ಜಿಲ್ಲೆಯಲ್ಲಿ ಪ್ರಸಕ್ತ ಸಾಲಿನಲ್ಲಿ ರಸ್ತೆ ಅಪಘಾತದಿಂದ 297 ಜನ ಸಾವು – 38 ಬ್ಲಾಕ್ ಸ್ಪಾಟ್ ಗುರುತು- ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಕೆ. ಬಾಬಾ

ಜಿಲ್ಲೆಯಲ್ಲಿ ದಿನೇ ದಿನೇ ರಸ್ತೆ ಅಪಘಾತಗಳು ಹೆಚ್ಚುತ್ತಲೇ ಇವೆ, ರಾಷ್ಟ್ರೀಯ ಹೆದ್ದಾರಿಗಳಲ್ಲಿ ಹೆಚ್ಚು ಅಪಘಾತಗಳು ಸಂಭವಿಸುತ್ತಿದ್ದು, ಹೆದ್ದಾರಿಗಳಲ್ಲಿ ಅಪಘಾತಗಳನ್ನು ತಡೆಗಟ್ಟಲು ಕ್ರಮಬದ್ಧ ಯೋಜನೆ ರೂಪಿಸಿ ಕಾರ್ಯರೂಪಕ್ಕೆ ತನ್ನಿ ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಎ.ಬಿ ಬಸವರಾಜು ಅವರು ಹೇಳಿದರು.

ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ರಸ್ತೆ ಸುರಕ್ಷತೆ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ನಗರಕ್ಕೆ ಹೊಂದಿಕೊಂಡಿರುವ ಜಿಲ್ಲೆಯಾದ್ದರಿಂದ ವಾಹನ ಸಂಚಾರ ದಟ್ಟಣೆ ಹೆಚ್ಚಿರುತ್ತದೆ. ನೆಲಮಂಗಲ ಬಳಿ ಹಾದು ಹೋಗಿರುವ ರಾಷ್ಟ್ರೀಯ ಹೆದ್ದಾರಿಯಲ್ಲಿ ಹೆಚ್ಚು ಅಪಘಾತಗಳಾಗುತ್ತಿವೆ. ರಾಷ್ಟ್ರೀಯ ಹೆದ್ದಾರಿಗಳಲ್ಲಿ ಸಾರ್ವಜನಿಕ ಸಂಚಾರ ಹೆಚ್ಚಿರುವ, ಶಾಲಾ ಕಾಲೇಜು, ಅಪಘಾತ ವಲಯಗಳಲ್ಲಿ ಶೀಘ್ರ ಸ್ಕೈ ವಾಕ್ ನಿರ್ಮಿಸಲು ಅಧಿಕಾರಿಗಳಿಗೆ ಸೂಚಿಸಿದರು.

ನೆಲಮಂಗಲ ಸರ್ಕಲ್ ನಲ್ಲಿ ವಾಹನ ಸಂಚಾರ ದಟ್ಟಣೆಯಿಂದ ಟ್ರಾಫಿಕ್ ಜಾಮ್ ಉಂಟಾಗುತ್ತಿದ್ದು ಕುಣಿಗಲ್ ಗೆ ಹೋಗುವ ಕಡೆ ರಸ್ತೆ ಅಗಲೀಕರಣ ಮಾಡಿದರೆ ವಾಹನ ಸಂಚಾರ ಸುಗಮವಾಗುತ್ತದೆ ಎಂದರು.

ರಾಷ್ಟ್ರೀಯ ಹೆದ್ದಾರಿಗಳಲ್ಲಿ ಸೈನ್ ಬೋರ್ಡ್ಗಳನ್ನು ಅಳವಡಿಸಬೇಕು, ರಸ್ತೆಗಳಲ್ಲಿ ಅಮ್ಸ್ ಗಳನ್ನು ಹಾಕಬೇಕು, ಸರ್ವಿಸ್ ರಸ್ತೆಗಳಲ್ಲಿ ಅತಿಕ್ರಮಣವಾಗಿ ಹಾಕಿರುವ ಅಂಗಡಿಗಳು, ವಾಹನ ಪಾರ್ಕಿಂಗ್ ತೆರವುಗೊಳಿಸಲು ಸೂಚಿಸಿದರು.

