ಜಿಲ್ಲಾ ಹಾಗೂ ತಾಲ್ಲೂಕು ಆಸ್ಪತ್ರೆಗಳಲ್ಲಿ ಡಯಾಲಿಸಿಸ್ ಸೇವೆ ದೊರಕಬೇಕು- ಸಿಎಂ ಸಿದ್ದರಾಮಯ್ಯ ಹೇಳಿಕೆ

ಆಸ್ಪತ್ರೆಗಳಲ್ಲಿ ಬಡವರಿಗೆ ಹೆಚ್ಚು ಆಸಕ್ತಿಯಿಂದ ಗುಣಮಟ್ಟದ ವೈದ್ಯಕೀಯ ಸೇವೆಯನ್ನು ನೀಡಬೇಕು. ನಮ್ಮ ಸಮಾಜದಲ್ಲಿ ಬಡವರೇ ಹೆಚ್ಚಿದ್ದಾರೆ ಹಾಗಾಗಿ  ಸಮಾಜದ ದೃಷ್ಟಿಯಿಂದ ಇದು ಒಳ್ಳೆಯದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಮಲ್ಲೇಶ್ವರಂನ ಕೆ.ಸಿ ಜನರಲ್ ಆಸ್ಪತ್ರೆಯ ನೂತನ ಉಚಿತ ಡಯಾಲಿಸಿಸ್ ಸೇವೆಗಳನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಬಡವರಿಗೆ ಡಯಾಲಿಸಿಸ್ ಮಾಡಿಸಿಕೊಳ್ಳುವುದು ದೊಡ್ಡ ಹೊರೆ. ವಾರಕ್ಕೆ ಮೂರು ಬಾರಿ ಮಾಡಿಸಿಕೊಳ್ಳಬೇಕಾಗುತ್ತದೆ. ಒಮ್ಮೆ ಮಾಡಿಸಿದರೆ 2 ಸಾವಿರ ರೂ.ಗಳಿಗಿಂತ ಹೆಚ್ಚಿದೆ. ಬಡವರಿಗೆ ಇಷ್ಟು ಮೊತ್ತ ನೀಡಿ ಡಯಾಲಿಸಿಸ್ ಮಾಡಿಸಿಕೊಳ್ಳಲು ಸಾಧ್ಯವಾಗುವುದಿಲ್ಲ. ಕಿಡ್ನಿ ವೈಫಲ್ಯವಾದಾಗ ಡಯಾಲಿಸಿಸ್ ಒಂದೇ ಮಾರ್ಗ. ಅದಕ್ಕಾಗಿ ಸರ್ಕಾರ ಬಡವರಿಗೆ ಸಹಾಯಮಾಡಬೇಕೆಂಬ ಉದ್ದೇಶದಿಂದ ಡಯಾಲಿಸಿಸ್ ಸೇವೆಗಳನ್ನು ಉಚಿತವಾಗಿ ನೀಡುತ್ತಿದೆ ಎಂದರು.

ರಾಜ್ಯದಲ್ಲಿ 219 ಡಯಾಲಿಸಿಸ್ ಕೇಂದ್ರಗಳಿವೆ. 800 ಯಂತ್ರಗಳನ್ನು ಈ ಕೇಂದ್ರಗಳಲ್ಲಿ ಅಳವಡಿಸುವ ಕೆಲಸವಾಗುತ್ತಿದೆ. ಹಿಂದೆ ನಮ್ಮ ಸರ್ಕಾರವಿದ್ದಾಗ ಹಾಗೂ ಈಗಲೂ ಕೂಡ ಸಾಧ್ಯವಾದ ಮಟ್ಟಿಗೆ ಗುಣಮಟ್ಟದ ಆರೋಗ್ಯ ಸೇವೆಯನ್ನು ಒದಗಿಸಿಕೊಡಬೇಕೆಂಬ ಉದ್ದೇಶ ಹೊಂದಿದ್ದೇವೆ ಎಂದು ಹೇಳಿದರು.

