ಜಿಲ್ಲೆಯ ನಾಲ್ಕು ತಾಲ್ಲೂಕುಗಳನ್ನು ಬರ ಪೀಡಿತ ತಾಲೂಕುಗಳೆಂದು ಘೋಷಣೆ ಮಾಡಲಾಗಿದ್ದು, ಸಾರ್ವಜನಿಕರಿಗೆ ತುರ್ತು ಕುಡಿಯುವ ನೀರು ಹಾಗೂ ಜಾನುವಾರುಗಳಿಗೆ ಆಹಾರ, ಮೇವುಗಳ ಲಭ್ಯತೆಯ ಅಭಾವ ಕಂಡುಬಂದಲ್ಲಿ ಶೀಘ್ರ ಸ್ಪಂದಿಸಿ ಬಗೆಹರಿಸುವಂತೆ ಜಿಲ್ಲಾಧಿಕಾರಿ ಡಾ.ಎನ್. ಶಿವಶಂಕರ್ ಅವರು ಅಧಿಕಾರಿಗಳಿಗೆ ಸೂಚಿಸಿದರು.
ದೇವನಹಳ್ಳಿ ತಾಲೂಕಿನ ಬೀರಸಂದ್ರ ಗ್ರಾಮದ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಯವರ ಜಿಲ್ಲಾ ಕಛೇರಿ ಸಭಾಂಗಣದಲ್ಲಿ ಇಂದು ನಡೆದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಮೇಲ್ವಿಚಾರಣೆಯಲ್ಲಿ 2023 ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಬರ ವಿಪತ್ತು ನಿರ್ವಹಣೆಗೆ ಕೈಗೊಂಡಿರುವ ಕ್ರಮಗಳ ಕುರಿತು ಪರಿಶೀಲನೆ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಕುಡಿಯುವ ನೀರಿನ ಸಮಸ್ಯೆ ಉಂಟಾಗುವ ಗ್ರಾಮ ಹಾಗೂ ನಗರ ಪ್ರದೇಶಗಳಲ್ಲಿ ಪರ್ಯಾಯವಾಗಿ ನೀರು ಪೂರೈಸುವ ಕೊಳವೆ ಬಾವಿಗಳನ್ನು ಗುರುತಿಸಿ, ಅವಶ್ಯವಿದ್ದಲ್ಲಿ ಖಾಸಗಿ ಕೊಳವೆ ಬಾವಿಗಳ ಮೂಲಕ ಹಾಗೂ ಟ್ಯಾಂಕರ್ ಗಳ ಮೂಲಕ ನೀರನ್ನು ಪೂರೈಸಲು ಸಿದ್ಧತೆ ಮಾಡಿಕೊಳ್ಳಿ ಎಂದರು.
ಬರದ ಹಿನ್ನೆಲೆಯಲ್ಲಿ ಜಾನುವಾರಗಳ ಆಹಾರ ಮತ್ತು ಮೇವುಗಳಿಗೆ ತೊಂದರೆ ಉಂಟಾಗಬಹುದಾದ ಹಿನ್ನೆಲೆಯಲ್ಲಿ ಜಾನುವಾರಗಳ ಗಣತಿಯನ್ನು ಆಧರಿಸಿ ಮೇವು ಕಿಟ್ ಗಳನ್ನು ಅಗತ್ಯ ಇರುವ ಸ್ಥಳಗಳಿಗೆ ಪೂರೈಸಲು ಕ್ರಮ ವಹಿಸಲು ಪಶು ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಅಮರೇಶ್ ಹೆಚ್, ದೊಡ್ಡಬಳ್ಳಾಪುರ ತಾಲ್ಲೂಕು ತಹಸೀಲ್ದಾರ್ ವಿದ್ಯಾ ವಿಭಾ ರಾಥೋಡ್, ದೇವನಹಳ್ಳಿ ತಾಲ್ಲೂಕು ತಹಸೀಲ್ದಾರ್ ಶಿವರಾಜ್, ನೆಲಮಂಗಲ ತಾಲ್ಲೂಕು ತಹಸೀಲ್ದಾರ್ ಅರುಂಧತಿ, ದೊಡ್ಡಬಳ್ಳಾಪುರ ಕಾರ್ಯ ನಿರ್ವಾಹಕ ಅಧಿಕಾರಿ ಮುನಿರಾಜು ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು
ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ, ಚಿಕ್ಕಬೆಳವಂಗಲ, ರಾಂಪುರ. ನಾರನಹಳ್ಳಿ, ಸೊಣ್ಣೇನಹಳ್ಳಿ ಗ್ರಾಮಗಳ ವ್ಯಾಪ್ತಿಯ ಸುಮಾರು 2100 ಎಕರೆ ಭೂಮಿಯನ್ನು ಕೆಐಎಡಿಬಿ ಸ್ವಾಧೀನಪಡಿಸಿಕೊಳ್ಳಲು…
ದೇವರು ಎಷ್ಟೊಂದು ಒಳ್ಳೆಯವನಲ್ಲವೇ........ ಲಕ್ಷಾಂತರ ಜನರನ್ನು ಕೊಲ್ಲಿಸಲು ಅಡಾಲ್ಫ್ ಹಿಟ್ಲರನನ್ನು ಒಂದು ದೇಶದ ಅಧ್ಯಕ್ಷನನ್ನಾಗಿಸಿದ. ಈಗ ಡೊನಾಲ್ಡ್ ಟ್ರಂಪ್ ಅವರನ್ನು…
ಮಹಿಳೆಯರು ಎಲ್ಲ ವಲಯಗಳಲ್ಲಿ ತಮ್ಮ ಛಾಪು ಮೂಡಿಸಿದ್ದು, ಮಹಿಳಾ ಸಬಲೀಕರಣದ ಆಶಯ ಸಾಕಾರದತ್ತ ಸಾಗುತ್ತಿದೆ ಎಂದು ಆರಕ್ಷಕ ನಿರೀಕ್ಷಕರಾದ ಎನ್.ಶೋಭಾ…
ಮನೆಯ ಹೊಸ್ತಿಲಿನಲ್ಲಿ ಪೂಜೆಗಾಗಿ ಇಟ್ಟಿದ್ದ ಒಣಗಿದ ದಾಸವಾಳದ ಹೂವನ್ನು ಆಟವಾಡುತ್ತಾ ನುಂಗಿದ ಆರುವರೆ ತಿಂಗಳ ಕಂದಮ್ಮ ಉಸಿರುಗಟ್ಟಿ ಸಾವನ್ನಪ್ಪಿರುವ ಘಟನೆ…
ಹುಬ್ಬಳ್ಳಿಯಲ್ಲಿ ಕಮರ್ಷಿಯಲ್ ಟ್ಯಾಕ್ಸ್ ಡಿಸಿ ಆರು ಲಕ್ಷ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಭರತ್ ಹೆಗ್ಗಡೆ, ಲೋಕಾಯುಕ್ತ ಬಲೆಗೆ…
ಭಾರತದ ಅಗ್ರ ಪೀಠೋಪಕರಣ ಬ್ರ್ಯಾಂಡ್ ಆಗಿರುವ ರಾಯಲ್ ಓಕ್ ಫರ್ನಿಚರ್, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ನೂತನ ಮಳಿಗೆಗೆ ಚಾಲನೆ…