ಜಿಲ್ಲೆಯಲ್ಲಿ ನಾಳೆಯಿಂದ ಫವತಿ ಖಾತೆ ವಿಶೇಷ ಆಂದೋಲನ: ರೈತರು ಸದುಪಯೋಗ ಪಡಿಸಿಕೊಳ್ಳಲು ಜಿಲ್ಲಾಧಿಕಾರಿ ಕರೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ, ದೇವನಹಳ್ಳಿ, ದೊಡ್ಡಬಳ್ಳಾಪುರ ಹಾಗೂ ನೆಲಮಂಗಲ ತಾಲ್ಲೂಕು ವ್ಯಾಪ್ತಿಯ ರೈತ ಬಾಂಧವರಿಗೆ ಈ ಮೂಲಕ ತಿಳಿಯಪಡಿಸುವುದೇನೆಂದರೆ, ಬೆಂಗಳೂರು ಗ್ರಾಮಾಂತರ ಜಿಲ್ಲೆ ವ್ಯಾಪ್ತಿಯಲ್ಲಿ ಸುಮಾರು 50-60 ವರ್ಷಗಳಿಂದಲೂ, ಹಿಡುವಳಿ ಜಮೀನುಗಳ ಖಾತೆದಾರರು ನಿಧನ ಹೊಂದಿದ್ದರೂ ಸಹ ವಾರಸುದಾರರಿಗೆ ಖಾತೆಯಾಗದೇ ಇರುವುದು ಜಿಲ್ಲಾಡಳಿತದ ಗಮನಕ್ಕೆ ಬಂದಿರುತ್ತದೆ.

ಈ ಬಗ್ಗೆ ವಿಶೇಷ ಆಂದೋಲನದ ರೀತಿಯಲ್ಲಿ ಬಾಕಿ ಇರುವ ಎಲ್ಲಾ ಫವತಿ ಖಾತೆ ಪ್ರಕರಣಗಳನ್ನು ವಿಲೇವಾರಿ ಮಾಡಲು ಜಿಲ್ಲಾಡಳಿತದಿಂದ ವಿನೂತನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.

ಜಿಲ್ಲೆಯ ಯಾವುದೇ ತಾಲ್ಲೂಕಿನಲ್ಲಿ ಫವತಿ ಖಾತೆಯಾಗದೆ ಇರುವ ಹಕ್ಕುದಾರರು ಸರ್ಕಾರದ ಯಾವುದೇ ಯೋಜನೆಗಳನ್ನು ರೈತರು ಪಡೆಯಲು ಸಾಧ್ಯವಾಗದೆ ಆರ್ಥಿಕ ನಷ್ಟವನ್ನು ಅನುಭವಿಸುತ್ತಿರುತ್ತಾರೆ. ಸರ್ಕಾರದ ಮಹತ್ವ ಯೋಜನೆಗಳಾದ ಪಿ.ಎಂ.ಕಿಸಾನ್ ಯೋಜನೆ, ಬರ, ಅತಿವೃಷ್ಟಿ ಪರಿಹಾರ ಹಾಗೂ ಇನ್ನುಳಿದ ಸರ್ಕಾರದ ಯಾವುದೇ ಯೋಜನೆಗಳ ಸವಲತ್ತುಗಳನ್ನು ಫವತಿ ಖಾತೆ ಬದಲಾವಣೆಯಾಗದೆ ಯಾವುದೇ ಪರಿಹಾರವನ್ನು ಪಡೆಯಲು ರೈತರಿಗೆ ಸಾಧ್ಯವಾಗುತ್ತಿರುವುದಿಲ್ಲ.

ಈ ಹಿನ್ನೆಲೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯಾದ್ಯಂತ ಪ್ರತಿ ನಾಡಕಚೇರಿ ವ್ಯಾಪ್ತಿಯ ಕೇಂದ್ರ ಸ್ಥಾನದಲ್ಲಿ ಫವತಿ ವಾರಸು ಖಾತೆ ಆಂದೋಲನ ಕಾರ್ಯಕ್ರಮವನ್ನು 2024 ರ ಜನವರಿ 05 ರಿಂದ ಫೆಬ್ರವರಿ 05 ರ ವರೆಗೆ ಹಮ್ಮಿಕೊಳ್ಳಲಾಗಿದೆ.

ಖಾತೆ ಬದಲಾವಣೆಗೆ ಅರ್ಜಿಯೊಂದಿಗೆ ಅರ್ಜಿದಾರರ ಆಧಾರ್ ಕಾರ್ಡ್ (ನೀಡಲು ಒಪ್ಪಿದಲ್ಲಿ), ಗಣಕೀಕೃತ ವಂಶವೃಕ್ಷ, ಮರಣ ಪ್ರಮಾಣ ಪತ್ರ, ಪ್ರಮಾಣ ಪತ್ರ ( affidavit) ಇನ್ನಿತರೆ ದಾಖಲಾತಿಗಳು (ಅಗತ್ಯವಿದ್ದಲ್ಲಿ) ಸಲ್ಲಿಸಬೇಕು.

