ಜಿಲ್ಲಾಡಳಿತ ಭವನದಲ್ಲಿ 58ನೇ ಅಂತಾರಾಷ್ಟ್ರೀಯ ಸಾಕ್ಷರತಾ ದಿನಾಚರಣೆ

ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ರಾಜ್ಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಇಲಾಖೆ (ಲೋಕ ಶಿಕ್ಷಣ ವಿಭಾಗ), ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ವಯಸ್ಕರ ಶಿಕ್ಷಣಾಧಿಕಾರಿಗಳ ಇಲಾಖೆ ಮತ್ತು ಡಯಟ್, ಕ್ಷೇತ್ರ ಶಿಕ್ಷಣಾಧಿಕಾರಿಗಳು ಹಾಗೂ ಕ್ಷೇತ್ರ ಸಮನ್ವಯಾಧಿಕಾರಿಗಳ ಸಂಯುಕ್ತಾಶ್ರಯದಲ್ಲಿ ದೇವನಹಳ್ಳಿ ತಾಲ್ಲೂಕಿನ, ಬೀರಸಂದ್ರ ಗ್ರಾಮದ ಜಿಲ್ಲಾಡಳಿತ ಭವನದ ಮುಂಭಾಗದ ಆವರಣದಲ್ಲಿಂದು 58 ನೇ ಅಂತರಾಷ್ಟ್ರೀಯ ಸಾಕ್ಷರತಾ ದಿನಾಚರಣೆಯನ್ನು ಹಮ್ಮಿಕೊಳ್ಳಲಾಗಿತ್ತು.

ಜಿಲ್ಲಾ ಪಂಚಾಯತಿ ಯೋಜನ ನಿರ್ದೇಶಕರಾದ ವಿಠ್ಠಲ್ ಕಾವ್ಳೆ ಅವರು ಸಾಕ್ಷರತಾ ಧ್ವಜಾರೋಹಣ ನೆರವೇರಿಸಿ, ದೀಪ ಬೆಳಗುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಉಪ‌ ನಿರ್ದೇಶಕರಾದ ಕೃಷ್ಣಮೂರ್ತಿ, ಜಿಲ್ಲಾ ವಯಸ್ಕರ ಶಿಕ್ಷಣಾಧಿಕಾರಿ ಶಶಿಕುಮಾರ್, ಶಿಕ್ಷಕವೃಂದ‌, ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಸೇರಿದಂತೆ ಇಲಾಖಾ ಸಿಬ್ಬಂದಿ ವರ್ಗದವರು, ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!