ಸಾರ್ವಜನಿಕರು ಸಲ್ಲಿಸುವ ಅಹವಾಲುಗಳನ್ನು ಶೀಘ್ರವಾಗಿ ಇತ್ಯರ್ಥಪಡಿಸಿ ಎಂದು ಆಹಾರ ನಾಗರಿಕ ಸರಬರಾಜು ಗ್ರಾಹಕ ವ್ಯವಹಾರಗಳ ಸಚಿವರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಅಧಿಕಾರಿಗಳಿಗೆ ಸೂಚಿಸಿದರು.
ದೇವನಹಳ್ಳಿ ತಾಲ್ಲೂಕು ಪಂಚಾಯಿತಿ ಕಾರ್ಯಾಲಯದಲ್ಲಿ ಇಂದು ನಡೆದ ದೇವನಹಳ್ಳಿ ಕ್ಷೇತ್ರ ವ್ಯಾಪ್ತಿಯ ಸಾರ್ವಜನಿಕರ ಅಹವಾಲು ಸ್ವೀಕಾರ ಹಾಗೂ ಕುಂದುಕೊರತೆ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ನಿರಾಶ್ರಿತರ ಗೆ ಮನೆ ಒದಗಿಸುವುದು, ಬಡವರಿಗೆ ಸೈಟ್ ಹಂಚಿಕೆ,ಪೋಡಿ ದುರಸ್ತಿ ಕಾರ್ಯ, ಜಾಮೀನು ಸರ್ವೇ ಕಾರ್ಯ, ಕೆರೆಗಳಿಗೆ ನೀರು ತುಂಬಿಸುವ ಕಾರ್ಯ, ನಿರುದ್ಯೋಗಿಗಳಿಗೆ ತರಬೇತಿ ನೀಡಿ ಉದ್ಯೋಗ ಸೃಷ್ಟಿ ಮಾಡುವುದು ಇವೆಲ್ಲವನ್ನು ಶೀಘ್ರ ಕಾರ್ಯರೂಪಕ್ಕೆ ತಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯನ್ನು ಮಾದರಿ ಜಿಲ್ಲೆಯನ್ನಾಗಿ ಮಾಡಬೇಕು. ಹೀಗಾಗಿ ಅಧಿಕಾರಿಗಳ ಸಹಕಾರ ಅಗತ್ಯ ಎಂದು ಸಚಿವರು ಹೇಳಿದರು.
ಮಹಿಳೆಯರು ಎಲ್ಲ ವಲಯಗಳಲ್ಲಿ ತಮ್ಮ ಛಾಪು ಮೂಡಿಸಿದ್ದು, ಮಹಿಳಾ ಸಬಲೀಕರಣದ ಆಶಯ ಸಾಕಾರದತ್ತ ಸಾಗುತ್ತಿದೆ ಎಂದು ಆರಕ್ಷಕ ನಿರೀಕ್ಷಕರಾದ ಎನ್.ಶೋಭಾ…
ಮನೆಯ ಹೊಸ್ತಿಲಿನಲ್ಲಿ ಪೂಜೆಗಾಗಿ ಇಟ್ಟಿದ್ದ ಒಣಗಿದ ದಾಸವಾಳದ ಹೂವನ್ನು ಆಟವಾಡುತ್ತಾ ನುಂಗಿದ ಆರುವರೆ ತಿಂಗಳ ಕಂದಮ್ಮ ಉಸಿರುಗಟ್ಟಿ ಸಾವನ್ನಪ್ಪಿರುವ ಘಟನೆ…
ಹುಬ್ಬಳ್ಳಿಯಲ್ಲಿ ಕಮರ್ಷಿಯಲ್ ಟ್ಯಾಕ್ಸ್ ಡಿಸಿ ಆರು ಲಕ್ಷ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಭರತ್ ಹೆಗ್ಗಡೆ, ಲೋಕಾಯುಕ್ತ ಬಲೆಗೆ…
ಭಾರತದ ಅಗ್ರ ಪೀಠೋಪಕರಣ ಬ್ರ್ಯಾಂಡ್ ಆಗಿರುವ ರಾಯಲ್ ಓಕ್ ಫರ್ನಿಚರ್, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ನೂತನ ಮಳಿಗೆಗೆ ಚಾಲನೆ…
ಎಲ್ಲಾ ವಲಯಗಳಿಗೂ ಯಾವುದೇ ಅಡೆತಡೆ ಇಲ್ಲದೆ ಎಲ್.ಪಿ.ಜಿ ಸರಬರಾಜು ಮಾಡಲಾಗುತ್ತಿದೆ ಅಲ್ಲದೇ ವಿಶೇಷವಾಗಿ *ಆಟೋ ಎಲ್.ಪಿ.ಜಿ*.ಗೆ ಯಾವುದೇ ರೀತಿಯ ಕೊರತೆ…
Cheap Emotional Support Animal Letter: Affordable ESA Documentation Affordable Emotional Support Animal Letters for Enhanced…