ಸಣ್ಣ ವಯಸ್ಸಿನವರಿಗೂ ಕಿಡ್ನಿ ಸಮಸ್ಯೆ ಬರುತ್ತದೆ. ಅದಕ್ಕಾಗಿ ಸರ್ಕಾರ ಎಷ್ಟು ಸಾಧ್ಯವೋ ಅಷ್ಟು ಜನರಿಗೆ ಡಯಾಲಿಸಿಸ್  ಮಾಡಿಸುವ ಕೆಲಸ ಮಾಡುತ್ತಿದೆ. ಎಲ್ಲಾ ಜಿಲ್ಲಾ ಹಾಗೂ ತಾಲ್ಲೂಕು ಆಸ್ಪತ್ರೆಗಳಲ್ಲಿ ಈ ಸೇವೆ ದೊರಕಬೇಕು. ಜನರಿಗೆ ಹತ್ತಿರದಲ್ಲಿಯೇ ಈ ಸೇವೆ ಪಡೆಯಬಹುದು ಎಂದು ತಿಳಿಸಿದರು.

ಏಕಬಳಕೆ ಮಾಡುವ ಡಯಾಲೈಸರ್ ಗಳನ್ನು ಪರಿಚಯಿಸಲಾಗಿದೆ. ಇದರಿಂದ ಸೋಂಕು ಕಡಿಮೆ ಮಾಡಬಹುದಾಗಿದೆ. ಡಯಾಲಿಸಿಸ್ ಕೇಂದ್ರಗಳಿಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳೆರಡೂಅನುದಾನ ಒದಗಿಸಿಕೊಟ್ಟಿದೆ. ರಾಜ್ಯ ಸರ್ಕಾರ ಶೇ.60 ಹಾಗೂ ಕೇಂದ್ರ ಸರ್ಕಾರ ಶೇ.40 ರಷ್ಟು ಅನುದಾನ ನೀಡಲಿದೆ. ಆದರೆ ಹೆಸರು ಮಾತ್ರ ಪ್ರಧಾನಮಂತ್ರಿ ಡಯಾಲಿಸಿಸ್ ಎಂದಿದೆ. ಹೆಚ್ಚಾಗಿ ಅನುದಾನ ಒದಗಿಸುವುದು ರಾಜ್ಯ ಸರ್ಕಾರ ಎಂದರು.

ಸಮಾಜದಲ್ಲಿ ಅಸಮಾನತೆ ಇದ್ದು ಬಹಳ ಜನ ಕಷ್ಟದಲ್ಲಿ ಕೈತೊಳೆಯುವ ಪರಿಸ್ಥಿತಿ ಇದೆ. ಅಸಮಾನತೆ ಹೋಗಲಾಡಿಸಲು ನಮ್ಮ ಸರ್ಕಾರ ಪ್ರಾಮಾಣಿಕ ಪ್ರಯತ್ನ ಮಾಡುತ್ತಿದೆ. ಅಸಮಾನತೆ ಹೋಗಲಾಡಿಸಲು 5 ಗ್ಯಾರಂಟಿ ಕಾರ್ಯಕ್ರಮಗಳು ಪ್ರಮುಖ ಪಾತ್ರ ವಹಿಸಲಿವೆ. ಶಕ್ತಿ ಯೋಜನೆಯಡಿ ಮಹಿಳೆಯರು 141 ಕೋಟಿ ಬಾರಿ ಉಚಿತವಾಗಿ ಸರ್ಕಾರಿ ಬಸ್ಸುಗಳಲ್ಲಿ ಪ್ರಯಾಣ ಮಾಡಿದ್ದಾರೆ ಎಂದು ಹೇಳಿದರು.

