ಜಿಲ್ಲಾ ಆಸ್ಪತ್ರೆ ಹಾಗೂ ತೀವ್ರ ನಿಗಾ ಘಟಕದ ಕಟ್ಟಡ‌ ನಿರ್ಮಾಣಕ್ಕೆ ಗುದ್ದಲಿ ಪೂಜೆ

ದೊಡ್ಡಬಳ್ಳಾಪುರದ ಸಿದ್ದೇನಾಯಕನಹಳ್ಳಿ ಬಳಿ ಜಿಲ್ಲಾ ಆಸ್ಪತ್ರೆ ಹಾಗೂ ತೀವ್ರ ನಿಗಾ ಘಟಕದ ಕಟ್ಟಡ‌ ನಿರ್ಮಾಣಕ್ಕೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ‌ ಸಚಿವ ದಿನೇಶ್ ಗುಂಡೂರಾವ್ ಅವರು ಗುದ್ದಲಿ ಪೂಜೆ ನೆರವೇರಿಸಿದರು.

ತಾಲೂಕು ಸರ್ಕಾರಿ ಆಸ್ಪತ್ರೆ ಆವರಣದಲ್ಲಿಂದು ಎಜಾಕ್ಸ್ ಸಂಸ್ಥೆ ನೆರವಿನೊಂದಿಗೆ 4 ಕೋಟಿ ವೆಚ್ಚದಲ್ಲಿ ನಿರ್ಮಿಸಲಾದ ಒಪಿಡಿ ಬ್ಲಾಕ್, ಡಯಾಲಿಸಿಸ್ ಕೇಂದ್ರ ಹಾಗೂ ಬ್ಲಡ್ ಬ್ಯಾಂಕ್ ಕೇಂದ್ರಗಳನ್ನೊಳಗೊಂಡ ಕಟ್ಟಡವನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖಾ ಸಚಿವರಾದ ದಿನೇಶ್ ಗುಂಡೂರಾವ್ ಹಾಗೂ ಅಹಾರ ನಾಗರೀಕ ಸರಬರಾಜು ಹಾಗೂ ಬೆಂಗಳೂರು ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಹೆಚ್. ಮುನಿಯಪ್ಪ ಉಧ್ಘಾಟಿಸಿದರು.

ಸಮಾರಂಭನ್ನು ಉದ್ದೇಶಿಸಿ ಮಾತನಾಡಿದ ಆರೋಗ್ಯ ಕುಟುಂಬ Shorts ಇಲಾಖಾ ಸಚಿವರು ಉತ್ಕ್ರಷ್ಟ ಹಾಗೂ ಗುಣಮಟ್ಟದ ಚಿಕಿತ್ಸೆ ನೀಡುವುದು ಸರ್ಕಾರದ ಆದ್ಯತೆಯಾಗಿದ್ದು, ಎಲ್ಲಾ ವಿಧವಾದ ಚಿಕಿತ್ಸೆ ಹಾಗೂ ಔಷಧಿಗಳು ಸರ್ಕಾರಿ ಆಸ್ಪತ್ರೆಗಳಲ್ಲಿಯೇ ದೊರೆಯುವಂತೆ ನೋಡಿಕೊಳ್ಳಲಾಗುವುದೆಂದರು. ಈ ಹಿಂದೆ 250 ರಿಂದ 300 ಅಗತ್ಯ ಔಷಧಿಗಳು ದೊರೆಯುತಿದ್ದು, ಅವುಗಳ ಸಂಖ್ಯೆಯನ್ನು 1 ಸಾವಿರಕ್ಕೆ ಹೆಚ್ಚಿಸಲು ತೀರ್ಮಾನಿಸಲಾಗಿದೆ ಎಂದರು.

ದೊಡ್ಡಬಳ್ಳಾಪುರ ನೂತನ ಡಯಾಲಿಸಿಸ್ ಕೇಂದ್ರಕ್ಕೆ 1.5 ಕೋಟಿ ವೆಚ್ಚದ ಉಪಕರಣಗಳು ಹಾಗೂ ಪ್ರತಿ ವರ್ಷ ಮಾನವ ಸಂಪನ್ಮೂಲಗಳಿಗೆ 50 ಲಕ್ಷ ಒದಗಿಸಲಾಗುವುದೆಂದರು. ಈಗಾಗಲೇ ನೆಲಮಂಗಲ ತಾಲೂಕು ಕೇಂದ್ರಕ್ಕೆ ತಾಲೂಕು ಆಸ್ಪತ್ರೆ ಮಂಜೂರಾಗಿದ್ದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸಂಪೂರ್ಣ ಆರೋಗ್ಯ ಕ್ಷೇತ್ರದ ಅಭಿವೃದ್ಧಿಗೆ ಸಹಕಾರ ನೀಡಲಾಗುವುದೆಂದರು.

