ಜಿಲ್ಲಾ ಮಟ್ಟದ ರಸ್ತೆ ಸುರಕ್ಷತಾ ಸಮಿತಿ ಸಭೆ:1033 ಸಹಾಯವಾಣಿ ಸಂಖ್ಯೆಗೆ ಕರೆ ಮಾಡಿ ತುರ್ತು ಆಂಬುಲೆನ್ಸ್ ಸೇವೆ ಪಡೆಯಿರಿ-ಜಿಲ್ಲಾಧಿಕಾರಿ ಡಾ.ಎನ್.ಶಿವಶಂಕರ್

ಜಿಲ್ಲೆಯಲ್ಲಿ ಹೆಚ್ಚು ರಸ್ತೆ ಅಪಘಾತಗಳು ಸಂಭವಿಸುವ ಸ್ಪಾಟ್ ಗಳನ್ನು ಗುರುತಿಸಿ ಅಪಘಾತಗಳನ್ನು ತಪ್ಪಿಸಲು ವೈಜ್ಞಾನಿಕವಾಗಿ ರೂಪುರೇಷೆ ಸಿದ್ಧಪಡಿಸಬೇಕು ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ್ ಅವರು ಹೇಳಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ರಸ್ತೆ ಸುರಕ್ಷತಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಜಿಲ್ಲೆಯಲ್ಲಿ ರಾಷ್ಟ್ರೀಯ ಹೆದ್ದಾರಿ ಹಾಗೂ ರಾಜ್ಯ ಹೆದ್ದಾರಿ ಮತ್ತು ಇತರೆ ಎಲ್ಲೆಲ್ಲಿ ಅಪಘಾತಗಳು ಸಂಭವಿಸುತ್ತಿವೆ ಎಂಬ ಅಂಕಿ ಅಂಶಗಳನ್ನು ಸಂಗ್ರಹಿಸಿ ಪದೇ ಪದೇ ಅಪಘಾತವಾಗಿದ್ದಲ್ಲಿ ಆ ಸ್ಥಳವನ್ನು ಜಂಟಿ ಅಧಿಕಾರಿಗಳ ತಂಡ ಸ್ಥಳ ಪರಿಶೀಲನೆ ನಡೆಸಿ ವೈಜ್ಞಾನಿಕವಾಗಿ ವರದಿ ಸಿದ್ಧಪಡಿಸಿ ಅಪಘಾತ ವಲಯದಿಂದ ಮುಕ್ತವಾಗುವಂತೆ ಕ್ರಮ ಕೈಗೊಳ್ಳಬೇಕು ಎಂದರು.

*ವೇಗದ ಚಾಲನೆಗೆ ಕಡಿವಾಣ ಹಾಕಿ*

ಜಿಲ್ಲೆಯಲ್ಲಿ ಹೊಸದಾಗಿ ನೆಲಮಂಗಲದ ದಾಬಸ್ ಪೇಟೆಯಿಂದ ಹೊಸಕೋಟೆವರೆಗೂ ರಾಷ್ಟ್ರೀಯ ಹೆದ್ದಾರಿ ಹಾದು ಹೋಗಿದೆ. ಚೆನೈ ಎಕ್ಸ್ಪ್ರೆಸ್ ಹೈವೇ ಕಾಮಗಾರಿ ನಡೆಯುತ್ತಿದೆ. ಈ ರಸ್ತೆಗಳಲ್ಲಿ ವಾಹನಗಳು ನಿಗದಿತ ವೇಗಕ್ಕಿಂತ ಹೆಚ್ಚು ವೇಗವಾಗಿ ಚಲಿಸುವುದಕ್ಕೆ ಕಡಿವಾಣ ಹಾಕಬೇಕು. ವೇಗವಾಗಿ ಚಲಿಸುವಾಗ ನಿಯಂತ್ರಣ ತಪ್ಪಿ ಅಪಘಾತಗಳು ಉಂಟಾಗುವ ಸಂಭವ ಹೆಚ್ಚಾಗಿದ್ದು, ರಾಷ್ಟ್ರೀಯ ಹೆದ್ದಾರಿ ವಿಭಾಗದ ಅಧಿಕಾರಿಗಳು ಅಪಘಾತ ತಡೆಗೆ ಕ್ರಮ ವಹಿಸಬೇಕು ಎಂದರು.

ಸಾರ್ವಜನಿಕರು, ಶಾಲಾ ಕಾಲೇಜು ವಿದ್ಯಾರ್ಥಿಗಳು ರಸ್ತೆ ದಾಟುವ ಪ್ರದೇಶಗಳಲ್ಲಿ ಸೂಚನಾ ಫಲಕ ಅಳವಡಿಸುವ ಜೊತೆಗೆ ಜಾಗೃತಿ ಮೂಡಿಸಬೇಕು ಎಂದು ಸೂಚಿಸಿದರು.

