ಜಿಲ್ಲೆಯಲ್ಲಿ 10.165 ಮೆಟ್ರಿಕ್ ಟನ್ ರಸಗೊಬ್ಬರ ಲಭ್ಯ ಇದ್ದು, ಬೇಡಿಕೆಗಿಂತ ಹೆಚ್ಚಿನ ರಸಗೊಬ್ಬರ ದಾಸ್ತಾನು ಇದೆ ಹಾಗಾಗಿ ರಸಗೊಬ್ಬರ ಕೊರತೆ ಉಂಟಾಗಿಲ್ಲ ಎಂದು ಜಿಲ್ಲಾಧಿಕಾರಿ ಎ.ಬಿ ಬಸವರಾಜು ಅವರು ತಿಳಿಸಿದ್ದಾರೆ.
ಹೊಸಕೋಟೆ ಟೌನ್ ನಲ್ಲಿರುವ ಕೃಷಿ ಪತ್ತಿನ ಸಹಕಾರ ಸಂಘ ನಿಯಮಿತ ಕೇಂದ್ರಕ್ಕೆ ಎಸ್ಪಿ ಸಿ.ಕೆ ಬಾಬಾ ಅವರೊಂದಿಗೆ ಭೇಟಿ ನೀಡಿ ಜಂಟಿ ತಪಾಸಣೆ ನಡೆಸಿದರು.
ನಂತರ ಮಾತನಾಡಿದ ಅವರು ಆಗಸ್ಟ್ ಮಾಹೆಯಲ್ಲಿ ನಮಗೆ 5559 ಮೆಟ್ರಿಕ್ ಟನ್ ರಸಗೊಬ್ಬರ ಅವಶ್ಯಕತೆ ಇದ್ದು, 10,165 ಮೆಟ್ರಿಕ್ ಟನ್ ರಸಗೊಬ್ಬರ ಲಭ್ಯವಿದೆ. ಅದರಲ್ಲಿ 1716.68 ಮೆ.ಟನ್ ಯೂರಿಯಾ, 1834.7 ಮೆ.ಟನ್ ಡಿಎಪಿ, 756.5 ಮೆ.ಟನ್ ಎಂಒಪಿ, 5358.4 ಮೆ.ಟನ್ ಎನ್ಪಿಕೆಎಸ್(ಕಾಂಪ್ಲೆಕ್ಸ್), 498.9 ಮೆ.ಟನ್ ಎಸ್.ಎಸ್.ಪಿ ರಸಗೊಬ್ಬರ ದಾಸ್ತಾನು ಇದೆ ಎಂದು ಹೇಳಿದರು.
ರೈತರು ಆತಂಕ ಪಡುವ ಅಗತ್ಯವಿಲ್ಲ. ಕೃಷಿ ಚಟುವಟಿಕೆಗಳಿಗೆ ಅನುಗುಣವಾಗಿ ಬೇಡಿಕೆಗಿಂತ ಹೆಚ್ಚು ರಸಗೊಬ್ಬರ ಲಭ್ಯವಿದ್ದು ಯಾವುದೇ ಊಹಾಪೋಹಗಳಿಗೆ ಕಿವಿಗೊಡಬೇಡಿ ಎಂದರು. ಹಾಗೇಯೇ ರಸಗೊಬ್ಬರಗಳನ್ನು ಕಾಳಸಂತೆಯಲ್ಲಿ ಯಾರಾದರೂ ಮಾರಟ ಮಾಡುವುದು ಕಂಡುಬಂದಲ್ಲಿ ನಮ್ಮ ಕೃಷಿ ಅಧಿಕಾರಿಗಳಿಗೆ ಮಾಹಿತಿ ನೀಡಿದರೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದರು.
ಈ ಸಂದರ್ಭದಲ್ಲಿ ಹೊಸಕೋಟೆ ತಹಶೀಲ್ದಾರ್ ಸೋಮಶೇಖರ್, ಸಹಾಯಕ ಕೃಷಿ ನಿರ್ದೇಶಕರಾದ ಚಂದ್ರಪ್ಪ, ಕೃಷಿ ಅಧಿಕಾರಿ ರಾಮಾಂಜಿನಯ್ಯ, ಇತರೆ ಅಧಿಕಾರಿಗಳು ಇದ್ದರು.
ಡಾಕ್ಟರ್ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಹುಟ್ಟು ಹಬ್ಬದ ಮುನ್ನ ( ಏಪ್ರಿಲ್ 14 ) ಅವರ ವ್ಯಕ್ತಿತ್ವ ಮತ್ತು…
In der heutigen akademischen Welt steht die Qualität der schriftlichen Arbeiten im Mittelpunkt des Interesses.…
'ಆಸರೆ' ಯೋಜನೆ ಅಂಗವಾಗಿ ಇಂದು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ದುರ್ಗೇನಹಳ್ಳಿ ಐಯಮ್ಮನಹಳ್ಳಿ ಹಾಗೂ ಇತರೆ ಗ್ರಾಮಗಳಿಗೆ ಪೊಲೀಸ್…
ಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ನಾವು ಮಾಡುತ್ತಿದ್ದೀವಾ ಎಂದು ಪತ್ರಕರ್ತರು ತಮ್ಮನ್ನು ತಾವು ಪ್ರಶ್ನಿಸಿಕೊಳ್ಳಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ..…
ದೊಡ್ಡಬಳ್ಳಾಪುರದ ಕಾಡತಿಪ್ಪೂರು ಗ್ರಾಮದಲ್ಲಿ ಸುಮಾರು 1300 ಜನಸಂಖ್ಯೆ ಇದ್ದು, 280 ಕುಟುಂಬಗಳು ವಾಸವಿದ್ದಾರೆ. ಅದರಲ್ಲಿ ಎಸ್ಸಿ ಮತ್ತು ಎಸ್ಟಿ ಜನಾಂಗದವರೇ…
ಸೆಲೂನ್ ನಲ್ಲಿ ಯುವಕನ ಮೇಲೆ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯತಿಯಲ್ಲಿ ಕೆಲಸ ಮಾಡುವ ಸಿಬ್ಬಂದಿ, ಬಿಜೆಪಿ ಕಾರ್ಯಕರ್ತ ಹಾಗೂ ಸಹಚರರು ಹಲ್ಲೆ…