ಜಿಲ್ಲಾಡಳಿತ ಭವನದಲ್ಲಿ ಭಗವಾನ್ ಬುದ್ದ ಜಯಂತಿ ಆಚರಣೆ

ಭಗವಾನ್ ಬುದ್ಧರ ಜ್ಞಾನ ಇಡೀ ಜಗತ್ತಿಗೆ ಪಸರಿಸಿದೆ. ಅವರ ಶಾಂತಿ, ಸಹನೆ, ಸಹಬಾಳ್ವೆ ಸಂದೇಶಗಳು ನಮಗೆಲ್ಲರಿಗೂ ಸ್ಪೂರ್ತಿ. ಜ್ಞಾನದ ಬೆಳಕನ್ನು ಜಗತ್ತಿಗೇ ನೀಡಿದಂತಹ ಮಹಾನ್ ವ್ಯಕ್ತಿ ಗೌತಮ ಬುದ್ಧರ ತತ್ವಾದರ್ಶಗಳನ್ನು ನಾವೆಲ್ಲರೂ ಪಾಲಿಸೋಣ ಎಂದು ಜಿಲ್ಲಾಧಿಕಾರಿ ಎ.ಬಿ ಬಸವರಾಜು ಅವರು ಹೇಳಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ಆಯೋಜಿಸಿದ್ದ ‘ಭಗವಾನ್ ಬುದ್ಧ’ ಜಯಂತಿ ಕಾರ್ಯಕ್ರಮವನ್ನು ದೀಪ ಬೆಳಗುವ ಮೂಲಕ ಉದ್ಘಾಟಿಸಿ ಮಾತನಾಡಿದರು.

ಗೌತಮ ಬುದ್ಧರ ಜಯಂತಿಯನ್ನು ಸರ್ಕಾರದಿಂದ ಪ್ರಥಮವಾಗಿ ಆಚರಿಸಲಾಗುತ್ತಿದೆ. ಬುದ್ಧನ ಜನನ, ಮರಣ ಹಾಗೂ ಜ್ಞಾನೋದಯವನ್ನು ಸ್ಮರಿಸುವ ಉದ್ದೇಶದಿಂದ ಬುದ್ಧ ಜಯಂತಿ ಆಚರಿಸಲಾಗುತ್ತಿದೆ. ಜ್ಞಾನೋದಯ, ಕರುಣೆ ಮತ್ತು ಶಾಂತಿಯನ್ನು ಪರಿಗಣಿಸಲು ಇದು ಒಂದು ದಿನವಾಗಿದೆ. ಲೋಕಕ್ಕೆ ಶಾಂತಿ, ಅಹಿಂಸೆಯ ಮಹತ್ವವನ್ನು ಭೋದಿಸಿದ ಭಗವಾನ್ ಬುದ್ಧರ ತತ್ವ ಬೋಧನೆಗಳನ್ನು ಅರಿತರೆ ಜೀವನದಲ್ಲಿ ಸುಖ ಶಾಂತಿ ನೆಮ್ಮದಿ ನೆಲೆಯೂರಲಿದೆ ಎಂದರು.

ದಿವ್ಯ ಸಾನಿದ್ಯರಾಗಿದ್ದ ಬೌದ್ಧ ಬಿಕ್ಕುಣಿ ಮಾತಾ ಮೈತ್ರಿ ಅವರು ಮಾತನಾಡಿ ಬುದ್ಧನು ಹೇಳಿರುವ ಬೌದ್ಧ ಧರ್ಮದ 3 ಸಂದೇಶವನ್ನು ತಿಳಿಸಿದರು. ಬುದ್ಧರ ಉಪದೇಶಗಳು ಜ್ಞಾನ ಮಾರ್ಗವನ್ನು ಅರಿತರೇ ಅದು ಮನುಷ್ಯರ ಮನಸ್ಸಿನ ಶುದ್ಧಿ ಮತ್ತು ಇದರಿಂದ ದುಃಖ ನಿವಾರಣೆ ಹೊಂದಲು ಸಾಧ್ಯವಾಗುತ್ತದೆ ಎಂದರು.

