ಮನುಷ್ಯನ ಆರೋಗ್ಯಕ್ಕೆ ಸಂಬಂಧಿಸಿದಂತೆ ಕುಷ್ಠರೋಗವು ಒಂದು ಬಾಧಿತ ರೋಗವಾಗಿದ್ದು, ಕುಷ್ಠರೋಗ ಮುಕ್ತ ಸಮಾಜ ನಿರ್ಮಿಸಲು ಅಧಿಕಾರಿಗಳು ನಿರಂತರ ಕಾರ್ಯ ಪ್ರವೃತ್ತರಾಗಿರಬೇಕು ಎಂದು ಕೇಂದ್ರ ಮಾನವ ಹಕ್ಕುಗಳ ಆಯೋಗದ ಅಧಿಕಾರಿ ಡಾ.ಪ್ರದೀಪ್ತಾ ಕುಮಾರ ನಾಯಕ್ ಅವರು ಹೇಳಿದರು.
ಜಿಲ್ಲಾಡಳಿತ ಭವನದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಕುಷ್ಠರೋಗ ಪ್ರಕರಣಗಳ ಸಮೀಕ್ಷೆ ಹಾಗೂ ಸರ್ಕಾರದ ಸೌಲಭ್ಯಗಳ ಬಗೆಗಿನ ಪರಿಶೀಲನಾ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡಿದರು.
ರೋಗದ ಆರಂಭಿಕ ಲಕ್ಷಣಗಳ ಪತ್ತೆಯಿಂದ ಕುಷ್ಠರೋಗವನ್ನು ನಿಯಂತ್ರಿಸಬಹುದು. ರೋಗದ ಲಕ್ಷಣಗಳು ಕಂಡುಬಂದ ತಕ್ಷಣವೇ ಅದನ್ನು ಪತ್ತೆ ಹಚ್ಚಿ, ಸಾರ್ವಜನಿಕರಿಗೆ ಜಾಗೃತಿ ಮೂಡಿಸುವುದರ ಜೊತೆಗೆ, ಪ್ರಾಥಮಿಕ ಹಂತದಲ್ಲಿಯೇ ವೈದ್ಯಕೀಯ ಸೇವೆಗಳನ್ನು ನೀಡುವುದರಿಂದ ಹರಡುವಿಕೆಯನ್ನು ತಡೆಯಲು ಸಹಾಯ ಮಾಡುತ್ತದೆ.
ಆರೋಗ್ಯ ಇಲಾಖೆ ಜೊತೆಗೆ ಮಹಿಳಾ ಮಕ್ಕಳ ಕಲ್ಯಾಣ ಇಲಾಖೆ, ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು, ಸ್ವಯಂ ಸೇವಾ ಸಂಸ್ಥೆಗಳು ಸಾರ್ವಜನಿಕರಿಗೆ ಅರಿವು ಮೂಡಿಸಿ. ಎಲ್ಲಾ ಇಲಾಖೆಗಳ ಸಹಕಾರ ಮತ್ತು ಸಮನ್ವಯತೆ ಇಂದ ಕುಷ್ಠರೋಗ ನಿರ್ಮೂಲನೆ ಮಾಡಲು ಸಾಧ್ಯವಾಗುತ್ತದೆ ಎಂದರು.
*ಜಿಲ್ಲೆಯಲ್ಲಿ 202 ಸಕ್ರಿಯ ಪ್ರಕರಣಗಳು*
ಕುಷ್ಠರೋಗ ಹೊಂದಿರುವ ಮತ್ತು ಕುಷ್ಠರೋಗದಿಂದ ಅಂಗವಿಕಲತೆಗೆ ಬಾಧಿತರಾದ ಐವರು ಮಕ್ಕಳು ಸೇರಿದಂತೆ ಒಟ್ಟು 202 ಸಕ್ರಿಯ ಪ್ರಕರಣಗಳು ದಾಖಲಾಗಿವೆ. ಈ ರೋಗದಿಂದ ಬಳಲುವವರಿಗೆ ಇಲಾಖೆಯಿಂದ ದೃಢೀಕರಣ ಪತ್ರಗಳನ್ನು ನೀಡಿ ಸರ್ಕಾರದಿಂದ ಸಿಗುವ ಎಲ್ಲಾ ಯೋಜನೆಗಳನ್ನು ಅವರಿಗೆ ಪೂರೈಸುವಂತೆ ಮಾಡಬೇಕು.
