ಜಿಲ್ಲೆಯಲ್ಲಿ ಕುಡಿಯುವ ನೀರು, ಮೇವು ಸಮಸ್ಯೆ ಕಂಡುಬಂದರೆ ಶೀಘ್ರ ಸ್ಪಂದಿಸಿ: ಜಿಲ್ಲಾಧಿಕಾರಿ ಡಾ.ಎನ್. ಶಿವಶಂಕರ್

ಜಿಲ್ಲೆಯ ನಾಲ್ಕು ತಾಲ್ಲೂಕುಗಳನ್ನು ಬರ ಪೀಡಿತ ತಾಲೂಕುಗಳೆಂದು ಘೋಷಣೆ ಮಾಡಲಾಗಿದ್ದು, ಸಾರ್ವಜನಿಕರಿಗೆ ತುರ್ತು ಕುಡಿಯುವ ನೀರು ಹಾಗೂ ಜಾನುವಾರುಗಳಿಗೆ ಆಹಾರ, ಮೇವುಗಳ ಲಭ್ಯತೆಯ ಅಭಾವ  ಕಂಡುಬಂದಲ್ಲಿ ಶೀಘ್ರ ಸ್ಪಂದಿಸಿ ಬಗೆಹರಿಸುವಂತೆ ಜಿಲ್ಲಾಧಿಕಾರಿ ಡಾ.ಎನ್. ಶಿವಶಂಕರ್ ಅವರು ಅಧಿಕಾರಿಗಳಿಗೆ ಸೂಚಿಸಿದರು.

ದೇವನಹಳ್ಳಿ ತಾಲೂಕಿನ ಬೀರಸಂದ್ರ ಗ್ರಾಮದ ಬೆಂಗಳೂರು ಗ್ರಾಮಾಂತರ  ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಯವರ ಜಿಲ್ಲಾ ಕಛೇರಿ ಸಭಾಂಗಣದಲ್ಲಿ ಇಂದು ನಡೆದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಮೇಲ್ವಿಚಾರಣೆಯಲ್ಲಿ 2023 ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಬರ ವಿಪತ್ತು ನಿರ್ವಹಣೆಗೆ ಕೈಗೊಂಡಿರುವ ಕ್ರಮಗಳ ಕುರಿತು ಪರಿಶೀಲನೆ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಕುಡಿಯುವ ನೀರಿನ ಸಮಸ್ಯೆ ಉಂಟಾಗುವ ಗ್ರಾಮ ಹಾಗೂ ನಗರ ಪ್ರದೇಶಗಳಲ್ಲಿ ಪರ್ಯಾಯವಾಗಿ ನೀರು ಪೂರೈಸುವ ಕೊಳವೆ ಬಾವಿಗಳನ್ನು ಗುರುತಿಸಿ, ಅವಶ್ಯವಿದ್ದಲ್ಲಿ ಖಾಸಗಿ ಕೊಳವೆ ಬಾವಿಗಳ ಮೂಲಕ ಹಾಗೂ ಟ್ಯಾಂಕರ್ ಗಳ ಮೂಲಕ ನೀರನ್ನು ಪೂರೈಸಲು ಸಿದ್ಧತೆ ಮಾಡಿಕೊಳ್ಳಿ ಎಂದರು.

ಬರದ ಹಿನ್ನೆಲೆಯಲ್ಲಿ ಜಾನುವಾರಗಳ ಆಹಾರ ಮತ್ತು ಮೇವುಗಳಿಗೆ ತೊಂದರೆ ಉಂಟಾಗಬಹುದಾದ ಹಿನ್ನೆಲೆಯಲ್ಲಿ ಜಾನುವಾರಗಳ ಗಣತಿಯನ್ನು ಆಧರಿಸಿ ಮೇವು ಕಿಟ್ ಗಳನ್ನು ಅಗತ್ಯ ಇರುವ ಸ್ಥಳಗಳಿಗೆ ಪೂರೈಸಲು ಕ್ರಮ ವಹಿಸಲು ಪಶು ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಅಮರೇಶ್ ಹೆಚ್, ದೊಡ್ಡಬಳ್ಳಾಪುರ ತಾಲ್ಲೂಕು ತಹಸೀಲ್ದಾರ್ ವಿದ್ಯಾ ವಿಭಾ ರಾಥೋಡ್, ದೇವನಹಳ್ಳಿ ತಾಲ್ಲೂಕು ತಹಸೀಲ್ದಾರ್ ಶಿವರಾಜ್, ನೆಲಮಂಗಲ ತಾಲ್ಲೂಕು ತಹಸೀಲ್ದಾರ್ ಅರುಂಧತಿ, ದೊಡ್ಡಬಳ್ಳಾಪುರ ಕಾರ್ಯ ನಿರ್ವಾಹಕ ಅಧಿಕಾರಿ ಮುನಿರಾಜು ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು

Ramesh Babu

Journalist

Recent Posts

ಭಾರತೀಯರ ಆಹಾರ ವೈವಿಧ್ಯತೆ…. ರುಚಿ – ತೃಪ್ತಿ – ಸಮಾನತೆ…..

