ಹಾಲು ಉತ್ಪಾದಕರಿಗೆ ಪ್ರೋತ್ಸಾಹ ಧನ ಜೊತೆಗೆ ಸರ್ಕಾರದಿಂದ ಸಿಗುವ ಎಲ್ಲಾ ಸೌಲಭ್ಯಗಳನ್ನು ಒದಗಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು. ಹಾಲು ಉತ್ಪಾದಕರು ಹಾಲಿನ ಗುಣಮಟ್ಟವನ್ನು ಕಾಪಾಡಿಕೊಳ್ಳುವ ಮೂಲಕ ಹಾಲು ಉತ್ಪಾದನೆಯಲ್ಲಿ ಜಿಲ್ಲೆಯ ಹೆಸರು ಮುಂಚೂಣಿಯಲ್ಲಿ ಇರಬೇಕು ಎಂದು
ಮಾನ್ಯ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಎಚ್ ಮುನಿಯಪ್ಪ ಅವರು ಹೇಳಿದರು.
ದೇವನಹಳ್ಳಿ ಟೌನ್ ನಲ್ಲಿ ಬೆಂಗಳೂರು ಹಾಲು ಒಕ್ಕೂಟದ ದೇವನಹಳ್ಳಿ ಶಿಬಿರ ಕಚೇರಿಯ ಪೂಜಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಹಾಲು ಉತ್ಪಾದನೆಯಲ್ಲಿ ಜಿಲ್ಲೆಯು ಮುಂಚೂಣಿಯಲ್ಲಿದೆ. ಇದನ್ನು ಹಾಗೇ ಕಾಪಾಡಿಕೊಂಡು ಹೋಗಬೇಕು. ಹೈನುಗಾರಿಕೆ ಪ್ರೋತ್ಸಾಹಿಸಲು ವಿವಿಧ ಯೋಜನೆಗಳನ್ನು ಸರ್ಕಾರ ಜಾರಿಗೆ ತಂದಿದ್ದು. ರೈತರ ಅಭಿವೃದ್ಧಿಗೆ ಸರ್ಕಾರ ಬದ್ಧವಾಗಿದೆ ಎಂದರು.
ಜಿಲ್ಲೆಯಲ್ಲಿ ರೇಷ್ಮೆ ಬೆಳೆ ಬೆಳೆಯುತ್ತಿರುವವರ ಸಂಖ್ಯೆ ಕಡಿಮೆ ಇದೆ. ರೇಷ್ಮೆ ಬೆಳೆ ಬೆಳೆಯಲು ಸರ್ಕಾರ ಎಲ್ಲಾ ಸವಲತ್ತನ್ನು ರೈತರಿಗೆ ನೀಡುವುದರ ಜೊತೆಗೆ ರಾಜ್ಯದ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸುತ್ತಿದೆ. ಜಿಲ್ಲೆಯ ಅಭಿವೃದ್ಧಿಗೂ ಗಮನಹರಿಸುವಂತೆ ಸರ್ಕಾರಕ್ಕೆ ಮನವಿ ಮಾಡಿದ್ದೇನೆ. ಮೇ ತಿಂಗಳಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗಿದ್ದು ಮುಂದಿನ ದಿನಗಳಲ್ಲಿ ಮಳೆ ಹೆಚ್ಚಾಗಿ ಬರುವ ಸಾಧ್ಯತೆ ಇದೆ ಹಾಗಾಗಿ ಮುನ್ನೆಚ್ಚರಿಕೆ ಕ್ರಮವನ್ನು ವಹಿಸಿಕೊಳ್ಳಬೇಕು ಎಂದರು.
ಕಾರ್ಯಕ್ರಮದಲ್ಲಿ ಬೆಂಗಳೂರು ಹಾಲು ಒಕ್ಕೂಟ ನಿರ್ದೇಶಕ ಸ್ಥಾನಕ್ಕೆ ದೇವನಹಳ್ಳಿ ತಾಲ್ಲೂಕಿನಿಂದ ನೂತನವಾಗಿ ಆಯ್ಕೆಯಾದ ಎಸ್.ಪಿ.ಮುನಿರಾಜು ಅವರು ಮಾತನಾಡಿ ಹಾಲು ಉತ್ಪಾದಕರಿಗೆ ಸರ್ಕಾರದಿಂದ ಬರುವ ಎಲ್ಲಾ ಸೌಲಭ್ಯವನ್ನು ಪ್ರಾಮಾಣಿಕವಾಗಿ ದೊರಕಿಸಿಕೊಡುವ ಭರವಸೆ ನೀಡುತ್ತೇನೆ. ಹಾಲು ಉತ್ಪಾದಕರಿಗೂ ಅನ್ಯಾಯವಾಗದಂತೆ ನೋಡಿಕೊಳ್ಳುತ್ತೇನೆ, ಹಾಲು ಉತ್ಪಾದನೆ ಹೆಚ್ಚಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದರು.
