Categories: ಕೋಲಾರ

ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಸಿಪಿಐಎಂ ಪಕ್ಷದಿಂದ 31 ನಿರ್ಣಯಗಳು- ಪಿ.ಆರ್ ಸೂರ್ಯನಾರಾಯಣ

ಕೋಲಾರ: ಜಿಲ್ಲೆಯ ಶ್ರೀನಿವಾಸಪುರದಲ್ಲಿ ನಡೆದ ಸಿಪಿಐಎಂ ಪಕ್ಷದ 18 ನೇ ಜಿಲ್ಲಾ ಸಮ್ಮೇಳನದಲ್ಲಿ ಜಿಲ್ಲೆಯ ಅಭಿವೃದ್ಧಿಗೆ ಸಂಬಂಧಿಸಿದ ಸಮಸ್ಯೆಗಳ ಬಗ್ಗೆ ಚರ್ಚಿಸಿ 31 ನಿರ್ಣಯ ಅಂಗೀಕಾರ ಮಾಡಲಾಗಿದೆ. ಈ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು, ಸರ್ಕಾರಗಳ ಕಣ್ಣು ತೆರೆಸಲು ಹಾಗೂ ಜಿಲ್ಲೆಯ ಅಭಿವೃದ್ಧಿ ದೃಷ್ಟಿಯಿಂದ ಮುಂದಿನ ಮೂರು ವರ್ಷಗಳಲ್ಲಿ ಹಂತ ಹಂತವಾಗಿ ಹೋರಾಟ ನಡೆಸುತ್ತೇವೆ ಎಂದು ಸಿಪಿಐಎಂ ಪಕ್ಷದ ನೂತನ ಜಿಲ್ಲಾ ಕಾರ್ಯದರ್ಶಿ ಪಿ.ಆರ್‌.ಸೂರ್ಯನಾರಾಯಣ ತಿಳಿಸಿದರು.

ನಗರದ ಪತ್ರಕರ್ತರ ಭವನದಲ್ಲಿ ಬುಧವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ಕೃಷಿ ಪ್ರಧಾನ ಜಿಲ್ಲೆಯಾಗಿದ್ದು ಕೈಗಾರಿಕೆಗಳ ಪ್ರದೇಶವಾಗಿದೆ ಮತ್ತಷ್ಟು ಕೈಗಾರಿಕೆ ಸ್ಥಾಪಿಸಲು ಭೂಸ್ವಾಧೀನಕ್ಕೆ ಮುಂದಾಗಿದ್ದಾರೆ. ಭೂಕಾಯ್ದೆ ಮಾರಕವಾಗಿದ್ದು ರೈತರು ಭೂಮಿ ಕಳೆದುಕೊಳ್ಳುವ ಆತಂಕದಲ್ಲಿದ್ದಾರೆ. ನಾವು ಕೈಗಾರಿಕೆ ವಿರೋಧಿ ಅಲ್ಲ ಆದರೆ, ಶ್ರೀನಿವಾಸಪುರದಲ್ಲಿ ಮಾವು ಬೆಳೆಯುತ್ತಿರುವ ಫಲವತ್ತಾದ ಕೃಷಿ ಭೂಮಿಯನ್ನೇ ಕಸಿದುಕೊಳ್ಳಲು ಸರ್ಕಾರ ಮುಂದಾಗಿದೆ ಬೇಕಾದರೆ ಸರ್ಕಾರಿ ಜಾಗದಲ್ಲೂ ದೂರದ ಪ್ರದೇಶದಲ್ಲೂ ಕೈಗಾರಿಕೆ ಮಾಡಿಕೊಳ್ಳಲಿ ಎಂದರು.

