ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾ ಮಟ್ಟದ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆಯನ್ನು ಮಾನ್ಯ ಜಿಲ್ಲಾಧಿಕಾರಿಗಳು, ಬೆಂಗಳೂರು ಗ್ರಾಮಾಂತರ ಜಿಲ್ಲೆ ರವರ ಅಧ್ಯಕ್ಷತೆಯಲ್ಲಿ ನಡೆಸಲಾಗುತ್ತಿದ್ದು, ಸಮಿತಿಗೆ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಹಿಂದುಳಿದ ವರ್ಗಗಳ ಪ್ರತಿನಿಧಿಯನ್ನು ನಾಮನಿರ್ದೇಶಿತ ಸದಸ್ಯರನ್ನಾಗಿ ನೇಮಿಸಿಕೊಂಡು ಹೊಸದಾಗಿ ಸಮಿತಿಯನ್ನು ರಚಿಸಬೇಕಾಗಿರುತ್ತದೆ.
ಆದ್ದರಿಂದ ಸಮಿತಿಯ ಸದಸ್ಯರಾಗಲು ಆಸಕ್ತಿಯುಳ್ಳವರು ತಮ್ಮ ವಿವರಗಳನ್ನು ನಿಗದಿತ ನಮೂನೆಯ ಅರ್ಜಿಯಲ್ಲಿ ಸಲ್ಲಿಸಬಹುದಾಗಿದೆ. ಅರ್ಜಿಯನ್ನು ಸಲ್ಲಿಸಲು ಆಗಸ್ಟ್ 28 ಕೊನೆಯ ದಿನಾಂಕವಾಗಿರುತ್ತದೆ. ನಿಗದಿತ ದಿನಾಂಕದ ನಂತರ ಸ್ವೀಕೃತಗೊಳ್ಳುವ ಅರ್ಜಿಗಳನ್ನು ತಿರಸ್ಕರಿಸಲಾಗುವುದು.
ಅರ್ಜಿಯೊಂದಿಗೆ ಸಂಬಂಧಪಟ್ಟ ಅಗತ್ಯ ದಾಖಲಾತಿಯನ್ನು ಉಪ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ ಅಥವಾ ಸಂಬಂಧಪಟ್ಟ ತಾಲ್ಲೂಕಿನ ಸಹಾಯಕ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ ರವರಿಗೆ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: ಉಪ ನಿರ್ದೇಶಕರ ಕಚೇರಿ, ಸಹಾಯಕ ನಿರ್ದೇಶಕರು, ದೇವನಹಳ್ಳಿ-080-7681784, ದೊಡ್ಡಬಳ್ಳಾಪುರ-080-7623681, ಹೊಸಕೋಟೆ-080-7931528, ನೆಲಮಂಗಲ-080-7723172 ಸಂಪರ್ಕಿಸಬಹುದು ಎಂದು ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕಿಯಾ ಟಿ.ಎಲ್.ಎಸ್ ಪ್ರೇಮ ರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮದುವೆಯಾದ 45 ದಿನಕ್ಕೆ ನವವಿವಾಹಿತ ಪತ್ನಿಯಿಂದ ಕಿರುಕುಳ ಆರೋಪಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪತ್ನಿಯ ವರ್ತನೆಯೇ ಸಾವಿಗೆ ಕಾರಣ ಎಂದು…
ಬೆಂಗಳೂರು ನಗರದ ಯಡಿಯೂರು ಕೆರೆ ಸಮೀಪದ ನಿವಾಸಿಯೊಬ್ಬರು ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ಆತ್ಮಹ*ತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಬೆಳಕಿಗೆ ಬಂದಿದೆ.…
ರಾಯಚೂರು: ಆಸ್ತಿ ಮೇಲಿನ ವ್ಯಾಮೋಹಕ್ಕೆ ಹೆತ್ತ ತಾಯಿಯ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಂದ ಹೃದಯವಿದ್ರಾವಕ ಘಟನೆ ರಾಯಚೂರು…
ಆಗ್ರಾ: ಆಗ್ರಾದಲ್ಲಿ ಚೀಲದಲ್ಲಿ ಯುವತಿಯ ಶಿರರಹಿತ ಶವ ಪತ್ತೆಯಾದ ಪ್ರಕರಣದಲ್ಲಿ ಯುವಕನೊಬ್ಬನನ್ನು ಬಂಧಿಸಲಾಗಿದೆ. ಆಗ್ರಾದ ಪಾರ್ವತಿ ವಿಹಾರ್‌ನಲ್ಲಿ ಜನವರಿ 24…
ಕೋಲಾರ: ರಾಜ್ಯ ಸರ್ಕಾರ 2023ರ ಪಿಟಿಸಿಎಲ್ ತಿದ್ದುಪಡಿ ಕಾಯ್ದೆಯ ವಿರುದ್ಧವಾಗಿ ಕಂದಾಯ ಇಲಾಖೆ, ನ್ಯಾಯಾಲಯಗಳು, ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟಿನಲ್ಲಿ…
ಒಂದು ಸುಂದರ ಸಂಸಾರ ಸಾಲದ ಸುಳಿಗೆ ಸಿಲುಕುವುದು ಎಂದರೆ ಅದು ಕೇವಲ ಆರ್ಥಿಕ ಬಿಕ್ಕಟ್ಟಲ್ಲ; ಅದು ಆ ಮನೆಯ ನೆಮ್ಮದಿಯ…