ಜಿಲ್ಲಾದ್ಯಂತ ಕನ್ನಡ ಭಾಷೆ ಪರೀಕ್ಷೆಗೆ ಒಟ್ಟು 9282 ವಿದ್ಯಾರ್ಥಿಗಳು ಹಾಜರಿ, 302 ವಿದ್ಯಾರ್ಥಿಗಳು ಗೈರು: ದೊಡ್ಡಬಳ್ಳಾಪುರದಲ್ಲಿ ಎಷ್ಟು ಗೈರು, ಎಷ್ಟು ಹಾಜರಿ…? ಇಲ್ಲಿದೆ ಮಾಹಿತಿ ಓದಿ…

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ  ದ್ವಿತೀಯ ಪಿಯುಸಿ ಪರೀಕ್ಷೆಯು ಸುಗಮವಾಗಿ ಪ್ರಾರಂಭಗೊಂಡಿದ್ದು, ಜಿಲ್ಲೆಯ  17 ಪರೀಕ್ಷಾ ಕೇಂದ್ರಗಳಲ್ಲಿ ಮೊದಲ ದಿನ ನಡೆದ ಕನ್ನಡ  ಭಾಷೆ ಪರೀಕ್ಷೆಯಲ್ಲಿ ಒಟ್ಟು 9282 ವಿದ್ಯಾರ್ಥಿಗಳು ಹಾಜರಾಗಿದ್ದರೆ, 302 ವಿದ್ಯಾರ್ಥಿಗಳು ಗೈರುಹಾಜರಿಯಾಗಿದ್ದರು ಎಂದು ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ಉಪನಿರ್ದೇಶಕ ಎನ್. ಮೋಹನ್ ಕುಮಾರ್‌ ತಿಳಿಸಿದ್ದಾರೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪರೀಕ್ಷಾ ಕೇಂದ್ರಗಳಲ್ಲಿ ಪ್ರಾರಂಭವಾದ ದ್ವಿತೀಯ ಪಿಯುಸಿ ಪರೀಕ್ಷೆಗೆ ಕುರಿತು ಮಾಹಿತಿ ನೀಡಿ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಮೂರು ಪರೀಕ್ಷಾ ಕೇಂದ್ರಗಳಲ್ಲಿ 2061 ವಿದ್ಯಾರ್ಥಿಗಳು ಹಾಜರಿಗಿದ್ದು, 34 ವಿದ್ಯಾರ್ಥಿಗಳು ಗೈರು ಹಾಜರಿಗಿದ್ದರು. ದೇವನಹಳ್ಳಿ ತಾಲ್ಲೂಕಿನ ಮೂರು ಪರೀಕ್ಷಾ ಕೇಂದ್ರಗಳಲ್ಲಿ 1391 ವಿದ್ಯಾರ್ಥಿಗಳು ಹಾಜರಿ, 65 ಗೈರು ಹಾಜರಿ. ಹೊಸಕೋಟೆ ತಾಲ್ಲೂಕಿನ ಐದು ಪರೀಕ್ಷಾ ಕೇಂದ್ರಗಳಲ್ಲಿ 3191 ವಿದ್ಯಾರ್ಥಿಗಳು ಹಾಜರಿ, 92 ಗೈರು ಹಾಜರಿ ಮತ್ತು ನೆಲಮಂಗಲ ತಾಲ್ಲೂಕಿನ ಆರು ಪರೀಕ್ಷಾ ಕೇಂದ್ರಗಳಲ್ಲಿ 2677 ವಿದ್ಯಾರ್ಥಿಗಳು ಹಾಜರಿ, 111 ಗೈರು ಹಾಜರಿಯಾಗಿದ್ದಾರೆ.

