ಕೋಲಾರ: ಜಿಲ್ಲಾ ಗ್ಯಾರಂಟಿ ಯೋಜನೆಗಳ ಪ್ರಾಧಿಕಾರದ ಅಧ್ಯಕ್ಷರಾಗಿ ಕಾಂಗ್ರೆಸ್ ಪಕ್ಷದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ವೈ ಶಿವಕುಮಾರ್ ಅವರನ್ನು ನೇಮಕ ಮಾಡಿ ಸರಕಾರ ಆದೇಶ ಹೊರಡಿಸಿದ್ದು ಭಾನುವಾರ ಶಾಸಕ ಕೊತ್ತೂರು ಜಿ ಮಂಜುನಾಥ್ ಹಾಗೂ ಎಂಎಲ್ಸಿ ಎಂ.ಎಲ್ ಅನಿಲ್ ಕುಮಾರ್ ನೇತೃತ್ವದಲ್ಲಿ ನಗರದಲ್ಲಿ ಅಭಿನಂದನೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ಶಾಸಕ ಕೊತ್ತೂರು ಮಂಜುನಾಥ್ ಮಾತನಾಡಿ, ಕಳೆದ ವಿಧಾನಸಭಾ ಚುನಾವಣೆಯ ಪೂರ್ವದಲ್ಲಿ ಕಾಂಗ್ರೆಸ್ ಪಕ್ಷವು ಘೋಷಣೆ ಮಾಡಿದ್ದ ಐದು ಗ್ಯಾರಂಟಿ ಯೋಜನೆಗಳನ್ನು ಸರಕಾರ ರಚನೆಯಾದ ಮೇಲೆ ಅನುಷ್ಠಾನ ಮಾಡಿದ್ದು, ಅದನ್ನು ಜನರಿಗೆ ತಲುಪಿಸುವ ಉದ್ದೇಶದಿಂದ ಜಿಲ್ಲಾ ಪ್ರಾಧಿಕಾರವನ್ನು ರಚನೆ ಮಾಡಲಾಗಿದ್ದು ಗ್ಯಾರಂಟಿ ಯೋಜನೆಗಳ ಲಾಭ ಅರ್ಹ ಫಲಾನುಭವಿಗಳಿಗೆ ದೊರೆಯುವಂತೆ ಮಾಡಬೇಕು ಎಂದು ತಿಳಿಸಿದರು.
ಈ ಯೋಜನೆಯಲ್ಲಿ ಕೆಲವು ತಾಂತ್ರಿಕ ಕಾರಣಗಳಿಂದಾಗಿ ಫಲಾನುಭವಿಗಳು ಗ್ಯಾರೆಂಟಿ ಯೋಜನೆಗಳಿಂದ ವಂಚಿತರಾಗಿರಬಹುದು ಅವರನ್ನು ಗುರುತಿಸಿ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳನ್ನು ನೇರವಾಗಿ ಫಲಾನುಭವಿಗಳಿಗೆ ದೊರಕುವಂತೆ ಮಾಡಬೇಕು ಸಮಾಜಮುಖಿಯಾಗಿ ಬಡವರಿಗೆ ನೆರವಾಗಲು ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಹಾಗೂ ಕಾಂಗ್ರೆಸ್ ಪಕ್ಷವು ಜಾರಿ ಮಾಡಿದ್ದು ಸದುಪಯೋಗವಾಗುವಂತೆ ಸಮಿತಿಯು ಜವಾಬ್ದಾರಿ ವಹಿಸಬೇಕು ಎಂದು ತಿಳಿಸಿದರು
ಸಮಿತಿಯ ಉಪಾಧ್ಯಕ್ಷರಾಗಿ ಹಿದಾಯತ್, ಎ ಅಶ್ವಥ್ ರೆಡ್ಡಿ, ಎನ್ ನಾಗೇಶ್ವರಿ, ಸದಸ್ಯರಾಗಿ ವಕ್ಕಲೇರಿ ರಾಜಪ್ಪ, ರಾಧಾಕೃಷ್ಣರೆಡ್ಡಿ, ಎಂ.ಅಂಜಿನಪ್ಪ, ಎಂ.ಸಿ ನೀಲಕಂಠೇಗೌಡ, ಎಸ್.ವಿ ಪಾರ್ಥಸಾರಥಿ, ಎ.ವಿ ಮನೋಹರ್, ಮಮತಾರೆಡ್ಡಿ, ಮಹಮ್ಮದ್ ಮುನೀರ್, ಎಸ್. ಉಮಾದೇವಿ, ಎನ್ ಭಾಗ್ಯಮ್ಮ, ವಿ ಮಂಜುಳ ಆಯ್ಕೆಯಾಗಿದ್ದು ಸಮಿತಿಗೆ ಅಪರ ಜಿಲ್ಲಾಧಿಕಾರಿ ಸದಸ್ಯ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸಲಿದ್ದಾರೆ.
ನೂತನ ಅಧ್ಯಕ್ಷ ವೈ ಶಿವಕುಮಾರ್ ಅವರಿಗೆ ಅಭಿನಂದನೆ ಸಲ್ಲಿಸುವ ಸಂದರ್ಭದಲ್ಲಿ ಕೆಪಿಸಿಸಿ ವಕ್ತಾರ ಗದ್ದೆಕಣ್ಣೂರು ದಯಾನಂದ್, ಪಿಎಲ್ಡಿ ಬ್ಯಾಂಕ್ ಮಾಜಿ ಅಧ್ಯಕ್ಷ ಚಂಜಿಮಲೆ ಬಿ.ರಮೇಶ್, ಹಿರಿಯ ಮುಖಂಡ ಮಣಿಘಟ್ಟ ಸೊಣ್ಣೆಗೌಡ, ಬಂಗಾರಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸೀಸಂದ್ರ ಗೋಪಾಲಗೌಡ, ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷರುಗಳಾದ ಛತ್ರಕೋಡಿಹಳ್ಳಿ ಮಂಜುನಾಥ್, ನುಕ್ಕನಹಳ್ಳಿ ಶ್ರೀನಿವಾಸ್, ಮೈಲಾಂಡಹಳ್ಳಿ ಮುರುಳಿ, ಜಿಲ್ಲಾ ಯುವ ಕಾಂಗ್ರೆಸ್ ಉಪಾಧ್ಯಕ್ಷ ಜನಪನಹಳ್ಳಿ ನವೀನ್ ಕುಮಾರ್, ಆಚಟ್ನಹಳ್ಳಿ ಮನು ಮುಂತಾದವರು ಇದ್ದರು