ಪ್ರತಿಯೊಬ್ಬ ಪ್ರಜೆಯು ನಿರ್ಭೀತರಾಗಿ ಮತದಾನವನ್ನು ಮಾಡುವ ಜೊತೆಗೆ ಚುನಾವಣೆ ಸಂದರ್ಭದಲ್ಲಿ ಯಾವುದೇ ಆಸೆ ಆಮಿಷಕ್ಕೆ ಒಳಗಾಗದೆ ಮತ ಚಲಾವಣೆ ಮಾಡಬೇಕು ಎಂದು ಜಿಲ್ಲಾಧಿಕಾರಿ ಡಾ. ಶಿವಶಂಕರ. ಎನ್ ಅವರು ಹೇಳಿದರು.
ಜಿಲ್ಲಾಡಳಿತ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿಂದು ನಡೆದ ರಾಷ್ಟ್ರೀಯ ಮತದಾರರ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಜಿಲ್ಲೆಯ 18 ವರ್ಷ ಮೇಲ್ಪಟ್ಟ ಅರ್ಹ ಪ್ರಜೆಗಳು ಮತದಾರರಾಗಿ ನೋಂದಣಿ ಮಾಡಿಕೊಳ್ಳಬೇಕು. ನೋಂದಣಿಯಾಗುವ ಜೊತೆಗೆ ಪ್ರತಿ ಚುನಾವಣೆಯಲ್ಲಿ ಭಾಗಿಯಾಗಿ ಮತದಾನ ಮಾಡಬೇಕು. 2011 ರ ಜನವರಿ 25 ರಿಂದ ರಾಷ್ಟ್ರೀಯ ಮತದಾರರ ದಿನಾಚರಣೆಯನ್ನು ಆಚರಣೆ ಮಾಡಲಾಗುತ್ತಿದೆ. ಈ ದಿನದ ಉದ್ದೇಶ ಮತದಾನ ಬಗ್ಗೆ ತಿಳುವಳಿಕೆ, ಜಾಗೃತಿ ನೀಡುವುದು. ಈ ಬಾರಿ ಯುವ ಮತದಾರರ ಸಂಖ್ಯೆಯನ್ನು ಹೆಚ್ಚಿಸಲು ಜಿಲ್ಲೆಯ ವಿವಿಧ ಕಾಲೇಜುಗಳಿಗೆ ಭೇಟಿ ನೀಡಿ ಮತದಾರರ ನೋಂದಣಿಗೆ ಮನವಿ ಮಾಡುವ ಕೆಲಸವಾಗಿದೆ. ಯುವ ಮತದಾರರ ನೋಂದಾಯಿಸಲು ಗ್ರಾಮಪಂಚಾಯತಿ, ತಾಲೂಕು ಪಂಚಾಯಿತಿ ಮಟ್ಟದಲ್ಲಿ ಸಾಕಷ್ಟು ಕಾರ್ಯಕ್ರಮ ಮಾಡಲಾಗಿದೆ. ಜಿಲ್ಲೆಯಲ್ಲಿ ಸ್ವೀಪ್ ಚಟುವಟಿಕೆಗಳು ಯಶಸ್ವಿಯಾಗಿ ನಡೆದಿದೆ. ಮತದಾನವನ್ನು ನಿರ್ಭಿತಿಯಿಂದ ಯಾವುದೇ ಆಮಿಷಕ್ಕೆ ಒಳಗಾಗದೆ ಮತ ಚಲಾವಣೆ ಮಾಡಬೇಕು. ಶತಾಯುಷಿ ಗಳು ಕೂಡ ಮತದಾನ ಮಾಡುವ ಉದಾಹರಣೆ ಇದೆ. ಇದರಿಂದ ಯುವಕರು ಸಹ ಉತ್ಸುಕರಾಗಿ ಮತದಾನದ ಕಾರ್ಯದಲ್ಲಿ ತೊಡಗಿಕೊಳ್ಳಬೇಕು. ಕಾರ್ಯಕ್ರಮದ ಯಶಸ್ವಿಗಾಗಿ ಎಲ್ಲಾ ಅಧಿಕಾರಿಗಳು ಸಾಕಷ್ಟು ಶ್ರಮ ವಹಿಸಿದ್ದಾರೆ ಎಂದು ಜಿಲ್ಲಾಧಿಕಾರಿ ಹೇಳಿದರು.
ಸ್ವೀಪ್ ಚಟುವಟಿಕೆಗಳ ಮೂಲಕ ಜಾಗೃತಿ ಮೂಡಿಸಿ ಜಿಲ್ಲೆಯಲ್ಲಿ 2019 ಲೋಕಸಭಾ ಚುನಾವಣೆಯಲ್ಲಿ ಶೇ.82 ರಷ್ಟು ಮತದಾನವಾಗಿತ್ತು. ಚುನಾವಣೆ ನಂತರ ಹೆಚ್ಚಿನ ಜಾಗೃತಿ ಮೂಲಕ ಈ ಬಾರಿ ವಿಧಾನಸಭಾ ಚುನಾವಣೆಯಲ್ಲಿ ಮತದಾನದ ಪ್ರಮಾಣವು ಶೇ.85 ರಷ್ಟು ಏರಿಕೆಯಾಗಿದೆ. ಈ ಬಾರಿ ಪ್ರಮಾಣ ಮತ್ತಷ್ಟು ಹೆಚ್ಚಿಸಲು ಪ್ರಯತ್ನಿಸಲಾಗುತ್ತಿದೆ ಎಂದರು.
ಜಿಲ್ಲೆಯ ಸ್ವೀಪ್ ಕಾರ್ಯಕ್ರಮದಲ್ಲಿ ಗ್ರಾಮಪಂಚಾಯತಿ, ತಾಲ್ಲೂಕು ಪಂಚಾಯತಿ ಅಧಿಕಾರಿಗಳು ಕೆಲಸ ಮಾಡಿದ್ದಾರೆ. ನಗರದಲ್ಲಿ ಮತದಾನಕ್ಕೆ ಆಸಕ್ತಿ ಕಡಿಮೆ ಇದ್ದು, ಬೇರೆ ಬೇರೆ ಕಾರ್ಯಕ್ರಮದ ಮೂಲಕ ಜಾಗೃತಿ ಮೂಡಿಸಲಾಗುತ್ತಿದೆ. ಜಿಲ್ಲೆಯಲ್ಲಿ ಸ್ವೀಪ್ ಕೆಲಸಗಳನ್ನು ಮುಂದುವರೆಸಲಾಗುತ್ತದೆ. ಎಲ್ಲರೂ ಶೇ.100 ರಷ್ಟು ನೋಂದಾಯಿಸಲು ಹಾಗೂ ಮತದಾನ ಮಾಡಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದರು.
ಕಾರ್ಯಕ್ರಮದಲ್ಲಿ ಹೊಸದಾಗಿ ನೋಂದಣಿಯಾದ ಯುವ ಮತದಾರರಿಗೆ ಗುರುತಿನ ಚೀಟಿ ವಿತರಿಸಲಾಯಿತು. ಮತದಾನದ ಜಾಗೃತಿ ಬಗ್ಗೆ ನಡೆಸಲಾದ ಕಿರುಚಿತ್ರ, ಪ್ರಬಂಧ, ರಸಪ್ರಶ್ನೆ ಸೇರಿದಂತೆ ಸಾಕಷ್ಟು ಸ್ಪರ್ಧೆಯಲ್ಲಿ ಭಾಗವಹಿಸಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ ಮಾಡಲಾಯಿತು.
ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿ ಅಮರೇಶ್ ಹೆಚ್, ಮುಖ್ಯ ಯೋಜನಾಧಿಕಾರಿ ರಾಮಕೃಷ್ಣಯ್ಯ, ಜಿಲ್ಲಾ ಪಂಚಾಯತಿ ಮುಖ್ಯ ಲೆಕ್ಕಾಧಿಕಾರಿ ಶ್ರೀನಿವಾಸ್, ಯೋಜನಾ ನಿರ್ದೇಶಕರಾದ ವಿಠಲ್ ಕಾವಳೆ, ಶಾಲ ಶಿಕ್ಷಣ ಇಲಾಖೆ ಉಪ ನಿರ್ದೇಶಕರಾದ ಕೃಷ್ಣಮೂರ್ತಿ ಸೇರಿದಂತೆ ಜಿಲ್ಲಾ ಮಟ್ಟದ ಅಕಾರಿಗಳು, ವಿವಿಧ ಶಿಕ್ಷಣ ಸಂಸ್ಥೆಯ ಮುಖ್ಯಸ್ಥರು, ವಿದ್ಯಾರ್ಥಿಗಳು ಹಾಜರಿದ್ದರು.
ದೆಹಲಿಯಲ್ಲಿ ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ರಾಜ್ಯಕ್ಕೆ ಸಂಬಂಧಿಸಿದಂತೆ ಬಹುದಿನಗಳಿಂದ ಬಾಕಿಯಿರುವ ಬೇಡಿಕೆಗಳನ್ನು ಈಡೇರಿಸುವಂತೆ ಮನವಿ ಪತ್ರವನ್ನು…
ದೂಡ್ಡಬಳ್ಳಾಪುರದ ಮೀನಾಕ್ಷಿ ಸಮೇತ ಸ್ವಯಂ ಭುವನೇಶ್ವರ ಸ್ವಾಮಿಯವರ ದೇವಾಲಯದಲ್ಲಿ ಕಡೇ ಕಾರ್ತೀಕ ಸೋಮವಾರ ಪ್ರಯುಕ್ತ ಈ ದಿನ ಬೆಳಿಗ್ಗೆ ಗಣಪತಿ…
ದೊಡ್ಡಬಳ್ಳಾಪುರ: ನಾಳೆ (ನ.18) ನಗರದ ಹೊರವಲಯದಲ್ಲಿರುವ 66/11ಕಿವಿ ಡಿ.ಕ್ರಾಸ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ಕಾರ್ಯವನ್ನು ಹಮ್ಮಿಕೊಳ್ಳಲಾಗಿರುವುದರಿಂದ ತಾಲೂಕಿನ ಹಲವೆಡೆ ವಿದ್ಯುತ್…
18 ದೇವಸ್ಥಾನಗಳಲ್ಲಿ ಕಳ್ಳತನ ಮಾಡಿದ್ದ ಮೂವರು ಆರೋಪಿಗಳನ್ನು ಬಂಗಾರಪೇಟೆ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ ರೂ.1,50,000/-ಮೌಲ್ಯದ ಬಂಗಾರದ ತಾಳಿ ಬೊಟ್ಟುಗಳು,…
ದೊಡ್ಡಬಳ್ಳಾಪುರ: ಮುಂದೆ ಸಾಗುತ್ತಿದ್ದ ಲಾರಿ ಚಾಲಕನ ನಿರ್ಲಕ್ಷ್ಯದಿಂದ ಹಿಂಬದಿಯಲ್ಲಿ ಬರುತ್ತಿದ್ದ ಕಾರು ಭೀಕರ ಅಪಘಾತಕ್ಕೆ ಒಳಗಾಗಿ ಎಂಬಿಎ ವಿದ್ಯಾರ್ಥಿ ಸಾವನಪ್ಪಿರುವ…
ತನ್ನ ಪಾಡಿಗೆ ತಾನು ಮೊಬೈಲ್ ನೋಡುತ್ತಾ ಕುಳಿತಿದ್ದ ಯುವಕನಿಗೆ ಚಾಕು ಇರಿದಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ, ದೇವನಹಳ್ಳಿ ತಾಲ್ಲೂಕಿನ…