ಕೋಲಾರ: ಕರ್ಕಶ ಶಬ್ದಮಾಡಿ ಶಬ್ದ ಮಾಲಿನ್ಯ ಮಾಡುತ್ತಿದ್ದ ಹಾಗೂ ಸಾರ್ವಜನಿಕರಿಗೆ ಕಿರಿಕಿರಿಯುಂಟು ಮಾಡುತ್ತಿದ್ದ ದ್ವಿಚಕ್ರ ವಾಹನಗಳಿಂದ ವಶಕ್ಕೆ ಪಡೆದಿದ್ದ ಬೈಕ್ ಸೈಲೆನ್ಸರ್ ಗಳನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿಖಿಲ್ ನೇತೃತ್ವದಲ್ಲಿ ನಗರದ ಅಮ್ಮಾವಾರಿ ಪೇಟೆ ಸರ್ಕಲ್ ನಲ್ಲಿ ಬುಲ್ಡೋಸರ್ ಮೂಲಕ ನಾಶಪಡಿಸಿದರು.
ಈ ಸಂಧರ್ಭದಲ್ಲಿ ಮಾಧ್ಯಮದವರೊಂದಿಗೆ
ಪೊಲೀಸ್ ವರಿಷ್ಠಾಧಿಕಾರಿ ನಿಖಿಲ್ ಮಾತನಾಡಿ, ಸಾರ್ವಜನಿಕರಿಗೆ ಅರಿವು ಮೂಡಿಸಲು ಸಾರ್ವಜನಿಕರ ಎದುರೇ ಬೈಕ್ ಸೈಲೆನ್ಸರ್ ಗಳನ್ನು ನಾಶ ಪಡಿಸಿದ್ದು, ಇನ್ನು ಮುಂದೆ ಯಾರೂ ಅದರಲ್ಲೂ ಯುವ ಜನತೆ ಶಬ್ದ ಮಾಲಿನ್ಯ ಮಾಡುವ ಸೈಲೆನ್ಸರ್ ಗಳನ್ನು ಬಳಸಬಾರದು. ಅದರ ಬದಲು ಪುಸ್ತಕಗಳನ್ನು ಕೊಂಡು ಓದುವ ಮೂಲಕ ತಮ್ಮ ಜ್ಞಾನವನ್ನು ಹೆಚ್ಚಿಸಿಕೊಳ್ಳಬೇಕು, ಪೋಲಿಸ್ ವಿಧಿಸುವ ದಂಡದಿಂದ ತಪ್ಪಿಸಿಕೊಳ್ಳುವಂತೆ ಸಲಹೆ ನೀಡಿದರು.
ನಗರದ ಬೈಕ್ ಸೈಲೆನ್ಸರ್ ಗಳ ವಿರುದ್ದ ಕಳೆದ ನಾಲ್ಕು ದಿನಗಳಿಂದ ಜಿಲ್ಲೆಯ ಪೊಲೀಸರು ಕಾರ್ಯಾಚರಣೆ ನಡೆಸಿ ಸುಮಾರು ರೂ. 6 ಲಕ್ಷ 50 ಸಾವಿರ ಬೆಲೆ ಬಾಳುವ 152 ಕರ್ಕಶ ಶಬ್ದ ಮಾಡುತ್ತಿದ್ದ ಬೈಕ್ ಸೈಲೆನ್ಸರ್ ಗಳನ್ನ ವಶಕ್ಕೆ ಪಡೆದು ನಾಶ ಮಾಡಿರುವುದಾಗಿ ತಿಳಿಸಿದರಲ್ಲದೆ, ಈಗಾಗಲೇ ಹೈ ಬೀಮ್ ಎಲ್.ಇ.ಡಿ. ಬಲ್ಬ್ ಗಳನ್ನು ಬಳಸುತ್ತಿದ್ದ 1500 ವಾಹನಗಳಿಗೆ ದಂಡ ವಿಧಿಸಿದ್ದು, ಈ ಕಾರ್ಯಾಚರಣೆ ಮುಂದುವರೆಯುತ್ತದೆ ಎಂದು ತಿಳಿಸಿದರು.
ಸುರಕ್ಷಿತೆ ದೃಷ್ಟಿಯಿಂದ ಪ್ರತಿಯೊಬ್ಬರು ಹೆಲ್ಮೆಟ್ ಧರಿಸುವಂತೆ ಹಾಗೂ ಏಕ ಮುಖ ರಸ್ತೆ ಗಳನ್ನು ಬಳಸುವಂತೆ ಹಾಗೂ ಹೈ ಬೀಮ್ ಎಲ್.ಇ.ಡಿ. ಬಲ್ಬ್ ಗಳನ್ನು ವಾಹನಗಳಲ್ಲಿ ಬಳಸದಂತೆ ತಿಳಿಸಿದರಲ್ಲದೆ,ಹೈ ವೇಗಳಲ್ಲಿ ನಿಗದಿ ಪಡಿಸಿದ ವೇಗಕ್ಕಿಂತ ಅತಿ ವೇಗವಾಗಿ ಚಲಿಸುವ ವಾಹನಗಳ ತಪಾಸಣೆಗೆ ಕ್ರಮ ಕೈಗೊಂಡಿದ್ದು,ಮುಂದಿನ ತಿಂಗಳಲ್ಲಿ ಜನರ ಪ್ರಾಣ ರಕ್ಷಣೆಗಾಗಿ ರಸ್ತೆ ಸುರಕ್ಷಿತ ಬಗ್ಗೆ ಹೆಚ್ಚು ಒತ್ತು ನೀಡಿ ವಿಷೇಶ ಕಾರ್ಯಾಚರಣೆ ಮಾಡಲಾಗುವುದೆಂದು ಹೇಳಿದರು.