ಜಿಲ್ಲೆಯಲ್ಲಿ ಅನಧಿಕೃತವಾಗಿ ಎಲ್ಲೆಂದರಲ್ಲಿ ಹಾಕಿರುವ ಜಾಹಿರಾತು ಫಲಕಗಳನ್ನು ತೆರವುಗೊಳಿಸಿ, ಯಾರ ಒತ್ತಡಕ್ಕೂ ಮಣಿಯಬೇಡಿ. ತೆರವುಗೊಳಿಸುವ ಸಂದರ್ಭದಲ್ಲಿ ಪೊಲೀಸ್ ಇಲಾಖೆಯ ರಕ್ಷಣೆ ಪಡೆಯಿರಿ. ಯಾವುದಾದರು ಬೆದರಿಕೆ ಕರೆಗಳು ಬಂದಲ್ಲಿ ದೂರು ನೀಡಿ ಎಂದರು.

ರಾಷ್ಟ್ರೀಯ ಹೆದ್ದಾರಿಗಳಲ್ಲಿ ಎಲ್ಲೆಂದರಲ್ಲಿ ಪ್ಲಾಸ್ಟಿಕ್, ಕಸದ ತ್ಯಾಜ್ಯ, ಹಳೇ ಕಟ್ಟಡಗಳ ತ್ಯಾಜ್ಯ ಸುರಿಯುತ್ತಿದ್ದು ಅಂತಹವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಿ ಎಂದರು.

*ರಸ್ತೆ ಅಪಘಾತದಿಂದ 297 ಸಾವು, ಹೆಚ್ಚು ಅಪಘಾತಗಳು ಸಂಭವಿಸುವ 38 ಬ್ಲಾಕ್ ಸ್ಪಾಟ್ ಗುರುತು-ಎಸ್ಪಿ*

ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಕೆ. ಬಾಬಾ ಅವರು ಮಾತನಾಡಿ ಜಿಲ್ಲೆಯಲ್ಲಿ ಪ್ರಸಕ್ತ ಸಾಲಿನಲ್ಲಿ ರಸ್ತೆ ಅಪಘಾತಗಳಿಂದ 297 ಜನ ಸಾವನ್ನಪ್ಪಿದ್ದಾರೆ. ಹೆಚ್ಚು ಅಪಘಾತಗಳು ಸಂಭವಿಸುವ 38 ಅಪಾಯಕಾರಿ ಸ್ಥಳ(ಬ್ಲಾಕ್ ಸ್ಪಾಟ್)ಗಳನ್ನು ಗುರುತಿಸಲಾಗಿದ್ದು ಅದರಲ್ಲಿ 35 ರಾಷ್ಟ್ರೀಯ ಹೆದ್ದಾರಿ ಅಪಾಯಕಾರಿ ಸ್ಥಳಗಳಾದರೆ, 3 ರಾಜ್ಯ ಹೆದ್ದಾರಿಗಳಾಗಿವೆ.

ಬೆಂಗಳೂರು-ಹಾಸನ ರಾಷ್ಟ್ರೀಯ ಹೆದ್ದಾರಿಯ ನೆಲಮಂಗಲ ತಾಲ್ಲೂಕಿನ ಕುಲುವನಹಳ್ಳಿ ಪ್ರತಿನಿತ್ಯ ಅಪಘಾತಗಳು ಸಂಭವಿಸುತ್ತವೆ. ರಸ್ತೆಯಲ್ಲಿ ಶಾಲೆ ಒಂದು ಬದಿ ಆದರೆ ಊರು ಮತ್ತೊಂದು ಬದಿ , ದಿನನಿತ್ಯ ರಸ್ತೆ ದಾಟುವಾಗ ವಾಹಾನಗಳ ವೇಗದ ಚಾಲನೆ ಯಿಂದ ಅಫಘಾತಗಳು ಸಂಭವಿಸುತ್ತಿವೆ. ಹಾಗಾಗಿ ನಾವೆಲ್ಲ ಅಧಿಕಾರಿಗಳ ತಂಡ ಸ್ಥಳಕ್ಕೆ ಭೇಟಿ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳಬೇಕಿದೆ.

ಟೋಲ್ ಗಳಲ್ಲಿ ವಿಐಪಿಗಳಿಗೆ ಹಾಗೂ ಅಂಬುಲೆನ್ಸ್ ಓಡಾಟಕ್ಕೆ ಮೀಸಲಿರುವ ಲೈನ್ ಗಳಲ್ಲಿ ಯಾವುದೇ ಕಾರಣಕ್ಕೂ ಸಾರ್ವಜನಿಕರ ವಾಹನಗಳಿಗೆ ಪ್ರವೇಶ ಕಲ್ಪಿಸಬೇಡಿ ಎಂದು ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳಿಗೆ ಸೂಚಿಸಿದರು.

