ಜಿಲ್ಲೆಯಲ್ಲಿ ತೀವ್ರಗೊಂಡ ಬಿಸಿ ಗಾಳಿ ಮತ್ತು ಬಿಸಿಲು: ಬಿಸಿಲಿನ ತಾಪದಿಂದ ಪಾರಾಗಲು ಮುಂಜಾಗ್ರತಾ ಕ್ರಮ ಇಲ್ಲಿದೆ

ಹವಾಮಾನ ಇಲಾಖೆಯು ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಪ್ರಸ್ತುತ ದಿನಗಳಲ್ಲಿ ಉಷ್ಣಾಂಶವು ಗರಿಷ್ಠ ತಾಪಮಾನ 34 ಡಿಗ್ರಿ ಸೆಲ್ಸಿಯಸ್ ಗಿಂತ ಹೆಚ್ಚಾಗುವ ಬಗ್ಗೆ ವರದಿ ಮಾಡಿದ್ದು ಅತಿಯಾದ ಬಿಸಿಲು ಮತ್ತು ಬಿಸಿ ಗಾಳಿ ಉಂಟಾಗಬಹುದೆಂದು ಮುನ್ಸೂಚನೆ ನೀಡಿದ್ದು ಇದರಿಂದ ಜಿಲ್ಲೆಯ ಸಾರ್ವಜನಿಕರು ಬಿಸಿಲಿನ ಶಾಖದಿಂದ ತಪ್ಪಿಸಿಕೊಳ್ಳಲು ಈ ಕೆಳಕಂಡ ಕ್ರಮಗಳನ್ನು ಅನುಸರಿಸಬೇಕು ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಆರ್.ಲತಾ ಅವರು ತಿಳಿಸಿದ್ದಾರೆ.

ಬಿಸಿಲಿನ ಶಾಖದಿಂದ ತಪ್ಪಿಸಿಕೊಳ್ಳಲು ಏನು ಮಾಡಬೇಕು(Do’s)ಮತ್ತು ಏನು ಮಾಡಬಾರದು(Don’t)ಎಂಬ ವಿಷಯಗಳ ಕುರಿತು ಮುಂಜಾಗ್ರತ ಕ್ರಮ ವಹಿಸಬೇಕಾಗಿ ಕೋರಿದ್ದಾರೆ.

ಏನು ಮಾಡಬೇಕು(Do’s)?

1) ಸಾರ್ವಜನಿಕರು ರೇಡಿಯೋ ಟಿವಿ ದಿನಪತ್ರಿಕೆಗಳಲ್ಲಿ ಬರುವ ಅತಿಯಾದ ಬಿಸಿಲಿನ ಮುನ್ಸೂಚನೆಗಳನ್ನು ಪಡೆದುಕೊಳ್ಳುವುದು.

2) ಬಾಯಾರಿಕೆ ಇಲ್ಲದಿದ್ದರೂ ಸಾಕಷ್ಟು ಮತ್ತು ಸಾಧ್ಯವಾದಷ್ಟು ಹೆಚ್ಚಾಗಿ ನೀರನ್ನು ಕುಡಿಯುವುದು.

3)ಹಗುರವಾದ ತಿಳಿ ಬಣ್ಣದ ತಡಿಲವಾದ ಮತ್ತು ರಂಧ್ರವುಳ್ಳ ಹತ್ತಿ ಬಟ್ಟೆಗಳನ್ನು ಧರಿಸುವುದು.

4) ಹೊರಗೆ ಹೋಗುವಾಗ ರಕ್ಷಣಾತ್ಮಕ ಕನ್ನಡಕಗಳು, ಟೋಪಿ, ಬೂಟು ಅಥವಾ ಚಪ್ಪಲಿಗಳನ್ನು ಬಳಸುವುದು.

5) ಬಸ್ಸಿನಲ್ಲಿ ದೂರದ ಪ್ರಯಾಣವನ್ನು ರಾತ್ರಿ ವೇಳೆ ಮಾಡುವುದು ಒಂದು ವೇಳೆ ಪ್ರಯಾಣ ಮಾಡುವ ಸಂದರ್ಭ ಬಂದಲ್ಲಿ ಕುಡಿಯುವ ನೀರನ್ನು ತೆಗೆದುಕೊಂಡು ಹೋಗುವುದು.

