ಜಿಲ್ಲಾ ಮಟ್ಟದ ಮಾವು-ಹಲಸು ಮೇಳ ಉದ್ಘಾಟಿಸಿದ ಸಚಿವ ಕೆ.ಎಚ್. ಮುನಿಯಪ್ಪ

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ತೋಟಗಾರಿಕೆ ಇಲಾಖೆ, ಕೃಷಿ ಇಲಾಖೆ ಸಂಯುಕ್ತಾಶ್ರಯದಲ್ಲಿ ದೇವನಹಳ್ಳಿಯಲ್ಲಿ ಆಯೋಜಿಸಿದ್ದ ಜಿಲ್ಲಾ ಮಟ್ಟದ ಮಾವು, ಹಲಸು ಮತ್ತು ಇತರೆ ಹಣ್ಣುಗಳ ಪ್ರದರ್ಶನ ಹಾಗೂ ಮಾರಾಟ ಮೇಳ-2025″ ವನ್ನು ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರಗಳ ಸಚಿವರು ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಉದ್ಘಾಟಿಸಿದರು.

ನಂತರ ಮಾತನಾಡಿದ ಸಚಿವರು, ಜಿಲ್ಲೆಯ ಮಾವು, ಹಲಸು ಹಾಗೂ ಇತರೆ ಹಣ್ಣುಗಳನ್ನು ಬೆಳೆಯುತ್ತಿರುವ ರೈತರಿಗೆ ಉತ್ತಮ ಬೆಲೆ ಕಲ್ಪಿಸಿಕೊಡುವ ನಿಟ್ಟಿನಲ್ಲಿ ಹಾಗೂ ರೈತರನ್ನು ಪ್ರೋತ್ಸಾಹಿಸಲು, ಗ್ರಾಹಕರಿಗೆ ಉತ್ತಮ ಗುಣಮಟ್ಟದ ನೈಸರ್ಗಿಕವಾಗಿ ಹಣ್ಣುಗಳು ಸಿಗುವಂತೆ ಮಾಡಲು ಮೇಳ ಆಯೋಜನೆ ಮಾಡಲಾಗಿದೆ.

ವಿವಿಧ ತಳಿಯ ಮಾವು, ಹಲಸು ಹಾಗೂ ಇತರೆ ಹಣ್ಣುಗಳ ಮಾರಾಟ ಮಾಡಲಾಗುತ್ತಿದೆ. ಸರ್ಕಾರ ನಿಗದಿ ಮಾಡಿರುವ ಬೆಲೆಯಲ್ಲಿ ರಿಯಾಯಿತಿ ದರದಲ್ಲಿ ಗ್ರಾಹಕರು ಹಣ್ಣುಗಳನ್ನು ಖರೀದಿ ಮಾಡಬಹುದಾಗಿದೆ ಎಂದರು.

ಮೇಳವು ದೇವನಹಳ್ಳಿ ತಾಲ್ಲೂಕಿನ ಹೋಟೆಲ್ ನಂದಿ ಉಪಚಾರ ಮುಂಭಾಗ (ನಂದಿ ಬೆಟ್ಟಕ್ಕೆ ಹೋಗುವ ರಸ್ತೆ, ರಾಣಿ ಕ್ರಾಸ್) ಆಯೋಜಿಸಲಾಗಿದ್ದು ಜೂನ್ 13 ರಿಂದ 15 ವರೆಗೆ 2 ದಿನಗಳ ಕಾಲ ಇರಲಿದೆ. ಸಾರ್ವಜನಿಕರು ಕೂಡ ಗುಣಮಟ್ಟದ ವಿವಿಧ ತಳಿಯ ಹಣ್ಣುಗಳು ಹಾಗೂ ತಾಜಾ ಹಣ್ಣುಗಳನ್ನು ಒಂದೇ ವೇದಿಕೆಯಲ್ಲಿ ಖರೀದಿ ಮಾಡಲು ಉತ್ತಮ ಅವಕಾಶ ಇದಾಗಿದೆ.

ಸಸ್ಯ ಸಂತೆ ಕಾರ್ಯಕ್ರಮವನ್ನು ಮೇಳದಲ್ಲಿ ಏರ್ಪಡಿಸಲಾಗಿದ್ದು ಜಿಲ್ಲೆಯ ಎಲ್ಲಾ ತೋಟಗಾರಿಕೆ ಕ್ಷೇತ್ರ ಮತ್ತು ನರ್ಸರಿಗಳಿಂದ ವಿವಿಧ ಜಾತಿಯ ಹಣ್ಣಿನ ಕಸಿ/ಸಸಿ ಗಿಡಗಳನ್ನು ಅಲಂಕಾರಿಕ ಗಿಡಗಳನ್ನು ಪ್ರದರ್ಶನಕ್ಕೆ ಹಾಗೂ ಇಲಾಖೆ ನಿಗದಿಪಡಿಸಿದ ದರದಲ್ಲಿ ಮಾರಾಟ ಮಾಡುವ ವ್ಯವಸ್ಥೆಯನ್ನು ಸಹ ಕಲ್ಪಿಸಲಾಗಿದೆ.

*ಮೇಳದಲ್ಲಿ ಕಂಡು ಬಂದ ವಿವಿಧ ತಳಿಯ ಮಾವು-ಹಲಸು, ಸೀಬೆ*

ತೋತಾಪುರಿ, ಸೇಂದೂರ, ಬಂಗನಪಲ್ಲಿ, ಬಾದಾಮಿ, ರಸಪೂರಿ, ಮಲ್ಲಿಕಾ, ಕೇಸರ್, ದಶೇರಿ, ಕುಲ್ ಪಂದ್, ಹಿಮಾಪಸಂದ್,ಮಲಗೋವ, ಸಕ್ಕರೆಗುತ್ತಿ, ಡ್ರಾಗನ್ ಪ್ರೋಟ್ಸ್(ಕೆಂಪು), ಸೀಬೆ(ತೈವಾನ್, ಅಲಹಾಬಾದ್), ಹಲಸು(ಪ್ಯಾಕೆಟ್).

ಖುದ್ದು ಸಚಿವರು ಎಲ್ಲಾ ಮಳಿಗೆಗೆಳಿಗೆ ಭೇಟಿ ನೀಡಿ ರೈತರ ರೊಟ್ಟಿಗೆ ಸಮಾಲೋಚಿಸಿ ವಿವಿಧ ತಳಿಯ ಮಾವು, ಹಲಸು ಹಾಗೂ ಇತರೆ ಹಣ್ಣುಗಳ ಬಗ್ಗೆ ಮಾಹಿತಿ ಪಡೆದುಕೊಂಡು, ಅವುಗಳ ರುಚಿ ಸವಿದು ಹಣ್ಣುಗಳನ್ನು ಖರೀದಿಸಿದರು.

ಕಾರ್ಯಕ್ರಮದಲ್ಲಿ ಸಿಇಓ ಡಾ.ಕೆ.ಎನ್ ಅನುರಾಧ, ತೋಟಗಾರಿಕೆ ಇಲಾಖೆ ಉಪನಿರ್ದೇಶಕರಾದ ಗುಣವಂತ, ಕೃಷಿ ಇಲಾಖೆ ಜಂಟಿ ನಿರ್ದೇಶಕರಾದ ಕಲಾವತಿ, ಬಯಪ ಅಧ್ಯಕ್ಷ ಶಾಂತಕುಮಾರ್, ಪುರಸಭೆ ಅಧ್ಯಕ್ಷ ಮುನಿಕೃಷ್ಣ ಸೇರಿದಂತೆ ಸ್ಥಳೀಯ ಜನಪ್ರತಿನಿಧಿಗಳು, ಅಧಿಕಾರಿಗಳು ಹಾಗೂ ರೈತ ಬಾಂಧವರು,ಗ್ರಾಹಕರು ಇದ್ದರು.