ಭಾರತೀಯರ ಆಹಾರ ವೈವಿಧ್ಯತೆ..... ರುಚಿ - ತೃಪ್ತಿ - ಸಮಾನತೆ..... ಅಡುಗೆ ಅನುಭವದ ಮೂಸೆಯೊಳಗೆ ಬೆಳೆದು ಬರುವ ವಿಜ್ಞಾನವೆಂಬ ಕಲೆ....…

9 hours ago

ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆ: ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

2026-27 ಸಾಲಿಗೆ ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆಯಡಿ ಸಹಾಯಧನಕ್ಕಾಗಿ ಅರ್ಹ ಫಲಾನುಭವಿಗಳಿಂದ ಅರ್ಜಿಗಳನ್ನ…

22 hours ago

ಕೊಡಿಪಾಳ್ಯ ಬಳಿ ಕ್ಯಾಂಟರ್ ಪಲ್ಟಿ: ತಪ್ಪಿದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಕೊಡಿಪಾಳ್ಯ ಸಮೀಪ ಕ್ಯಾಂಟರ್‌ವೊಂದು ಪಲ್ಟಿಯಾಗಿ ಬಿದ್ದ ಘಟನೆ ನಡೆದಿದ್ದು, ಅದೃಷ್ಟವಶಾತ್ ಭಾರೀ ಅನಾಹುತ ತಪ್ಪಿದೆ.…

23 hours ago

ಮೊಬೈಲ್ ಕಳೆದುಹೋದರೆ ಗಾಬರಿ ಬೇಡ: ತಕ್ಷಣದ ಕ್ರಮವೇ ರಕ್ಷಣೆ: ಮೊಬೈಲ್‌ ಕಳೆದುಹೋದ 10 ನಿಮಿಷಗಳಲ್ಲಿ ಮಾಡಬೇಕಾದ 7 ಕೆಲಸಗಳು ಇಲ್ಲಿವೆ ನೋಡಿ…

ಬೆಂಗಳೂರು ಗ್ರಾಮಾಂತರ: ಮೊಬೈಲ್‌ ಫೋನ್‌ ಕಳೆದುಹೋಗುವುದು ಅಥವಾ ಕಳ್ಳತನವಾಗುವುದು ಇಂದಿನ ಡಿಜಿಟಲ್‌ ಯುಗದಲ್ಲಿ ಆತಂಕದ ಸಂಗತಿಯಾಗಿದೆ. ಮೊಬೈಲ್‌ ಕೇವಲ ಸಂಪರ್ಕ…

1 day ago

ಎಸ್ಐಆರ್ ಅಕ್ರಮ ಹಾಗೂ ಬರ ಪರಿಹಾರ ವಿಳಂಬ: ಕೇಂದ್ರ ಮತ್ತು ವಿಪಕ್ಷದ ವಿರುದ್ಧ ಸಚಿವ ಚಲುವರಾಯಸ್ವಾಮಿ ಆಕ್ರೋಶ

ವಿರೋಧ ಪಕ್ಷದ ನಾಯಕನಾಗಿ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು. ಅದನ್ನು ಬಿಟ್ಟು ಎಸ್‌ಐಆರ್‌ನಲ್ಲಿ ನಡೆದಿರುವ ಅಕ್ರಮಗಳ ಪರ ಮಾತನಾಡುವವರಿಗೆ ಯಾವ ಮರ್ಯಾದೆ ಇದೆ…

1 day ago

ಬರ ಪರಿಹಾರಕ್ಕೆ 60 ಸಾವಿರ ಕೋಟಿ ನಷ್ಟದ ಅಂದಾಜು- ಡಿಸಿಎಂ ಡಾ.ಜಿ ಪರಮೇಶ್ವರ್

ರಾಜ್ಯದಲ್ಲಿ ಬರ ಪರಿಸ್ಥಿತಿಯಿಂದ ಉಂಟಾಗಿರುವ ಬೆಳೆ ನಷ್ಟದ ಅಂದಾಜು 50 ರಿಂದ 60 ಸಾವಿರ ಕೋಟಿವರೆಗೆ ತಲುಪುವ ಸಾಧ್ಯತೆಯಿದ್ದು, ಕೇಂದ್ರ…

1 day ago