ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಇವರ ಸಹಯೋಗದಲ್ಲಿ “ಬೇಟಿ ಬಚಾವೋ, ಬೇಟಿ ಪಡಾವೋ” ಎಂಬ ಧ್ಯೇಯ ದೊಂದಿಗೆ 2024ರ ರಾಷ್ಟ್ರೀಯ ಹೆಣ್ಣು ಮಗು ದಿನಾಚರಣೆ ಯನ್ನು ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಯವರ ನ್ಯಾಯಾಲಯ ಸಭಾಂಗಣದಲ್ಲಿ ಆಚರಿಸಲಾಯಿತು.
ಜಿಲ್ಲಾಧಿಕಾರಿ ಡಾ.ಶಿವಶಂಕರ ಎನ್ ಅವರು ಕಾರ್ಯಕ್ರಮ ಉಧ್ಘಾಟಿಸಿದರು.
ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿ ಅಮರೇಶ್ ಹೆಚ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕಿ ಅನಿತ ಲಕ್ಷ್ಮೀ, ಜಿಲ್ಲಾ ಮಟ್ಟದ, ತಾಲ್ಲೂಕು ಮಟ್ಟದ ಅಧಿಕಾರಿಗಳು, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಿಬ್ಬಂದಿ, ಶಾಲಾ ಕಾಲೇಜು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.