ಪ್ರತಿ ಪರೀಕ್ಷಾ ಕೊಠಡಿಯಲ್ಲೂ ಸಿ.ಸಿ.ಟಿ.ವಿ ಕ್ಯಾಮೆರಾ ಅಳವಡಿಸಿದ್ದು ವೆಬ್ ಕಾಸ್ಟಿಂಗ್ ಮಾಡಲಾಗಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಲಿ ಮತ್ತು ಜಿಲ್ಲಾಡಳಿತದ  ಮಾರ್ಗದರ್ಶನದಂತೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಯನ್ನು ಪಾರದರ್ಶಕತೆ ಮತ್ತು ಸುವ್ಯವಸ್ಥಿತವಾಗಿ ಪರೀಕ್ಷೆ ನಡೆಸಲಾಗುತ್ತಿದೆ ಎಂದರು.

ಪರೀಕ್ಷಾ ಕೇಂದ್ರಕ್ಕೆ ಜಿಲ್ಲಾಧಿಕಾರಿ ಭೇಟಿ

ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಎ.ಬಿ.ಬಸವರಾಜು ದೊಡ್ಡಬಳ್ಳಾಪುರ ತಾಲ್ಲೂಕಿನ ಶ್ರೀ ಕೊಂಗಾಡಿಯಪ್ಪ ಪದವಿಪೂರ್ವ ಕಾಲೇಜು ಸರಿದಂತೆ ವಿವಿಧ ದ್ವಿತೀಯ ಪಿಯುಸಿ ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿದ್ದರು.

ಕಾನೂನು ವ್ಯವಸ್ಥೆ :- ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪ್ರತಿ ಪರೀಕ್ಷಾ ಕೇಂದ್ರಗಳಲ್ಲೂ ಜಾಗೃತ ದಳ‌ ವ್ಯವಸ್ಥೆ  ಜೊತೆಗೆ  ಪೊಲೀಸ್‌ ಭದ್ರತಾ ವ್ಯವಸ್ಥೆ ಕಂಡು ಬಂತು. ಪರೀಕ್ಷಾ ಕೇಂದ್ರದ  ಸುತ್ತಲೂ 200 ಮೀಟರ್ ಸುತ್ತಳತೆಯಲ್ಲಿ ನಿಷೇಧಾಜ್ಞೆ,  ಜೆರಾಕ್ಸ್ ಅಂಗಡಿಗಳು ಹಾಗೂ ಕಂಪ್ಯೂಟರ್ ಸೆಂಟರ್‍ಗಳನ್ನು ಮುಚ್ಚಿದ್ದವು.
ಜಿಲ್ಲೆಯ ಪರೀಕ್ಷಾ ಕೇಂದ್ರಗಳಿಗೆ ಬಂದ ವಿದ್ಯಾರ್ಥಿಗಳಿಗೆ ಗುರುತಿನ ಚೀಟಿ ಮತ್ತು ಪ್ರವೇಶ ಪತ್ರ ಪರಿಶೀಲನೆ ಮಾಡಿ, ಪರೀಕ್ಷಾ ಕೊಠಡಿಗಳಿಗೆ ಕಳುಹಿಸುತ್ತಿದ್ದ ದೃಶ್ಯ ಕಂಡು ಬಂತು.

Ramesh Babu

Journalist

Recent Posts

ಗೀತಂ ವಿವಿ ಹಾಸ್ಟೆಲ್‌ನಲ್ಲಿ ದುರಂತ: 6ನೇ ಮಹಡಿಯಿಂದ ಬಿದ್ದು ಬಿ.ಟೆಕ್ ವಿದ್ಯಾರ್ಥಿನಿ ಸಾವು

ದೊಡ್ಡಬಳ್ಳಾಪುರ: ತಾಲೂಕಿನ ನಾಗದೇನಹಳ್ಳಿ ಸಮೀಪದ ಗೀತಂ ವಿಶ್ವವಿದ್ಯಾಲಯದ ಕ್ಯಾಂಪಸ್‌ನಲ್ಲಿ ತಡರಾತ್ರಿ ವಿದ್ಯಾರ್ಥಿನಿಯೊಬ್ಬಳು ಹಾಸ್ಟೆಲ್ ಕಟ್ಟಡದ ಆರನೇ ಮಹಡಿಯಿಂದ ಬಿದ್ದು ಮೃತಪಟ್ಟಿರುವ…

2 hours ago

ಮಳೆ ಕೊರತೆಯ ಹೊಡೆತಕ್ಕೆ ರಾಗಿ ಬೆಳೆ ಸಂಕಷ್ಟ: ರೈತರು ಈಗಲೇ ಎಚ್ಚೆತ್ತುಕೊಳ್ಳದಿದ್ದರೆ ಇಳುವರಿಗೆ ಹೊಡೆತ!

