Categories: ಕೋಲಾರ

ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ

ಕೋಲಾರ: ಹಲವಾರು ಮಹನೀಯರ ತ್ಯಾಗ, ಬಲಿದಾನದಿಂದ ಪಡೆದಿರುವ ಸ್ವಾತಂತ್ರವನ್ನು ಇಂದಿನ ಜನತೆ ಉಳಿಸಿಕೊಂಡು ಹೋಗಬೇಕಾದ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದು ಜಿಲ್ಲಾ ಕಾಂಗ್ರೆಸ್ ಘಟಕದ ಅಧ್ಯಕ್ಷ ಲಕ್ಷ್ಮೀನಾರಾಯಣ ತಿಳಿಸಿದರು.

ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಗುರುವಾರ ಆಯೋಜಿಸಿದ್ದ ೭೮ನೇ ಸ್ವಾತಂತ್ರ ದಿನಾಚರಣೆ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನಡೆಸಿ ಮಾತನಾಡಿದ ಅವರು ಸ್ವಾತಂತ್ರ್ಯ ದಿನಾಚರಣೆಯನ್ನು ರಾಷ್ಟ್ರೀಯ ಹಬ್ಬದ ರೀತಿಯಲ್ಲಿ ಆಚರಣೆ ಮಾಡಲಾಗುತ್ತದೆ ಮಹಾತ್ಮ ಗಾಂಧೀಜಿಯವರು ದೇಶಕ್ಕೆ ರಾಜಕೀಯ ಸ್ವಾತಂತ್ರ್ಯವನ್ನು ಕೊಟ್ಟರೆ ಅಂಬೇಡ್ಕರ್ ಅವರು ಸಮಾಜಿಕ ನ್ಯಾಯದ ಸ್ವಾತಂತ್ರ್ಯವನ್ನು ನೀಡಿದ್ದಾರೆ ಸ್ವಾತಂತ್ರ್ಯದ ಆಶಯಗಳಿಗೆ ಬೆಲೆ ಸಿಗಬೇಕಾದರೆ ದೇಶದಲ್ಲಿ ಧರ್ಮ, ಜಾತಿ, ಭಾಷೆಗಳು ಒಗ್ಗಟ್ಟಿನಿಂದ ಅಹಿಂಸೆಯನ್ನು ಕಾಣಬೇಕಾಗಿದೆ ಜನರು ನೆಮ್ಮದಿ, ಶಾಂತಿಯಿಂದ ಬದುಕುವಂತಹ ವಾತಾವರಣವನ್ನು ನಿರ್ಮಾಣವಾಗುವಂತೆ ಮಾಡಬೇಕು ಎಂದರು.

ಕಾರ್ಯಕ್ರಮದಲ್ಲಿ ಕುಡಾ ಅಧ್ಯಕ್ಷ ಮಹಮ್ಮದ್ ಹನೀಫ್, ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರಸಾದ್ ಬಾಬು, ಜಿಲ್ಲಾ ಎಸ್ಸಿ ಘಟಕದ ಅಧ್ಯಕ್ಷ ಕೆ.ಜಯದೇವ್, ಮೀನುಗಾರಿಕೆ ವಿಭಾಗದ ಜಿಲ್ಲಾ ಅಧ್ಯಕ್ಷ ರಂಗನಾಥ್, ಎಸ್ಟಿ ಘಟಕದ ಅಧ್ಯಕ್ಷ ನಾಗರಾಜ್ ಮುಖಂಡರಾದ ಒಬಿಸಿ ಮಂಜುನಾಥ್, ವೆಂಕಟಪತಿ, ಗಂಗಮ್ಮನಪಾಳ್ಯ ರಾಮಯ್ಯ, ರೌತ್ ಶಂಕರಪ್ಪ, ಕೆ.ಆರ್ ತ್ಯಾಗರಾಜ್, ಕೃಷ್ಣೇಗೌಡ, ಮುಂತಾದವರು ಇದ್ದರು

Ramesh Babu

Journalist

Recent Posts

ಪೊಲೀಸರೆಂದು ನಂಬಿಸಿ ವೃದ್ಧ ದಂಪತಿಗೆ ಚಿನ್ನಾಭರಣ ವಂಚನೆ: ಇಬ್ಬರು ಆರೋಪಿಗಳು ವಶಕ್ಕೆ: ದೂರುದಾರರಿಗೆ ಚಿನ್ನಾಭರಣ ಹಸ್ತಾಂತರ

ದೊಡ್ಡಬಳ್ಳಾಪುರ: ಪೊಲೀಸರೆಂದು ಪರಿಚಯಿಸಿಕೊಂಡು ವೃದ್ಧ ದಂಪತಿಯನ್ನು ನಂಬಿಸಿ ಚಿನ್ನಾಭರಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆಂಧ್ರಪ್ರದೇಶ ಮೂಲದ ಇಬ್ಬರು ಆರೋಪಿಗಳನ್ನು…

23 minutes ago

ಮಳೆ ಕೊರತೆ; ಮತ್ಸ್ಯ ಕೃಷಿಗೂ ಹೊಡೆತ!

ಜಿಲ್ಲೆಯಲ್ಲಿ ಮಳೆ ಕೊರತೆ ಕೃಷಿ ಕ್ಷೇತ್ರದ ಜತೆಗೆ ಒಳನಾಡು ಮೀನುಗಾರಿಕೆಗೂ ತೀವ್ರ ಹೊಡೆತ ನೀಡಿದೆ. ಜಿಲ್ಲೆಯ ಬಹುತೇಕ ಕೆರೆಗಳು ನೀರಿಲ್ಲದೆ…

3 hours ago

ಬರಿದಾಗುತ್ತಿರುವ ಕರ್ನಾಟಕದ ಖಜಾನೆ…….

ಬರಿದಾಗುತ್ತಿರುವ ಕರ್ನಾಟಕದ ಖಜಾನೆ....... ಅಂದಿನ ಸಂಪಾದನೆ ಅಂದದಿಗೆ ಮಾತ್ರ ಎಂಬಂತಾಗಿದೆ...... ಬಹುತೇಕ ಕೆಳ ಮಧ್ಯಮ ವರ್ಗದ ಅಥವಾ ಬಡವರ ಮನೆಯ…

6 hours ago

ವಾಲ್ಮೀಕಿ ಜಯಂತಿ ರಜೆ ದಿನಾಂಕ ಬದಲು

ಬೆಂಗಳೂರು: ಮಹರ್ಷಿ ವಾಲ್ಮೀಕಿ ಜಯಂತಿಯ ಸಾರ್ವತ್ರಿಕ ರಜೆ ದಿನಾಂಕವನ್ನು ಬದಲಾಯಿಸಿ ಕರ್ನಾಟಕ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಈ ಹಿಂದೆ…

18 hours ago

ನೇಯ್ಗೆ ಉದ್ಯಮದ ಕಚ್ಚಾ ವಸ್ತುಗಳ ಬೆಲೆ ಏರಿಕೆಗೆ ಖಂಡನೆ: ನೇಕಾರ ಹೋರಾಟ ಸಮಿತಿಯಿಂದ ಪ್ರತಿಭಟನೆ

ದಿನದಿಂದ ದಿನಕ್ಕೆ ನೇಕಾರಿಕೆ ಮಾಡುವುದು ಕಷ್ಟವಾಗುತ್ತಿದೆ. ಸೀರೆ ಉತ್ಪಾದನೆಯಲ್ಲಿ ಬಳಸುವ ಕಚ್ಚ ಸಾಮಗ್ರಿಗಳ ಬೆಲೆ ಗಗನಕ್ಕೆರುತ್ತಿದೆ ಕೂಡಲೇ ಸರ್ಕಾರ ಮಧ್ಯೆ…

21 hours ago

ಜಗಳ ಬಿಡಿಸಲು ಹೋದ ಪೊಲೀಸರ ಮೇಲೆಯೇ ಹಲ್ಲೆ ಆರೋಪ: 112 ತುರ್ತು ಸೇವೆ ಸಿಬ್ಬಂದಿಗೆ ಗಾಯ: ಇಬ್ಬರು ಆರೋಪಿಗಳು ವಶಕ್ಕೆ

ದೊಡ್ಡಬಳ್ಳಾಪುರ: ಕುಡಿದ ಮತ್ತಿನಲ್ಲಿ ಪರಸ್ಪರ ಜಗಳವಾಡುತ್ತಿದ್ದವರನ್ನು ಬಿಡಿಸಲು ತೆರಳಿದ್ದ 112 ತುರ್ತು ಸೇವೆಯ ಪೊಲೀಸರ ಮೇಲೆಯೇ ಹಲ್ಲೆ ನಡೆಸಿದ ಆರೋಪ…

23 hours ago