ಜಿಲ್ಲಾ ಉಸ್ತುವಾರಿ ಸಚಿವ ಡಾ. ಕೆ.ಸುಧಾಕರ್ ಅವರಿಂದ ರಾಷ್ಟ್ರ ಧ್ವಜಾರೋಹಣ

ದೇವನಹಳ್ಳಿ ಪಟ್ಟಣದ ಕ್ರೀಡಾಂಗಣದಲ್ಲಿಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯಿತಿ ವತಿಯಿಂದ ಏರ್ಪಡಿಸಲಾದ 74ನೇ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು, ವೈದ್ಯಕೀಯ ಶಿಕ್ಷಣ ಸಚಿವರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಕೆ. ಸುಧಾಕರ್ ಅವರು ಧ್ವಜಾರೋಹಣ ನೆರವೇರಿಸಿ, ತ್ರಿವರ್ಣ ಧ್ವಜಕ್ಕೆ ಗೌರವ ವಂದನೆ ಸಲ್ಲಿಸಿದರು.

ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಸದಸ್ಯರಾದ ಬಿ.ಎನ್.ಬಚ್ಚೇಗೌಡ, ದೇವನಹಳ್ಳಿ ವಿಧಾನಸಭಾ ಕ್ಷೇತ್ರದ ಶಾಸಕರಾದ ನಿಸರ್ಗ ನಾರಾಯಣಸ್ವಾಮಿ.ಎಲ್.ಎನ್‌, ದೇವನಹಳ್ಳಿ ಪುರಸಭೆಯ ಅಧ್ಯಕ್ಷರಾದ ಗೋಪಮ್ಮ, ಉಪಾಧ್ಯಕ್ಷರಾದ ಗೀತಾ ಶ್ರೀಧರ್, ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಆರ್.ಲತಾ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರೇವಣಪ್ಪ.ಕೆ, ಜಿಲ್ಲಾ ಪೊಲೀಸ್ ಅಧೀಕ್ಷಕ ಮಲ್ಲಿಕಾರ್ಜುನ ಬಾಲದಂಡಿ, ಅಪರ ಜಿಲ್ಲಾಧಿಕಾರಿ ವಿಜಯ.ಈ.ರವಿಕುಮಾರ, ದೇವನಹಳ್ಳಿ ತಹಶೀಲ್ದಾರ್ ಶಿವರಾಜ್ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *