆಹ್ವಾನಿಸಿದ್ದು, ಯಾವುದೇ ಬೇಡಿಕೆಗಳನ್ನಿಡದೆ ಪಕ್ಷದ ತತ್ವ ಸಿದ್ಧಾಂತ ಒಪ್ಪಿ ಸೇರ್ಪಡೆಯಾಗಿರುವುದಾಗಿ ಹೇಳಿದರು.

ಬಲಗೈ ಸಮುದಾಯಕ್ಕೆ ಕೆ.ಎಚ್.ಮುನಿಯಪ್ಪ ಬಲವಾಗಿದ್ದರು ಇದೀಗ ಯಾರೂ ಇಲ್ಲದ ಕಾರಣ ಕಾಂಗ್ರೆಸ್ ವಿರುದ್ಧ ಸಿಟ್ಟು ಹಾಗೂ ಕೆ.ಎಚ್.ಮುನಿಯಪ್ಪರ ಅಸಹಾಯಕತೆಯಿಂದಾಗಿ ಸ್ವಾಭಿಮಾನಕ್ಕೆ ಧಕ್ಕೆ ಆದ ಹಿನ್ನೆಲೆಯಲ್ಲಿ ಜೆಡಿಎಸ್ ಸೇರ್ಪಡೆಯ ತೀರ್ಮಾನ ಕೈಗೊಳ್ಳಲಾಗಿದೆ.

ಜೆಡಿಎಸ್ ಪಕ್ಷ ರಾಜ್ಯ ಹಾಗೂ ಜಿಲ್ಲೆಯಲ್ಲಿ ಪ್ರಬುದ್ಧವಾಗಿದ್ದು, ಮೈತ್ರಿ ಅಭ್ಯರ್ಥಿ ಮಲ್ಲೇಶ್ ಬಾಬು ಸ್ಥಳೀಯರು, ಕಾಂಗ್ರೆಸ್ ಅಭ್ಯರ್ಥಿ ಕೆ.ವಿ.ಗೌತಮ್ ಹೊರಗಿನವರಾಗಿದ್ದಾರೆ. ಹೀಗಾಗಿ ನಮ್ಮ ಸಮುದಾಯದ ಎಲ್ಲರೂ ಸೇರಿ ಮೈತ್ರಿ ಅಭ್ಯರ್ಥಿಯನ್ನು ಗೆಲ್ಲಿಸಿಕೊಡಬೇಕೆಂದು ಮನವಿ ಮಾಡಿದರು.

ಕೋಲಾರ ವಿಧಾನಸಭಾ ಕ್ಷೇತ್ರದ ಜೆಡಿಎಸ್‌ ಮುಖಂಡ ಸಿಎಂಆರ್ ಶ್ರೀನಾಥ್ ಮಾತನಾಡಿ, ಬಂಗಾರಪೇಟೆ ಕ್ಷೇತ್ರದ ಕಾಂಗ್ರೆಸ್‌ನ ಹುರಿಯಾಳು, ೩೦ ವರ್ಷಗಳಿಂದ ಉತ್ತಮ ನಾಯಕತ್ವ ಹೊಂದಿದ್ದ ಸಕ್ರಿಯ ಮುಖಂಡ ರಾಮಚಂದ್ರ ಅವರು ಕಾಂಗ್ರೆಸ್ ನಲ್ಲಿ ಪ್ರಭಾವಿ ಮುಖಂಡರಾಗಿ, ಜಿಲ್ಲೆಯಲ್ಲಿ ಪ್ರಭಲರಾಗಿದ್ದಾರೆ. ಶಾಸಕರು ಸರಿಯಾದ ರೀತಿಯಲ್ಲಿ ನಡೆಸಿಕೊಳ್ಳದ ಕಾರಣ ಜೆಡಿಎಸ್ ನ ತತ್ವ ಸಿದ್ಧಾಂತ ಮೆಚ್ಚಿ ಪಕ್ಷಕ್ಕೆ ಸೇರ್ಪಡೆಯಾಗಿದ್ದು, ಎಲ್ಲರನ್ನು ಒಗ್ಗಟ್ಟಾಗಿ ತೆಗೆದುಕೊಂಡು ಹೋಗಲು ತೀರ್ಮಾನ ಮಾಡಿದ್ದಾರೆ. ಇವರ ಸೇರ್ಪಡೆಯಿಂದಾಗಿ ಪಕ್ಷಕ್ಕೆ ಬಲ ಬಂದಿದೆ ಎಂದರು.

ಸುದ್ದಿಗೋಷ್ಠಿಯಲ್ಲಿ ಹಿರಿಯ ಮುಖಂಡ ರಾಮಚಂದ್ರರೆಡ್ಡಿ, ಹುಲಿಬೆಲೆ ಗ್ರಾಪಂ ಮಾಜಿ ಉಪಾಧ್ಯಕ್ಷ ರಂಗನಾಥ್, ಮುಖಂಡರಾದ ಯಲ್ಲಪ್ಪ, ಬಲಿಜ ಸಮುದಾಯದ ತೋಟಗಳ ಅಶೋಕ್ ಉಪಸ್ಥಿತರಿದ್ದರು.

