ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನಲ್ಲಿ ಆಯೋಜಿಸಲಾಗಿದ್ದ ಜಿಲ್ಲಾ ಮಟ್ಟದ 9 ವರ್ಷದೊಳಗಿನ ಮಕ್ಕಳ ಚೆಸ್ ಚಾಂಪಿಯನ್ ಶಿಪ್ ಸ್ಪರ್ಧೆಯಲ್ಲಿ ದೊಡ್ಡಬಳ್ಳಾಪುರ ತಾಲೂಕಿನ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ನಾಲ್ಕನೇ ತರಗತಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿನಿ ಸನ್ವಿತಾ ಅವರು ಪ್ರಥಮ ಪಡೆದಿದ್ದಾರೆ.
ತಾಲೂಕಿನ ಸಾಸಲು ಹೋಬಳಿ ಪುಟ್ಟಲಿಂಗಯ್ಯನಪಾಳ್ಯ (ಲಿಂಗದವೀರನಹಳ್ಳಿ) ಗ್ರಾಮದ ನರಸಿಂಹಮೂರ್ತಿ ಹಾಗೂ ಜಯಶ್ರೀ ಕೆ.ಜೆ ದಂಪತಿಯ ಮಗಳಾದ ಸನ್ವಿತಾ ಎನ್ ಅವರು ಚೆಸ್ ಪಂದ್ಯಾವಳಿಯಲ್ಲಿ ಅಭೂತಪೂರ್ವ ಆಟವಾಡಿ ಪ್ರಥಮ ಸ್ಥಾನ ಪಡೆಯುವ ಮೂಲಕ ತಾಲೂಕಿಗೆ ಕೀರ್ತಿ ತಂದಿದ್ದಾರೆ.
ಚೆಸ್ ಚಾಂಪಿಯನ್ ಶಿಪ್ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದ ಸನ್ವಿತಾ ಎನ್ ಅವರನ್ನು ಶಾಲಾ ಆಡಳಿತ ಮಂಡಳಿ ಹಾಗೂ ಗಣ್ಯರು ಅಭಿನಂದಿಸಿ ಪ್ರೋತ್ಸಾಹಿಸಿದ್ದಾರೆ.
ಬೇಸಿಗೆ ಆರಂಭದಲ್ಲಿಯೇ ನಗರ ವ್ಯಾಪ್ತಿಯಲ್ಲಿ ನೀರಿಗೆ ಪರದಾಟ ಆರಂಭವಾಗಿದ್ದು, ನಗರಸಭೆಯಿಂದ ವಾರಕ್ಕೊಮ್ಮೆ ಕೇವಲ ಅರ್ಧ ಗಂಟೆ ನೀರು ಬಿಡುತ್ತಿರುವುದು ಸರಿಯಲ್ಲ.…
ಕೊಲ್ಲಿ ರಾಷ್ಟ್ರಗಳ ಯುದ್ಧದ ಹಿನ್ನೆಲೆಯಲ್ಲಿ ಗ್ಯಾಸ್ ಸಿಲಿಂಡರ್ ಅಭಾವ ಮುಂದಿಟ್ಟುಕೊಂಡು ಕಾಳ ಸಂತೆಯಲ್ಲಿ ಸಿಲಿಂಡರ್ ಮಾರಾಟ ಮಾಡಿದರೆ ಅಂತಹ ಗ್ಯಾಸ್…
ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸಪ್ಲೆ, ಕಾಲೇಜುಗಳ ಬಳಿ ಸುಖಾ ಸುಮ್ಮನೆ ಓಡಾಟ, ಏರಿಯಾಗಳಲ್ಲಿ ಹವಾ ಮೇಂಟೈನ್ ಮಾಡೋದು, ಹಫ್ತಾ ವಸೂಲಿ…
ಅಂದು ಫ್ರೆಂಡ್ ಬರ್ತಡೇ ಇತ್ತು. ಒಂದೇ ಊರಿನ ಐದು ಮಂದಿ, ಒಬ್ಬ ಕೋಲಾರದ ಮಾಲೂರು ಮೂಲದವನು ಸೇರಿ ಬರ್ತಡೇ ಬಾಯ್…
ಬೆಳ್ಳಂಬೆಳಗ್ಗೆ ಕಂಟೇನರ್-ಸಿಮೆಂಟ್ ಲಾರಿ ನಡುವೆ ಅಪಘಾತ ಸಂಭವಿಸಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಚೆನ್ನಾದೇವಿ ಅಗ್ರಹಾರದ ಪೆಟ್ರೋಲ್ ಬಂಕ್ ಸಮೀಪ ನಡೆದಿದೆ....…
ಪಶು ಆಹಾರಗಳ ಬೆಲೆ ಏರಿಕೆ.. ಬೇಸಿಗೆಯಿಂದಾಗಿ ಹಾಲು ಉತ್ಪಾದನೆ ಕುಂಠಿತ.. ಹಸುಗಳಲ್ಲಿ ಹೆಚ್ಚಿದ ಕೆಚ್ಚಲುಬಾವು ರೋಗ.. ರಾಸುಗಳಿಗೆ ಮೇವು ಇಲ್ಲದೆ…