ಜಿಲ್ಲಾ ಮಟ್ಟದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮ: ಮುಂದಿನ 2 ವರ್ಷಗಳಲ್ಲಿ 101 ಶಾಲೆಗಳ ಅಭಿವೃದ್ಧಿ- ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್ ಮುನಿಯಪ್ಪ

ಮಕ್ಕಳಿಗೆ ಸಂಸ್ಕಾರದ ಜೊತೆಗೆ ಗುಣಮಟ್ಟದ ವಿದ್ಯಾಭ್ಯಾಸ ಕಲ್ಪಿಸಿ ಅವರನ್ನು ಉನ್ನತ ಸ್ಥಾನಕ್ಕೆ ಕೊಂಡೊಯ್ಯುವ ಶಿಕ್ಷಕರು ಸಮಾಜದ ದಾರಿ ದೀಪವಾಗಿ ಶ್ರಮಿಸುತ್ತಿರುವ ಶ್ರೇಷ್ಠ ವ್ಯಕ್ತಿಗಳಾಗಿದ್ದಾರೆ ಎಂದು ಆಹಾರ ಮತ್ತು ನಾಗರೀಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರಗಳ ಸಚಿವರು ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಎಚ್ ಮುನಿಯಪ್ಪ ಅವರು ಹೇಳಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಶಾಲಾ ಶಿಕ್ಷಣ ಇಲಾಖೆ ವತಿಯಿಂದ ದೇವನಹಳ್ಳಿ ಟೌನ್ ನಲ್ಲಿರುವ ಡಾ. ಬಿ.ಆರ್ ಅಂಬೇಡ್ಕರ್ ಭವನದಲ್ಲಿ ಹಮ್ಮಿಕೊಂಡಿದ್ದ, ಭಾರತರತ್ನ ಡಾ. ಸರ್ವೆಪಲ್ಲಿ ರಾಧಾಕೃಷ್ಣನ್ ರವರ ಜನ್ಮದಿನಾಚರಣೆ ಅಂಗವಾಗಿ ಜಿಲ್ಲಾ ಮಟ್ಟದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮವನ್ನು ಮಾಜಿ ರಾಷ್ಟ್ರಪತಿಗಳಾದ ಡಾ. ಸರ್ವೆಪಲ್ಲಿ ರಾಧಾಕೃಷ್ಣನ್ ಮತ್ತು ಭಾರತದ ಮೊದಲ ಮಹಿಳಾ ಶಿಕ್ಷಕಿ ಸಾವಿತ್ರಿ ಬಾಯಿ ಫುಲೆ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಭಾರತರತ್ನ ಡಾ. ಎಸ್. ರಾಧಾಕೃಷ್ಣನ್ ರವರು ರಾಷ್ಟ್ರಪತಿಗಳಾಗಿ ದೇಶದ ಅತ್ಯುನ್ನತ ಹುದ್ದೆ ಅಲಂಕರಿಸಿದ್ದರು, ಉತ್ತಮ ಶಿಕ್ಷಕರಾಗಿ ದೇಶ ಹಾಗೂ ಸಮಾಜಕ್ಕೆ ಅಪಾರ ಕೊಡುಗೆ ನೀಡಿದ ಶ್ರೇಷ್ಠರು. ಶಿಕ್ಷಕರು ಮಕ್ಕಳಿಗೆ ತಿದ್ದಿ, ಬುದ್ಧಿ ಹೇಳಿ ಒಳ್ಳೆಯ ಸಂಸ್ಕಾರ ಜತೆಗೆ ಗುಣಮಟ್ಟದ ಶಿಕ್ಷಣ ನೀಡುವದರ ಮೇಲೆ ರಾಷ್ಟ್ರದ ಭವಿಷ್ಯ ನಿಂತಿದೆ. ಪ್ರತಿಯೊಬ್ಬರೂ ಗುರುವಿನ ಮಾರ್ಗದರ್ಶನ ಪಡೆಯುವ ಜತೆಗೆ ಅವರನ್ನು ಪ್ರೀತಿ ಗೌರವಿಸುವದನ್ನು ಪಾಲಿಸಿದರೆ ಜೀವನ ಉಜ್ವಲವಾಗುತ್ತದೆ ಎಂದರು.

ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಶಿಕ್ಷಕರ ಬಡ್ತಿಗೆ ಸಂಬಂಧಿಸಿದಂತೆ ಶಿಕ್ಷಣ ಸಚಿವರ ಜೊತೆ ಚರ್ಚಿಸಲಾಗಿದೆ. ರಾಜ್ಯಾದ್ಯಂತ 500 ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ಗುರ್ತಿಸಲಾಗಿ ಅಭಿವೃದ್ಧಿ ಪಡಿಸಲು ತೀರ್ಮಾನಿಸಲಾಗಿದೆ. ಜಿಲ್ಲೆಗೆ 7 ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ನೀಡಿದ್ದಾರೆ. ಜಿಲ್ಲೆಯಲ್ಲಿನ ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳನ್ನು ಅಭಿವೃದ್ಧಿ ಪಡಿಸುವ ನಿಟ್ಟಿನಲ್ಲಿ ಸಿ.ಎಸ್.ಆರ್ ಅನುದಾನವನ್ನು ಬಳಸಿಕೊಳ್ಳಲು ಕ್ರಮ ವಹಿಸಲಾಗುತ್ತಿದೆ. ಜಿಲ್ಲೆಯ 101 ಗ್ರಾಮ ಪಂಚಾಯಿತಿಗಳಲ್ಲಿನ 101 ಮುಖ್ಯ ಶಾಲೆಗಳನ್ನು ಮುಂದಿನ 2 ವರ್ಷಗಳಲ್ಲಿ ನವೀಕರಣಗೊಳಿಸಲಾಗುವುದು. ಆಟದ ಮೈದಾನ, ಕುಡಿಯುವ ನೀರು ಸೌಲಭ್ಯ, ಶೌಚಾಲಯ ಎಲ್ಲಾ ಮೂಲಭೂತ ಸೌಲಭ್ಯಗಳನ್ನು ಒಳಗೊಂಡಂತೆ ಆಧುನಿಕವಾಗಿ ಸರ್ಕಾರಿ ಶಾಲೆಗಳನ್ನು ಅಭಿವೃದ್ಧಿಪಡಿಸಿ ಗುಣಮಟ್ಟದ ಶಿಕ್ಷಣವನ್ನು ನೀಡಿ, ವಿದ್ಯಾರ್ಥಿಗಳ ಕಲಿಕೆಗೆ ಪ್ರೋತ್ಸಾಹಿಸಲಾಗುವುದು ಎಂದರು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕೆ.ಎನ್ ಅನುರಾಧ ಅವರು ಪ್ರಾಸ್ತಾವಿಕವಾಗಿ ಮಾತನಾಡಿ ಭಾರತರತ್ನ ಡಾ. ಸರ್ವೆಪಲ್ಲಿ ರಾಧಾಕೃಷ್ಣನ್ ರವರು ಸಮಾಜಕ್ಕೆ ಅನನ್ಯ ಸೇವೆ ನೀಡಿದ್ದಾರೆ. ಮಕ್ಕಳಿಗೆ ತಂದೆ-ತಾಯಿಯ ನಂತರದ ಸ್ಥಾನದಲ್ಲಿ ಶಿಕ್ಷಕರು ನಿಂತು ಸಂಸ್ಕಾರ, ಜ್ಞಾನಾರ್ಜನೆ ತುಂಬುವ ಕೆಲಸ ಮಾಡುತ್ತಾರೆ. ಪ್ರತಿಯೊಬ್ಬ ಶಿಕ್ಷಕರು ತಮ್ಮ ಮಕ್ಕಳಂತೆ ಶಾಲೆಯಲ್ಲಿ ಗುಣಮಟ್ಟದ ಶಿಕ್ಷಣ ಕಲಿಸುವಲ್ಲಿ ಮತ್ತು ಪರೀಕ್ಷೆಗಳಲ್ಲಿ ಉತ್ತಮ ಫಲಿತಾಂಶ ಬರಲು ಪ್ರಾಮಾಣಿಕವಾಗಿ ಕಾರ್ಯಪ್ರವೃತ್ತರಾಗಬೇಕು ಎಂದರು.

ಬಾಗೇಪಲ್ಲಿ ತಾಲೂಕಿನ ಸೂರಪಲ್ಲಿಯ ಆನಂದಾಶ್ರಮದ ಅಧ್ಯಕ್ಷ ಸೂರ್ಯನಾರಾಯಣಸ್ವಾಮಿ ಅವರು ವಿಶೇಷ ಉಪನ್ಯಾಸವನ್ನು ನೀಡಿದರು.

 ಸಂದರ್ಭದಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ ಜಿಲ್ಲೆಯ 19 ಉತ್ತಮ ಶಿಕ್ಷಕರಿಗೆ ಪ್ರಶಸ್ತಿ ನೀಡಿ ಗೌರವಿಸಲಾಯಿತು ಹಾಗೂ 40 ಜನ ನಿವೃತ್ತ ಶಿಕ್ಷಕರಿಗೆ ಸನ್ಮಾನಿಸಲಾಯಿತು.

ಕಾರ್ಯಕ್ರಮದಲ್ಲಿ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಜಿಲ್ಲಾ ಅಧ್ಯಕ್ಷ ರಾಜಣ್ಣ, ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಯೋಜನಾ ಪ್ರಾಧಿಕಾರದ ಅಧ್ಯಕ್ಷ ವಿ. ಶಾಂತಕುಮಾರ್, ಗ್ಯಾರಂಟಿ ಅನುಷ್ಠಾನಗಳ ದೇವನಹಳ್ಳಿ ತಾಲೂಕು ಅಧ್ಯಕ್ಷ ಜಗನ್ನಾಥ, ಜಿಲ್ಲಾಧಿಕಾರಿ ಡಾ. ಎನ್, ಶಿವಶಂಕರ್, ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಕೃಷ್ಣಮೂರ್ತಿ, ದೇವನಹಳ್ಳಿ ತಹಶೀಲ್ದಾರ್ ಬಾಲಕೃಷ್ಣ, ಇ.ಒ ಶ್ರೀನಾಥ್ ಗೌಡ ಸೇರಿದಂತೆ ಜಿಲ್ಲಾಮಟ್ಟದ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು, ಸ್ಥಳೀಯ ಜನಪ್ರತಿನಿಧಿಗಳು, ಶಿಕ್ಷಕರ ವೃಂದ, ಸಾರ್ವಜನಿಕರು ಭಾಗವಹಿಸಿದ್ದರು.