ಸಭೆಯಲ್ಲಿ ಪಿಡಬ್ಲ್ಯೂಡಿ ನ ಎಕ್ಸಿಕ್ಯುಟಿವ್ ಇಂಜಿನಿಯರ್ ಚಂದ್ರಶೇಖರ್, ಪ್ರೋಫೆಸರ್ ಅರ್ಚನ, ತಾಲೂಕು ಟ್ರಾಫಿಕ್ ಇನ್ಸ್ಪೆಕ್ಟರ್, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಉಪಸ್ಥಿತರಿದ್ದರು.

Ramesh Babu

Journalist

Recent Posts

ಏ.12ರಂದು ದೊಡ್ಡಬಳ್ಳಾಪುರ ನಗರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ ನಗರದಲ್ಲಿ ಏ.12 ರಂದು 220/66/11ಕೆವಿ ಕೆಐಎಡಿಬಿ ಉಪ ವಿದ್ಯುತ್ ಕೇಂದ್ರದಿಂದ ಹೊರವೊಮ್ಮುವ F02-Birla Super ಫೀಡರ್‌ನಲ್ಲಿ ವಿದ್ಯುತ್ ಕಾಮಗಾರಿಗಳು…

6 hours ago

ಪಿಯುಸಿ ರಿಸಲ್ಟ್ ದಿನವೇ ವಿದ್ಯಾರ್ಥಿನಿ ಘೋರ ಸಾವು

ಪಿಯುಸಿ ರಿಸಲ್ಟ್ ದಿನವೇ ವಿದ್ಯಾರ್ಥಿನಿ ಘೋರವಾಗಿ ಸಾವನ್ನಪ್ಪಿರುವ ಘಟನೆ ಹೆಬ್ಬಾಳ ಪೊಲೀಸ್ ಠಾಣಾ ವ್ಯಾಪ್ತಿಯ ಮನೋರಾಯನಪಾಳ್ಯದಲ್ಲಿ ನಡೆದಿದೆ.. 17 ವರ್ಷದ…

11 hours ago

ಲೋಕಾಯುಕ್ತ ಬಲೆಗೆ ಬಿದ್ದ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ

ರಾಯಚೂರು ಸಿರವಾರ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಸುರೇಶ್ ಶೆಟ್ಟಿ ಲೋಕಾಯುಕ್ತರ ಬಲೆಗೆ ಬಿದ್ದ ಮುಖ್ಯಾಧಿಕಾರಿ. ರಾಘವೇಂದ್ರ…

11 hours ago

ಹುಚ್ಚನೊಬ್ಬನ ಕನಸು….

ದೇಶದ ಎಲ್ಲಾ ದಲಿತ ಕೇರಿಗಳನ್ನು ನಾಶ ಮಾಡಬೇಕು. ಅಲ್ಲಿನ ಎಲ್ಲರಿಗೂ ಊರ ಒಳಗಿನ ಸ್ಥಳದಲ್ಲಿ ವಾಸಕ್ಕೆ ಅವಕಾಶ ಕಲ್ಪಿಸಬೇಕು. ಬ್ರಾಹ್ಮಣರ…

16 hours ago

PUC Result: ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿದ ದಿಶಾಳ ಸಾಧನೆಯ ಹಿಂದೆ ಎದೆ ನಡುಗಿಸುವ ಕಣ್ಣೀರಿನ ಕಥೆಯಿದೆ….ಈ ಕಥೆ ಕೇಳಿದರೆ ಎಂಥವರ ಕಣ್ಣಲ್ಲೂ ನೀರು ಬರುವುದು ಗ್ಯಾರಂಟಿ

600ಕ್ಕೆ 600 ಅಂಕ ತೆಗೆದು ರಾಜ್ಯಕ್ಕೆ ಟಾಪರ್ ಆದ ದಿಶಾಳ ಸಾಧನೆಯ ಹಿಂದೆ ಎದೆ ನಡುಗಿಸುವ ಕಣ್ಣೀರಿನ ಕಥೆಯಿದೆ. ಮೂರು…

1 day ago

ತೂಬಗೆರೆ ಸರ್ಕಾರಿ ಪಿಯು ಕಾಲೇಜಿಗೆ ಮತ್ತೊಮ್ಮೆ ಮೆರುಗು: ಶೇ.95.45 ಫಲಿತಾಂಶ

ದೊಡ್ಡಬಳ್ಳಾಪುರ (ತೂಬಗೆರೆ): ಗ್ರಾಮಾಂತರ ಭಾಗದಲ್ಲಿದ್ದರೂ ಶೈಕ್ಷಣಿಕ ಕ್ಷೇತ್ರದಲ್ಲಿ ತನ್ನದೇ ಆದ ಛಾಪು ಮೂಡಿಸಿರುವ ತೂಬಗೆರೆ ಸರ್ಕಾರಿ ಪದವಿ ಪೂರ್ವ ಕಾಲೇಜು…

1 day ago