ಇತ್ತೀಚೆಗೆ ಬಿಪಿ,ಶುಗರ್ ಪ್ರಕರಣಗಳಲ್ಲಿ ಹೆಚ್ಚಳವಾಗುತಿದ್ದು, ಮನೆ ಮನೆಗೆ ತೆರಳಿ ಪರೀಕ್ಷಿಸುವ ಯೋಜನೆ ಜಾರಿಗೆ‌ತರಲಾಗುತ್ತಿದೆ. ಈ ಖಾಯಿಲೆಗಳು ಮುಂದಿನ ದಿನಗಳಲ್ಲಿ ಬೇರೆ ಬೇರೆ ಖಾಯಿಲೆಗಳಿಗೆ ದಾರಿ ಮಾಡಿಕೊಡುತ್ತವೆ.

ರಾಜ್ಯಾದ್ಯಂತ 8 ಸಾವಿರ ಡಯಾಲಿಸಿಸ್ ಯಂತ್ರಗಳನ್ನು ಸರ್ಕಾರಿ ಆಸ್ಪತ್ರೆಗಳಿಗೆ ನೀಡಲಾಗಿದೆ ಎಂದರು.

ಆಹಾರ ಮತ್ತು ನಾಗರಿಕ ಸರಬರಾಜು ಇಲಾಖಾ ಸಚಿವರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಹೆಚ್. ಮುನಿಯಪ್ಪ ಮಾತನಾಡಿ, ಶೇ. 80 ರಷ್ಟು ಜನ ಸರ್ಕಾರಿ ಆಸ್ಪತ್ರೆಗಳನ್ನು ಅವಲಂಬಿಸಿದ್ದು, ಸರ್ಕಾರ ಎಲ್ಲರಿಗೂ ಉತ್ತಮ ಆರೋಗ್ಯ ಸೇವೆಗಳನ್ನು ನೀಡಲು ಶ್ರಮಿಸುತ್ತಿದೆ. ಈ ನಿಟ್ಟಿನಲ್ಲಿ ಎಜಾಕ್ಸ್ ಸಂಸ್ಥೆಯು ಉತ್ತಮ ಕೆಲಸ ಮಾಡುತಿದ್ದು, ಶಿಕ್ಷಣ ಕ್ಷೇತ್ರಕ್ಕೂ ಉತ್ತಮ ಕೆಲಸಗಳನ್ನು ಮಾಡುತ್ತಿದೆ ಎಂದರು. ಜಿಲ್ಲೆಯ ಹಲವಾರು ಸಮುದಾಯ ಆರೋಗ್ಯ ಕೇಂದ್ರಗಳನ್ನು ಮೇಲ್ದರ್ಜೆಗೇರಿಸಲು ಡಿಹೆಚ್ಒ ಪಟ್ಟಿ ನೀಡಿದ್ದು ಅವುಗಳ ಮೇಲ್ದರ್ಜೆಗೆ ಸಚಿವರು ಸಮ್ಮತಿಸಿದ್ದಾರೆಂದರು.

ಸಭೆಯಲ್ಲಿ ದೊಡ್ಡಬಳ್ಳಾಪುರ ಶಾಸಕರಾದ ಧೀರಜ್ ಮುನಿರಾಜು, ದೊಡ್ಡಬಳ್ಳಾಪುರದ ಮಾಜಿ ಶಾಸಕ ವೆಂಕಟರಮಣಯ್ಯ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಜಿಲ್ಲಾ ಅಧ್ಯಕ್ಷ ರಾಜಣ್ಣ, ದೊಡ್ಡಬಳ್ಳಾಪುರ ನಗರಸಭೆಯ ಅಧ್ಯಕ್ಷರಾದ ಸುಮಿತ್ರಾ, ಉಪಾಧ್ಯಕ್ಷರಾದ ಮಲ್ಲೇಶ್, ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ, ಜಿ.ಪಂ ಸಿ.ಇ.ಒ ಡಾ.ಕೆ.ಎನ್ ಅನುರಾಧ, ಆರೋಗ್ಯ ಇಲಾಖೆಯ ನಿರ್ದೇಶಕರಾದ ತ್ರಿವೇಣಿ, ಉಪವಿಭಾಗಾಧಿಕಾರಿ ದುರ್ಗ ಶ್ರೀ, ಜಿಲ್ಲಾ ಆರೋಗ್ಯಾಧಿಕಾರಿ ಡಾ.ಸುನಿಲ್ ಕುಮಾರ್, ಅಜಾಕ್ಸ್ ಸಂಸ್ಥೆಯ ಮುಖ್ಯಸ್ಥರಾದ ವಿಜಯ್,
ಸೇರಿದಂತೆ ಚುನಾಯಿತ ಜನಪ್ರತಿನಿಧಿಗಳು, ಜಿಲ್ಲಾ ಮಟ್ಟದ ಅಧಿಕಾರಿಗಳು, ಆರೋಗ್ಯಾಧಿಕಾರಿಗಳು, ಸಾರ್ವಜನಿಕರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಏ.12ರಂದು ದೊಡ್ಡಬಳ್ಳಾಪುರ ನಗರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ ನಗರದಲ್ಲಿ ಏ.12 ರಂದು 220/66/11ಕೆವಿ ಕೆಐಎಡಿಬಿ ಉಪ ವಿದ್ಯುತ್ ಕೇಂದ್ರದಿಂದ ಹೊರವೊಮ್ಮುವ F02-Birla Super ಫೀಡರ್‌ನಲ್ಲಿ ವಿದ್ಯುತ್ ಕಾಮಗಾರಿಗಳು…

8 hours ago

ಪಿಯುಸಿ ರಿಸಲ್ಟ್ ದಿನವೇ ವಿದ್ಯಾರ್ಥಿನಿ ಘೋರ ಸಾವು

ಪಿಯುಸಿ ರಿಸಲ್ಟ್ ದಿನವೇ ವಿದ್ಯಾರ್ಥಿನಿ ಘೋರವಾಗಿ ಸಾವನ್ನಪ್ಪಿರುವ ಘಟನೆ ಹೆಬ್ಬಾಳ ಪೊಲೀಸ್ ಠಾಣಾ ವ್ಯಾಪ್ತಿಯ ಮನೋರಾಯನಪಾಳ್ಯದಲ್ಲಿ ನಡೆದಿದೆ.. 17 ವರ್ಷದ…

12 hours ago

ಲೋಕಾಯುಕ್ತ ಬಲೆಗೆ ಬಿದ್ದ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ

ರಾಯಚೂರು ಸಿರವಾರ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಸುರೇಶ್ ಶೆಟ್ಟಿ ಲೋಕಾಯುಕ್ತರ ಬಲೆಗೆ ಬಿದ್ದ ಮುಖ್ಯಾಧಿಕಾರಿ. ರಾಘವೇಂದ್ರ…

12 hours ago

ಹುಚ್ಚನೊಬ್ಬನ ಕನಸು….

ದೇಶದ ಎಲ್ಲಾ ದಲಿತ ಕೇರಿಗಳನ್ನು ನಾಶ ಮಾಡಬೇಕು. ಅಲ್ಲಿನ ಎಲ್ಲರಿಗೂ ಊರ ಒಳಗಿನ ಸ್ಥಳದಲ್ಲಿ ವಾಸಕ್ಕೆ ಅವಕಾಶ ಕಲ್ಪಿಸಬೇಕು. ಬ್ರಾಹ್ಮಣರ…

17 hours ago

PUC Result: ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿದ ದಿಶಾಳ ಸಾಧನೆಯ ಹಿಂದೆ ಎದೆ ನಡುಗಿಸುವ ಕಣ್ಣೀರಿನ ಕಥೆಯಿದೆ….ಈ ಕಥೆ ಕೇಳಿದರೆ ಎಂಥವರ ಕಣ್ಣಲ್ಲೂ ನೀರು ಬರುವುದು ಗ್ಯಾರಂಟಿ

600ಕ್ಕೆ 600 ಅಂಕ ತೆಗೆದು ರಾಜ್ಯಕ್ಕೆ ಟಾಪರ್ ಆದ ದಿಶಾಳ ಸಾಧನೆಯ ಹಿಂದೆ ಎದೆ ನಡುಗಿಸುವ ಕಣ್ಣೀರಿನ ಕಥೆಯಿದೆ. ಮೂರು…

1 day ago

ತೂಬಗೆರೆ ಸರ್ಕಾರಿ ಪಿಯು ಕಾಲೇಜಿಗೆ ಮತ್ತೊಮ್ಮೆ ಮೆರುಗು: ಶೇ.95.45 ಫಲಿತಾಂಶ

ದೊಡ್ಡಬಳ್ಳಾಪುರ (ತೂಬಗೆರೆ): ಗ್ರಾಮಾಂತರ ಭಾಗದಲ್ಲಿದ್ದರೂ ಶೈಕ್ಷಣಿಕ ಕ್ಷೇತ್ರದಲ್ಲಿ ತನ್ನದೇ ಆದ ಛಾಪು ಮೂಡಿಸಿರುವ ತೂಬಗೆರೆ ಸರ್ಕಾರಿ ಪದವಿ ಪೂರ್ವ ಕಾಲೇಜು…

1 day ago