ಜಿಲ್ಲಾ ಮತ್ತು ತಾಲೂಕು ಕೇಂದ್ರಗಳಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿಯ ಆಚರಣೆಗೆ ನೀಡಲಾಗುತ್ತಿದ್ದ ಅನುದಾನವನ್ನು ರಾಜ್ಯ ಸರ್ಕಾರ ಹೆಚ್ಚಳ ಮಾಡಿ ಆದೇಶಿಸಿದೆ.
ತಾಲೂಕು ಕೇಂದ್ರಗಳಲ್ಲಿ ವಾಲ್ಮೀಕಿ ಜಯಂತಿಯ ಆಚರಣೆಗೆ 25ಸಾವಿರದಿಂದ 35ಸಾವಿರಕ್ಕೆ ಹೆಚ್ಚಳ. ಜಿಲ್ಲಾ ಕೇಂದ್ರಗಳಲ್ಲಿ ವಾಲ್ಮೀಕಿ ಜಯಂತಿಯ ಆಚರಣೆಗೆ ಒಂದು ಲಕ್ಷದಿಂದ ರೂ. 1.5 ಲಕ್ಷ ರೂಪಾಯಿಗೆ ಹೆಚ್ಚಳ ಮಾಡಲಾಗಿದೆ.
ತಳಸಮುದಾಯದಲ್ಲಿ ಹುಟ್ಟಿದ ವಾಲ್ಮೀಕಿಯವರು ತಮ್ಮ ಪರಿಶ್ರಮ ಮತ್ತು ಶ್ರದ್ಧೆಯಿಂದಾಗಿ ರಾಮಾಯಣದಂತಹ ಮಹಾಕಾವ್ಯ ರಚನೆ ಮಾಡಿ, ಮಹರ್ಷಿಯಾದವರು. ಆದ್ದರಿಂದ ವಾಲ್ಮೀಕಿ ಅವರ ಜಯಂತಿಯನ್ನು ಅದ್ಧೂರಿಯಾಗಿಯಷ್ಟೇ ಅಲ್ಲ ಅರ್ಥಪೂರ್ಣವಾಗಿ ಆಚರಿಸಿ, ಅವರ ಜೀವನ ಸಾಧನೆಗಳು ಮತ್ತಷ್ಟು ಜನರಿಗೆ ತಲುಪಿಸುವ ಉದ್ದೇಶದಿಂದ ಜಿಲ್ಲಾ ಮತ್ತು ತಾಲೂಕು ಕೇಂದ್ರಗಳಲ್ಲಿ ವಾಲ್ಮೀಕಿ ಜಯಂತಿಯ ಆಚರಣೆಗೆ ನೀಡಲಾಗುತ್ತಿದ್ದ ಅನುದಾನವನ್ನು ಹೆಚ್ಚಳ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.