ವಿಶೇಷ ಉಪನ್ಯಾಸ ನೀಡಿದ ವಕೀಲ ಮಹೇಶ್ ದಾಸ್ ಅವರು ಪ್ರಾಚೀನ ಗ್ರಂಥಗಳ ಪ್ರಕಾರ, ಭಗವಾನ್ ಬುದ್ಧನು ರಾಜಕುಮಾರ ಸಿದ್ದಾರ್ಥ ಆಗಿ ಜನಿಸಿ, ಯಾವಾಗಲೂ ಐಷಾರಾಮಿ ಮತ್ತು ಭೌತಿಕ ಸಂತೋಷಗಳಿಂದ ತನ್ನ ಜೀವನವನ್ನು ಸಾಗಿಸುತ್ತಿದ್ದನು. ಒಮ್ಮೆ, ಅವನು ಒಬ್ಬ ಮುದುಕ, ಅಸ್ವಸ್ಥ ಮತ್ತು ಶವವನ್ನು ನೋಡಿದನು. ಒಬ್ಬ ಮನುಷ್ಯನ ದುಃಖದ ಹಿಂದಿನ ಕಾರಣಗಳನ್ನು ಹುಡುಕುವ ಪ್ರಚೋದನೆಯನ್ನು ಅವರು ಇದರಿಂದ ಪಡೆದುಕೊಂಡರು. ನಂತರ ಅವರು ಉತ್ತರಗಳನ್ನು ಪಡೆಯುವ ಹುಡುಕಾಟದಲ್ಲಿ 29 ನೇ ವಯಸ್ಸಿನಲ್ಲಿ ತನ್ನ ಮನೆಯನ್ನು ತೊರೆದು ಆಲದ ಮರದ ಕೆಳಗೆ ಕುಳಿತು ಜ್ಞಾನೋದಯವನ್ನು ಪಡೆಯಲು ಪ್ರಯತ್ನಿಸಿದರು. ಆಳವಾದ ಧ್ಯಾನದ ನಂತರ ಅವರು ತಮ್ಮ 35ನೇ ವಯಸ್ಸಿನಲ್ಲಿ ಜ್ಞಾನೋದಯವನ್ನು ಪಡೆದುಕೊಂಡು ಮಹಾತ್ಮ ಬುದ್ಧ ಎಂದು ಕರೆಸಿಕೊಂಡರು. ಈ ಜ್ಞಾನದಿಂದ ಅವರು ಸಾಕಷ್ಟು ಬೋಧನೆಗಳನ್ನು ನೀಡಿದ್ದರು. ಅದನ್ನು ಎಲ್ಲರು ತಿಳಿದುಕೊಳ್ಳಬೇಕು ಎಂದರು.

ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿ ಸೈಯಿದಾ ಆಯಿಶಾ, ಜಿಲ್ಲಾ ಪಂಚಾಯಿತಿಯ ಉಪಕಾರ್ಯದರ್ಶಿ ರಮೇಶ್, ಯೋಜನಾಧಿಕಾರಿ ರಾಮಕೃಷ್ಣಯ್ಯ, ಮುಖಂಡರಾದ ಶ್ರೀನಿವಾಸ್, ಜಿಲ್ಲಾ ಮಟ್ಟದ ಅಧಿಕಾರಿಗಳು, ವಿವಿಧ ಸಂಘಟನೆಗಳ ಮುಖಂಡರು ಉಪಸ್ಥಿತರಿದ್ದರು.

