ಜಿಲ್ಲೆಯಲ್ಲಿ ಜಾನುವಾರು ಸಂತೆ, ಜಾತ್ರೆ, ಸಾಗಾಣಿಕೆ ನಿಷೇಧವನ್ನು ಫೆಬ್ರವರಿ 28ರವರೆಗೆ ಮುಂದುವರೆಸಿ ಜಿಲ್ಲಾಧಿಕಾರಿ ಆದೇಶ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಅಕ್ಕಪಕ್ಕದ ಜಿಲ್ಲೆಗಳಾದ ಚಿಕ್ಕಬಳ್ಳಾಪುರ, ಕೋಲಾರ, ತುಮಕೂರು ಹಾಗೂ ರಾಮನಗರ ಜಿಲ್ಲೆಗಳಲ್ಲಿ ಚರ್ಮಗಂಟು ರೋಗವು ಪೂರ್ತಿಯಾಗಿ ಹತೋಟಿಗೆ ಬಾರದೇ ಇರುವುದರಿಂದ ಮುನ್ನೆಚ್ಚರಿಕೆ ಕ್ರಮವಾಗಿ The Prevention and control of infectious and Contagious Diseases in Animals Act-2009 Section-12 ರಡಿಯಲ್ಲಿ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಜಾನುವಾರುಗಳಿಗೆ ಚರ್ಮಗಂಟು ರೋಗ(Lumpy Skin disease) ಹರಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ಹಾಗೂ ಜಾನುವಾರುಗಳ ಆರೋಗ್ಯದ ಹಿತದೃಷ್ಟಿಯಿಂದ 2023ರ ಫೆಬ್ರವರಿ 28 ರ ಸಂಜೆ 6.00 ಗಂಟೆಯವರೆಗೆ ಜಿಲ್ಲೆಯಾದ್ಯಂತ ಜಾನುವಾರುಗಳ ಜಾತ್ರೆ, ಸಂತೆ, ಸಾಗಾಣಿಕೆಗಳನ್ನು ಸಂಪೂರ್ಣವಾಗಿ ನಿರ್ಬಂಧ ಮುಂದುವರೆಸಿ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಆರ್.ಲತಾ ಅವರು ಆದೇಶಿಸಿದ್ದಾರೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಜಾನುವಾರುಗಳಿಗೆ ಚರ್ಮಗಂಟು ರೋಗ ಕಾಣಿಸಿಕೊಂಡಿದ್ದು, ಈವರೆಗೂ 2370 ಜಾನುವಾರುಗಳಲ್ಲಿ ಈ ರೋಗವು ಕಂಡುಬಂದಿದ್ದು, 206 ಜಾನುವಾರುಗಳು ಮರಣಹೊಂದಿರುತ್ತವೆ. ಇದು ಒಂದು ವೈರಾಣುನಿಂದ ಹರಡುವ ರೋಗವಾಗಿದೆ.

ಪ್ರಮುಖವಾಗಿ ಸೊಳ್ಳೆ, ನೊಣ, ಉಣ್ಣೆ ಇತ್ಯಾದಿ ಕೀಟಗಳಿಂದ ಹರಡುತ್ತದೆ. ಈ ರೋಗವು ಕಾಣಿಸಿಕೊಂಡ ಜಾನುವಾರುಗಳು ರೋಗದಿಂದ ಸಾಕಷ್ಟು ಬಳಲುವುದರಿಂದ ಉತ್ಪಾದನೆ ಕಡಿಮೆಯಾಗುವುದಲ್ಲದೆ, ಕೆಲವೊಮ್ಮೆ ಮರಣ ಹೊಂದುತ್ತವೆ. ಇದರಿಂದ ರೈತರಿಗೆ ಆರ್ಥಿಕ ನಷ್ಟ ಉಂಟಾಗುತ್ತದೆ. ಮುಂಜಾಗ್ರತಾ ಕ್ರಮವಾಗಿ ಈಗಾಗಲೇ 1,60,087 ಜಾನುವಾರುಗಳಿಗೆ ಲಸಿಕೆಯನ್ನು ನೀಡಲಾಗಿದ್ದು, ರೋಗ ಪೀಡಿತ ಜಾನುವಾರುಗಳಿಗೆ ಸೂಕ್ತ ಚಿಕಿತ್ಸೆ ನೀಡಲು ಕ್ರಮವಹಿಸಲಾಗಿದೆ.

ಜಿಲ್ಲೆಯಲ್ಲಿ ಹಲವೆಡೆ ಜಾನುವಾರು ಸಂತೆ/ಜಾತ್ರೆಗಳು ನಡೆಯಲಿದ್ದು, ಇವುಗಳಿಂದ ಜಾನುವಾರುಗಳ ಸಾಗಾಣಿಕೆ/ಚಲನವಲನದಿಂದ ಹಾಗೂ ಹಲವಾರು ಜಾನುವಾರುಗಳನ್ನು ಒಂದೆಡೆ ಸೇರಿಸುವುದರಿಂದ ರೋಗೋದ್ರೇಕವು ಹೆಚ್ಚಾಗುವ ಸಾಧ್ಯತೆ ಇರುತ್ತದೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಪ್ರಸ್ತುತ 1,62,980 ದನ/ಎಮ್ಮೆಗಳಿದ್ದು, ರೋಗೋದ್ರೇಕವನ್ನು ನಿಯಂತ್ರಿಸದಿದ್ದಲ್ಲಿ ಸಾಕಷ್ಟು ಆರ್ಥಿಕ ನಷ್ಟ ಉಂಟಾಗುವ ಸಂಭವವಿರುವುದರಿಂದ ಜಿಲ್ಲೆಯಾದ್ಯಂತ ಜಾನುವಾರು ಜಾತ್ರೆ/ಸಂತೆಗಳನ್ನು ಎರಡು ತಿಂಗಳ ಅವಧಿಗೆ Karnataka Animal Diseases (Control Act), 1961 ರಡಿ ಮತ್ತು ಸಿಆರ್‌ಪಿಸಿ ಕಲಂ 144 ರ ಮೇರೆಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯಾದ್ಯಂತ ಜಾನುವಾರು ಸಂತೆ, ಜಾನುವಾರು ಜಾತ್ರೆ ಮತ್ತು ಜಾನುವಾರು ಸಾಗಾಣಿಕೆ ಮಾಡುವುದನ್ನು ನಿಷೇಧಿಸುವಂತೆ ಆದೇಶಿಸಲಾಗಿದೆ ಎಂದು ಜಿಲ್ಲಾಧಿಕಾರಿ ಆರ್.ಲತಾ ಅವರು ತಿಳಿಸಿದ್ದಾರೆ.

Ramesh Babu

Journalist

Recent Posts

“ಸರ್ಕಾರದ ಕೆಲಸ ದೇವರ ಕೆಲಸ ” ಎಂದು ಹೇಳುವವರು ದೇವರಿಗೂ ವಂಚಿಸುತ್ತಿದ್ದಾರೆ…

ರೆಕ್ಕೆ ಮುರಿದ ಹಕ್ಕಿಯೊಂದು, ಬಿಕ್ಕಿ ಬಿಕ್ಕಿ ಅಳುತಲಿದೆ........ ಕಾಲು ಮುರಿದ ನಾಯಿಯೊಂದು, ಕುಂಟಿ ಕುಂಟಿ ನಡೆಯುತಿದೆ..... ಆಡಳಿತ ವ್ಯವಸ್ಥೆಯ ಕಾರ್ಯವೈಖರಿಯನ್ನು…

3 hours ago

ಸರ್ಕಾರಿ ಶಾಲಾ ಮಕ್ಕಳಿಗೆ ಟ್ರ್ಯಾಕ್‌ಸೂಟ್, ಶೂ ವಿತರಣೆ

ದೊಡ್ಡಬಳ್ಳಾಪುರ: ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳಿಗೆ ಉತ್ತಮ ಶಿಕ್ಷಣದ ಜೊತೆಗೆ ಅಗತ್ಯ ಮೂಲಸೌಕರ್ಯ ಹಾಗೂ ಪ್ರೋತ್ಸಾಹ ದೊರೆಯುವಂತೆ ಸಮಾಜದ…

17 hours ago

ಕಸ ವಿಂಗಡಣೆ ಯಂತ್ರಕ್ಕೆ ಸಿಲುಕಿ ಮಹಿಳೆ ಸಾವು

ದೊಡ್ಡಬಳ್ಳಾಪುರ: ಕಸ ವಿಂಗಡಣೆ ಮಾಡುವ ಯಂತ್ರಕ್ಕೆ ಸಿಲುಕಿ ಮಹಿಳೆಯೊಬ್ಬರು ಮೃತಪಟ್ಟಿರುವ ದಾರುಣ ಘಟನೆ ತಾಲೂಕಿನ ಎಂಎಸ್‌ಜಿಪಿ ಕಸ ಸಂಸ್ಕರಣಾ ಘಟಕದಲ್ಲಿ…

22 hours ago

ಅಕ್ಟೋಬರ್ 2….. ಶಾಸ್ತ್ರಿ ಮತ್ತು ಗಾಂಧಿ……..,

ದೇಶದ ಪ್ರಧಾನಿಯೊಬ್ಬರು ಹೀಗೂ ಬದುಕಬಹುದು ಎಂದು ತೋರಿಸಿ ಮಾದರಿಯಾದ ವ್ಯಕ್ತಿ ಲಾಲ್ ಬಹದ್ದೂರ್ ಶಾಸ್ತ್ರಿ. ಅವರಿಗೆ ಹುಟ್ಟು ಹಬ್ಬದ ಶುಭಾಶಯಗಳು.......…

1 day ago

ಬೆಂಬಲ ಬೆಲೆಯಡಿ ಸೂರ್ಯಕಾಂತಿ, ಹೆಸರುಕಾಳು, ಸೋಯಾಬೀನ್‌ಗೆ ಖರೀದಿಗೆ ಕೇಂದ್ರದ ಅನುಮೋದನೆ

2026-27ನೇ ಸಾಲಿನ ಮುಂಗಾರು ಹಂಗಾಮಿನ ಬೆಂಬಲ ಬೆಲೆ ಯೋಜನೆಯಡಿ ಸೂರ್ಯಕಾಂತಿ, ಹೆಸರುಕಾಳು ಹಾಗೂ ಸೋಯಾಬೀನ್ ಉತ್ಪನ್ನಗಳನ್ನು ಕನಿಷ್ಠ ಬೆಂಬಲ ಬೆಲೆ…

2 days ago

ಸಿಎಂಗೆ ರೈತಪರ ಕಾಳಜಿ ಇಲ್ಲ ಶಾಸಕ ಧೀರಜ್ ಮುನಿರಾಜು ಆರೋಪ

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಬಡವರು ಹಾಗೂ ರೈತರ ಬಗ್ಗೆ ಕಾಳಜಿ ಇಲ್ಲ. ಹೂಡಿಕೆದಾರರು ಹಾಗೂ ಬಂಡವಾಳಶಾಹಿಗಳ ಹಿತಾಸಕ್ತಿಯ ಬಗ್ಗೆಯೇ…

2 days ago