ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಯಾವುದೇ ನದಿಮೂಲಗಳಿಲ್ಲವಾದ್ದರಿಂದ ನೀರಿನ ಸಮಸ್ಯೆ ನೀಗಿಸಲು, ಅಂತರ್ಜಲ ಮಟ್ಟ ಹೆಚ್ಚಿಸುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು ಹಾಗೂ ಜಿಲ್ಲೆಯಲ್ಲಿರುವ ಕೆರೆಗಳ ಅಂಗಳದಲ್ಲಿ ಬೆಳೆದಿರುವ ಮರಗಳನ್ನು ತೆರವುಗೊಳಿಸಿ ಕೆರೆಗಳ ಸಮಗ್ರ ಅಭಿವೃದ್ಧಿಗೆ ಕ್ರಮ ವಹಿಸಬೇಕು ಎಂದು ಆಹಾರ ಮತ್ತು ನಾಗರಿಕ ಸರಬರಾಜು, ಗ್ರಾಹಕ ವ್ಯವಹಾರಗಳ ಸಚಿವರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಹೆಚ್.ಮುನಿಯಪ್ಪ ಅವರು ಅಧಿಕಾರಿಗಳಿಗೆ ಕಟ್ಟುನಿಟ್ಟಾಗಿ ಸೂಚಿಸಿದರು.
ದೇವನಹಳ್ಳಿ ತಾಲ್ಲೂಕು, ಬೀರಸಂದ್ರ ಗ್ರಾಮ, ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ ಪಂಚಾಯಿತಿ ಕಚೇರಿ ಸಭಾಂಗಣದಲ್ಲಿ ಇಂದು ನಡೆದ ಎಲ್ಲಾ ಇಲಾಖೆಯ ಜಿಲ್ಲಾ ಮಟ್ಟದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಕೆರೆಗಳಲ್ಲಿ ಮೀನುಮರಿ ಅಭಿವೃದ್ಧಿಪಡಿಸಿ ಬರುವ ಆದಾಯವನ್ನು ಹಾಗೂ ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣ, ಇನ್ನಿತರ ಸಂಸ್ಥೆಗಳ ಸಿಎಸ್‌ಆರ್ ಅನುದಾನವನ್ನು ಕೆರೆಗಳ ಅಭಿವೃದ್ಧಿಗೆ ಬಳಸುವ ಮೂಲಕ ಸರ್ಕಾರಕ್ಕೆ ಆರ್ಥಿಕ ಹೊರೆಯನ್ನು ತಗ್ಗಿಸಬಹುದು ಎಂದು ಅಧಿಕಾರಿಗಳಿಗೆ ಸಲಹೆ ನೀಡಿದರು.
ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗದಂತೆ ಅಗತ್ಯ ಕ್ರಮ ವಹಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ತಿಳಿಸಿದರು.
ದೊಡ್ಡಬಳ್ಳಾಪುರದ ನಾಗರಕೆರೆಗೆ, ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದ ಕಲುಷಿತ ನೀರು ಹಾಗೂ ದೊಡ್ಡಬಳ್ಳಾಪುರ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಒಳಚರಂಡಿ ನೀರು ಸೇರಿ ಆ ವ್ಯಾಪ್ತಿಯಲ್ಲಿ ಸಾರ್ವಜನಿಕರಿಗೆ ಕುಡಿಯುವ ನೀರಿನ ಸಮಸ್ಯೆ ಉಂಟಾಗಿದೆ. ಕೆರೆಯನ್ನು ಸಂರಕ್ಷಿಸಲು ಕಲುಷಿತ ನಿರು ಬರದಂತೆ ತಡೆಯಲು, ನೀರನ್ನು ವೈಜ್ಞಾನಿಕ ರೀತಿಯಲ್ಲಿ ಸಂಸ್ಕರಿಸಲು ಯೋಜನೆಯನ್ನು ರೂಪಿಸಿ, ಶೀಘ್ರ ವರದಿ ನೀಡ ಹಾಗೆಯೇ ಕೆರೆಯನ್ನು ನೇರ ಸಂಪರ್ಕಿಸುವ ಒಳಚರಂಡಿ ಪೈಪ್‌ಲೈನ್ ಅನ್ನು ತೆರವುಗೊಳಿಸಿ, ಸಂಸ್ಕರಿಸಿದ ನೀರಿನ ವ್ಯವಸ್ಥೆ ಕಲ್ಪಿಸಿ ಎಂದು ಅಧಿಕಾರಿಗಳಿಗೆ ಸೂಚಿಸಿದರು.