6) ಹೊರಗಡೆ ಕೆಲಸ ಮಾಡುತ್ತಿದ್ದವರು ಟೋಪಿ ಅಥವಾ ಛತ್ರಿಯನ್ನು ಬಳಸುವುದು ಮತ್ತು ತಲೆ ಕುತ್ತಿಗೆ, ಮುಖ ಮತ್ತು ಕೈಕಾಲುಗಳ ಮೇಲೆ ಒದ್ದೆಯಾದ ಬಟ್ಟೆಯನ್ನು ಬಳಸುವುದು.

7) ಓ. ಆರ್. ಎಸ್ ಮನೆಯಲ್ಲಿ ತಯಾರಿಸಿದ ಲಸ್ಸಿ ಶರಬತ್, ನಿಂಬೆ ನೀರು, ಮಜ್ಜಿಗೆಗಳನ್ನು ಬಳಸುವುದು.

8) ಮನೆಯನ್ನು ತಂಪಾಗಿಸಿಕೊಳ್ಳುವುದು, ಒದ್ದೆಯಾದ ಬಟ್ಟೆಗಳನ್ನು ಬಳಸುವುದು ಮತ್ತು ಆಗಾಗ್ಗೆ ತಣ್ಣೀರಿನಲ್ಲಿ ಸ್ನಾನ ಮಾಡುವುದು ಹಾಗೂ ತಂಪಾದ ಸಮಯದಲ್ಲಿ ಕೆಲಸ ಮಾಡುವುದು.

9) ಕೆಲಸ ನಿರ್ವಹಿಸುವ ಗರ್ಭಿಣಿ ಮಹಿಳೆಯರು ಮತ್ತು ಅನಾರೋಗ್ಯದಲ್ಲಿರುವ ಕಾರ್ಮಿಕರ ಕಡೆಗೆ ಹೆಚ್ಚಿನ ಗಮನ ವಹಿಸುವುದು.

ಏನು ಮಾಡಬಾರದು(Don’ts)

1) ಮಕ್ಕಳು ಸಾಕುಪ್ರಾಣಿಗಳನ್ನು ಬಿಸಿಲಿನಲ್ಲಿ ನಿಲ್ಲಿಸಬಾರದು, ವಾಹನಗಳ ಹತ್ತಿರ ಬಿಡಬೇಡಿ. ವಿಶೇಷವಾಗಿ ಮಧ್ಯಾಹ್ನ 12 ಗಂಟೆಯಿಂದ ಮಧ್ಯಾಹ್ನ 3:00 ಗಂಟೆಯ ನಡುವೆ ಬಿಸಿಲಿಗೆ ಹೋಗುವುದು ತಪ್ಪಿಸಿ.

2) ಕಪ್ಪು ಬಟ್ಟೆ ಅಥವಾ ಬಿಗಿಯಾದ ಬಟ್ಟೆಗಳನ್ನು ಧರಿಸುವುದನ್ನು ತಪ್ಪಿಸಿ.

3) ಹೊರಗಿನ ತಾಪಮಾನ ಹೆಚ್ಚಾದಾಗ ಶ್ರಮದಾಯಕ ಚಟುವಟಿಕೆಗಳನ್ನು ತಪ್ಪಿಸಿ, ಮಧ್ಯಾಹ್ನ 12 ರಿಂದ ಮಧ್ಯಾಹ್ನ 3 ರವರೆಗೆ ಕೆಲಸ ಮಾಡುವುದನ್ನು ತಪ್ಪಿಸಿ.

4) ಅಡುಗೆ ಪ್ರದೇಶವನ್ನು ಸಮರ್ಪಕವಾಗಿ ಗಾಳಿಯಾಡಲು ಬಾಗಿಲು ಮತ್ತು ಕಿಟಕಿಗಳನ್ನು ತೆರೆಯುವುದು.

5) ದೇಹವನ್ನು ನಿರ್ಜಲೀಕರಣ ಗೊಳಿಸುವ ಆಲ್ಕೋಹಾಲ್, ಚಹಾ, ಕಾಫಿ ಮತ್ತು ಹಾನಿಕಾರಕ ತಂಪು ಪಾನೀಯ, ಆಹಾರ ಹಾಗೂ ಹಳಸಿದ ಆಹಾರವನ್ನು ಸೇವಿಸಬಾರದು ಎಂದು ತಿಳಿಸಿದ್ದಾರೆ.

Leave a Reply

Your email address will not be published. Required fields are marked *