ರೈತರು ಸಾಗುವಳಿ ಮಾಡುತ್ತಿದ್ದರೂ ಆ ಜಮೀನನನ್ನು ಅರಣ್ಯ ಇಲಾಖೆ ತನ್ನದು ಎಂದು ವಶಕ್ಕೆ ಪಡೆಯುತ್ತಿದೆ‌. ರೈತರಿಗೆ ಬೆದರಿಕೆ ಹಾಕಿ ಬಲವಂತದಿಂದ ಹೊರಹಾಕಲಾಗುತ್ತಿದೆ ಈ ಬಗ್ಗೆ ದೊಡ್ಡ ಹೋರಾಟ ನಡೆಸುತ್ತೇವೆ ಜಿಲ್ಲೆಯಲ್ಲಿ ಕುಡಿಯಲು ಹಾಗೂ ಕೃಷಿಗೆ ಶಾಶ್ವತವಾದ ನೀರಾವರಿ ವ್ಯವಸ್ಥೆ ಇಲ್ಲ. ಆ ವ್ಯವಸ್ಥೆ ಮಾಡಬೇಕು. ಮೂರನೇ ಹಂತದ ಶುದ್ಧೀಕರಣ ಮಾಡಿ ಕೆ.ಸಿ.ವ್ಯಾಲಿ ನೀರು ಹರಿಸಬೇಕು ಎಂದು ಹೇಳಿದರು.

ಹೈನುಗಾರಿಕೆ, ರೇಷ್ಮೆ, ಕೃಷಿ ಹಾಗೂ ತೋಟಗಾರಿಕೆ ವಿಚಾರದಲ್ಲಿ ಜಿಲ್ಲೆ ಮುಂಚೂಣಿಯಲ್ಲಿದೆ. ಹೀಗಾಗಿ, ಕೃಷಿಯಾಧಾರಿತ ಕೈಗಾರಿಕೆಗಳು ಬರಬೇಕು ಬೆಳೆಗಳಿಗೆ ಸ್ವಾಮಿನಾಥನ್‌ ಆಯೋಗದ ವರದಿಯಂತೆ ಬೆಲೆ ನಿಗದಿಪಡಿಸಬೇಕು ಜಿಲ್ಲೆಯಲ್ಲಿರುವ ಕೈಗಾರಿಕೆಗಳಲ್ಲಿ ಸಾಮಾಜಿಕ ಭದ್ರತೆ ಇಲ್ಲವಾಗಿದೆ ಜೊತೆಗೆ ಸ್ಥಳೀಯರಿಗೆ ಕಾಯಂ ಉದ್ಯೋಗ ನೀಡಲು ಗಮನ ಹರಿಸಬೇಕು. ಕಾರ್ಮಿಕ ಕಾನೂನುಗಳನ್ನು ಸಮರ್ಪಕವಾಗಿ ಜಾರಿಗೊಳಿಸಬೇಕು ಎಂದರು.