ದೇವನಹಳ್ಳಿ ತಾಲ್ಲೂಕಿನಲ್ಲಿರುವ ಕೆರೆಗಳಲ್ಲಿಯೇ ವಿಜಯಪುರ ಬಳಿಯ ಭದ್ರನ ಕೆರೆಯು ಹೆಚ್ಚು ವಿಸ್ತಿರ್ಣವುಳ್ಳದ್ದಾಗಿದ್ದು ಸುಮಾರು 2000 ಎಕರೆ ಪ್ರದೇಶದ ವಿಸ್ತೀರ್ಣ ಹೊಂದಿದೆ. ಕಳೆದ ವರ್ಷ ಸುರಿದ ಮಳೆಯಿಂದಾಗಿ ವಿಜಯಪುರ ಕೆರೆಯಿಂದ ಭದ್ರನಕೆರೆಗೆ ಹಾದುಹೋಗುವ ನೀರು, ಸರಿಯಾದ ರಾಜಕಾಲುವೇ ಮಾರ್ಗ ಇಲ್ಲದಿರುವ ಕಾರಣ ರೈತರ ಕೃಷಿ ಜಮೀನುಗಳಿಗೆ ಮನೆಗಳಿಗೆ ನೀರು ನುಗ್ಗಿ ಜನಸಾಮಾನ್ಯರಿಗೆ ತೊಂದರೆಯಾಗಿತ್ತು. ಆದ್ದರಿಂದ ಇದರ ಬಗ್ಗೆ ಶೀಘ್ರವೇ ಗಮನಹರಿಸಬೇಕು. ತಹಶೀಲ್ದಾರ್, ತಾಲ್ಲೂಕು ಪಂಚಾಯಿತಿ ಕಾರ್ಯ ನಿರ್ವಾಹಕ ಅಧಿಕಾರಿ, ಭೂ ಮಾಪನ ಇಲಾಖೆ ಅಧಿಕಾರಿಗಳನ್ನೊಳಗೊಂಡ ನೇತೃತ್ವದ ತಂಡವು ಭೇಟಿ ನೀಡಿ ವರದಿ ನೀಡಿ, ನೀರು ಹರಿದು ಹೋಗುವ ರಾಜಕಾಲುವೆಯನ್ನು ತೆರವುಗೊಳಿಸಲು ಕ್ರಮ ಕೈಗೊಳ್ಳಿ ಎಂದರು.
ಜಿಲ್ಲೆಯನ್ನು ಪೋಡಿ ಮುಕ್ತ ಜಿಲ್ಲೆಯನ್ನಾಗಿ ಮಾಡಲು ಅಧಿಕಾರಿಗಳು ತ್ವರಿತ ಗತಿಯಲ್ಲಿ ಕೆಲಸ ಮಾಡಬೇಕು. ಈ ನಿಟ್ಟಿನಲ್ಲಿ ಸಮೀಕ್ಷೆಗಾಗಿ ಅಗತ್ಯವಿರುವ ಸಿಬ್ಬಂದಿಯನ್ನು ನೇಮಿಸಿಕೊಳ್ಳಲು ಸಂಬಂಧಿಸಿದ ಇಲಾಖೆಯ ಮುಖ್ಯಸ್ಥರೊಂದಿಗೆ ಚರ್ಚಿಸಲಾಗುವುದು ಎಂದರಲ್ಲದೆ ಪ್ರಸ್ತುತವಾಗಿ ಕಾರ್ಯ ನಿರ್ವಹಿಸುತ್ತಿರುವ ಸರ್ವೆಯರ್‌ಗಳು ಒಂದು ಗ್ರಾಮವನ್ನಾದರೂ ಪೋಡಿ ಮುಕ್ತ ಗ್ರಾಮವನ್ನಾಗಿ ಘೋಷಿಸಲು ಶೀಘ್ರ ಕ್ರಮ ಕೈಗೊಳ್ಳಲು ಕಾರ್ಯಕ್ರಮ ರೂಪಿಸಿ ಎಂದು ಜಿಲ್ಲಾಧಿಕಾರಿ ಅವರಿಗೆ ತಿಳಿಸಿದರು.
ಜಿಲ್ಲೆಯಲ್ಲಿ 8000 ಎಕರೆ ವಿಸ್ತೀರ್ಣದಷ್ಟು ಕೈಗಾರಿಕಾ ಪ್ರದೇಶವಿದ್ದಿ 800 ಕಾರ್ಖಾನೆಗಳು ಕಾರ್ಯ ನಿರ್ವಹಿಸುತ್ತಿವೆ. ಕೈಗಾರಿಕೆ ವ್ಯಾಪ್ತಿಯನ್ನು ಹೆಚ್ಚಿಸಲು ಭೂಮಿಯನ್ನು ಸ್ವಾದೀನ ಪಡಿಸಿಕೊಳ್ಳುವ ಪ್ರಕ್ರಿಯೆಯು ರೈತರಿಗೆ ತೊಂದರೆಯಾಗದಂತೆ ಕೈಗೊಳ್ಳಿ ಎಂದು ತಿಳಿಸಿದರು.
ಸಭೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ. ಶಿವಶಂಕರ.ಎನ್, ಜಿಲ್ಲಾ ಪೊಲೀಸ್ ಅಧೀಕ್ಷಕ ಮಲ್ಲಿಕಾರ್ಜುನ ಬಾಲದಂಡಿ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ವರ್ಣೀತ್ ನೇಗಿ, ಅಪರ ಜಿಲ್ಲಾಧಿಕಾರಿ ಅಮರೇಶ್.ಹೆಚ್, ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಡಾ. ನಾಗರಾಜ, ಪ್ರಾದೇಶಿಕ ಅರಣ್ಯ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಸುಮಿತ್‌ಕುಮಾರ್ ಸುಭಾಷ್ ರಾವ್ ಪಾಟೀಲ್, ದೊಡ್ಡಬಳ್ಳಾಪುರ ಉಪ ವಿಭಾಗಾಧಿಕಾರಿ ಶ್ರೀನಿವಾಸ್ ಸೇರಿದಂತೆ ಎಲ್ಲಾ ಇಲಾಖೆಗಳ ಜಿಲ್ಲಾ ಹಾಗೂ ದೇವನಹಳ್ಳಿ ತಾಲ್ಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
ಮದುವೆ ಮಾಡಿಕೊಳ್ಳಲು ಹೆಣ್ಣು ಸಿಗುತ್ತಿಲ್ಲವೆಂದು ಮನನೊಂದು ಒಂದೇ ದಿನ ರಾಜ್ಯದ ಇಬ್ಬರು ಯುವಕರು ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆಗಳು ಚಿಕ್ಕಮಗಳೂರು…
ನಮ್ಮ ಮನೆ ದೇವರಾದ ರಾಮೇಶ್ವರ–ಸಿದ್ದೇಶ್ವರ ಸ್ವಾಮಿಗಳ ಆಶೀರ್ವಾದದಿಂದಲೇ ರಾಜ್ಯದಲ್ಲಿ ಎರಡು ಬಾರಿ ಮುಖ್ಯಮಂತ್ರಿಯಾಗಿ ಹಾಗೂ ಎರಡು ಬಾರಿ ವಿಪಕ್ಷ ನಾಯಕನಾಗಿ…
ಉಚಿತ ಆರೋಗ್ಯ ತಪಾಸಣಾ ಶಿಬಿರ ಮತ್ತು ರಕ್ತದಾನ ಶಿಬಿರ ಅತ್ಯಂತ ಅವಶ್ಯಕ. ಇಂತಹ ಶಿಬಿರಗಳು ಕಾಲಕಾಲಕ್ಕೆ ಗ್ರಾಮೀಣ ಭಾಗಗಳಲ್ಲಿ ನಡೆಯುತ್ತಲೇ…
ಜಾತ್ರೆಯೊಂದರಲ್ಲಿ ವ್ಯಕ್ತಿಯ ಭೀಕರ ಕೊಲೆಯಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಹಣ್ಣಿಕೇರಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಸಂಗನಗೌಡ ಪಾಟೀಲ್…
ಲಾರಿ-ಕಾರು ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ಜಿಲ್ಲೆ ಮೊಳಕಾಲ್ಮೂರು ತಾಲ್ಲೂಕು ರಾಜಾಪುರ ಬಳಿ ನಡೆದಿದೆ. ಬೆಂಗಳೂರು…
ಇತ್ತೀಚೆಗೆ Social Media ಗಳಲ್ಲಿ ಅತ್ಯಂತ ಗಮನಸೆಳೆದ ಮನಮಿಡಿಯುವ ಚಿತ್ರ...... ಒಬ್ಬ ಬಾಲಕ ಡಾಕ್ಟರ್ ಬಳಿ " ಹಸಿವು ಹೋಗಲಾಡಿಸಲು…