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮುಂಗಾರು ಮಳೆಯ ಏರುಪೇರಿನಿಂದ ಮಳೆಯಾಶ್ರಿತ ಕೃಷಿ ಸಂಕಷ್ಟಕ್ಕೆ ಸಿಲುಕಿದ್ದು, ಜಿಲ್ಲೆಯ ಪ್ರಮುಖ ಆಹಾರ ಬೆಳೆಯಾದ ರಾಗಿಯನ್ನು…

5 hours ago

ಪೆನ್ ಡ್ರೈವ್…….

ಪೆನ್ ಡ್ರೈವ್....... ನಾಚಿಕೆಯಿಂದ ತಲೆತಗ್ಗಿಸಿ ನಾನೂ ಈ ವಿಷಯವನ್ನೇ ಕುರಿತು ಬರೆಯುವ ಅನಿವಾರ್ಯ ಸೃಷ್ಟಿಯಾಗಿರುವುದಕ್ಕೆ ವಿಷಾದ ವ್ಯಕ್ತಪಡಿಸುತ್ತಾ...... ಬರಗಾಲ -…

7 hours ago

ಸ್ಟಿಂಗ್ ಆಪರೇಷನ್ ಹಿಂದೆ ಜೆಡಿಎಸ್ ಕೈವಾಡ: ಸಚಿವ ಚಲುವರಾಯಸ್ವಾಮಿ ಗಂಭೀರ ಆರೋಪ

"ಕುಮಾರಸ್ವಾಮಿ ಯಾರು? Who is kumaraswmay. ಡಿ.ಕೆ. ಶಿವಕುಮಾರ್ ಸಿಎಂ ಆಗಿರುವುದನ್ನು ಒಪ್ಪದಿರುವುದಕ್ಕೆ ಅವರು ಯಾರು? ಅವರಿಗೂ ಇದಕ್ಕೂ ಏನು…

18 hours ago

ಬೆಂಗಳೂರು ಶಿಕ್ಷಕರ ಕ್ಷೇತ್ರ ಚುನಾವಣೆ: ಅ.21 ರಿಂದ ಅ.23 ರವರೆಗೆ ಜಿಲ್ಲೆಯಾದ್ಯಂತ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಆದೇಶ

ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ಕರ್ನಾಟಕ ವಿಧಾನ ಪರಿಷತ್ತಿಗೆ ದ್ವೈವಾರ್ಷಿಕ ಚುನಾವಣೆ-2026ರ ಸಂಬಂಧ ಅಕ್ಟೋಬರ್ 23 ರಂದು ಮತದಾನ ನಡೆಯಲಿರುವ ಹಿನ್ನೆಲೆಯಲ್ಲಿ…

22 hours ago

ಸಮಾಜಸೇವೆ ಮೂಲಕ ಹುಟ್ಟುಹಬ್ಬ ಆಚರಣೆ ಎಲ್ಲರಿಗೂ ಮಾದರಿ: ಸಂಜೀವ್ ನಾಯಕ್

ದೊಡ್ಡಬಳ್ಳಾಪುರ: ಅದ್ದೂರಿ ಆಚರಣೆಗಳಿಗೆ ಸೀಮಿತವಾಗದೆ, ಸಮಾಜಮುಖಿ ಕಾರ್ಯಗಳ ಮೂಲಕ ಹುಟ್ಟುಹಬ್ಬ ಆಚರಿಸುವುದು ಇತರರಿಗೂ ಮಾದರಿಯಾಗಲಿದೆ ಎಂದು ಕನ್ನಡ ಪಕ್ಷದ ರಾಜ್ಯ…

23 hours ago