ಜಿಲ್ಲಾಡಳಿತ ಭವನದಲ್ಲಿ ವ್ಯಸನಮುಕ್ತ ದಿನಾಚರಣೆ

ಡಾ.ಮಹಾಂತ ಶಿವಯೋಗಿಗಳ ಜನ್ಮದಿನದ ಅಂಗವಾಗಿ ಜಿಲ್ಲಾಮಟ್ಟದ ವ್ಯಸನಮುಕ್ತ ದಿನಾಚರಣೆಯನ್ನು ದೇವನಹಳ್ಳಿ ತಾಲ್ಲೂಕಿನ ಬೀರಸಂದ್ರ ಗ್ರಾಮದ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿಂದು ಆಚರಿಸಲಾಯಿತು.

ಡಾ.ಮಹಾಂತ ಶಿವಯೋಗಿ ಅವರ ಭಾವಚಿತ್ರಕ್ಕೆ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ.ಶಿವಶಂಕರ. ಎನ್ ಪುಷ್ಪಾರ್ಚನೆ ಸಲ್ಲಿಸುವ ಮೂಲಕ ಗೌರವ ನಮನ ಸಲ್ಲಿಸಿದರು.

ಜಿಲ್ಲಾಧಿಕಾರಿಗಳು ಮದ್ಯಪಾನ, ಮಾದಕವಸ್ತು, ತಂಬಾಕು ವಸ್ತುಗಳ ವ್ಯಸನಮುಕ್ತಗೊಳಿಸುವ ಪ್ರತಿಜ್ಞಾವಿಧಿಯನ್ನು ಬೋಧಿಸಿದರು.

ಅಪರ ಜಿಲ್ಲಾಧಿಕಾರಿ ಅಮರೇಶ್‌.ಹೆಚ್‌‌, ಜಿಲ್ಲಾ ಮಟ್ಟದ ಅಧಿಕಾರಿಗಳು ಸೇರಿದಂತೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಿಬ್ಬಂದಿ, ಜಿಲ್ಲಾಧಿಕಾರಿಯವರ ಕಛೇರಿ ಸಿಬ್ಬಂದಿ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *