ಜಿಲ್ಲಾ ಕೌಶಲ್ಯಾಭಿವೃದ್ಧಿ ಇಲಾಖೆಯ ಸಹಯೋಗದಿಂದ ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ

ಜಿಲ್ಲಾ ಕೌಶಲ್ಯಾಭಿವೃದ್ಧಿ ಇಲಾಖೆ ಮಾನವ ಸಂಪನ್ಮೂಲ ಅಭಿವೃದ್ಧಿ ಕೇಂದ್ರ ಕೋಲಾರ ಇವರ ಸಹಯೋಗದಲ್ಲಿ ರೇಮಂಡ್ ಕಂಪನಿ ಸಮೂಹದ ಸಿಲ್ವರ್ ಸ್ಪಾರ್ಕ್ ಆಪೇರಲ್ ಲಿಮಿಟೆಡ್ ಕಂಪನಿಯಲ್ಲಿ ವಿವಿಧ ಹುದ್ದೆಗಳಿಗೆ ನೇರ ಸಂದರ್ಶನವನ್ನು ಏರ್ಪಡಿಸಲಾಗಿದೆ.

ದೊಡ್ಡಬಳ್ಳಾಪುರದಲ್ಲಿ ಕಾರ್ಯನಿರ್ವಹಿಸುತ್ತಿರುವ ಸಿಲ್ವರ್ ಸ್ಪಾರ್ಕ್ ಆಪೇರಲ್ ಕಂಪನಿಯಲ್ಲಿ ಟೈಲರ್ಸ್, ಹೆಲ್ಪರ್ಸ್, ಚೆಕ್ಕರ್ಸ್, ಕಟ್ಟರ್ಸ್, ಪ್ಯಾಕರ್ಸ್, ಅಸಿಸ್ಟೆಂಟ್ ಹಾಗೂ ಸೂಪರ್ ವೈಸರ್ ಗಳ (ಅಂದಾಜು 500 ಹುದ್ದೆಗಳು) ಹುದ್ದೆಗಳಿಗೆ ನೇರ ಸಂದರ್ಶನ ಮಾಡುವ ಮುಖಾಂತರ ಆಯ್ಕೆ ಮಾಡಲಾಗುತ್ತದೆ.

ಹುದ್ದೆಗಳಿಗೆ ನೇರ ಸಂದರ್ಶನವನ್ನು ಜುಲೈ 29 ಮತ್ತು 30ರಂದು ದೊಡ್ಡಬಳ್ಳಾಪುರ ಇಂಡಸ್ಟ್ರಿಯಲ್ ಎಸ್ಟೇಟ್ ನ ಮಜರಾ ಹೊಸಹಳ್ಳಿ ಬಳಿಯಿರುವ ಸಿಲ್ವರ್ ಸ್ಪಾರ್ಕ್ ಆಪೇರಲ್ ಕಂಪನಿಯಲ್ಲಿ ಬೆಳಿಗ್ಗೆ 9 ರಿಂದ ಮಧ್ಯಾಹ್ನ 3 ಗಂಟೆಯವರೆಗೆ ಸಂದರ್ಶನ ಮಾಡಲಾಗುತ್ತದೆ. ದೊಡ್ಡಬಳ್ಳಾಪುರ ಮತ್ತು ಗೌರಿಬಿದನೂರಿನ ಘಟಕಗಳಿಗೆ ನೇಮಕಾತಿ ಮಾಡಿಕೊಳ್ಳಲಿದ್ದಾರೆ.

ಅಭ್ಯರ್ಥಿಗಳ ವಯೋಮಿತಿ 18 ರಿಂದ 40 ವರ್ಷದೊಳಗಿರಬೇಕು, ತಾವು ಪೂರೈಸಿರುವ ಶಿಕ್ಷಣದ ಅಂಕಪಟ್ಟಿಗಳೊಂದಿಗೆ ಆಧಾರ್ ಕಾರ್ಡ್, ಪೋಟೋ, ಇತ್ಯಾದಿ ಅಗತ್ಯ ದಾಖಲೆಗಳೊಂದಿಗೆ ಹಾಜರಾಗಬೇಕು.

ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 9663543196, 9480492932, 7760828204, 7760787565 ಗೆ ಕರೆಮಾಡಿ ಮಾಹಿತಿಯನ್ನು ಪಡೆಯಬಹುದು ಎಂದು ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!