ಜಿಲ್ಲಾ ವಿಕಲಚೇತನರ ಉದ್ಯೋಗ ಕೋಶ ಆರಂಭ

ಜಿಲ್ಲೆಯಾದ್ಯಂತ ಸಾಕಷ್ಟು ವಿಕಲಚೇತನರು ಉದ್ಯೋಗದ ಅವಶ್ಯಕತೆ ಹೊಂದಿದ್ದಾರೆ ಅದಕ್ಕಾಗಿ ಇಂತಹ ವಿಕಲಚೇತನ ಉದ್ಯೋಗ ಆಕಾಂಕ್ಷಿಗಳಿಗೆ ವಿವಿಧ ರೀತಿಯಲ್ಲಿ ಅವರ ವಿದ್ಯಾಭ್ಯಾಸಕ್ಕೆ ಅನುಗುಣವಾಗಿ ಉದ್ಯೋಗ ದೊರಕಿಸಿ ಕೊಡುವ ನಿಟ್ಟಿನಲ್ಲಿ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಕಾರ್ಯೊನ್ಮುಖವಾಗಿದೆ.

ಈ ನಿಟ್ಟಿನಲ್ಲಿ ವಿವಿಧ ರೀತಿಯ ಕಂಪನಿಗಳ ಹಾಗೂ ಸ್ವಯಂ ಸೇವಾ ಸಂಸ್ಥೆಗಳ ಜೊತೆಯಲ್ಲಿ ಒಡನಾಟ ಹೊಂದಿದ್ದು, ಜಿಲ್ಲೆಯ ಎಲ್ಲಾ ರೀತಿಯ ವಿಕಲಚೇತನರಿಗೆ ಉದ್ಯೋಗವಕಾಶವನ್ನು ದೊರಕಿಸಿ ಕೊಡಲು ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ವಾಸಿಸುತ್ತಿರುವ 18-50 ವರ್ಷದ ವಿದ್ಯಾವಂತ ವಿಕಲಚೇತನ ವ್ಯಕ್ತಿಗಳು ಉದ್ಯೋಗಕ್ಕಾಗಿ ನೋಂದಾಯಿಸಿಕೊಳ್ಳಲು ಅನುವಾಗುವಂತೆ “ಜಿಲ್ಲಾ ವಿಕಲಚೇತನರ ಉದ್ಯೋಗ ಕೋಶ” ವನ್ನು ಆರಂಭಿಸಲಾಗಿದೆ.

ಈ ಉದ್ಯೋಗ ಕೋಶದಲ್ಲಿ ವಿಕಲಚೇತನ ಉದ್ಯೋಗಾಕಾಂಕ್ಷಿಗಳು ಹೆಸರು ವಿದ್ಯಾಭ್ಯಾಸ, ದೂರವಾಣಿ ಸಂಖ್ಯೆ, ಜನ್ಮ ದಿನಾಂಕ ಮುಂತಾದ ರೀತಿಯ ಮಾಹಿತಿಯೊಂದಿಗೆ ಉದ್ಯೋಗ ಕೋಶದಲ್ಲಿ ಉಚಿತವಾಗಿ ವಿಕಲಚೇತನರ ಸಹಾಯವಾಣಿ ಸಂಖ್ಯೆ.080-29787441 ಮೂಲಕ ಅಥವಾ ಕೇಂದ್ರಕ್ಕೆ ಹಾಜರಾಗಿ ನೋಂದಾಯಿಸಿಕೊಳ್ಳಲು ವ್ಯವಸ್ಥೆ ಕಲ್ಪಿಸಲಾಗಿದೆ.

ಜಿಲ್ಲಾ ವಿಕಲಚೇತನರ ಉದ್ಯೋಗ ಕೋಶದ ಅನುಕೂಲಗಳನ್ನು ಪಡೆದುಕೊಳ್ಳಲು ಜಿಲ್ಲೆಯ ಅರ್ಹ ವಿಕಲಚೇತನರಲ್ಲಿ ಕೋರಿದೆ.

ಹೆಚ್ಚಿನ ಮಾಹಿತಿಗಾಗಿ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಕೊಠಡಿ ಸಂಖ್ಯೆ 03 ಜಿಲ್ಲಾಡಳಿತ ಭವನ ಬೀರಸಂದ್ರ, ಬೆಂಗಳೂರು ಗ್ರಾಮಾಂತರ ಜಿಲ್ಲೆ ಹಾಗೂ ವಿಕಲಚೇತನರ ಮಾಹಿತಿ ಸಲಹಾಕೇಂದ್ರದ ಸಂಖ್ಯೆ.-080-29787441ನ್ನು, ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ramesh Babu