ಪತ್ರಿಕಾಗೋಷ್ಠಿಯಲ್ಲಿ ಪಕ್ಷದ ಜಿಲ್ಲಾ ಕಾರ್ಯದರ್ಶಿ ಮಂಡಳಿ ಸದಸ್ಯ ಗಾಂಧಿನಗರ ನಾರಾಯಣಸ್ವಾಮಿ ಮಾತನಾಡಿ ಮುಂದಿನ ಮೂರು ವರ್ಷಗಳಲ್ಲಿ ವಿವಿಧ ಹಂತಗಳಲ್ಲಿ ಸಮಸ್ಯೆಗಳಿಗೆ ಅನುಸಾರ ಹೋರಾಟ ರೂಪಿಸುತ್ತೇವೆ‌. ರಾಜ್ಯ ಸರ್ಕಾರವು ಬಿಪಿಎಲ್‌ ಕಾರ್ಡ್‌ ಕಿತ್ತುಕೊಳ್ಳುತ್ತಿದೆ. ಈ ಕೆಲಸವನ್ನು ಕೂಡಲೇ ಕೈಬಿಡಬೇಕು. ಹಾಗೆಯೇ ಜಿಲ್ಲೆಯಲ್ಲಿ ಕೈಗಾರಿಕೆಗಳಲ್ಲಿ ಶೋಷಣೆ ನಡೆಯುತ್ತಿದ್ದು ಸರ್ಕಾರ ಮಧ್ಯ ‌ಪ್ರವೇಶಿಸಬೇಕು ಕೇಂದ್ರ ಮಟ್ಟದಲ್ಲಿ ಇಂಡಿಯಾ ಒಕ್ಕೂಟಕ್ಕೆ ಸಿಪಿಎಂ ರಾಜಕೀಯವಾಗಿ ಬೆಂಬಲ ನೀಡುತ್ತಿದೆ. ಕೋಮುವಾದಿ ಬಿಜೆಪಿ ದೂರ ಇಡಲು ಚುನಾವಣೆಗಳಲ್ಲಿ ಕಾಂಗ್ರೆಸ್‌ ಬೆಂಬಲಿಸಲಾಗುತ್ತಿದೆ. ಇದು ಚುನಾವಣೆಗೆ ಸೀಮಿತವಾಗಿದ್ದು, ರೈತರಿಗೆ, ಬಡವರಿಗೆ, ಕಾರ್ಮಿಕರಿಗೆ ತೊಂದರೆಯಾದರೆ ಹೋರಾಟ ಮುಂದುವರಿಯುತ್ತದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಜಿಲ್ಲಾ ಕಾರ್ಯದರ್ಶಿ ಮಂಡಳಿ ಸದಸ್ಯೆ ವಿ.ಗೀತಾ ಮಾತನಾಡಿ ಜಿಲ್ಲೆಯಲ್ಲಿ ಶಾಲಾ ಕಾಲೇಜುಗಳಲ್ಲಿ ಮೂಲಸೌಕರ್ಯ ಕಲ್ಪಿಸಬೇಕು. ಸ್ಥಳೀಯರಿಗೆ ಉದ್ಯೋಗ ನೀಡಲು ಆದ್ಯತೆ ನೀಡಬೇಕು. ಮಹಿಳೆಯರಿಗೆ ಮೀಸಲಾತಿ ಕೊಡಬೇಕು. ಡಿಸಿಸಿ ಬ್ಯಾಂಕ್ ಗೆ ಚುನಾವಣೆ ನಡೆಸಿ ಬ್ಯಾಂಕ್ ಉಳಿಸಬೇಕು. ಬ್ಯಾಂಕ್‌ ಸಾಲ ನೀಡುವಂತಾಗಬೇಕು. ಆದರೆ, ‌ಡಿಸಿಸಿ ಬ್ಯಾಂಕ್ ನಿಷ್ಕ್ರಿಯಗೊಂಡಿದ್ದು, ಈ ಬಗ್ಗೆಯೂ ನಾವು ಹೋರಾಟ ನಡೆಸುತ್ತೇವೆ ಕಾಂಗ್ರೆಸ್‌, ಬಿಜೆಪಿ ಹಾಗೂ ಜೆಡಿಎಸ್‌ ಸೇರಿ ಮೂರೂ ಪಕ್ಷಗಳು ಜಿಲ್ಲೆಯ ಅಭಿವೃದ್ಧಿಗೆ ಒತ್ತು ನೀಡುತ್ತಿಲ್ಲ.‌ ಕಾಂಗ್ರೆಸ್‌ನ ನಾಲ್ವರು ಶಾಸಕರಿದ್ದು, ಚುನಾವಣೆ ಪ್ರಚಾರದ ವೇಳೆಯಲ್ಲಿ ನೀಡಿದ ಭರವಸೆಯಂತೆ ಕೆ.ಸಿ.ವ್ಯಾಲಿ ಮೂರನೇ ಹಂತದ ಶುದ್ಧೀಕರಣಕ್ಕೆ ಈವರೆಗೆ ಮುಂದಾಗಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಪಕ್ಷದ ಕಾರ್ಯದರ್ಶಿ ಮಂಡಳಿ ಸದಸ್ಯ ಎ.ಆರ್ ಬಾಬು ಮಾತನಾಡಿ ಜಿಲ್ಲೆಗೆ ಯಾವುದೇ ರೈಲ್ವೆ ಯೋಜನೆಗಳು ಬರುತ್ತಿಲ್ಲ. ಕೋಲಾರದಿಂದ ವೈಟ್ ಫೀಲ್ಡ್‌, ಕೋಲಾರ– ಮುಳಬಾಗಿಲು–ಕಡಪ ಸಂಪರ್ಕ, ಬಂಗಾರಪೇಟೆ-ಯಲಹಂಕ ಸಂಪರ್ಕ, ಮಾರಿಕುಪ್ಪಂ –ಕೋಲಾರ ರೈಲು ಹಾಕಬೇಕು‌. ಡಬಲ್ ಲೈನ್ ಮಾಡಬೇಕು. ಸಬ್ ಅರ್ಬನ್ ಯೋಜನೆಯನ್ನು ಕೋಲಾರಕ್ಕೂ ವಿಸ್ತರಿಸಬೇಕು. ಅಗತ್ಯವಿರುವ ಕಡೆ ರೈಲ್ವೆ ಬ್ರಿಡ್ಜ್ ಮಾಡಬೇಕು ಎಂದು ಒತ್ತಾಯಿಸಿದರು. ‌

