ಜಿಲ್ಲಾ ಉಸ್ತುವಾರಿ ಸಚಿವರಿಂದ ಸಾರ್ವಜನಿಕ ಕುಂದು ಕೊರತೆ ಸಭೆ: 98 ಅಹವಾಲು ಸ್ವೀಕಾರ: ಸಾರ್ವಜನಿಕರ ಅಹವಾಲು ಶೀಘ್ರ ಇತ್ಯರ್ಥ ಪಡಿಸಿ- ಸಚಿವ ಕೆ.ಎಚ್ ಮುನಿಯಪ್ಪ

ಸಾರ್ವಜನಿಕರು ಸಲ್ಲಿಸುವ ಅಹವಾಲುಗಳನ್ನು ಶೀಘ್ರವಾಗಿ ಇತ್ಯರ್ಥಪಡಿಸಿ ಎಂದು ಆಹಾರ ನಾಗರಿಕ ಸರಬರಾಜು ಗ್ರಾಹಕ ವ್ಯವಹಾರಗಳ ಸಚಿವರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಅಧಿಕಾರಿಗಳಿಗೆ ಸೂಚಿಸಿದರು.

ದೇವನಹಳ್ಳಿ ತಾಲ್ಲೂಕು ಪಂಚಾಯಿತಿ ಕಾರ್ಯಾಲಯದಲ್ಲಿ ಇಂದು ನಡೆದ ದೇವನಹಳ್ಳಿ ಕ್ಷೇತ್ರ ವ್ಯಾಪ್ತಿಯ ಸಾರ್ವಜನಿಕರ ಅಹವಾಲು ಸ್ವೀಕಾರ ಹಾಗೂ ಕುಂದುಕೊರತೆ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಸಾರ್ವಜನಿಕರ ಕೆಲಸಕಾರ್ಯಗಳು ತ್ವರಿತವಾಗಿ ಆಗಬೇಕು. ಸರ್ಕಾರಿ ಸೇವೆ ಜನರ ಸೇವೆಗಾಗಿ ಇರುವುದು. ಸಾರ್ವಜನಿಕರು ಹಲವು ಸಮಸ್ಯೆಗಳನ್ನು ಹೊತ್ತು ಕಚೇರಿಗಳಿಗೆ ಅಲೆಯುತ್ತಾರೆ. ಅವರ ಸಮಸ್ಯೆಗಳನ್ನು ಶೀಘ್ರ ಇತ್ಯರ್ಥ ಪಡಿಸುವುದು ರಿಂದ ಸಮಯ ಉಳಿತಾಯವಾಗಿ, ಅಧಿಕಾರಿಗಳು ಕಾರ್ಯ ಕ್ಷಮತೆ ಹೆಚ್ಚುತ್ತದೆ ಎಂದು ಸಚಿವರು ಹೇಳಿದರು.

ನಿರಾಶ್ರಿತರ ಗೆ ಮನೆ ಒದಗಿಸುವುದು,  ಬಡವರಿಗೆ  ಸೈಟ್ ಹಂಚಿಕೆ,ಪೋಡಿ ದುರಸ್ತಿ ಕಾರ್ಯ, ಜಾಮೀನು ಸರ್ವೇ ಕಾರ್ಯ, ಕೆರೆಗಳಿಗೆ ನೀರು ತುಂಬಿಸುವ ಕಾರ್ಯ, ನಿರುದ್ಯೋಗಿಗಳಿಗೆ ತರಬೇತಿ ನೀಡಿ ಉದ್ಯೋಗ ಸೃಷ್ಟಿ ಮಾಡುವುದು ಇವೆಲ್ಲವನ್ನು ಶೀಘ್ರ ಕಾರ್ಯರೂಪಕ್ಕೆ ತಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯನ್ನು ಮಾದರಿ ಜಿಲ್ಲೆಯನ್ನಾಗಿ ಮಾಡಬೇಕು. ಹೀಗಾಗಿ ಅಧಿಕಾರಿಗಳ ಸಹಕಾರ ಅಗತ್ಯ ಎಂದು ಸಚಿವರು ಹೇಳಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿ ರಾಮಕೃಷ್ಣಯ್ಯ, ದೇವನಹಳ್ಳಿ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಶ್ರೀನಾಥ್ ಗೌಡ, ಗ್ರೇಡ್ 2ತಹಶಿಲ್ದಾರ್ ಉಷಾ,ಸಚಿವರ ವಿಶೇಷಾಧಿಕಾರಿ ವೆಂಕಟೇಶ್ ಸೇರಿದಂತೆ ಜಿಲ್ಲಾಮಟ್ಟದ ಅಧಿಕಾರಿಗಳು, ತಾಲ್ಲೂಕು ಮಟ್ಟದ ಅಧಿಕಾರಿಗಳು, ಜನಪ್ರತಿನಿಧಿಗಳು, ಮುಖಂಡರು, ಸಾರ್ವಜನಿಕರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *