ಜಿಲ್ಲಾ ಮಟ್ಟದ ಯುವಜನೋತ್ಸವ- ಯುವಶಕ್ತಿ ದೇಶದ ಆಸ್ತಿ-ಸಂಸದ ಡಾ.ಕೆ.ಸುಧಾಕರ್

ಭಾರತವು ಜನಸಂಖ್ಯೆಯಲ್ಲಿ ಶೇ. 60 ರಷ್ಟು ಯುವಕರಿಂದ ಕೂಡಿದ ದೇಶ. ನಮ್ಮ ಯುವಶಕ್ತಿಯೇ ಭಾರತ ದೇಶದ ನಿಜವಾದ ಆಸ್ತಿ. ಶಾಲಾ-ಕಾಲೇಜು ಹಂತದಲ್ಲೇ ಯುವ ಸಮೂಹಕ್ಕೆ ಕೌಶಲ್ಯಭರಿತ ಶಿಕ್ಷಣ ನೀಡುವ ಕೆಲಸ ಆಗಬೇಕು ಎಂದು ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಸಂಸದರಾದ ಡಾ. ಕೆ. ಸುಧಾಕರ ಅವರು ಹೇಳಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಟೌನ್ ನಲ್ಲಿರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಸಭಾಂಗಣದಲ್ಲಿ ಯುವಜನ ವ್ಯವಹಾರ ಮತ್ತು ಕ್ರೀಡಾ ಸಚಿವಾಲಯ ನವದೆಹಲಿ, ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ನೆಹರು ಯುವ ಕೇಂದ್ರ ಜಿಲ್ಲಾ ರಾಷ್ಟ್ರೀಯ ಸೇವಾ ಯೋಜನಾ ಘಟಕ, ಬೆಂಗಳೂರು ಉತ್ತರ ವಿಶ್ವವಿದ್ಯಾಲಯ ಟಮಕ ಕೋಲಾರ ಹಾಗೂ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ದೇವನಹಳ್ಳಿ ಇವರ ಸಹಯೋಗದೊಂದಿಗೆ ಆಯೋಜಿಸಲಾಗಿದ್ದ ಜಿಲ್ಲಾ ಮಟ್ಟದ ಯುವಜನೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಸ್ವಾಮಿ ವಿವೇಕಾನಂದರ ಜಯಂತಿ ಅಂಗವಾಗಿ ದೇಶದಾದ್ಯಂತ ಯುವಜನೋತ್ಸವ ಕಾರ್ಯಕ್ರಮ ಹಮ್ಮಿಕೊಂಡು ಯುವ ಜನತೆಗೆ ಸಾಂಸ್ಕೃತಿಕ, ಕಲಾತ್ಮಕವಾಗಿ ಪ್ರೋತ್ಸಾಹಿಸಲಾಗುತ್ತಿದೆ ಎಂದರು.

ಕೇಂದ್ರ ಸರ್ಕಾರವು ಯುವ ಸಮೂಹದ ಕಲ್ಯಾಣಕ್ಕಾಗಿ ಸಾಕಷ್ಟು ಯೋಜನೆಗಳನ್ನೂ ಜಾರಿಗೆ ತಂದಿದೆ. ಸ್ಕಿಲ್ ಇಂಡಿಯಾ, ಮೇಕ್ ಇನ್ ಇಂಡಿಯಾ, ವಿದ್ಯಾಲಕ್ಷ್ಮೀ ಯೋಜನೆಗಳ ಮೂಲಕ ಕೌಶಲ್ಯ ತರಬೇತಿ ಹಾಗೂ ಉನ್ನತ ಶಿಕ್ಷಣಕ್ಕೆ ಸಾಲ-ಸೌಲಭ್ಯಗಳನ್ನು ಒದಗಿಸುತ್ತಿದೆ. ಸರ್ಕಾರದ ಯೋಜನೆಗಳನ್ನು ಯುವ ಸಮೂಹ ಸದುಪಯೋಗ ಪಡೆದುಕೊಳ್ಳಬೇಕು ಎಂದರು.

ವಿವಿಧ ಇಲಾಖೆಗಳಲ್ಲಿನ ಯೋಜನೆಗಳ ಮಾಹಿತಿ ನೀಡಲು ಮಳಿಗೆಗಳನ್ನು ತೆರೆಯಲಾಗಿತ್ತು.

ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿ ಅಮರೇಶ ಹೆಚ್., ಜಿ.ಪಂ ಉಪಕಾರ್ಯದರ್ಶಿ ಟಿ.ಕೆ ರಮೇಶ್, ಜಿ.ಪಂ ಮುಖ್ಯ ಯೋಜನಾ ಅಧಿಕಾರಿ ರಾಮಕೃಷ್ಣಯ್ಯ, ಯೋಜನಾ ನಿರ್ದೇಶಕ ವಿಠ್ಠಲ್ ಕಾವ್ಳೆ, ಜಿಲ್ಲಾ ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕಿ ಟಿ. ಜಯಲಕ್ಷ್ಮೀ, ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಪ್ರಾಂಶುಪಾಲ ಮಂಜಯ್ಯ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಸ್ಪರ್ಧಾತಿ ಯುವಕ-ಯುವತಿಯರು ಭಾಗವಹಿಸಿದ್ದರು.

Ramesh Babu

Journalist

Recent Posts

ಗ್ರಾಮಗಳಲ್ಲಿ ಕುಡಿಯುವ ನೀರಿನ ಕೊರತೆಯಾಗದಂತೆ ಕ್ರಮ – ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್, ಐಟಿ ಮತ್ತು ಬಿಟಿ ಸಚಿವ ಪ್ರಿಯಾಂಕ್ ಖರ್ಗೆ

ಬೇಸಿಗೆ ಅವಧಿಯಲ್ಲಿ ಗ್ರಾಮೀಣ ಕುಡಿಯುವ ನೀರು ಸರಬರಾಜಿನಲ್ಲಿ ಯಾವ ಲೋಪಗಳು ಉಂಟಾಗದಂತೆ ಮುಂಜಾಗರೂಕತಾ ಕ್ರಮ ಕೈಗೊಳ್ಳುವ ಸಲುವಾಗಿ ರಾಜ್ಯದ ಎಲ್ಲ…

7 hours ago

14 ರಿಂದ 15 ವರ್ಷದೊಳಗಿನ ಹೆಣ್ಣು ಮಕ್ಕಳಿಗೆ ತಪ್ಪದೇ ಎಚ್.ಪಿ.ವಿ ಲಸಿಕೆ ಹಾಕಿಸಿ- ಡಿಸಿ ಅನುರಾಧ

ಗರ್ಭಕಂಠ ಕ್ಯಾನ್ಸರ್ ಬಾರದಂತೆ ತಡೆಯುವಲ್ಲಿ ಹ್ಯೂಮನ್ ಪ್ಯಾಪಿಲೋಮ ವೈರಸ್ (ಎಚ್.ಪಿ.ವಿ) ಲಸಿಕೆಯು ಅತ್ಯಂತ ಪರಿಣಾಮಕಾರಿಯಾಗಿದ್ದು 14 ರಿಂದ 15 ವರ್ಷದೊಳಗಿನ…

7 hours ago

ಕೃಷಿ ಹೊಂಡದಲ್ಲಿ ಈಜಲು ಹೋಗಿ 34 ವರ್ಷದ ವ್ಯಕ್ತಿ ಸಾವು

ಕೃಷಿ ಹೊಂಡದಲ್ಲಿ ಈಜಲು ಹೋಗಿ 34ವರ್ಷದ ವ್ಯಕ್ತಿಯೋರ್ವ ಸಾವನ್ನಪ್ಪಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ ಹೋಬಳಿಯ ಲಿಂಗಾಪುರ ಗ್ರಾಮದಲ್ಲಿ ಇಂದು…

7 hours ago

ನಾಳೆ (ಏ.9ಕ್ಕೆ) ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟ

ಮಾ.9ರ ಗುರುವಾರ ಮಧ್ಯಾಹ್ನ 3.00 ಗಂಟೆಗೆ 2026ರ ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶವನ್ನು ಪ್ರಕಟಿಸಲಾಗುತ್ತದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ…

11 hours ago

ಕರ್ನಾಟಕ ವಿರೋಧಿ ‘ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ರಾಜ್ಯ ಬಿಟ್ಟು ತೊಲಗಲಿ’- ಕರ್ನಾಟಕ ರಕ್ಷಣಾ ವೇದಿಕೆ‌ ಜಿಲ್ಲಾಧ್ಯಕ್ಷ ಪುರುಷೋತ್ತಮಗೌಡ ಆಗ್ರಹ

ಹಿಂದಿ ಸಾಮ್ರಾಜ್ಯಶಾಹಿಗಳ ಪರವಾಗಿ ವರ್ತಿಸುತ್ತ ಕರ್ನಾಟಕ ವಿರೋಧಿ ಧೋರಣೆ ತಳೆದಿರುವ ರಾಜ್ಯಪಾಲ  ಥಾವರ್ ಚಂದ್ ಗೆಹ್ಲೋಟ್ ಅವರನ್ನು ಕೇಂದ್ರ ಸರ್ಕಾರ…

13 hours ago

ಮಾನಸಿಕ ಗುಣಮಟ್ಟ ಪರೀಕ್ಷಿಸಿಕೊಳ್ಳುವ ಆತ್ಮಾವಲೋಕನ ನಡೆಯಲಿ…

ಭಾವ ಬಯಲಿನ‌ ಅಕ್ಕ......... ಹಸಿವಾದಡೆ ಊರೊಳಗೆ ಭಿಕ್ಷಾನ್ನಗಳುಂಟು. ತೃಷೆಯಾದಡೆ ಕೆರೆ ಹಳ್ಳ ಬಾವಿಗಳುಂಟು. ಅಂಗಶೀತಕ್ಕೆ ಬೀಸಾಟ ಅರಿವೆಗಳುಂಟು. ಶಯನಕ್ಕೆ ಹಾಳು…

18 hours ago