ಜಿಲ್ಲಾಡಳಿತ, ಜಿಲ್ಲಾ ಪೊಲೀಸ್ ವತಿಯಿಂದ ಮಾದಕ ವಸ್ತುಗಳ ನಿಯಂತ್ರಣಕ್ಕೆ ಕ್ರಮ

ಮಾದಕ ವ್ಯಸನ ಮುಕ್ತ ಸಮಾಜ ನಿರ್ಮಾಣ ನಮ್ಮೆಲ್ಲರ ಗುರಿ ಆಗಿದ್ದು, ಯುವ ಸಮೂಹಕ್ಕೆ ಜಾಗೃತಿ ಮೂಡಿಸಬೇಕು ಎಂದು ಜಿಲ್ಲಾಧಿಕಾರಿ ಎಬಿ ಬಸವರಾಜು ಅವರು ಹೇಳಿದರು.

ದೇವನಹಳ್ಳಿ ಟೌನ್ ನ ಬೊಮ್ಮವಾರ ಗ್ರಾಮದಲ್ಲಿರುವ ಗಾಂಧೀ ಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಮಾದಕ ವಸ್ತು ನಿಯಂತ್ರಣ ಕುರಿತು ಅರಿವು, ಮಾಸ್ಟರ್ ತರಬೇತಿದಾರರಿಗೆ ತರಬೇತಿ ಕಾರ್ಯಾಗಾರನ್ನು ಉದ್ದೇಶಿಸಿ ಅವರು ಮಾತನಾಡಿದರು,

ಮಾದಕ ವ್ಯಸನವು ಸಮಾಜದ ಒಂದು ಪಿಡುಗಾಗಿ ಪರಿಣಮಿಸಿದೆ. ಪೋಷಕರು ತಮ್ಮ ಮಕ್ಕಳ ಚಲನವಲನ ಬಗ್ಗೆ ನಿತ್ಯ ಮತ್ತು ಗಮನಹರಿಸಬೇಕು, ಶಿಕ್ಷಕರು ಕೂಡ ವಿದ್ಯಾರ್ಥಿಗಳ ಬಗ್ಗೆ ಗಮನ ಹರಿಸಬೇಕು. ಸಾಕಷ್ಟು ಯುವಕ ಯುವತಿಯರು ಹೆಚ್ಚಾಗಿ ಮಾದಕ ವ್ಯಸನಿಗಳಾಗುತ್ತಾರೆ. ಹಾಗಾಗಿ ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಮಾದಕ ವ್ಯಸನಗಳಿಂದಾಗುವ ದುಷ್ಪರಿಣಾಮಗಳ ಕುರಿತು ತಿಳುವಳಿಕೆ ಮೂಡಿಸುವುದು, ಜಾಗೃತಿ ಮೂಡಿಸುವುದು ನಮ್ಮೆಲ್ಲರ ಜವಾಬ್ದಾರಿ ಆಗಿದೆ. ಹಾಗಾಗಿ ಶಿಕ್ಷಕರಿಗೆ ತರಬೇತಿ ನೀಡಲಾಗಿದೆ. ನೀವು ಎಲ್ಲಾ ಶಾಲಾ ವಿದ್ಯಾರ್ಥಿಗಳಿಗೆ ಅರಿವು ಮೂಡಿಸುವಂತಹ ಕೆಲಸ ಮಾಡಿ, ಮಾದಕ ವ್ಯಸನ ಮುಕ್ತ ಸಮಾಜಕ್ಕೆ ನಾವೆಲ್ಲರೂ ಕೈ ಜೋಡಿಸಿ ಕೆಲಸ ಮಾಡಬೇಕು ಎಂದರು.

ಎಸ್ಪಿ ಸಿಕೆ ಬಾಬಾ ಅವರು ಮಾತನಾಡಿ ತರಬೇತಿಗೆ ಶಿಕ್ಷಕರನ್ನು ಆಯ್ಕೆ ಮಾಡಿರುವ ಉದ್ದೇಶ ಶಿಕ್ಷಕರು ತಮ್ಮ ವ್ಯಾಪ್ತಿಯ ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಇದರ ಬಗ್ಗೆ ಅರಿವು ಮೂಡಿಸಬೇಕು. ಯುವ ಸಮೂಹವನ್ನು ಮಾದಕ ವ್ಯಸನದಿಂದ ದೂರ ಇಡಬೇಕು. ಮಾದಕ ವಸ್ತುಗಳ ನಿರ್ಮೂಲನೆ ಮಾಡುವ ನಿಟ್ಟಿನಲ್ಲಿ ಇದು ಒಂದು ಯುದ್ಧ, ಪ್ರತಿಯೊಬ್ಬ ವಿದ್ಯಾರ್ಥಿಗೆ ಅರಿವು ತಲುಪಬೇಕು. ಡ್ರಗ್ಸ್ ಮುಕ್ತ ಜಿಲ್ಲೆ ಮಾಡುವ ನಿಟ್ಟಿನಲ್ಲಿ ನಾವೆಲ್ಲರೂ ಕೈ ಜೋಡಿಸಬೇಕು ಎಂದು ಹೇಳಿದರು.

ಕಾರ್ಯಾಗಾರದಲ್ಲಿ ವಿವಿಧ ಇಲಾಖೆಗಳ ಉಪನ್ಯಾಸಕರಿಂದ ಮಾದಕ ವಸ್ತುಗಳ ಸೇವನೆ, ಮಾರಾಟ, ಸಾಗಾಟ, ಬಳಕೆ ಕುರಿತು ಶಾಲಾ ಕಾಲೇಜಿನ ಕ್ಲಸ್ಟರ್ ಸಂಪನ್ಮೂಲ ವ್ಯಕ್ತಿಗಳಿಗೆ ತರಬೇತಿ ನೀಡಲಾಗಿದೆ. ಈ ಸೂಪರ್ವೈಸರ್ ಗಳು ತಮ್ಮ ವ್ಯಾಪ್ತಿಯಲ್ಲಿ ಬರುವ ಶಾಲಾ, ಕಾಲೇಜುಗಳಲ್ಲಿ ಮಾದಕ ವ್ಯಸನದಿಂದಾಗುವ ದುಷ್ಪರಿಣಾಮಗಳ ಕುರಿತು ವಿದ್ಯಾರ್ಥಿಗಳಿಗೆ ಅರಿವು ಮೂಡಿಸಲಿದ್ದು ಮಾದಕ ವಸ್ತುಗಳ ನಿಯಂತ್ರಣಕ್ಕೆ ಸಹಕಾರಿ ಆಗಲಿದೆ.

ಕಾರ್ಯಾಗಾರದಲ್ಲಿ ಅಬಕಾರಿ ಇಲಾಖೆ ಜಿಲ್ಲಾಧಿಕಾರಿ ರವೀಂದ್ರ, ಪೊಲೀಸ್ ಎಎಸ್ಪಿ ನಾಗರಾಜ್, ಡಿವೈಎಸ್ಪಿ ಸೈಯದ್ ತಬ್ಸಿವುಲ್ಲಾ, ದೊಡ್ಡಬಳ್ಳಾಪುರ ಡಿವೈಎಸ್ಪಿ ಪಾಂಡುರಂಗ, ದೊಡ್ಡಬಳ್ಳಾಪುರ ಮಹಿಳಾ ಪೊಲೀಸ್ ಠಾಣೆಯ ಇನ್ಸ್ ಪೆಕ್ಟರ್ ಡಾ. ನವೀನ್ ಕುಮಾರ್ ಎಂ.ಬಿ, ಎನ್ಸಿಬಿ ಸೂಪರಿಂಟೆಂಡೆಂಟ್ ರತನ್, ಆರೋಗ್ಯ ಇಲಾಖೆಯ ಮನೋವೈದ್ಯರಾದ ಡಾ.ಗರೀಶ್ ಕುಮಾರ್, ಇಶಾ ವಾಲೆಂಟಿರಿ ಮನು, ಡಾ ಪ್ರಮೋದ್, ಸೇರಿದಂತೆ ಶಿಕ್ಷಕರು, ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು.

Ramesh Babu

Journalist

Recent Posts

ತಂದೆ-ಮಗನ ಲಾಕಪ್ ಡೆತ್ ಕೇಸ್; ತಮಿಳುನಾಡಿನ 9 ಪೊಲೀಸರಿಗೆ ಗಲ್ಲು ಶಿಕ್ಷೆ

2020ರಲ್ಲಿ ತಮಿಳುನಾಡಿನಲ್ಲಿ ನಡೆದ ಸಾತಂಕುಲಂ ಕಸ್ಟಡಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಮದ್ರಾಸ್ ಹೈಕೋರ್ಟ್‌ ಪೀಠವು 9 ಪೊಲೀಸ್ ಸಿಬ್ಬಂದಿಗೆ…

7 hours ago

ಇಂಧನ ತೈಲ ಮತ್ತು ಅನಿಲ ಪೂರೈಕೆ ಸಮಸ್ಯೆ – ರಾಜ್ಯದ ಜನತೆಗೆ ತೀವ್ರ ಸಂಕಷ್ಟ- ಸಚಿವ ಕೆ.ಎಚ್ ಮುನಿಯಪ್ಪ ಪ್ರತಿಕ್ರಿಯೆ

ರಾಜ್ಯದಲ್ಲಿ ಇಂಧನ ತೈಲ ಮತ್ತು ಅನಿಲ ಪೂರೈಕೆಯ ಸಮಸ್ಯೆ ಗಂಭೀರ ಸ್ವರೂಪ ಪಡೆದಿರುವ ಹಿನ್ನೆಲೆಯಲ್ಲಿ, ಆಹಾರ, ನಾಗರಿಕ ಸರಬರಾಜು ಮತ್ತು…

7 hours ago

ಆಟೋ ಎಲ್‌ಪಿಜಿಗಾಗಿ ಸಾಲುಗಟ್ಟಿ ನಿಂತ ನೂರಾರು ಆಟೋಗಳು

ಆಟೋ ಎಲ್‌ಪಿಜಿಗಾಗಿ ಡಿಕ್ರಾಸ್ ರಸ್ತೆಯ ಸೂಪರ್ ಗ್ಯಾಸ್ ಬಂಕ್ ಬಳಿ ನೂರಾರು ಆಟೋಗಳು ಸಾಲುಗಟ್ಟಿ ನಿಂತಿವೆ. ಆಟೋ ಎಲ್ಪಿಜಿ ಇಲ್ಲದೆ…

9 hours ago

ಪ್ರತಿಷ್ಠಿತ ಶಾಲೆಗಳಲ್ಲಿ 6ನೇ ತರಗತಿ ಪ್ರವೇಶಾತಿಗೆ ಅರ್ಜಿ ಆಹ್ವಾನ

2026-27 ನೇ ಸಾಲಿನಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪ್ರತಿಷ್ಠಿತ ಶಾಲೆಗಳಲ್ಲಿ 6ನೇ ತರಗತಿ(ಆಂಗ್ಲ ಮಾಧ್ಯಮ)ಗೆ ಸೇರಲು ಪರಿಶಿಷ್ಟ ಪಂಗಡದ ಪ್ರತಿಭಾವಂತ…

11 hours ago

ಛಲವಾದಿ‌‌ ಮಹಾಸಭಾ ದೊಡ್ಡಬಳ್ಳಾಪುರ ತಾಲೂಕು ಅಧ್ಯಕ್ಷರಾಗಿ ಎಸ್ ಯು ರಮೇಶ್ ಅವಿರೋಧ ಆಯ್ಕೆ

ಛಲವಾದಿ‌‌ ಮಹಾಸಭಾ ದೊಡ್ಡಬಳ್ಳಾಪುರ ತಾಲೂಕು ಅಧ್ಯಕ್ಷರಾಗಿ ಎಸ್ ಯು ರಮೇಶ್ ಅವಿರೋಧವಾಗಿ ಆಯ್ಕೆ ಆಗಿದ್ದಾರೆ. ಜಿಲ್ಲಾಧ್ಯಕ್ಷ ನರೇಶ್ ನೇತೃತ್ವದಲ್ಲಿ ನಗರದ…

13 hours ago

ಖತರ್ನಾಕ್ ಬೈಕ್ ಕಳ್ಳರ ಬಂಧನ: ಬಂಧಿತರಿಂದ 18.30 ಲಕ್ಷ ಮೌಲ್ಯದ 27 ಬೈಕ್ ಗಳು ವಶ

ಬೆಳಗಾವಿಯ ಸಂಕೇಶ್ವರ ಪೊಲೀಸರಿಂದ ಭರ್ಜರಿ ಕಾರ್ಯಾಚರಣೆ ನಡೆದಿದೆ. ಅಂತಾರಾಜ್ಯ ಇಬ್ಬರು ಬೈಕ್ ಕಳ್ಳರನ್ನು ಬಂಧಿಸಲಾಗಿದೆ. ಬಂಧಿತರಿಂದ 18.30 ಲಕ್ಷ ಮೌಲ್ಯದ…

13 hours ago