ನಗರದಲ್ಲಿ ಏಕ ಮುಖ ರಸ್ತೆಗಳಿ ಪರ್ಯಾಯ ರಸ್ತೆಗಳನ್ನು ಗುರುತಿಸಿ ರಸ್ತೆಗಳ ಅಭಿವೃದ್ಧಿಗೆ ನಗರ ಸಭೆ ಅಧಿಕಾರಿಗಳೊಂದಿಗೆ ಚರ್ಚಿಸಲಾಗುವುದು ಎಂದು ಹೇಳಿದರು.
ಈ ಸಂಧರ್ಭದಲ್ಲಿ ಹೆಚ್ಚುವರಿ ಪೊಲೀಸ್ ಅಧಿಕ್ಷಕರು ರವಿಶಂಕರ್, ಡಿ.ವೈ.ಎಸ್ಪಿ ನಾಗ್ತೇ, ಪೊಲೀಸ್ ಇನ್ಸ್ಪೆಕ್ಟರ್ ಗಳಾದ ಸದಾನಂದ್ ಅರುಣ್ ಪಾಟೀಲ್ ,ಹೇಮಂತ್ ಕುಮಾರ್, ವಸಂತ್, ಸುನಿಲ್ ಕುಮಾರ್ ಹಾಗೂ ಟ್ರಾಫಿಕ್ ಪೊಲೀಸ್ ಸಿಬ್ಬಂದಿ ಭಾಗವಹಿಸಿದ್ದರು.
ಇಂದು ವಿಧಾನಸೌಧ ಸಭಾಂಗಣದಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ವಿವಿಧ ಕಾರ್ಮಿಕ ಸಂಘಟನೆಗಳೊಂದಿಗೆ ಸಿಎಂ ಸಿದ್ದರಾಮಯ್ಯ ನಡೆಸಿದ ಸಭೆಯ…
ಜಿಲ್ಲಾ ಬಾಲಕಾರ್ಮಿಕ ಯೋಜನೆಯಲ್ಲಿ ಯೋಜನಾ ನಿರ್ದೇಶಕ ಮತ್ತು ಗುಮಾಸ್ತ ಕಂ ಲೆಕ್ಕಿಗ ಹುದ್ದೆಗೆ ಗೌರವಧನ ಆಧಾರದ ಮೇರೆಗೆ ನೇಮಕಾತಿ ಮಾಡಿಕೊಳ್ಳಲು…
ನಂದಿ ಬೆಟ್ಟದ ತಿರುವು ರಸ್ತೆಯಲ್ಲಿ ಬೈಕ್ ಅಪಘಾತವಾಗಿದ್ದು, ಬೈಕ್ ನಲ್ಲಿದ್ದ ಇಬ್ಬರು ಸ್ನೇಹಿತರು ಸ್ಥಳದಲ್ಲೇ ದುರ್ಮರಣ ಹೊಂದಿದ್ದಾರೆ. ನಂದಿ ಬೆಟ್ಟದ…
ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ ಮೇಲಿನಜೂಗಾನಹಳ್ಳಿ(ಎಸ್.ಎಸ್.ಘಾಟಿ) ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗುಂಜೂರು ಗ್ರಾಮದ ಸರ್ವೇ ನಂಬರ್ 33ರಲ್ಲಿ ಒಟ್ಟು 120…
ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಹೂಲಿಕಟ್ಟಿ ಗ್ರಾಮದ ಸರ್ಕಾರಿ ಶಾಲೆಯ ಮುಖ್ಯೋಪಾಧ್ಯಾಯರು ಮುಸ್ಲಿಂ ಸಮುದಾಯಕ್ಕೆ ಸೇರಿದವರು, ಅವರನ್ನು ತಮ್ಮ ಊರಿನಿಂದ…
ಹೊಸ ಹೋರಾಟಗಾರರು ಸೃಷ್ಟಿಯಾಗಬೇಕಿದೆ, ಹಳೆಯ ಹೋರಾಟಗಾರರು ಮರುಹುಟ್ಟು ಪಡೆಯಬೇಕಿದೆ, ಸಮಕಾಲೀನ ಹೋರಾಟಗಾರರು ಹೋರಾಟದ ಮಾರ್ಗಗಳನ್ನು ಪುನರ್ ರೂಪಿಸಿಕೊಳ್ಳಬೇಕಿದೆ...... 1995/2000 ಇಸವಿಯ…