Ramesh Babu

Journalist

Recent Posts

ಮಹಾವೀರ ಜಯಂತಿ: ರೋಗಿಗಳಿಗೆ ಹಣ್ಣು ಹಂಪಲು ವಿತರಣೆ

ಇಂದು ನಾಡಿನಾದ್ಯಂತ ಮಹಾವೀರ ಜಯಂತಿಯನ್ನು ಅದ್ಧೂರಿಯಾಗಿ ಆಚರಣೆ ಮಾಡಲಾಯಿತು. ಅದೇರೀತಿ ದೊಡ್ಡಬಳ್ಳಾಪುರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಒಳರೋಗಿಗಳಿಗೆ ಹಣ್ಣು ಹಂಪಲು ವಿತರಣೆ…

1 hour ago

ನಾನು ಯಾರ ಜಮೀನು ಕಬಳಿಕೆ‌ ಮಾಡಿಲ್ಲ- ಕಾನೂನಾತ್ಮಕವಾಗಿ ಜಮೀನು ಖರೀದಿ ಮಾಡಿದ್ದೇನೆ- ನನ್ನ ಏಳಿಗೆ ಸಹಿಸದವರಿಂದ ನನ್ನ ಮೇಲೆ ಹಲ್ಲೆ ನಡೆದಿದೆ- ಕಾನೂನು ಹೋರಾಟ ಮಾಡಿ ಗೆಲ್ಲುವೆ- ವಕೀಲ ಪ್ರತಾಪ್

ನಾನು ವೃತ್ತಿಯಲ್ಲಿ ವಕೀಲನಾಗಿದ್ದೇನೆ. ವಕೀಲ ವೃತ್ತಿಯಲ್ಲಿ ಬಂದಂತಹ ಹಣದಿಂದ ದೊಡ್ಡಬಳ್ಳಾಪುರ ತಾಲೂಕಿನ ಸಾಸಲು ಹೋಬಳಿಯ ದಡಘಟ್ಟಮಡಗು ಸಮೀಪ ಸರ್ವೇ ನಂ…

2 hours ago

KIADB ಭೂಸ್ವಾಧೀನ ವಿರೋಧಿಸಿ ತಾಲೂಕು ಕಚೇರಿಗೆ ಟ್ರ್ಯಾಕ್ಟರ್ ರ್ಯಾಲಿ

ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ, ಚಿಕ್ಕಬೆಳವಂಗಲ, ರಾಂಪುರ. ನಾರನಹಳ್ಳಿ, ಸೊಣ್ಣೇನಹಳ್ಳಿ  ಗ್ರಾಮಗಳ ವ್ಯಾಪ್ತಿಯ ಸುಮಾರು 2100 ಎಕರೆ ಭೂಮಿಯನ್ನು ಕೆಐಎಡಿಬಿ ಸ್ವಾಧೀನಪಡಿಸಿಕೊಳ್ಳಲು…

10 hours ago

ಹುಟ್ಟಿಸುವವನೂ ಅವನೇ…. ಸಾಯಿಸುವವನೂ ಅವನೇ…

ದೇವರು ಎಷ್ಟೊಂದು ಒಳ್ಳೆಯವನಲ್ಲವೇ........ ಲಕ್ಷಾಂತರ ಜನರನ್ನು ಕೊಲ್ಲಿಸಲು ಅಡಾಲ್ಫ್ ಹಿಟ್ಲರನನ್ನು ಒಂದು ದೇಶದ ಅಧ್ಯಕ್ಷನನ್ನಾಗಿಸಿದ. ಈಗ ಡೊನಾಲ್ಡ್ ಟ್ರಂಪ್ ಅವರನ್ನು…

16 hours ago

ಮಹಿಳೆಯರು ಎಲ್ಲ ವಲಯಗಳಲ್ಲಿ ತಮ್ಮ ಛಾಪು ಮೂಡಿಸಿದ್ದು, ಸಬಲೀಕರಣದ ಆಶಯ ಸಾಕಾರದತ್ತ ಸಾಗುತ್ತಿದೆ-ಎನ್.ಶೋಭಾ

ಮಹಿಳೆಯರು ಎಲ್ಲ ವಲಯಗಳಲ್ಲಿ ತಮ್ಮ ಛಾಪು ಮೂಡಿಸಿದ್ದು, ಮಹಿಳಾ ಸಬಲೀಕರಣದ ಆಶಯ ಸಾಕಾರದತ್ತ ಸಾಗುತ್ತಿದೆ ಎಂದು ಆರಕ್ಷಕ ನಿರೀಕ್ಷಕರಾದ ಎನ್.ಶೋಭಾ…

1 day ago

ಮನೆ ಹೊಸ್ತಿಲಿನಲ್ಲಿ ಪೂಜೆಗಿಟ್ಟಿದ್ದ ಒಣಗಿದ ದಾಸವಾಳ ಹೂ ನುಂಗಿ ಆರುವರೆ ತಿಂಗಳ ಮಗು ದಾರುಣ ಸಾವು

ಮನೆಯ ಹೊಸ್ತಿಲಿನಲ್ಲಿ ಪೂಜೆಗಾಗಿ ಇಟ್ಟಿದ್ದ ಒಣಗಿದ ದಾಸವಾಳದ ಹೂವನ್ನು ಆಟವಾಡುತ್ತಾ ನುಂಗಿದ ಆರುವರೆ ತಿಂಗಳ ಕಂದಮ್ಮ ಉಸಿರುಗಟ್ಟಿ ಸಾವನ್ನಪ್ಪಿರುವ ಘಟನೆ…

1 day ago