2023-ಕರ್ನಾಟಕ ರಾಜ್ಯ ವಿಧಾನಸಭಾ ಸಾರ್ವತ್ರಿಕ ಚುನಾವಣೆಗೆ ಏಪ್ರಿಲ್ 13 ರಿಂದ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದ್ದು, ಐದನೆಯ ದಿನವಾದ ಬುಧವಾರದಂದು ಜಿಲ್ಲೆಯ ನಾಲ್ಕು ವಿಧಾನಸಭಾ ಕ್ಷೇತ್ರಗಳಲ್ಲಿ 17 ಅಭ್ಯರ್ಥಿಗಳಿಂದ ನಾಮಪತ್ರಗಳು ಸಲ್ಲಿಕೆಯಾಗಿವೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಆರ್.ಲತಾ ಅವರು ಮಾಹಿತಿ ನೀಡಿದರು.
ಜಿಲ್ಲೆಯ 178-ಹೊಸಕೋಟೆ ವಿಧಾನಸಭಾ ಕ್ಷೇತ್ರದಲ್ಲಿ ಇತರೆ ಪಕ್ಷದಿಂದ ಎಂ ಶ್ರೀಮತಿ ಇತರೆ ಪಕ್ಷದಿಂದ, ಸ್ವತಂತ್ರ ಅಭ್ಯರ್ಥಿಗಳಾಗಿ ನವೀನ್ ಕೆ, ಶರತ್ ಕುಮಾರ್ ಕೆ, ಎಸ್ ಆರ್ ರಘುನಾಥ್ ನಾಮಪತ್ರ ಸಲ್ಲಿಸಿದ್ದಾರೆ.
179-ದೇವನಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ವಿ ಮಂಜುನಾಥ್, ಬಿ ರಾಮಚಂದ್ರ, ಇತರೆ ಪಕ್ಷದಿಂದ ನಾಗೇಶ್ ಎಸ್, ಎ.ಎ.ಪಿ ಪಕ್ಷದಿಂದ ಬಿ.ಕೆ ಶಿವಪ್ಪ, ಬಿ.ಜೆ.ಪಿ ಪಕ್ಷದಿಂದ ಪಿಳ್ಳಮುನಿಶಾಮಪ್ಪ ನಾಮಪತ್ರಗಳನ್ನು ಸಲ್ಲಿಸಿದ್ದಾರೆ.
180-ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದಲ್ಲಿ ಐ.ಎನ್.ಸಿ ಪಕ್ಷದಿಂದ ವೆಂಕಟರಮಣಯ್ಯ, ಇತರೆ ಪಕ್ಷದಿಂದ ವೆಂಕಟರಾಜು 2ನಾಮಪತ್ರ, ಸಮಾಜವಾದಿ ಪಕ್ಷದಿಂದ ಎಂ.ವಿ ನಾರಾಯಣ ನಾಮಪತ್ರ ಸಲ್ಲಿಸಿದ್ದಾರೆ.
181- ನೆಲಮಂಗಲ ವಿಧಾನಸಭಾ ಕ್ಷೇತ್ರದಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಉಮಾದೇವಿ, ಜೆಡಿಎಸ್ ಪಕ್ಷದಿಂದ ಡಾ. ಕೆ.ಶ್ರೀನಿವಾಸಮೂರ್ತಿ ,ಬಿ.ಜೆ.ಪಿ ಪಕ್ಷದಿಂದ ಸಪ್ತಗಿರಿ ಮೇಘಾವತ್ ಶಂಕರ್ ನಾಯಕ್, ಸಂಯುಕ್ತ ಜನತಾ ದಳ ಪಕ್ಷದಿಂದ ಬಿ ರಾಮಯ್ಯ, ಐಎನ್ ಸಿ ಪಕ್ಷದಿಂದ ಶ್ರೀನಿವಾಸಯ್ಯ ಎನ್ ನಾಮ ಪತ್ರ ಸಲ್ಲಿಸಿರುತ್ತಾರೆ ಎಂದು ಜಿಲ್ಲಾಧಿಕಾರಿಗಳು ಹಾಗೂ ಚುನಾವಣಾಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಅಣ್ಣನ ಮೂವರು ಮಕ್ಕಳ ಮೇಲೆ ತಮ್ಮನೇ ಕ್ರೂರವಾಗಿ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ಕಮ್ಮಸಂದ್ರದಲ್ಲಿ ನಡೆದಿದೆ. ಘಟನೆಯಲ್ಲಿ 9 ವರ್ಷದ…
ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…
ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…
ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…
ನಟ ದರ್ಶನ್ ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಥಾಯ್ಲೆಂಡ್ ನಿಂದ ತಡ ರಾತ್ರಿ 11:45…
ನಿನ್ನೆ(ಜು.24 ಗುರುವಾರ) ಭೀಮನ ಅಮವಾಸ್ಯೆ ಹಿನ್ನೆಲೆ ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ…