ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾಧಿಕಾರಿಗಳ ನ್ಯಾಯಾಲಯದಲ್ಲಿ ಹೊಸಕೋಟೆ ಮೂಲದ ವಕೀಲ ಎಸ್.ಪಿ ಮುನಿರಾಜು ಮೇಲೆ ಜಿಲ್ಲಾಧಿಕಾರಿ ಎ.ಬಿ ಬಸವರಾಜು ಅವರ ಮುಂದೆಯೇ ಹಲ್ಲೆಗೆ ಯತ್ನ ನಡೆಸಿ, ಪ್ರಾಣ ಬೆದರಿಕೆ ಹಾಕಿರುವವರ ವಿರುದ್ಧ ದೂರು ನೀಡಿದ್ದರು ಪೊಲೀಸರು ಆರೋಪಿತರನ್ನು ಬಂಧಿಸದೇ ಇರುವ ಕ್ರಮ ಖಂಡನೀಯ ಎಂದು ದೊಡ್ಡಬಳ್ಳಾಪುರ ತಾಲ್ಲೂಕು ವಕೀಲರ ಸಂಘದ ಅಧ್ಯಕ್ಷ ರವಿ ಮಾವಿನಕುಂಟೆ ಹೇಳಿದರು.
ನಗರದ ತಾಲ್ಲೂಕು ವಕೀಲರ ಸಂಘದಲ್ಲಿ ನಡೆದ ವಕೀಲರ ಸಭೆಯಲ್ಲಿ ಮಾತನಾಡಿದ ಅವರು, ವಕೀಲರ ಮೇಲಿನ ಹಲ್ಲೆ ಯತ್ನ, ಬೆದರಿಕೆ ಇಡೀ ಘಟನೆ ಜಿಲ್ಲಾಧಿಕಾರಿ ಮುಂದೆಯೇ ನಡೆದಿದೆ. ಇದರ ವಿರುದ್ಧ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳು ಪೊಲೀಸರಿಗೆ ಸೂಚಿಸಬೇಕು ಎಂದರು.
ಈ ಪ್ರಕರಣ ವಕೀಲ ಸಮೂಹಕ್ಕೆ ಭೀತಿಯುಂಟು ಮಾಡಿದೆ. ಇದು ಅತ್ಯಂತ ನೋವಿನ ಸಂಗತಿ. ಈ ಪ್ರಕರಣ ಕುರಿತು ವಿಶ್ವನಾಥಪುರ ಠಾಣೆಯಲ್ಲಿ ದೂರು ದಾಖಲಾಗಿದ್ದರೂ ಆರೋಪಿತರ ಬಂಧನ ಮಾಡಿಲ್ಲ. ವಕೀಲರ ರಕ್ಷಣ ಕಾಯ್ದೆ ಇದ್ದರೂ ಉಪಯೋಗವಿಲ್ಲದಂತಾಗಿದೆ. ಪ್ರಕರಣದ ಆರೋಪಿಯನ್ನು ಶೀಘ್ರ ಬಂಧಿಸಿ ಕಾನೂನು ಕ್ರಮ ಕೈಗೊಳ್ಳದಿದ್ದರೆ ಕೋರ್ಟ್ ಕಲಾಪಗಳನ್ನು ಬಹಿಷ್ಕರಿಸಿ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದರು.
ನಂತರ ಅಖಿಲ ಭಾರತ ವಕೀಲರ ಒಕ್ಕೂಟದ ಸಂಚಾಲಕ ಎಸ್.ರುದ್ರಾರಾಧ್ಯ ಮಾತನಾಡಿ, ಮಹೇಂದ್ರ ಎಂಬಾತ ವಕೀಲ ಎಸ್.ಪಿ ಮುನಿರಾಜು ಅವರಿಗೆ ಡಿಸಿ ಎದುರೇ ಬೆದರಿಕೆ ಹಾಕಿದ್ದಾನೆ. ಇದನ್ನು ಗಮನಿಸಿದ ಡಿಸಿ ಸುಮ್ಮನೆ ಇದ್ದಾರೆ. ಬೆದರಿಕೆ ಹಾಕಿದ ವ್ಯಕ್ತಿಯ ಮೇಲೆ ಸೂಕ್ತ ಕ್ರಮ ಕೈಗೊಳ್ಳದ ಜಿಲ್ಲಾಧಿಕಾರಿ ನಡೆಯನ್ನು ವಕೀಲರ ಸಂಘ ಹಾಗೂ ಅಖಿಲ ಭಾರತ ವಕೀಲರ ಒಕ್ಕೂಟ ತೀವ್ರವಾಗಿ ಖಂಡಿಸುತ್ತದೆ ಎಂದರು.
ಸಭೆಯಲ್ಲಿ ರೇಣುಕಾರಾಧ್ಯ, ತಾಲ್ಲೂಕು ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿ ಎ.ಕೃಷ್ಣಮೂರ್ತಿ, ಖಜಾಂಚಿ ಮುನಿರಾಜು ಹಾಗೂ ವಕೀಲರು ಇದ್ದರು.
ಎತ್ತಿನಹೊಳೆ ಯೋಜನೆ ಕಾಮಗಾರಿಯು ತ್ವರಿತಗತಿಯಲ್ಲಿ ಸಾಗುತ್ತಿದ್ದು ಒಂದು ವರ್ಷದಲ್ಲಿ ಜಿಲ್ಲೆಗೆ ನೀರು ಹರಿಯುವ ವಿಶ್ವಾಸವಿದೆ ಎಂದು ಆಹಾರ ನಾಗರಿಕ ಸರಬರಾಜು…
ಡಿ.15 ರಂದು ಕಾಣೆಯಾಗಿದ್ದ ಪ್ರಥಮ ಪಿಯುಸಿ ವಿದ್ಯಾರ್ಥಿ ಇಂದು ಶವವಾಗಿ ಪತ್ತೆಯಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ…
ಬಸ್ಸಿನಲ್ಲಿ ಸಾಗಿಸುತ್ತಿದ್ದ 55 ಲಕ್ಷ ರೂ. ನಗದು ಹಾಗೂ ಕಟ್ಟಡಕ್ಕೆ ಸಂಬಂಧಿಸಿದ ದಾಖಲೆಗಳನ್ನು ಕಳವು ಮಾಡಿದ್ದ ಅಂತಾರಾಜ್ಯ ಕಳ್ಳರನ್ನ ಬಂಧಿಸುವಲ್ಲಿ…
ಟಿಪ್ಪರ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಒಂದೇ ಗ್ರಾಮದ ನಾಲ್ವರು ಯುವಕರು ಮೃತಪಟ್ಟಿರುವಂತಹ ಹೃದಯವಿದ್ರಾವಕ ಘಟನೆ ಚಿಕ್ಕಬಳ್ಳಾಪುರ…
ಅಭಿಮಾನಿಗಳ ಅತಿರೇಕ.... ಹುಚ್ಚುತನದ ಪರಮಾವಧಿ..... ದಚ್ಚು - ಕಿಚ್ಚ. (ದರ್ಶನ್ - ಸುದೀಪ್) + (ಡೆವಿಲ್ - ಮಾರ್ಕ್)........ ಅವರ…
ದಕ್ಷಿಣ ಭಾರತದಲ್ಲಿ ನಾಗರಾಧನೆಗೆ ಸುಪ್ರಸಿದ್ಧಿ ಪಡೆದಿರುವ ಘಾಟಿ ಸುಬ್ರಹ್ಮಣ್ಯ ಸ್ವಾಮಿಯ ಬ್ರಹ್ಮರಥೋತ್ಸವ ಸಾವಿರಾರು ಭಕ್ತಾದಿಗಳ ಸಮ್ಮುಖದಲ್ಲಿಂದು ಅದ್ಧೂರಿಯಾಗಿ ನೆರವೇರಿತು. ತಾಲೂಕಿನ…