Ramesh Babu

Journalist

Recent Posts

ನಾನು ಜೆಡಿಎಸ್ ತಾಲೂಕು ಅಧ್ಯಕ್ಷ ಸ್ಥಾನಕ್ಕಾಗಿ ವರಿಷ್ಠರ ಬಳಿ ಕೇಳಿದ್ದೇನೆ- ಪಕ್ಷದ ಹೈಕಮಾಂಡ್ ತೀರ್ಮಾನಕ್ಕೆ ಬದ್ಧ- ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಹರೀಶ್ ಗೌಡ

ನಾನು ಜೆಡಿಎಸ್ ತಾಲೂಕು ಅಧ್ಯಕ್ಷ ಸ್ಥಾನಕ್ಕಾಗಿ ವರಿಷ್ಠರ ಬಳಿ ಕೇಳಿದ್ದೇನೆ. ಪಕ್ಷದ ಹೈಕಮಾಂಡ್ ತೀರ್ಮಾನಕ್ಕೆ ಬದ್ಧನಾಗಿರುತ್ತೇನೆ. ಪಕ್ಷದ ವರಿಷ್ಠರು ಯಾವುದೇ…

2 hours ago

ಹೆಣ್ಣಿನ‌ ಹಿತರಕ್ಷಣೆಗಾಗಿ ಮಹಿಳಾ ಪೊಲೀಸ್ ಠಾಣೆ ಸದಾ ಸನ್ನದ್ಧ- ಮಹಿಳಾ ಪೊಲೀಸ್ ಠಾಣೆ ಸಬ್ ಇನ್ಸ್ ಪೆಕ್ಟರ್ ಪಂಕಜಾ

ಹೆಣ್ಣಿನ‌ ಹಿತರಕ್ಷಣೆಗಾಗಿ ದೊಡ್ಡಬಳ್ಳಾಪುರದಲ್ಲಿ ಮಹಿಳಾ ಪೊಲೀಸ್ ಠಾಣೆಯನ್ನು ಸ್ಥಾಪನೆ ಮಾಡಲಾಗಿದೆ..ಈ ಮಹಿಳಾ ಠಾಣೆಯಲ್ಲಿ ಅತ್ಯಾಚಾರ, ವರದಕ್ಷಿಣೆ ನಿಷೇಧ ಕಾಯ್ದೆ, ಮಕ್ಕಳ…

6 hours ago

ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ವ್ಯಕ್ತಿತ್ವ ಮತ್ತು ಸಾಧನೆ

ಡಾಕ್ಟರ್ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಹುಟ್ಟು ಹಬ್ಬದ ಮುನ್ನ ( ಏಪ್ರಿಲ್ ‌14 ) ಅವರ ವ್ಯಕ್ತಿತ್ವ ಮತ್ತು…

16 hours ago

Документ_12

In der heutigen akademischen Welt steht die Qualität der schriftlichen Arbeiten im Mittelpunkt des Interesses.…

20 hours ago

‘ಆಸರೆ’ ಯೋಜನೆ: ಒಂಟಿ ಮಹಿಳೆಯರು ಮತ್ತು ಹಿರಿಯ ನಾಗರಿಕರ ಸುರಕ್ಷತೆ, ಭದ್ರತೆ, ಆರೋಗ್ಯ ನೆರವು ಹಾಗೂ ಯೋಗಕ್ಷೇಮ ವಿಚಾರಣೆ

'ಆಸರೆ' ಯೋಜನೆ ಅಂಗವಾಗಿ ಇಂದು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ದುರ್ಗೇನಹಳ್ಳಿ ಐಯಮ್ಮನಹಳ್ಳಿ ಹಾಗೂ ಇತರೆ ಗ್ರಾಮಗಳಿಗೆ ಪೊಲೀಸ್…

1 day ago

ಊಹಾ ಪತ್ರಿಕೋದ್ಯಮ ಅತ್ಯಂತ ಅಪಾಯಕಾರಿಯಾದದ್ದು- ಸಿಎಂ ಸಿದ್ದರಾಮಯ್ಯ

ಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ನಾವು ಮಾಡುತ್ತಿದ್ದೀವಾ ಎಂದು ಪತ್ರಕರ್ತರು ತಮ್ಮನ್ನು ತಾವು ಪ್ರಶ್ನಿಸಿಕೊಳ್ಳಬೇಕು ಎಂದು ಸಿಎಂ‌ ಸಿದ್ದರಾಮಯ್ಯ ಹೇಳಿದ್ದಾರೆ..…

1 day ago