ಕೋಲಾರ: ಸರ್ಕಾರಿ ಜಿಲ್ಲಾ ಆಸ್ಪತ್ರೆಗೆ ಖಾಯಂ ಜಿಲ್ಲಾ ಶಸ್ತ್ರ ಚಿಕಿತ್ಸಕರನ್ನು ನೇಮಕ ಮಾಡಿ ಅನಧಿಕೃತ ಅಂಗಡಿಗಳನ್ನು ತೆರೆವುಗೊಳಿಸಿ ಖಾಸಗಿ ಅಂಬ್ಯುಲೆನ್ಸ್ ದಂದೆಗೆ ಕಡಿವಾಣ ಹಾಕಿ, ಆಸ್ಪತ್ರೆಯಲ್ಲಿ ಮೂಲಭೂತ ಸೌಕರ್ಯಗಳನ್ನು ಒದಗಿಸಿ ಬಡ ರೈತ, ಕೂಲಿಕಾರ್ಮಿಕರ ಆರೋಗ್ಯ ರಕ್ಷಣೆ ಮಾಡಬೇಕೆಂದು ರೈತ ಸಂಘದ ಕೆ.ನಾರಾಯಣಗೌಡ ಆರೋಗ್ಯ ಸಚಿವರನ್ನು ಒತ್ತಾಯಿಸಿದರು.
ನಗರದ ಪ್ರವಾಸಿ ಮಂದಿರದಲ್ಲಿ ಮಾತನಾಡಿದ ಅವರು, ಜಿಲ್ಲಾಸ್ಪತ್ರೆಯಲ್ಲಿ ಕೆಲಸ ನಿರ್ವಹಿಸುತ್ತಿದ್ದ ಡಾ. ವಿಜಯ್‌ಕುಮಾರ್‌ರವರು ನಿವೃತ್ತಿ ಆಗಿ 15 ದಿನ ಕಳೆದರೂ ಸರ್ಕಾರ ಆಸ್ಪತ್ರೆಗೆ ಖಾಯಂ ಜಿಲ್ಲಾ ಶಸ್ತ್ರಚಿಕಿತ್ಸಕರನ್ನು ನೇಮಕ ಮಾಡದೆ ಮೀನಾಮೇಷ ಎಣಿಸುತ್ತಿದ್ದು, ಜಿಲ್ಲಾದ್ಯಂತ ವ್ಯಾಪಕವಾಗಿ ಹರಡುತ್ತಿರುವ ಡೆಂಗ್ಯೂ ಮತ್ತಿತರ ಸಾಂಕ್ರಾಮಿಕ ರೋಗಗಳಿಂದ ತತ್ತರಿಸಿರುವ ಬಡ ರೈತ, ಕೂಲಿ ಕಾರ್ಮಿಕರು ಸಮರ್ಪಕವಾಗಿ ಚಿಕಿತ್ಸೆ ಪಡೆಯದೆ ರಕ್ತ ಪರೀಕ್ಷೆಯಿಂದ ಇಡಿದು ಅಂಬ್ಯುಲೆನ್ಸ್ ಖಾಸಗಿಯವರನ್ನು ಅವಲಂಬಿಸಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಜೊತೆಗೆ ಸರ್ಕಾರಿ ಆಸ್ಪತ್ರೆಯ ಅವ್ಯವಸ್ಥೆಯನ್ನೇ ಬಂಡವಾಳ ಮಾಡಿಕೊಂಡು ಲಕ್ಷ ಲಕ್ಷ ಹಣವನ್ನು ಲೂಟಿ ಮಾಡುತ್ತಿದ್ದಾರೆಂದು ಆಸ್ಪತ್ರೆಯ ಅವ್ಯವಸ್ಥೆಯ ವಿರುದ್ದ ಆಕ್ರೋಶ ವ್ಯಕ್ತಪಡಿಸಿದರು.
ಜಿಲ್ಲಾ ಆಸ್ಪತ್ರೆಯಲ್ಲಿ ರಾತ್ರಿ ವೇಳೆ ತುರ್ತು ಪರಿಸ್ಥಿತಿ ಹೆರಿಗೆ ವಿಭಾಗ ಹಾಗೂ ರೋಗಿಗಳ ವಾರ್ಡ್ ಗಳಲ್ಲಿ ಸಮಯಕ್ಕೆ ಸರಿಯಾಗಿ ವೈದ್ಯರು ಸಿಗದೆ ನರ್ಸ್ ಗಳು ರೋಗಿಗಳಿಗೆ ಸ್ಪಂದಿಸದೆ ಪರದಾಡುವಂತಹ ಪರಿಸ್ಥಿತಿ ಇರುವ ಜೊತೆಗೆ ಆಸ್ಪತ್ರೆಯಲ್ಲಿ ಕಡ್ಡಾಯವಾಗಿ ಕೆಲಸ ಮಾಡುವ ವೈದ್ಯರು ಭಯೋಮೆಟ್ರಿಕ್‌ನಲ್ಲಿ ಹಾಜರಾತಿ ಹಾಕಬೇಕು.
ಆದರೆ, ಇದನ್ನು ಯಾವುದೇ ವೈದ್ಯರು ಮತ್ತು ಸಿಬ್ಬಂದಿ ಅನುಸರಿಸುತ್ತಿಲ್ಲ. ಇದರಿಂದ ಆಸ್ಪತ್ರೆಯ ಅವ್ಯವಸ್ಥೆ ಜೊತೆಗೆ ಸರ್ಕಾರದ ನೂರಾರು ಕೋಟಿ ವೆಚ್ಚದಲ್ಲಿ ನೀಡಿರುವ ವೆಂಟಿಲೇಟರ್, ಡಯಾಲೀಸಿಸ್, ಹಾಗೂ ತುರ್ತು ನಿಘಾಘಟಕದ ಉಪ ಕರಣಗಳನ್ನು ನುರಿತ ವೈದ್ಯರು ಇಲ್ಲದೆ ಕೊಠಡಿಗಳಲ್ಲಿ ದೂಳು ಹಿಡಿಯುತ್ತಿದೆ. ಇದಕ್ಕೆ ಸಂಬಂಧಪಟ್ಟ ರೋಗಿಗಳು ಸಮರ್ಪಕವಾದ ಚಿಕಿತ್ಸೆ ದೊರೆಯದೆ ದುಬಾರಿ ಖಾಸಗಿ ಆಸ್ಪತ್ರೆಗಳ ಬಿಲ್ ಕಟ್ಟದೆ ಪ್ರಾಣವನ್ನು ಕಳೆದುಕೊಳ್ಳುವ ಸನ್ನಿವೇಶಗಳು ಹೆಚ್ಚಾಗುತ್ತಿವೆ. ಸಂಬಂಧಪಟ್ಟ ಆರೋಗ್ಯ ಸಚಿವರು ಹಾಗೂ ಜನ ಪ್ರತಿನಿಧಿಗಳು ಆಸ್ಪತ್ರೆಗೆ ಬೇಟಿ ಕೊಟ್ಟಾಗ ಯಾವುದೇ ಸಮಸ್ಯೆ ಇಲ್ಲವೆಂದು ಹೇಳುವ ವೈದ್ಯರು ಆ ನಂತರ ರೋಗಿಗಳ ಪಾಡು ಕೇಳುವವರು ಇಲ್ಲದಂತಾಗಿದೆ ಆಸ್ಪತ್ರೆಯ ಅವ್ಯವಸ್ಥೆಯ ವಿರುದ್ದ ಆಕ್ರೋಷ ವ್ಯಕ್ತಪಡಿಸಿದರು.
ನೂರಾರು ವರ್ಷಗಳ ಇತಿಹಾಸ ಇರುವ ಶ್ರೀ ನರಸಿಂಹರಾಜ ಜಿಲ್ಲಾ ಆಸ್ಪತ್ರೆ ಮೂಲಭೂತ ಸೌಕರ್ಯಗಳಿಂದ ವಂಚಿತವಾಗಿರುವ ಜೊತೆಗೆ ಆಸ್ಪತ್ರೆಯಲ್ಲಿ ಭ್ರಷ್ಟಾಚಾರ ಯಾವ ಮಟ್ಟಕ್ಕೆ ಬೆಳೆದು ನಿಂತಿದೆ ಎಂದರೆ ಹುಟ್ಟಿದ ಮಗುವಿನ ಜನನ ಪ್ರಮಾಣ ಪತ್ರ ಪಡೆಯಲು ತಂದೆ ಸಾವಿರ ರೂಪಾಯಿ ಲಂಚ ನೀಡಬೇಕು. ಅದೇ ತಂದೆ ಮರಣ ನಂತರ ಮಗ ತಂದೆಯ ಮರಣ ಪ್ರಮಾಣ ಪತ್ರ ಪಡೆಯಲು ಲಂಚ ನೀಡಬೇಕಾದ ಪರಿಸ್ಥಿತಿಯ ಜೊತೆಗೆ ಸೂಜಿಯಿಂದ ಮಾತ್ರೆಯವರೆಗೂ ಲಂಚ ಹಾಗೂ ದಲ್ಲಾಳಿಗಳ ನೆರವಿಲ್ಲದೆ, ಬಡವರ ನೆರಳು ಆಸ್ಪತ್ರೆಯ ಬಾಗಿಲಿಗೂ ಬೀಳುವಂತಿಲ್ಲ. ಅಷ್ಟರ ಮಟ್ಟಿಗೆ ಆಸ್ಪತ್ರೆ ಹದಗೆಟ್ಟಿದೆ ಎಂದು ಕಿಡಿ ಕಾರಿದರು.
ಜಿಲ್ಲಾದ್ಯಕ್ಷ ಈಕಂಬಳ್ಳಿ ಮಂಜುನಾಥ್ ಮಾತನಾಡಿ ಜಿಲ್ಲಾಸ್ಪತ್ರೆಯಲ್ಲಿ ಮೂಲಭೂತ ಸೌಕರ್ಯಗಳು ಮರಿಚೀಕೆ ಆಗಿದೆ ಕುಡಿಯುವ ನೀರಿನ ಸಮಸ್ಯೆ ಜೊತೆಗೆ ಶೌಚಾಲಯಗಳ ಸ್ವಚ್ಚತೆಗೆ ನೀರಿಲ್ಲದೆ ಗಬ್ಬು ನಾರುತ್ತಿವೆ ಆರೋಗ್ಯವಾಗಿ ಆನಾರೋಗ್ಯ ಪೀಡಿತರಾಗುವ ಮಟ್ಟಕ್ಕೆ ಸರ್ಕಾರಿ ಆಸ್ಪತ್ರೆ ಹದಗೆಟ್ಟಿದೆ. ಮತ್ತೊಂದೆಡೆ ಸರ್ಕಾರಿ ಆರೋಗ್ಯ ಸುತ್ತೊಲೆ ಪ್ರಕಾರ ೧೦೦ ಮೀ ವ್ಯಾಪ್ತಿಯಲ್ಲಿ ಯಾವುದೇ ಖಾಸಗಿ ಆಸ್ಪತ್ರೆ , ಪರೀಕ್ಷಾ ಕೇಂದ್ರಗಳು ಇರಬಾರದೆಂಬ ಆದೇಶವಿದ್ದರೂ ನಾಯಿಕೊಡೆಗಳಂತೆ ಸರ್ಕಾರಿ ಆಸ್ಪತ್ರೆಗಳ ಸುತ್ತ ನಾಯಿಕೊಡೆಗಳಂತೆ ತಲೆ ಎತ್ತಿದ್ದರೂ ಕ್ರಮ ಕೈಗೊಳ್ಳಬೇಕಾದ ಆಸ್ಪತ್ರೆ ಸಿಬ್ಬಂದಿ ನಾಪತ್ತೆ ಆಗಿದ್ದಾರೆಂದು ಅಸಮಧಾನ ವ್ಯಕ್ತಪಡಿಸಿದರು.
ತುರ್ತು ಪರಿಸ್ಥಿತಿಯಲ್ಲಿ ಬಡ ರೋಗಿಗಳಿಗೆ ಅನುಕೂಲವಾಗಬೇಕಾದ ಸರ್ಕಾರಿ ಅಂಬುಲೆನ್ಸ್ ಸೇವೆ ಇಂದು ಆಸ್ಪತ್ರೆಯ ಮುಂಭಾಗದಲ್ಲಿರುವ ಖಾಸಗಿ ಆಂಬುಲೆನ್ಸ್ಗಳ ಹಾವಳಿಗೆ ಬಡ ರೋಗಿಗಳ ಪೋಷಕರು ತತ್ತರಿಸುತ್ತಿದ್ದಾರೆ. ಸಮರ್ಪಕವಾಗಿ ಸರ್ಕಾರಿ ಸೇವೆ ನೀಡದ ಆಂಬುಲೆನ್ಸ್ ಚಾಲಕರು ಖಾಸಗಿ ಅಂಬುಲೆನ್ಸ್ ಜೊತೆ ಒಪ್ಪಂದ ಮಾಡಿಕೊಂಡು ಬಡವರ ರಕ್ತ ಹೀರುವ ದಂದೆಯಾಗಿ ಮಾರ್ಪಟ್ಟಿದೆ ಎಂದು ದೂರಿದರು.
೨೪ ಗಂಟೆಯಲ್ಲಿ ಸರ್ಕಾರಿ ಜಿಲ್ಲಾ ಆಸ್ಪತ್ರೆಗೆ ಖಾಯಂ ಜಿಲ್ಲಾ ಶಸ್ತç ಚಿಕಿತ್ಸಕರನ್ನು ನೇಮಕ ಮಾಡಿ ಅನಧಿಕೃತ ಅಂಗಡಿಗಳನ್ನು ತೆರೆವುಗೊಳಿಸಿ ಖಾಸಗಿ ಅಂಬ್ಯೂಲೆನ್ಸ್ ದಂದೆಗೆ ಕಡಿವಾಣ ಹಾಕಿ ಆಸ್ಪತ್ರೆಯಲ್ಲಿ ಮೂಲಭೂತ ಸೌಕರ್ಯಗಳನ್ನು ಒದಗಿಸಿ ಬಡ ರೈತ ಕೂಲಿಕಾರ್ಮಿಕರ ಆರೋಗ್ಯ ರಕ್ಷಣೆ ಮಾಡುವ ಜೊತೆಗೆ ಡೆಂಗ್ಯೂ ಮತ್ತಿತರ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ವಿಶೇಷ ವೈದ್ಯರ ತಂಡ ರಚನೆ ಮಾಡಬೇಕೆಂದು ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಅನಿಲ್, ರಾಮಸಾಗರ ವೇಣು, ಸುಪ್ರೀಂ ಚಲ, ಗಂಗಾದರ್, ಬಾಬು, ಮಂಗಸಂದ್ರ ತಿಮ್ಮಣ್ಣ, ಕುವಣ್ಣ, ಯಲ್ಲಣ್ಣ, ಮಾಸ್ತಿ ಹರೀಶ್, ಮುನಿರಾಜು, ಶೈಲಜ, ರೂಪ, ರಾಧ, ಚೌಡಮ್ಮ ಮುಂತಾದವರು.
ಕೋಲಾರ: ಕೆ.ಸಿ.ವ್ಯಾಲಿ ಯೋಜನೆಯಿಂದ ಅಂತರ್ಜಲ ಹೆಚ್ಚಿ ರೈತರ ಬದುಕು ಹಸನಾಗಿದ್ದು, ಜೆಡಿಎಸ್ ಪಕ್ಷ ಸೇರಿದಂತೆ ಕೆಲ ಮುಖಂಡರಿಂದ ದಾರಿ ತಪ್ಪಿಸುವ…
ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕನ್ನಡ ಜಾಗೃತ ಪರಿಷತ್ತು ವತಿಯಿಂದ ಪದ್ಮಶ್ರೀ ಸಾಲುಮರದ ತಿಮ್ಮಕ್ಕ ಅವರಿಗೆ ನುಡಿನಮನ…
ಆಲಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯ ಸಹ ಶಿಕ್ಷಕ ಅರುಣ್ ಅವರು ವರ್ಗಾವಣೆಗೊಂಡಿದ್ದು, ಈ ಹಿನ್ನೆಲೆ ಇಂದು ಎಸ್…
ಬಿಜೆಪಿ-ಜೆಡಿಎಸ್ ಸಂಸದರು ರಾಜ್ಯಕ್ಕೆ ಕೇಂದ್ರದಿಂದ ಆಗುತ್ತಿರುವ ಅನ್ಯಾಯದ ಬಗ್ಗೆ ಬಾಯಿಯನ್ನೇ ಬಿಡುತ್ತಿಲ್ಲ. ಪ್ರಹ್ಲಾದ್ ಜೋಶಿ ಕೂಡ ಒಂದೇ ಒಂದು ದಿನ…
ಗೆದ್ದವರಿಗೆ ಅಭಿನಂದಿಸುತ್ತಾ, ಸೋತವರಿಗೆ ಸಾಂತ್ವನ ಹೇಳುತ್ತಾ, ಮತದಾರರಿಗೆ ಧನ್ಯವಾದಗಳನ್ನು ಅರ್ಪಿಸುತ್ತಾ, ಸಂವಿಧಾನಕ್ಕೆ ಸಲಾಂ ಹೊಡೆಯುತ್ತಾ, ನಮ್ಮ ಮುಗ್ದತೆ ಮತ್ತು ಮೂರ್ಖತನ…
ಡಿ.13ರಂದು ರಾಷ್ಟ್ರೀಯ ಲೋಕ ಅದಾಲತ್ ನಡೆಯಲಿದ್ದು, ರಾಷ್ಟ್ರೀಯ ಲೋಕ ಅದಾಲತ್ ಮುಖೇನ ರಾಜೀಯಾಗುವ ಪ್ರಕರಣಗಳ ವಿಲೇವಾರಿಗೊಳಿಸುವಂತೆ ಕರ್ನಾಟಕ ರಾಜ್ಯ ಕಾನೂನು…