Ramesh Babu

Journalist

Recent Posts

PUC Result: ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿದ ದಿಶಾಳ ಸಾಧನೆಯ ಹಿಂದೆ ಎದೆ ನಡುಗಿಸುವ ಕಣ್ಣೀರಿನ ಕಥೆಯಿದೆ….ಈ ಕಥೆ ಕೇಳಿದರೆ ಎಂಥವರ ಕಣ್ಣಲ್ಲೂ ನೀರು ಬರುವುದು ಗ್ಯಾರಂಟಿ

600ಕ್ಕೆ 600 ಅಂಕ ತೆಗೆದು ರಾಜ್ಯಕ್ಕೆ ಟಾಪರ್ ಆದ ದಿಶಾಳ ಸಾಧನೆಯ ಹಿಂದೆ ಎದೆ ನಡುಗಿಸುವ ಕಣ್ಣೀರಿನ ಕಥೆಯಿದೆ. ಮೂರು…

3 hours ago

ತೂಬಗೆರೆ ಸರ್ಕಾರಿ ಪಿಯು ಕಾಲೇಜಿಗೆ ಮತ್ತೊಮ್ಮೆ ಮೆರುಗು: ಶೇ.95.45 ಫಲಿತಾಂಶ

ದೊಡ್ಡಬಳ್ಳಾಪುರ (ತೂಬಗೆರೆ): ಗ್ರಾಮಾಂತರ ಭಾಗದಲ್ಲಿದ್ದರೂ ಶೈಕ್ಷಣಿಕ ಕ್ಷೇತ್ರದಲ್ಲಿ ತನ್ನದೇ ಆದ ಛಾಪು ಮೂಡಿಸಿರುವ ತೂಬಗೆರೆ ಸರ್ಕಾರಿ ಪದವಿ ಪೂರ್ವ ಕಾಲೇಜು…

3 hours ago

ದೊಡ್ಡಬಳ್ಳಾಪುರ ರೈಲ್ವೆ ಸ್ಟೇಷನ್ ಬಳಿ ಅಂಡರ್ ಪಾಸ್ ಅವೈಜ್ಞಾನಿಕ- ಮೇಲ್ಸೇತುವೆ ಅಗತ್ಯ- ಸಂಸದ ಡಾ. ಕೆ. ಸುಧಾಕರ್

ಕೇಂದ್ರ ಸರಕಾರದ ಜನಪರ ಯೋಜನೆಗಳನ್ನು ಕಾಲಮಿತಿಯೊಳಗೆ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿ, ಅರ್ಹ ಫಲಾನುಭವಿಗಳಿಗೆ ತ್ವರಿತವಾಗಿ ಸೌಲಭ್ಯಗಳು ತಲುಪುವಂತೆ ಕ್ರಮವಹಿಸಿ ಎಂದು ಅಧಿಕಾರಿಗಳಿಗೆ…

4 hours ago

ಮುಂದಿನ ದಿನಗಳಲ್ಲಿ 1000 ಸಬ್ ಇನ್ಸ್ ಪೆಕ್ಟರ್, 8000 ಕಾನ್ಸ್ಟೇಬಲ್ ಗಳ ನೇಮಕ – ಗೃಹ ಸಚಿವ ಪರಮೇಶ್ವರ್

  ಪೊಲೀಸ್ ಇಲಾಖೆಯಲ್ಲಿ 1000 ಸಬ್ ಇನ್ಸ್ಪೆಕ್ಟರ್ ಹಾಗೂ 8000 ಕಾನ್ಸ್ಟೇಬಲ್ ಗಳನ್ನು ಆದಷ್ಟು ಶೀಘ್ರ ನೇಮಕ ಮಾಡಲಾಗುವುದು ಎಂದು…

4 hours ago

ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟ

ಇಂದು ಮಧ್ಯಾಹ್ನ 3.00 ಗಂಟೆಗೆ 2026ರ ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶವನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ…

7 hours ago

ಪಿಯುಸಿ ವಿದ್ಯಾರ್ಥಿಗಳಿಗೆ National Academic Depository (NAD) – DigiLocker ಮೂಲಕ ಫಲಿತಾಂಶದ ದಿನವೇ ಅಂಕಪಟ್ಟಿ

2025-26ನೇ ಶೈಕ್ಷಣಿಕ ಸಾಲಿನಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳ ಅಂಕಪಟ್ಟಿಯನ್ನು ಫಲಿತಾಂಶ ಪ್ರಕಟವಾದ ದಿನವೇ National Academic Depository…

10 hours ago