ಕುಷ್ಠರೋಗ ನಿರ್ಮೂಲನಾ ಕಾರ್ಯಕ್ರಮದಡಿ ಕುಷ್ಠರೋಗ ಪತ್ತೆ ಹಚ್ಚುವ ಅಭಿಯಾನವನ್ನು ನವೆಂಬರ್ 03 ರಿಂದ 11 ವರೆಗೆ ಜಿಲ್ಲೆಯಾದ್ಯಂತ ಹಮ್ಮಿಕೊಳ್ಳಲಾಗಿದ್ದು, ಅಭಿಯಾನ ಯಶಸ್ವಿಗೊಳಿಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ಅಪರ ಜಿಲ್ಲಾಧಿಕಾರಿ ಸೈಯಿದಾ ಆಯಿಷಾ ಅವರು ಸೂಚಿಸಿದರು.
ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿ ಸಭಾಂಗಣದಲ್ಲಿ ನಡೆದ 2025-26 ನೇ ಸಾಲಿನ ಕುಷ್ಠ ರೋಗ ಪತ್ತೆ ಹಚ್ಚುವ ಅಭಿಯಾನದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದರು,
ಸಭೆಯಲ್ಲಿ ಅವರು ಮಾತನಾಡಿ, ಮನುಷ್ಯನ ಆರೋಗ್ಯಕ್ಕೆ ಸಂಬಂಧಿಸಿದಂತೆ ಕುಷ್ಠರೋಗವು ಒಂದು ಬಾಧಿತ ರೋಗವಾಗಿದ್ದು, ಕುಷ್ಠರೋಗ ಮುಕ್ತ ಸಮಾಜ ನಿರ್ಮಿಸಲು ಅಧಿಕಾರಿಗಳು ನಿರಂತರ ಕಾರ್ಯ ಪ್ರವೃತ್ತರಾಗಿರಬೇಕು ಎಂದು ಜಿಲ್ಲಾ ಆರೋಗ್ಯಾಧಿಕಾರಿಗಳಿಗೆ ಹೇಳಿದರು.
ಆರೋಗ್ಯ ಇಲಾಖೆ ಜೊತೆಗೆ ಮಹಿಳಾ ಮಕ್ಕಳ ಕಲ್ಯಾಣ ಇಲಾಖೆ, ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು, ಸ್ವಯಂ ಸೇವಾ ಸಂಸ್ಥೆಗಳು ಸಾರ್ವಜನಿಕರಿಗೆ ಅರಿವು ಮೂಡಿಸಿ. ಎಲ್ಲಾ ಇಲಾಖೆಗಳ ಸಹಕಾರ ಮತ್ತು ಸಮನ್ವಯತೆಯಿಂದ ಕುಷ್ಠರೋಗ ನಿರ್ಮೂಲನೆ ಮಾಡಲು ಸಾಧ್ಯವಾಗುತ್ತದೆ ಎಂದರು.
*ಜಿಲ್ಲೆಯಲ್ಲಿ 20 ಸಕ್ರಿಯ ಪ್ರಕರಣಗಳು*
ಕುಷ್ಠರೋಗ ಹೊಂದಿರುವ ಮತ್ತು ಕುಷ್ಠರೋಗದಿಂದ ಅಂಗವಿಕಲತೆಗೆ ಬಾಧಿತರಾದವರು ಸೇರಿದಂತೆ ಒಟ್ಟು 20 ಸಕ್ರಿಯ ಪ್ರಕರಣಗಳು ದಾಖಲಾಗಿವೆ.
ಕುಷ್ಠರೋಗವು ಮೈಕೊಬ್ಯಾಕ್ಟಿರಿಯಂ ಲೆಪ್ರೆ ಎಂಬ ರೋಗಾಣುವಿನಿಂದ ಉಂಟಾಗುವ ಸಾಂಕ್ರಾಮಿಕ ರೋಗವಾಗಿದ್ದು, ಇದು ಮುಂದೆ ನರಗಳ ಹಾಗೂ ಚರ್ಮದ ಮೇಲೆ ಪರಿಣಾಮ ಬೀರುತ್ತದೆ. ಆರಂಭದಲ್ಲಿ ಚರ್ಮದ ಮೇಲೆ ಮಚ್ಚೆಗಳು ಉಲ್ಬಣವಾಗುವುದು, ಚರ್ಮದ ಬಣ್ಣ ತಿಳಿ ಬಿಳಿ ಅಥವಾ ತಾಮ್ರ ಬಣ್ಣಕ್ಕೆ ತಿರುಗುವುದು ಇತ್ಯಾದಿ.
ಸಭೆಯಲ್ಲಿ ಜಿಲ್ಲಾ ಆರೋಗ್ಯಾಧಿಕಾರಿ ಲಕ್ಕಾ ಕೃಷ್ಣಾರೆಡ್ಡಿ, ಜಿಲ್ಲಾ ಕುಷ್ಠರೋಗ ಅಧಿಕಾರಿ ಡಾ.ನಾಗರಾಜು ಎಂ.ಜಿ, ಜಿಲ್ಲಾ ಸಾಂಕ್ರಾಮಿಕ ರೋಗಶಾಸ್ತ್ರಜ್ಞರು ಡಾ. ಶಾಲಿನಿ, ಕ್ಷೇತ್ರ ಶಿಕ್ಷಣಾಧಿಕಾರಿ ಜಿ ಗೋವಿಂದ್ ರಾಜು, ನಾಲ್ಕು ತಾಲ್ಲೂಕಿನ ಹಿರಿಯ ನಿರೀಕ್ಷಣ ಅಧಿಕಾರಿಗಳು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.
ದೊಡ್ಡಬಳ್ಳಾಪುರ: ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ನಡೆದ ತಾಲ್ಲೂಕು ಮಟ್ಟದ ಯುವ ಸಂಸತ್ತು ಅಣಕು ಸ್ಪರ್ಧೆಯಲ್ಲಿ ಶ್ರೀ ಕೊಂಗಾಡಿಯಪ್ಪ ಕಾನೂನು…
ದೊಡ್ಡಬಳ್ಳಾಪುರ: ತಾಲೂಕಿನ ನಾಗದೇನಹಳ್ಳಿ ಸಮೀಪದ ಗೀತಂ ವಿಶ್ವವಿದ್ಯಾಲಯದ ಕ್ಯಾಂಪಸ್ನಲ್ಲಿ ತಡರಾತ್ರಿ ವಿದ್ಯಾರ್ಥಿನಿಯೊಬ್ಬಳು ಹಾಸ್ಟೆಲ್ ಕಟ್ಟಡದ ಆರನೇ ಮಹಡಿಯಿಂದ ಬಿದ್ದು ಮೃತಪಟ್ಟಿರುವ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮುಂಗಾರು ಮಳೆಯ ಏರುಪೇರಿನಿಂದ ಮಳೆಯಾಶ್ರಿತ ಕೃಷಿ ಸಂಕಷ್ಟಕ್ಕೆ ಸಿಲುಕಿದ್ದು, ಜಿಲ್ಲೆಯ ಪ್ರಮುಖ ಆಹಾರ ಬೆಳೆಯಾದ ರಾಗಿಯನ್ನು…
ಪೆನ್ ಡ್ರೈವ್....... ನಾಚಿಕೆಯಿಂದ ತಲೆತಗ್ಗಿಸಿ ನಾನೂ ಈ ವಿಷಯವನ್ನೇ ಕುರಿತು ಬರೆಯುವ ಅನಿವಾರ್ಯ ಸೃಷ್ಟಿಯಾಗಿರುವುದಕ್ಕೆ ವಿಷಾದ ವ್ಯಕ್ತಪಡಿಸುತ್ತಾ...... ಬರಗಾಲ -…
"ಕುಮಾರಸ್ವಾಮಿ ಯಾರು? Who is kumaraswmay. ಡಿ.ಕೆ. ಶಿವಕುಮಾರ್ ಸಿಎಂ ಆಗಿರುವುದನ್ನು ಒಪ್ಪದಿರುವುದಕ್ಕೆ ಅವರು ಯಾರು? ಅವರಿಗೂ ಇದಕ್ಕೂ ಏನು…
ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ಕರ್ನಾಟಕ ವಿಧಾನ ಪರಿಷತ್ತಿಗೆ ದ್ವೈವಾರ್ಷಿಕ ಚುನಾವಣೆ-2026ರ ಸಂಬಂಧ ಅಕ್ಟೋಬರ್ 23 ರಂದು ಮತದಾನ ನಡೆಯಲಿರುವ ಹಿನ್ನೆಲೆಯಲ್ಲಿ…