ಕರ್ನಾಟಕ ರಾಜ್ಯ ವಿಧಾನಸಭಾ ಸಾರ್ವತ್ರಿಕ ಚುನಾವಣೆಗೆ ಎಪ್ರಿಲ್ 13 ರಿಂದ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಶುರುವಾಗಿದ್ದು, ಇಂದು ಮೊದಲನೇ ದಿನ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನಾಲ್ಕು ವಿಧಾನಸಭಾ ಕ್ಷೇತ್ರಗಳಿಂದ ಒಟ್ಟು 07 ನಾಮಪತ್ರಗಳು ಸಲ್ಲಿಕೆಯಾಗಿವೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಆರ್ ಲತಾ ಅವರು ಮಾಹಿತಿ ನೀಡಿದ್ದಾರೆ.
ಹೊಸಕೋಟೆ ವಿಧಾನಸಭಾ ಕ್ಷೇತ್ರದಿಂದ ಒಟ್ಟು 05 ನಾಮಪತ್ರಗಳು ಸಲ್ಲಿಕೆಯಾಗಿವೆ. ಐಎನ್ ಸಿ-1,. ಇತರೆ-1, ಪಕ್ಷೇತರರು-3.
ದೇವನಹಳ್ಳಿ ವಿಧಾನಸಭಾ ಕ್ಷೇತ್ರದಿಂದ ಇತರೆ- 01
ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದಿಂದ ಇತರೆ-01
ನೆಲಮಂಗಲ ವಿಧಾನಸಭಾ ಕ್ಷೇತ್ರದಿಂದ ಶೂನ್ಯ ನಾಮಪತ್ರ ಸಲ್ಲಿಕೆಯಾಗಿವೆ ಎಂದು ಅವರು ಮಾಹಿತಿ ನೀಡಿದ್ದಾರೆ.