1.18 ಕೋಟಿ ಮಹಿಳೆಯರಿಗೆ ತಿಂಗಳಿಗೆ 2 ಸಾವಿರ ರೂಪಾಯಿ, 5 ಕೆಜಿ ಅಕ್ಕಿಗೆ 170 ರೂಪಾಯಿ, ಪ್ರತಿ ತಿಂಗಳು 200 ಯೂನಿಟ್ ವರೆಗೆ ಉಚಿತ ವಿದ್ಯುತ್, ಯುವನಿಧಿ ಕಾರ್ಯಕ್ರಮ ನಿರುದ್ಯೋಗಿ ಯುವಕರಿಗೆ ಜಾರಿಯಾಗಿದೆ. ಜನರ ಕೊಳ್ಳುವ ಶಕ್ತಿ ಹೆಚ್ಚು ಮಾಡಲು ಈ ಯೋಜನೆಗಳನ್ನು ಜಾರಿಗೆ ತರುತ್ತಿದ್ದೇವೆ ಎಂದರು.

ಡಯಾಲಿಸಿಸ್ ಸೇವೆಯನ್ನು ಹೆಚ್ಚು ಮಾಡುವ ಕೆಲಸ ಮಾಡುತ್ತೇವೆ. ಆರೋಗ್ಯ ಇಲಾಖೆಯನ್ನು ಸಚಿವ ದಿನೇಶ್ ಗುಂಡೂರಾವ್ ಸುಧಾರಣೆ ಮಾಡುತ್ತಾರೆ ಎಂಬ ನಂಬಿಕೆ ಇದೆ. ಕೆ.ಸಿ.ಜನರಲ್ ಆಸ್ಪತ್ರೆಯಲ್ಲಿ ತಾಯಿ ಮಕ್ಕಳ ಆಸ್ಪತ್ರೆ ಆಗಬೇಕು, ಶವಾಗಾರ, ಅಡುಗೆ ಮನೆ, ಜೈವಿಕ ತ್ಯಾಜ್ಯ ಕೊಠಡಿ, ಮೂಲಭೂತ ಸೌಕರ್ಯಗಳನ್ನು 150 ಕೋಟಿ ವೆಚ್ಚದಲ್ಲಿ ಕೈಗೊಳ್ಳಲಾಗುವುದು. ಇದನ್ನು ಸಚಿವ ಸಂಪುದಲ್ಲಿಟ್ಟು ಒಪ್ಪಿಗೆ ಪಡೆಯಲಾಗುವುದು ಎಂದು ಹೇಳಿದರು.

Ramesh Babu

Journalist

Recent Posts

ಆಘಾತದಲ್ಲಿ ಮಡಿದ ಬೆಸ್ಕಾಂ ಸಿಬ್ಬಂದಿ ಕುಟುಂಬಕ್ಕೆ ತಲಾ 1 ಕೋಟಿ ರೂ. ಪರಿಹಾರ ವಿತರಿಸಿದ ಇಂಧನ ಸಚಿವ ಜಾರ್ಜ್‌

ಕರ್ತವ್ಯದ ವೇಳೆ ಮಡಿದ ಬೆಸ್ಕಾಂನ ಮೂವರು ಸಿಬ್ಬಂದಿಯ ಕುಟುಂಬಸ್ಥರಿಗೆ ಇಂಧನ ಸಚಿವ ಕೆ.ಜೆ ಜಾರ್ಜ್‌ ತಲಾ ಒಂದು ಕೋಟಿ ರೂ.…

3 hours ago

ಎಸ್ಮಾ ಜಾರಿ ಮಾಡಿದರೂ ಬಗ್ಗಲ್ಲ.. ಜಗ್ಗಲ್ಲ.. ಡಿಸಿಎಂ ಡಿಕೆಶಿಗೆ ಶಾಸಕ ಧೀರಜ್ ಮುನಿರಾಜು ಸವಾಲ್

ಬೆಂಗಳೂರಿನ ಕಸವನ್ನು ವಿಲೇವಾರಿ ಮಾಡಲು ಮಹದೇವಪುರ ಮತ್ತು ಮೀಟಗಾನಹಳ್ಳಿಯ ವಿಲೇವಾರಿ ಘಟಕಗಳ ಗ್ರಾಮಸ್ಥರು ವಿರೋಧ ವ್ಯಕ್ತಪಡಿಸಿದ್ದ ಹಿನ್ನೆಲೆ ಅಲ್ಲಿನ ಕಸದ…

