ನೋಂದಾಯಿತ ರೈತರಿಂದ ರಾಗಿ ಖರೀದಿ ಪ್ರಕ್ರಿಯೆಗೆ ಮಾರ್ಚ್ 01ರಿಂದ ವಿದ್ಯುಕ್ತವಾಗಿ ಚಾಲನೆ ನೀಡಲಾಗಿದ್ದು, ಮಾರ್ಚ್ 03 ರಿಂದ ಜಿಲ್ಲೆಯ ಎಲ್ಲಾ ತಾಲ್ಲೂಕು ಖರೀದಿ ಕೇಂದ್ರಗಳಲ್ಲಿ ರಾಗಿ ಖರೀದಿ ಪ್ರಕ್ರಿಯೆಯನ್ನು ಪ್ರಾರಂಭಿಸಲಾಗುತ್ತಿದ್ದು, ನೋಂದಾಯಿತ ರೈತರು ಸಂಬಂಧಪಟ್ಟ ತಾಲ್ಲೂಕುಗಳ ಖರೀದಿ ಕೇಂದ್ರಗಳಿಗೆ ರಾಗಿಯನ್ನು ನಿಯಮಾನುಸಾರ ನೀಡಬಹುದಾಗಿರುತ್ತದೆ ಎಂದು ಜಿಲ್ಲಾಧಿಕಾರಿ ಎ.ಬಿ ಬಸವರಾಜು ಅವರು ತಿಳಿಸಿದ್ದಾರೆ.
2024-25 ನೇ ಸಾಲಿನಲ್ಲಿ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರಾಗಿ ಖರೀದಿ ಮಾಡಲು ಬೆಂಗಳೂರು ಗ್ರಾಮಾಂತರ ಜಿಲ್ಲೆಯ 4 ತಾಲ್ಲೂಕುಗಳಲ್ಲಿ ರಾಗಿ ಖರೀದಿ ಕೇಂದ್ರಗಳನ್ನು ತೆರೆದು, ರಾಗಿ ಬೆಳೆದಿರುವ ರೈತರಿಂದ ನಿಯಮಾನುಸಾರ ಅಗತ್ಯ ದಾಖಲೆಗಳನ್ನು ಪಡೆದು ನೋಂದಾಯಿಸಿಕೊಳ್ಳಲಾಗಿದೆ.
ರಾಗಿ ಖರೀದಿ ಪ್ರಕ್ರಿಯೆಗೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿಗಾಗಿ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಖರೀದಿ ಏಜೆನ್ಸಿಯಾದ ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮ ನಿಯಮಿತದ ಖರೀದಿ ಅಧಿಕಾರಿಗಳಾದ ನೆಲಮಂಗಲ ತಾಲ್ಲೂಕು ಖರೀದಿ ಅಧಿಕಾರಿ ವೈ.ಎಸ್ ನಾರಾಯಣಮೂರ್ತಿ (9482991630),
ದೊಡ್ಡಬಳ್ಳಾಪುರ ತಾಲ್ಲೂಕು ಖರೀದಿ ಅಧಿಕಾರಿ ಹೆಚ್.ಎನ್ ನಾರಾಯಣ್(9886141435),
ದೇವನಹಳ್ಳಿ ತಾಲ್ಲೂಕು ಖರೀದಿ ಅಧಿಕಾರಿ ಎಂ.ಅಚ್ಯೂತ್(9900136687),
ಹೊಸಕೋಟೆ ತಾಲ್ಲೂಕು ಖರೀದಿ ಅಧಿಕಾರಿ ಲಕ್ಷ್ಮೀ ನಾರಾಯಣ (9880700975) ಇವರನ್ನು ಸಂಪರ್ಗಿಸಬಹುದಾಗಿದೆ ಎಂದು ತಿಳಿಸಿದ್ದಾರೆ.
ಕನ್ನಡ ರಾಜ್ಯೋತ್ಸವ ಅಂಗವಾಗಿ ದೊಡ್ಡಬಳ್ಳಾಪುರದ ಹೀಲಿನ್ ಆಸ್ಪತ್ರೆ ವತಿಯಿಂದ ಉಚಿತ ಆರೋಗ್ಯ ತಪಸಣಾ ಶಿಬಿರವನ್ನು ಆಸ್ಪತ್ರೆಯಲ್ಲೇ ಆಯೋಜನೆ ಮಾಡಲಾಗಿತ್ತು. ಸಾರ್ವಜನಿಕರಿಗೆ…
ಕೇಂದ್ರ ಸಚಿವಾಲಯ ನೀಡುವ ಅತ್ಯುತ್ತಮ ಪೊಲೀಸ್ ಠಾಣಾ ಪ್ರಶಸ್ತಿಗೆ ಕರ್ನಾಟಕದ ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನ ಕವಿತಾಳ ಪೊಲೀಸ್ ಠಾಣೆ…
ನಮ್ಮ ದೇಶದ ಸರ್ವೋಚ್ಚ ನ್ಯಾಯಾಲಯವು, ನಾಯಿ ಕಡಿತಕ್ಕೆ ಚಿಕಿತ್ಸೆ ನೀಡುವ ಬಗ್ಗೆ ಸರ್ಕಾರಿ- ಖಾಸಗಿ ಆಸ್ಪತ್ರೆಗಳು ಅನುಸರಿಸಬೇಕಾದ ಕ್ರಮಗಳಿಗೆ ಸಂಬಂಧಿಸಿದಂತೆ…
ಜಗತ್ತಿನಲ್ಲಿ ಅತ್ಯಂತ ವೇಗವಾಗಿ ಚಲಿಸುವುದು ಮನಸ್ಸು. ಕ್ಷಣ ಮಾತ್ರದಲ್ಲಿ ಲೆಕ್ಕಕ್ಕೂ ಸಿಗದಷ್ಟು ದೂರ ಚಲಿಸಬಲ್ಲದು. ಬೆಳಕಿನ ವೇಗವೂ ಅದಕ್ಕೆ ಸಾಟಿಯಲ್ಲ.....…
ತಾಲ್ಲೂಕಿನ ಹಾಡೋನಹಳ್ಳಿ ಗ್ರಾಮದ ನಿರ್ಜನ ಪ್ರದೇಶದಲ್ಲಿ ಒಂದು ವಾರದ ಹಿಂದೆ ದೊರೆತ ಐದು ದಿನಗಳ ನವಜಾತ ಶಿಶುವಿನ ಜೀವ ಉಳಿಸುವಲ್ಲಿ…
ಕೋಲಾರ: ಕೆ.ಸಿ.ವ್ಯಾಲಿ ಯೋಜನೆಯಿಂದ ಅಂತರ್ಜಲ ಹೆಚ್ಚಿ ರೈತರ ಬದುಕು ಹಸನಾಗಿದ್ದು, ಜೆಡಿಎಸ್ ಪಕ್ಷ ಸೇರಿದಂತೆ ಕೆಲ ಮುಖಂಡರಿಂದ ದಾರಿ ತಪ್ಪಿಸುವ…