ರಾಷ್ಟ್ರೀಯ ಹೆದ್ದಾರಿ 648 ರಲ್ಲಿ ಕೆಲವು ಕಡೆ ಸರ್ವಿಸ್ ರೋಡ್ ಹಾಗೂ ಕೆಳ ಸೇತುವೆ(ಅಂಡರ್ ಪಾಸ್) ಬೇಕೆಂದು ಸಾರ್ವಜನಿಕರು ಮನವಿ ಸಲ್ಲಿಸಿದ್ದಾರೆ. ಇದರ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳು ಪರಿಶೀಲಿಸಿ ಕ್ರಮ ಕೈಗೊಳ್ಳಬೇಕು. ಕಡ್ಡಾಯವಾಗಿ ಅವಶ್ಯಕತೆ ಇರುವ ರಸ್ತೆ ಭಾಗಗಳಲ್ಲಿ ಸೂಚನಾ ಫಲಕಗಳು(ಸೈನ್ ಬೋರ್ಡ್), ಹಂಸ್ ಗಳು, ರಸ್ತೆ ದುರಸ್ತಿ ಕಾಮಗಾರಿಗಳ ಸ್ಥಳಗಳಲ್ಲಿ ಸೈನ್ ಬೋರ್ಡ್ ಅಳವಡಿಕೆ, ಇತರೆ ಇಲಾಖೆಗಳು ನಡೆಸುವ ಅಭಿವೃದ್ದಿ ಕಾಮಗಾರಿಗಳನ್ನು ಕೈಗೊಳ್ಳುವಾಗ, ಗುಂಡಿಗಳನ್ನು ತೆಗೆದಾಗ ಅಲ್ಲಿ ಕಡ್ಡಾಯವಾಗಿ ಸುತ್ತಲೂ ಸೂಚನಾ ಫಲಕಗಳನ್ನು ಅಳವಡಿಸಿ ಬ್ಯಾರಿಕೇಡ್ ಅಳವಡಿಸಬೇಕು ಎಂದರು.

ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI) ಟೋಲ್ ಫ್ರೀ “1033” ಸಹಾಯವಾಣಿ ಸಂಖ್ಯೆಯನ್ನು
ತುರ್ತು/ತುರ್ತು ಅಲ್ಲದ ಸಮಸ್ಯೆಗಳ ಸಂಭವವಿದ್ದಲ್ಲಿ 24×7 ಸೇವೆಯನ್ನು ನೀಡಲು ಪ್ರಾರಂಭಿಸಿದೆ. ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಪಘಾತಗಳು ಸಂಭವಿಸಿದರೆ ಕೂಡಲೇ ‘1033’ ಸಹಾಯವಾಣಿ ಸಂಖ್ಯೆಗೆ ಕರೆ ಮಾಡಿದರೆ ತುರ್ತು ಅಂಬುಲೆನ್ಸ್ ಸೇವೆಯನ್ನು ಒದಗಿಸಲಾಗುತ್ತದೆ ಎಂದರು.

ರಸ್ತೆಗಳಲ್ಲಿ ಅಪಘಾತ ಸಂಭವಿಸಿ ಪ್ರಾಣಾಪಾಯದಿಂದ ಪಾರಾಗುವ ಸಂಭವ ಹೆಚ್ಚಿದ್ದಾಗ ಅಮೂಲ್ಯ ಸಮಯ(ಗೋಲ್ಡನ್ ಅವರ್ಸ್) ಬಹಳ ಪ್ರಾಮುಖ್ಯತೆ ವಹಿಸುತ್ತದೆ. ಇಂತಹ ಸಂದರ್ಭದಲ್ಲಿ ಮಾಹಿತಿ ಬಂದ ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು, ಆರೋಗ್ಯ ಇಲಾಖೆ, ಪೋಲಿಸ್ ಇಲಾಖೆ ಸಮಯ ವ್ಯರ್ಥಮಾಡದೆ ಕಾರ್ಯಪ್ರವೃತ್ತರಾಗಿ ಅಪಘಾತವಾದ ವ್ಯಕ್ತಿಯನ್ನು ರಕ್ಷಿಸುವುದು ನಮ್ಮೆಲ್ಲರ ಜವಾಬ್ದಾರಿ ಆಗಿರುತ್ತದೆ ಎಂದರು.

ಸಭೆಯಲ್ಲಿ ಸಾರಿಗೆ ಇಲಾಖೆ ಅಧಿಕಾರಿಗಳು, ಇತರೆ ಸಿಬ್ಬಂದಿ ಉಪಸ್ಥಿತರಿದ್ದರು.

Ramesh Babu

Journalist

Recent Posts

ಸ್ಟಿಂಗ್ ಆಪರೇಷನ್ ಹಿಂದೆ ಜೆಡಿಎಸ್ ಕೈವಾಡ: ಸಚಿವ ಚಲುವರಾಯಸ್ವಾಮಿ ಗಂಭೀರ ಆರೋಪ

"ಕುಮಾರಸ್ವಾಮಿ ಯಾರು? Who is kumaraswmay. ಡಿ.ಕೆ. ಶಿವಕುಮಾರ್ ಸಿಎಂ ಆಗಿರುವುದನ್ನು ಒಪ್ಪದಿರುವುದಕ್ಕೆ ಅವರು ಯಾರು? ಅವರಿಗೂ ಇದಕ್ಕೂ ಏನು…

2 hours ago

ಬೆಂಗಳೂರು ಶಿಕ್ಷಕರ ಕ್ಷೇತ್ರ ಚುನಾವಣೆ: ಅ.21 ರಿಂದ ಅ.23 ರವರೆಗೆ ಜಿಲ್ಲೆಯಾದ್ಯಂತ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಆದೇಶ

ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ಕರ್ನಾಟಕ ವಿಧಾನ ಪರಿಷತ್ತಿಗೆ ದ್ವೈವಾರ್ಷಿಕ ಚುನಾವಣೆ-2026ರ ಸಂಬಂಧ ಅಕ್ಟೋಬರ್ 23 ರಂದು ಮತದಾನ ನಡೆಯಲಿರುವ ಹಿನ್ನೆಲೆಯಲ್ಲಿ…

6 hours ago

ಸಮಾಜಸೇವೆ ಮೂಲಕ ಹುಟ್ಟುಹಬ್ಬ ಆಚರಣೆ ಎಲ್ಲರಿಗೂ ಮಾದರಿ: ಸಂಜೀವ್ ನಾಯಕ್

ದೊಡ್ಡಬಳ್ಳಾಪುರ: ಅದ್ದೂರಿ ಆಚರಣೆಗಳಿಗೆ ಸೀಮಿತವಾಗದೆ, ಸಮಾಜಮುಖಿ ಕಾರ್ಯಗಳ ಮೂಲಕ ಹುಟ್ಟುಹಬ್ಬ ಆಚರಿಸುವುದು ಇತರರಿಗೂ ಮಾದರಿಯಾಗಲಿದೆ ಎಂದು ಕನ್ನಡ ಪಕ್ಷದ ರಾಜ್ಯ…

7 hours ago

ನಾಡಕಚೇರಿ, ಕಾವೇರಿ ತಂತ್ರಾಂಶಕ್ಕೆ ತಾಂತ್ರಿಕ ಗ್ರಹಣ! ಸರ್ವರ್ ಸಮಸ್ಯೆಯಿಂದ ಸರ್ಕಾರಿ ಸೇವೆಗಳಿಗೆ ಬ್ರೇಕ್‌; ಕಚೇರಿಗಳಿಗೆ ಅಲೆದು ಹೈರಾಣಾದ ಜನರು

ಸರ್ಕಾರಿ ಸೇವೆಗಳನ್ನು ಜನಸಾಮಾನ್ಯರಿಗೆ ಸುಲಭವಾಗಿ, ತ್ವರಿತವಾಗಿ ತಲುಪಿಸಬೇಕೆಂಬ ಉದ್ದೇಶದಿಂದ ಜಾರಿಗೆ ತಂದಿರುವ ಡಿಜಿಟಲ್ ವ್ಯವಸ್ಥೆಗಳೇ ಇದೀಗ ಸಾರ್ವಜನಿಕರಿಗೆ ತಲೆನೋವಾಗಿ ಪರಿಣಮಿಸಿವೆ.…

8 hours ago

ದೊಡ್ಡಬಳ್ಳಾಪುರದಲ್ಲಿ 4 ಲಕ್ಷ ಮೌಲ್ಯದ ಗಾಂಜಾ ವಶ: ಆರೋಪಿ ಬಂಧನ

ದೊಡ್ಡಬಳ್ಳಾಪುರ: ಅಕ್ರಮವಾಗಿ ಗಾಂಜಾ ಸಂಗ್ರಹಿಸಿ ಮಾರಾಟ ಮಾಡಲು ಯತ್ನಿಸುತ್ತಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿ,…

10 hours ago

ಲಂಚ ಪ್ರಕರಣ: ಮ್ಯೂನಿಷನ್ಸ್ ಇಂಡಿಯಾ ಕಾರ್ಯನಿರ್ವಾಹಕ ನಿರ್ದೇಶಕ ಸಿಬಿಐ ಬಲೆಗೆ

ಲಂಚ ಪ್ರಕರಣ: ಮ್ಯೂನಿಷನ್ಸ್ ಇಂಡಿಯಾ ಕಾರ್ಯನಿರ್ವಾಹಕ ನಿರ್ದೇಶಕ ಸಿಬಿಐ ಬಲೆಗೆಲಂಚ ಸ್ವೀಕಾರ ಆರೋಪಕ್ಕೆ ಸಂಬಂಧಿಸಿದಂತೆ ಮ್ಯೂನಿಷನ್ಸ್ ಇಂಡಿಯಾ ಲಿಮಿಟೆಡ್‌ (MIL)…

13 hours ago