ಸಂಬಂಧಪಟ್ಟ ಇಲಾಖೆಗಳು ಸರ್ಕಾರದಿಂದ ಸಿಗುವ ಆರೋಗ್ಯ ಸೇವೆ, ಪಿಂಚಣಿ ಸೌಲಭ್ಯ, ಮನೆ ಸೌಲಭ್ಯ, ರೇಷನ್, ಶಿಕ್ಷಣ ಹಾಗೂ ಇತರೆ ಸವಲತ್ತುಗಳು ಎಲ್ಲಾ ಸಂತ್ರಸ್ತರಿಗೆ ಸಿಗಬೇಕು. ಸಮಾಜದ ಮುನ್ನೆಲೆಗೆ ಅವರನ್ನು ತಂದು ಸಾಮಾನತೆಯಿಂದ ಕಾಣುವುದು ಮಾನವವೀಯತೆ ಗುಣ. ಆ ನಿಟ್ಟಿನಲ್ಲಿ ಅಧಿಕಾರಿಗಳು ಗಮನ ಹರಿಸಿ ಎಂದರು.
ಸಭೆಯಲ್ಲಿ ಜಿಲ್ಲಾಧಿಕಾರಿ ಎ.ಬಿ ಬಸವರಾಜು, ಸಿಇಒ ಡಾ.ಕೆ.ಎನ್ ಅನುರಾಧ, ರಾಷ್ಟ್ರೀಯ ಕುಷ್ಠರೋಗ ನಿರ್ಮೂಲನ ಅಧಿಕಾರಿ ಡಾ. ಉಮಾ ಎಂ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ನಿರ್ದೇಶನಾಲಯ, ಜಿಲ್ಲಾ ಆರೋಗ್ಯಾಧಿಕಾರಿ ಲಕ್ಕಾ ಕೃಷ್ಣ ರೆಡ್ಡಿ, ಜಿಲ್ಲಾ ಕುಷ್ಠರೋಗ ನಿರ್ಮೂಲನಾ ಅಧಿಕಾರಿ ಡಾ.ನಾಗರಾಜ್ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು, ಆರೋಗ್ಯ ಅಧಿಕಾರಿಗಳು ಉಪಸ್ಥಿತರಿದ್ದರು.
ದೆಹಲಿಯಲ್ಲಿ ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ರಾಜ್ಯಕ್ಕೆ ಸಂಬಂಧಿಸಿದಂತೆ ಬಹುದಿನಗಳಿಂದ ಬಾಕಿಯಿರುವ ಬೇಡಿಕೆಗಳನ್ನು ಈಡೇರಿಸುವಂತೆ ಮನವಿ ಪತ್ರವನ್ನು…
ದೂಡ್ಡಬಳ್ಳಾಪುರದ ಮೀನಾಕ್ಷಿ ಸಮೇತ ಸ್ವಯಂ ಭುವನೇಶ್ವರ ಸ್ವಾಮಿಯವರ ದೇವಾಲಯದಲ್ಲಿ ಕಡೇ ಕಾರ್ತೀಕ ಸೋಮವಾರ ಪ್ರಯುಕ್ತ ಈ ದಿನ ಬೆಳಿಗ್ಗೆ ಗಣಪತಿ…
ದೊಡ್ಡಬಳ್ಳಾಪುರ: ನಾಳೆ (ನ.18) ನಗರದ ಹೊರವಲಯದಲ್ಲಿರುವ 66/11ಕಿವಿ ಡಿ.ಕ್ರಾಸ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ಕಾರ್ಯವನ್ನು ಹಮ್ಮಿಕೊಳ್ಳಲಾಗಿರುವುದರಿಂದ ತಾಲೂಕಿನ ಹಲವೆಡೆ ವಿದ್ಯುತ್…
18 ದೇವಸ್ಥಾನಗಳಲ್ಲಿ ಕಳ್ಳತನ ಮಾಡಿದ್ದ ಮೂವರು ಆರೋಪಿಗಳನ್ನು ಬಂಗಾರಪೇಟೆ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ ರೂ.1,50,000/-ಮೌಲ್ಯದ ಬಂಗಾರದ ತಾಳಿ ಬೊಟ್ಟುಗಳು,…
ದೊಡ್ಡಬಳ್ಳಾಪುರ: ಮುಂದೆ ಸಾಗುತ್ತಿದ್ದ ಲಾರಿ ಚಾಲಕನ ನಿರ್ಲಕ್ಷ್ಯದಿಂದ ಹಿಂಬದಿಯಲ್ಲಿ ಬರುತ್ತಿದ್ದ ಕಾರು ಭೀಕರ ಅಪಘಾತಕ್ಕೆ ಒಳಗಾಗಿ ಎಂಬಿಎ ವಿದ್ಯಾರ್ಥಿ ಸಾವನಪ್ಪಿರುವ…
ತನ್ನ ಪಾಡಿಗೆ ತಾನು ಮೊಬೈಲ್ ನೋಡುತ್ತಾ ಕುಳಿತಿದ್ದ ಯುವಕನಿಗೆ ಚಾಕು ಇರಿದಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ, ದೇವನಹಳ್ಳಿ ತಾಲ್ಲೂಕಿನ…