ಕಾರ್ಯಕ್ರಮದಲ್ಲಿ ಬೆಂಗಳೂರು ಹಾಲು ಒಕ್ಕೂಟ ಹಾಲಿ ಉಪಧ್ಯಾಕ್ಷರಾದ ಮಂಜಣ್ಣ, ಜಿಲ್ಲಾ ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರಾದ ರಾಜಣ್ಣ, ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಯೋಜನಾ ಪ್ರಾಧಿಕಾರದ ಅಧ್ಯಕ್ಷರಾದ ಶಾಂತಕುಮಾರ್, ನಿರ್ದೇಶಕರಾದ ಪ್ರಸನ್ನ ಕುಮಾರ್, ಸದಸ್ಯರಾದ ಮಂಜಣ್ಣ, ದೇವನಹಳ್ಳಿ ತಾಲೂಕು ಮುನಿಸಿಪಾಲ್ ಅಧ್ಯಕ್ಷರಾದ ಮುನಿಕೃಷ್ಣಪ್ಪ, ಸ್ಥಳೀಯ ಜನಪ್ರತಿನಿಧಿಗಳು, ಮುಖಂಡರು ಉಪಸ್ಥಿತರಿದ್ದರು.
ನಾಳೆ (ಜು.29) ರಂದು ದೊಡ್ಡಬಳ್ಳಾಪುರ ತಾಲೂಕಿನ ಪವಿತ್ರ ಹಾಗೂ ಪುಣ್ಯ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ನಾಗರ ಪಂಚಮಿ ಹಬ್ಬವನ್ನು…
ಭಾರತೀಯರು ಹಬ್ಬ-ಹರಿದಿನಗಳ ಪ್ರಿಯರು ಒಂದೋದು ಹಬ್ಬಕ್ಕೆ ತನ್ನದೇಯಾದ ವೈಶಿಷ್ಟತೆಯನ್ನು ನೀಡುತ್ತಾ, ಭಕ್ತಿ-ಭಾವದಿಂದ ನೂರಾರು ತಲೆಮಾರುಗಳಿಂದ ಆಚರಿಸಿಕೊಂಡು ಬರುತ್ತಿದ್ದಾರೆ. ಅದರಲ್ಲಿ ಉತ್ತರ…
ಕೋಲಾರ: ಗ್ರಾಮ ಪಂಚಾಯಿತಿ ನೌಕರರಿಗೆ ಕನಿಷ್ಠ ವೇತನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿ ಸಿಐಟಿಯು ನೇತೃತ್ವದ ಗ್ರಾಮ…
ಜೂನ್ 4 ರಂದು ಐಪಿಎಲ್ ಟ್ರೋಫಿ ಗೆದ್ದ ಆರ್ಸಿಬಿ ತಂಡವನ್ನು ಅಭಿನಂದಿಸಲು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದ ವೇಳೆ ಕಾಲ್ತುಳಿತ…
ಭಟ್ಕಳದ ಹೆಬಳೆ ತೆಂಗಿನಗುಂಡಿಯಲ್ಲಿರುವ ಶ್ರೀ ಬ್ರಹ್ಮಲಿಂಗೇಶ್ವರ ನಾಗದೇವತಾ ಪ್ರಸನ್ನ ದೇವಸ್ಥಾನದಲ್ಲಿ ಭಾನುವಾರ ಹಾಡುಹಗಲೇ ನಡೆದ ಕಳ್ಳತನ ಪ್ರಕರಣದ ಆರೋಪಿಯನ್ನು ಭಟ್ಕಳ…
ಸುಪ್ರಭಾತ.......... ಭಾರತೀಯ ಸಮಾಜ ಎಂಬುದು ಮಧ್ಯಮ ವರ್ಗದ ಸಂತೆ ಇದ್ದಂತೆ. ಇಲ್ಲಿ ಬಹುತೇಕ ಮಧ್ಯಮ ವರ್ಗದವರೇ ಅತಿ ಹೆಚ್ಚು ಮಧ್ಯಮ…