Journalist

Recent Posts

ತಂದೆ-ಮಗನ ಲಾಕಪ್ ಡೆತ್ ಕೇಸ್; ತಮಿಳುನಾಡಿನ 9 ಪೊಲೀಸರಿಗೆ ಗಲ್ಲು ಶಿಕ್ಷೆ

2020ರಲ್ಲಿ ತಮಿಳುನಾಡಿನಲ್ಲಿ ನಡೆದ ಸಾತಂಕುಲಂ ಕಸ್ಟಡಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಮದ್ರಾಸ್ ಹೈಕೋರ್ಟ್‌ ಪೀಠವು 9 ಪೊಲೀಸ್ ಸಿಬ್ಬಂದಿಗೆ…

8 hours ago

ಇಂಧನ ತೈಲ ಮತ್ತು ಅನಿಲ ಪೂರೈಕೆ ಸಮಸ್ಯೆ – ರಾಜ್ಯದ ಜನತೆಗೆ ತೀವ್ರ ಸಂಕಷ್ಟ- ಸಚಿವ ಕೆ.ಎಚ್ ಮುನಿಯಪ್ಪ ಪ್ರತಿಕ್ರಿಯೆ

ರಾಜ್ಯದಲ್ಲಿ ಇಂಧನ ತೈಲ ಮತ್ತು ಅನಿಲ ಪೂರೈಕೆಯ ಸಮಸ್ಯೆ ಗಂಭೀರ ಸ್ವರೂಪ ಪಡೆದಿರುವ ಹಿನ್ನೆಲೆಯಲ್ಲಿ, ಆಹಾರ, ನಾಗರಿಕ ಸರಬರಾಜು ಮತ್ತು…

8 hours ago

ಆಟೋ ಎಲ್‌ಪಿಜಿಗಾಗಿ ಸಾಲುಗಟ್ಟಿ ನಿಂತ ನೂರಾರು ಆಟೋಗಳು

ಆಟೋ ಎಲ್‌ಪಿಜಿಗಾಗಿ ಡಿಕ್ರಾಸ್ ರಸ್ತೆಯ ಸೂಪರ್ ಗ್ಯಾಸ್ ಬಂಕ್ ಬಳಿ ನೂರಾರು ಆಟೋಗಳು ಸಾಲುಗಟ್ಟಿ ನಿಂತಿವೆ. ಆಟೋ ಎಲ್ಪಿಜಿ ಇಲ್ಲದೆ…

11 hours ago

ಪ್ರತಿಷ್ಠಿತ ಶಾಲೆಗಳಲ್ಲಿ 6ನೇ ತರಗತಿ ಪ್ರವೇಶಾತಿಗೆ ಅರ್ಜಿ ಆಹ್ವಾನ

2026-27 ನೇ ಸಾಲಿನಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪ್ರತಿಷ್ಠಿತ ಶಾಲೆಗಳಲ್ಲಿ 6ನೇ ತರಗತಿ(ಆಂಗ್ಲ ಮಾಧ್ಯಮ)ಗೆ ಸೇರಲು ಪರಿಶಿಷ್ಟ ಪಂಗಡದ ಪ್ರತಿಭಾವಂತ…

13 hours ago

ಛಲವಾದಿ‌‌ ಮಹಾಸಭಾ ದೊಡ್ಡಬಳ್ಳಾಪುರ ತಾಲೂಕು ಅಧ್ಯಕ್ಷರಾಗಿ ಎಸ್ ಯು ರಮೇಶ್ ಅವಿರೋಧ ಆಯ್ಕೆ

ಛಲವಾದಿ‌‌ ಮಹಾಸಭಾ ದೊಡ್ಡಬಳ್ಳಾಪುರ ತಾಲೂಕು ಅಧ್ಯಕ್ಷರಾಗಿ ಎಸ್ ಯು ರಮೇಶ್ ಅವಿರೋಧವಾಗಿ ಆಯ್ಕೆ ಆಗಿದ್ದಾರೆ. ಜಿಲ್ಲಾಧ್ಯಕ್ಷ ನರೇಶ್ ನೇತೃತ್ವದಲ್ಲಿ ನಗರದ…

14 hours ago

ಖತರ್ನಾಕ್ ಬೈಕ್ ಕಳ್ಳರ ಬಂಧನ: ಬಂಧಿತರಿಂದ 18.30 ಲಕ್ಷ ಮೌಲ್ಯದ 27 ಬೈಕ್ ಗಳು ವಶ

ಬೆಳಗಾವಿಯ ಸಂಕೇಶ್ವರ ಪೊಲೀಸರಿಂದ ಭರ್ಜರಿ ಕಾರ್ಯಾಚರಣೆ ನಡೆದಿದೆ. ಅಂತಾರಾಜ್ಯ ಇಬ್ಬರು ಬೈಕ್ ಕಳ್ಳರನ್ನು ಬಂಧಿಸಲಾಗಿದೆ. ಬಂಧಿತರಿಂದ 18.30 ಲಕ್ಷ ಮೌಲ್ಯದ…

15 hours ago