Ramesh Babu

Journalist

Recent Posts

“ಸರ್ಕಾರದ ಕೆಲಸ ದೇವರ ಕೆಲಸ ” ಎಂದು ಹೇಳುವವರು ದೇವರಿಗೂ ವಂಚಿಸುತ್ತಿದ್ದಾರೆ…

ರೆಕ್ಕೆ ಮುರಿದ ಹಕ್ಕಿಯೊಂದು, ಬಿಕ್ಕಿ ಬಿಕ್ಕಿ ಅಳುತಲಿದೆ........ ಕಾಲು ಮುರಿದ ನಾಯಿಯೊಂದು, ಕುಂಟಿ ಕುಂಟಿ ನಡೆಯುತಿದೆ..... ಆಡಳಿತ ವ್ಯವಸ್ಥೆಯ ಕಾರ್ಯವೈಖರಿಯನ್ನು…

2 hours ago

ಸರ್ಕಾರಿ ಶಾಲಾ ಮಕ್ಕಳಿಗೆ ಟ್ರ್ಯಾಕ್‌ಸೂಟ್, ಶೂ ವಿತರಣೆ

ದೊಡ್ಡಬಳ್ಳಾಪುರ: ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳಿಗೆ ಉತ್ತಮ ಶಿಕ್ಷಣದ ಜೊತೆಗೆ ಅಗತ್ಯ ಮೂಲಸೌಕರ್ಯ ಹಾಗೂ ಪ್ರೋತ್ಸಾಹ ದೊರೆಯುವಂತೆ ಸಮಾಜದ…

16 hours ago

ಕಸ ವಿಂಗಡಣೆ ಯಂತ್ರಕ್ಕೆ ಸಿಲುಕಿ ಮಹಿಳೆ ಸಾವು

ದೊಡ್ಡಬಳ್ಳಾಪುರ: ಕಸ ವಿಂಗಡಣೆ ಮಾಡುವ ಯಂತ್ರಕ್ಕೆ ಸಿಲುಕಿ ಮಹಿಳೆಯೊಬ್ಬರು ಮೃತಪಟ್ಟಿರುವ ದಾರುಣ ಘಟನೆ ತಾಲೂಕಿನ ಎಂಎಸ್‌ಜಿಪಿ ಕಸ ಸಂಸ್ಕರಣಾ ಘಟಕದಲ್ಲಿ…

21 hours ago

ಅಕ್ಟೋಬರ್ 2….. ಶಾಸ್ತ್ರಿ ಮತ್ತು ಗಾಂಧಿ……..,

ದೇಶದ ಪ್ರಧಾನಿಯೊಬ್ಬರು ಹೀಗೂ ಬದುಕಬಹುದು ಎಂದು ತೋರಿಸಿ ಮಾದರಿಯಾದ ವ್ಯಕ್ತಿ ಲಾಲ್ ಬಹದ್ದೂರ್ ಶಾಸ್ತ್ರಿ. ಅವರಿಗೆ ಹುಟ್ಟು ಹಬ್ಬದ ಶುಭಾಶಯಗಳು.......…

1 day ago

ಬೆಂಬಲ ಬೆಲೆಯಡಿ ಸೂರ್ಯಕಾಂತಿ, ಹೆಸರುಕಾಳು, ಸೋಯಾಬೀನ್‌ಗೆ ಖರೀದಿಗೆ ಕೇಂದ್ರದ ಅನುಮೋದನೆ

2026-27ನೇ ಸಾಲಿನ ಮುಂಗಾರು ಹಂಗಾಮಿನ ಬೆಂಬಲ ಬೆಲೆ ಯೋಜನೆಯಡಿ ಸೂರ್ಯಕಾಂತಿ, ಹೆಸರುಕಾಳು ಹಾಗೂ ಸೋಯಾಬೀನ್ ಉತ್ಪನ್ನಗಳನ್ನು ಕನಿಷ್ಠ ಬೆಂಬಲ ಬೆಲೆ…

2 days ago

ಸಿಎಂಗೆ ರೈತಪರ ಕಾಳಜಿ ಇಲ್ಲ ಶಾಸಕ ಧೀರಜ್ ಮುನಿರಾಜು ಆರೋಪ

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಬಡವರು ಹಾಗೂ ರೈತರ ಬಗ್ಗೆ ಕಾಳಜಿ ಇಲ್ಲ. ಹೂಡಿಕೆದಾರರು ಹಾಗೂ ಬಂಡವಾಳಶಾಹಿಗಳ ಹಿತಾಸಕ್ತಿಯ ಬಗ್ಗೆಯೇ…

2 days ago