ರೈತರು ದಾಖಲಾತಿಗಳೊಂದಿಗೆ ಸಂಬಂಧಿಸಿದ ತಹಶೀಲ್ದಾರ್, ಗ್ರೇಡ್-2 ತಹಶೀಲ್ದಾರ್, ಉಪತಹಶೀಲ್ದಾರ್, ರಾಜಸ್ವ ನಿರೀಕ್ಷಕರು ಅಥವಾ ಗ್ರಾಮ ಆಡಳಿತಾಧಿಕಾರಿಗಳನ್ನು ಸಂಪರ್ಕಿಸುವ ಮೂಲಕ  ಸದುಪಯೋಗ ಪಡೆದುಕೊಳ್ಳಲು ಜಿಲ್ಲಾಧಿಕಾರಿ ಡಾ.ಶಿವಶಂಕರ. ಎನ್ ಅವರು ಪ್ರಕಟಣೆಯಲ್ಲಿ ಕೋರಿದ್ದಾರೆ.

Ramesh Babu

Journalist

Recent Posts

ನಿರ್ಜನ ಪ್ರದೇಶದಲ್ಲಿ ದೊರೆತಿದ್ದ ನವಜಾತ ಶಿಶುವಿನ ಆರೋಗ್ಯ ಸ್ಥಿರ: ಜಿಲ್ಲಾ ಸರ್ಕಾರಿ ದತ್ತು ಕೇಂದ್ರಕ್ಕೆ ಹಸ್ತಾಂತರ

ತಾಲ್ಲೂಕಿನ ಹಾಡೋನಹಳ್ಳಿ ಗ್ರಾಮದ ನಿರ್ಜನ ಪ್ರದೇಶದಲ್ಲಿ ಒಂದು ವಾರದ ಹಿಂದೆ ದೊರೆತ ಐದು ದಿನಗಳ ನವಜಾತ ಶಿಶುವಿನ ಜೀವ ಉಳಿಸುವಲ್ಲಿ…

30 minutes ago

ಕೆ.ಸಿ.ವ್ಯಾಲಿಯಿಂದ ಜಿಲ್ಲೆಯ ರೈತರ ಬದುಕು ಹಸನು- ಕಾಂಗ್ರೆಸ್‌ ಮುಖಂಡ ಜನಪಹಳ್ಳಿ ನವೀನ್‌

ಕೋಲಾರ: ಕೆ.ಸಿ.ವ್ಯಾಲಿ ಯೋಜನೆಯಿಂದ ಅಂತರ್ಜಲ ಹೆಚ್ಚಿ ರೈತರ ಬದುಕು ಹಸನಾಗಿದ್ದು, ಜೆಡಿಎಸ್‌ ಪಕ್ಷ ಸೇರಿದಂತೆ ಕೆಲ ಮುಖಂಡರಿಂದ ದಾರಿ ತಪ್ಪಿಸುವ…

12 hours ago

ಸಾಲುಮರದ ತಿಮ್ಮಕ್ಕ ಅವರಿಗೆ ನುಡಿನಮನ

ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕನ್ನಡ ಜಾಗೃತ ಪರಿಷತ್ತು  ವತಿಯಿಂದ ಪದ್ಮಶ್ರೀ ಸಾಲುಮರದ ತಿಮ್ಮಕ್ಕ ಅವರಿಗೆ ನುಡಿನಮನ…

12 hours ago

ಆಲಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯ ಸಹ ಶಿಕ್ಷಕ ಅರುಣ್ ಅವರು ವರ್ಗಾವಣೆ: ಮಕ್ಕಳು, ಶಿಕ್ಷಕ ಭಾವುಕ

ಆಲಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯ ಸಹ ಶಿಕ್ಷಕ ಅರುಣ್ ಅವರು ವರ್ಗಾವಣೆಗೊಂಡಿದ್ದು, ಈ ಹಿನ್ನೆಲೆ ಇಂದು ಎಸ್…

14 hours ago

ಬಿಜೆಪಿ-ಜೆಡಿಎಸ್ ಸಂಸದರು ರಾಜ್ಯಕ್ಕೆ ಕೇಂದ್ರದಿಂದ ಆಗುತ್ತಿರುವ ಅನ್ಯಾಯದ ಬಗ್ಗೆ ಬಾಯಿಯನ್ನೇ ಬಿಡುತ್ತಿಲ್ಲ- ಸಿಎಂ ಸಿದ್ದರಾಮಯ್ಯ

ಬಿಜೆಪಿ-ಜೆಡಿಎಸ್ ಸಂಸದರು ರಾಜ್ಯಕ್ಕೆ ಕೇಂದ್ರದಿಂದ ಆಗುತ್ತಿರುವ ಅನ್ಯಾಯದ ಬಗ್ಗೆ ಬಾಯಿಯನ್ನೇ ಬಿಡುತ್ತಿಲ್ಲ.‌ ಪ್ರಹ್ಲಾದ್ ಜೋಶಿ ಕೂಡ ಒಂದೇ ಒಂದು ದಿನ…

23 hours ago

ಚುನಾವಣಾ ಫಲಿತಾಂಶದ ವಿಶ್ಲೇಷಣೆ…..

ಗೆದ್ದವರಿಗೆ ಅಭಿನಂದಿಸುತ್ತಾ, ಸೋತವರಿಗೆ ಸಾಂತ್ವನ ಹೇಳುತ್ತಾ, ಮತದಾರರಿಗೆ ಧನ್ಯವಾದಗಳನ್ನು ಅರ್ಪಿಸುತ್ತಾ, ಸಂವಿಧಾನಕ್ಕೆ ಸಲಾಂ ಹೊಡೆಯುತ್ತಾ, ನಮ್ಮ ಮುಗ್ದತೆ ಮತ್ತು ಮೂರ್ಖತನ…

1 day ago