4 hours ago

ಭಾರತ ರಾಷ್ಟ್ರೀಯ ಟ್ರೇಡ್ ಯೂನಿಯನ್ ಕಾಂಗ್ರೆಸ್ ಯೂತ್ ವಿಭಾಗದ ಜಿಲ್ಲಾಧ್ಯಕ್ಷರಾಗಿ ಮೊಹಮ್ಮದ್ ನಿಸಾರ್ ನೇಮಕ

ದೊಡ್ಡಬಳ್ಳಾಪುರ : ಭಾರತ ರಾಷ್ಟ್ರೀಯ ಟ್ರೇಡ್ ಯೂನಿಯನ್ (ಇಂಟಕ್ ) ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಯೂತ್ ವಿಭಾಗದ ಜಿಲ್ಲಾಧ್ಯಕ್ಷರಾಗಿ ಮೊಹಮ್ಮದ್…

5 hours ago

ಅಂಗವಿಕಲ ಅಭ್ಯರ್ಥಿಗಳಿಗೆ ಉಚಿತ ಪರೀಕ್ಷಾ ಪೂರ್ವ ತರಬೇತಿ

ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ, ಅಂಗವಿಕಲರ ವಿಶೇಷ ಉದ್ಯೋಗ ವಿನಿಮಯ ಕಚೇರಿ, ಪೀಣ್ಯ, ಬೆಂಗಳೂರು 'ಅಧ್ಯಯನ ವೃತ್ತ' (ಸ್ಟಡಿ…

5 hours ago

ಚಳಿಗಾಲದ ಒಲಿಂಪಿಕ್ಸ್ 2026 ಕ್ರೀಡಾಕೂಟ: 10 ಸಾವಿರ ಕಾಂಡೋಮ್ ಗಳು ಕೇವಲ 3 ದಿನದಲ್ಲಿ ಖಾಲಿ: ಇನ್ನೂ ಹೆಚ್ಚಿನ ಕಾಂಡೋಮ್ ಗಳು ಬೇಕು ಎಂಬ ಬೇಡಿಕೆ

ಚಳಿಗಾಲದ ಒಲಿಂಪಿಕ್ಸ್ 2026 ಕ್ರೀಡಾಕೂಟದಲ್ಲಿ ಪಾಲ್ಗೊಳ್ಳುವವರಿಗಾಗಿ ಕ್ರೀಡಾಗ್ರಾಮದಲ್ಲಿ ಸರಬರಾಜು ಮಾಡಲಾಗಿದ್ದ ಬರೊಬ್ಬರಿ 10 ಸಾವಿರ ಕಾಂಡೋಮ್ ಗಳು ಕೇವಲ 3…

9 hours ago

ಎಸ್ಸೆಸ್ಸೆಲ್ಸಿ ವಿದ್ಯಾರ್ಥಿ ಶಾಲಾ ಕಟ್ಟಡದಿಂದ ಬಿದ್ದು ಸಾ*ವು!

ಚಿತ್ರದುರ್ಗಾ: ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಯೊಬ್ಬ ಶಾಲಾ ಕಟ್ಟಡದ ಮೇಲಿಂದ ಬಿದ್ದು ಅನುಮಾನಸ್ಪದವಾಗಿ ಸಾ*ವನ್ನಪ್ಪಿದ ಘಟನೆ ವರದಿಯಾಗಿದೆ. ಚಿತ್ರದುರ್ಗ ಜಿಲ್ಲೆಯ ಭರಮಸಾಗರ ಗ್ರಾಮದಲ್ಲಿ…

16 hours ago