ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ದಸರಾ ಕ್ರೀಡಾಕೂಟ ಆಯೋಜನೆಗೆ ಅಗತ್ಯ ಸಿದ್ಧತೆ ಕೈಗೊಳ್ಳಿ- ಅಪರ ಜಿಲ್ಲಾಧಿಕಾರಿ ಸುಮಾ

2024-25 ನೇ ಸಾಲಿನ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ‌ ದಸರಾ ಕ್ರೀಡಾ ಕೂಟವನ್ನು ಮಹಿಳೆ ಹಾಗೂ ಪುರುಷರಿಗೆ ನಡಸಲಾಗುತ್ತಿದ್ದು, ಕ್ರೀಡಾ ಕೂಟವನ್ನು ಆಯೋಜಿಸಲು ಅಗತ್ಯ ಸಿದ್ಧತೆ ಕೈಗೊಳ್ಳಿ ಎಂದು ಅಪರ ಜಿಲ್ಲಾಧಿಕಾರಿ ಸುಮಾ ಅವರು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.

2024-25 ನೇ ಸಾಲಿನ ತಾಲ್ಲೂಕು, ಜಿಲ್ಲಾ ಮತ್ತು ವಿಭಾಗ ಮಟ್ಟದ ದಸರಾ ಕ್ರೀಡಾಕೂಟ ಆಯೋಜನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟವನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ಆಯೋಜಿಸಲಾಗುತ್ತಿದ್ದು,

ಈ ಕ್ರೀಡಾಕೂಟವು ಸೆಪ್ಟೆಂಬರ್ 27 ಮತ್ತು 28 ಎರಡು ದಿನಗಳ ಕಾಲ ನಡೆಯಲಿದೆ‌‌. ಸಮಾರಂಭದ ಉದ್ಘಾಟನೆಯನ್ನು ಶಿಷ್ಠಾಚಾರದಂತೆ ಜನಪ್ರತಿನಿಧಿಗಳು, ಹಿರಿಯ ಅಧಿಕಾರಿಗಳನ್ನು ಆಹ್ವಾನಿಸಿ ಉದ್ಘಾಟಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದರು.

ದೇವನಹಳ್ಳಿ, ದೊಡ್ಡಬಳ್ಳಾಪುರ, ಹೊಸಕೋಟೆ ಹಾಗೂ ನೆಲಮಂಗಲದಲ್ಲಿ ತಾಲ್ಲೂಕು ಮಟ್ಟದಲ್ಲಿ ದಸರಾ ಕ್ರೀಡಾಕೂಟ ನಡೆಯಲಿದ್ದು, ಸೆಪ್ಟೆಂಬರ್ 25 ರಂದು ದೇವನಹಳ್ಳಿ (ಟೌನ್ ಕ್ರೀಡಾಂಗಣ), ದೊಡ್ಡಬಳ್ಳಾಪುರ (ಭಗತ್ ಸಿಂಗ್ ಕ್ರೀಡಾಂಗಣ) ಹಾಗೂ ಹೊಸಕೋಟೆ (ಚನ್ನಬೈರೇಗೌಡ ಕ್ರೀಡಾಂಗಣ) ದಲ್ಲಿ ಏಕಕಾಲದಲ್ಲಿ ಚಾಲನೆಗೊಳ್ಳಲಿದೆ. ಸೆಪ್ಟೆಂಬರ್ 24 ರಂದು ನೆಲಮಂಗಲ ಡಾ.ಬಿ.ಆರ್ ಅಂಬೇಡ್ಕರ್ ಕ್ರೀಡಾಂಗಣದಲ್ಲಿ ದಸರಾ ಕ್ರೀಡಾಕೂಟ ನಡೆಯಲಿದೆ‌ ಎಂದು ತಿಳಿಸಿದರು.

ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟ ಸಂಘಟನೆಗೆ ಶಾಲಾ ಶಿಕ್ಷಣ ಇಲಾಖೆ ವತಿಯಿಂದ ದೈಹಿಕ ಶಿಕ್ಷಕರ ಸೇವೆ ಆಯೋಜನೆ, ಆರೋಗ್ಯ ಇಲಾಖೆ ವತಿಯಿಂದ ಆ್ಯಂಬುಲೆನ್ಸ್ ಮತ್ತು ವೈದ್ಯರ ವ್ಯವಸ್ಥೆ, ಜಿಲ್ಲಾ, ತಾಲ್ಲೂಕು ಹಾಗೂ ವಿಭಾಗ ಮಟ್ಟದ ದಸರಾ ಕ್ರೀಡಾ ಕೂಟದಲ್ಲಿ ಯಾವುದೇ ಅಹಿತಕರ ಘಟನೆಗಳು ಜರುಗದಂತೆ ಕ್ರಮ ವಹಿಸಿ ಸಮಾರಂಭದಲ್ಲಿ ಕುಡಿಯುವ ನೀರು, ಉಟೋಪಹಾರ ಕಲ್ಪಿಸಲು ಸಂಬಂಧಿಸಿದ‌ ಅಧಿಕಾರಿಗಳಿಗೆ‌ ಸೂಚಿಸಿದರು.

ಸಭೆಯಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕಿ ಟಿ.ಜಯಲಕ್ಷ್ಮಿ, ನಗರಾಭಿವೃದ್ಧಿ ಯೋಜನಾ ನಿರ್ದೇಶಕರಾದ ರಮೇಶ್ ಸೇರಿದಂತೆ ಜಿಲ್ಲಾ‌ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು, ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಎಸ್ಐಆರ್ ಅಕ್ರಮ ಹಾಗೂ ಬರ ಪರಿಹಾರ ವಿಳಂಬ: ಕೇಂದ್ರ ಮತ್ತು ವಿಪಕ್ಷದ ವಿರುದ್ಧ ಸಚಿವ ಚಲುವರಾಯಸ್ವಾಮಿ ಆಕ್ರೋಶ

ವಿರೋಧ ಪಕ್ಷದ ನಾಯಕನಾಗಿ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು. ಅದನ್ನು ಬಿಟ್ಟು ಎಸ್‌ಐಆರ್‌ನಲ್ಲಿ ನಡೆದಿರುವ ಅಕ್ರಮಗಳ ಪರ ಮಾತನಾಡುವವರಿಗೆ ಯಾವ ಮರ್ಯಾದೆ ಇದೆ…

12 minutes ago

ಬರ ಪರಿಹಾರಕ್ಕೆ 60 ಸಾವಿರ ಕೋಟಿ ನಷ್ಟದ ಅಂದಾಜು- ಡಿಸಿಎಂ ಡಾ.ಜಿ ಪರಮೇಶ್ವರ್

ರಾಜ್ಯದಲ್ಲಿ ಬರ ಪರಿಸ್ಥಿತಿಯಿಂದ ಉಂಟಾಗಿರುವ ಬೆಳೆ ನಷ್ಟದ ಅಂದಾಜು 50 ರಿಂದ 60 ಸಾವಿರ ಕೋಟಿವರೆಗೆ ತಲುಪುವ ಸಾಧ್ಯತೆಯಿದ್ದು, ಕೇಂದ್ರ…

2 hours ago

“ಸರ್ಕಾರದ ಕೆಲಸ ದೇವರ ಕೆಲಸ ” ಎಂದು ಹೇಳುವವರು ದೇವರಿಗೂ ವಂಚಿಸುತ್ತಿದ್ದಾರೆ…

ರೆಕ್ಕೆ ಮುರಿದ ಹಕ್ಕಿಯೊಂದು, ಬಿಕ್ಕಿ ಬಿಕ್ಕಿ ಅಳುತಲಿದೆ........ ಕಾಲು ಮುರಿದ ನಾಯಿಯೊಂದು, ಕುಂಟಿ ಕುಂಟಿ ನಡೆಯುತಿದೆ..... ಆಡಳಿತ ವ್ಯವಸ್ಥೆಯ ಕಾರ್ಯವೈಖರಿಯನ್ನು…

7 hours ago

ಸರ್ಕಾರಿ ಶಾಲಾ ಮಕ್ಕಳಿಗೆ ಟ್ರ್ಯಾಕ್‌ಸೂಟ್, ಶೂ ವಿತರಣೆ

ದೊಡ್ಡಬಳ್ಳಾಪುರ: ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳಿಗೆ ಉತ್ತಮ ಶಿಕ್ಷಣದ ಜೊತೆಗೆ ಅಗತ್ಯ ಮೂಲಸೌಕರ್ಯ ಹಾಗೂ ಪ್ರೋತ್ಸಾಹ ದೊರೆಯುವಂತೆ ಸಮಾಜದ…

21 hours ago

ಕಸ ವಿಂಗಡಣೆ ಯಂತ್ರಕ್ಕೆ ಸಿಲುಕಿ ಮಹಿಳೆ ಸಾವು

ದೊಡ್ಡಬಳ್ಳಾಪುರ: ಕಸ ವಿಂಗಡಣೆ ಮಾಡುವ ಯಂತ್ರಕ್ಕೆ ಸಿಲುಕಿ ಮಹಿಳೆಯೊಬ್ಬರು ಮೃತಪಟ್ಟಿರುವ ದಾರುಣ ಘಟನೆ ತಾಲೂಕಿನ ಎಂಎಸ್‌ಜಿಪಿ ಕಸ ಸಂಸ್ಕರಣಾ ಘಟಕದಲ್ಲಿ…

1 day ago

ಅಕ್ಟೋಬರ್ 2….. ಶಾಸ್ತ್ರಿ ಮತ್ತು ಗಾಂಧಿ……..,

ದೇಶದ ಪ್ರಧಾನಿಯೊಬ್ಬರು ಹೀಗೂ ಬದುಕಬಹುದು ಎಂದು ತೋರಿಸಿ ಮಾದರಿಯಾದ ವ್ಯಕ್ತಿ ಲಾಲ್ ಬಹದ್ದೂರ್ ಶಾಸ್ತ್ರಿ. ಅವರಿಗೆ ಹುಟ್ಟು ಹಬ್ಬದ ಶುಭಾಶಯಗಳು.......…

1 day ago