ನೂತನ ಸಮಿತಿ ಆಯ್ಕೆ:

ಶ್ರೀನಿವಾಸಪುರದಲ್ಲಿ ನಡೆದ ಸಮ್ಮೇಳನದಲ್ಲಿ ಸಿಪಿಎಂನ ನೂತನ ಜಿಲ್ಲಾ ಕಾರ್ಯದರ್ಶಿಯಾಗಿ ಪಿ.ಆರ್ ಸೂರ್ಯನಾರಾಯಣ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿದೆ. ಜಿಲ್ಲಾ ಕಾರ್ಯದರ್ಶಿ ಮಂಡಳಿ ಸದಸ್ಯರಾಗಿ ಗಾಂಧಿನಗರ ನಾರಾಯಣಸ್ವಾಮಿ, ಟಿ.ಎಂ.ವೆಂಕಟೇಶ್‌, ವಿ.ಗೀತಾ, ಎ.ಆರ್‌.ಬಾಬು, ಪಿ.ತಂಗರಾಜ್‌, ಪಾತಕೋಟೆ ನವೀನ್‌ ಕುಮಾರ್‌ ಅವರನ್ನು ಆಯ್ಕೆ ಮಾಡಲಾಗಿದೆ. ಜಿಲ್ಲಾ ಸಮಿತಿ ಸದಸ್ಯರನ್ನಾಗಿ ಎಂ.ವಿಜಯಕೃಷ್ಣ, ಪಿ.ಆರ್‌.ಶಂಕರ್‌, ಎನ್‌.ಅಶೋಕ, ಆನಂದ್‌, ಜಯಲಕ್ಷ್ಮಿ, ಗಂಗಮ್ಮ, ಅಪ್ಪಯಣ್ಣ, ವೀರಪ್ಪರೆಡ್ಡಿ, ವೀರಭದ್ರ, ಪಿ.ಶ್ರೀನಿವಾಸ್‌, ಹನುಮಂತರಾಯ, ಜಯರಾಮ್‌ ಅವರನ್ನು ಆಯ್ಕೆ ಮಾಡಲಾಗಿದೆ.

ಸುದ್ದಿಗೋಷ್ಠಿಯಲ್ಲಿ ಮುಖಂಡರಾದ ಟಿ.ಎಂ ವೆಂಕಟೇಶ್, ಪಾತಕೋಟೆ ನವೀನ್‌ ಕುಮಾರ್‌, ಎಂ.ವಿಜಯಕುಮಾರ್ ಇದ್ದರು.

Ramesh Babu

Journalist

Recent Posts

ನಾಯಿ, ಹಾವು/ ಇತರೆ ಪ್ರಾಣಿಗಳ ದಾಳಿ ಪ್ರಕರಣಗಳಲ್ಲಿ ಚಿಕಿತ್ಸೆ ನೀಡುವ ಬಗ್ಗೆ ಸರ್ಕಾರಿ- ಖಾಸಗಿ ಆಸ್ಪತ್ರೆಗಳು ಅನುಸರಿಸಬೇಕಾದ ಕ್ರಮಗಳು

ನಮ್ಮ‌ ದೇಶದ ಸರ್ವೋಚ್ಚ ನ್ಯಾಯಾಲಯವು, ನಾಯಿ ಕಡಿತಕ್ಕೆ ಚಿಕಿತ್ಸೆ ನೀಡುವ ಬಗ್ಗೆ ಸರ್ಕಾರಿ- ಖಾಸಗಿ ಆಸ್ಪತ್ರೆಗಳು ಅನುಸರಿಸಬೇಕಾದ ಕ್ರಮಗಳಿಗೆ ಸಂಬಂಧಿಸಿದಂತೆ…

1 hour ago

ಜಗತ್ತಿನಲ್ಲಿ ಅತ್ಯಂತ ವೇಗವಾಗಿ ಚಲಿಸುವುದು ಮನಸ್ಸು….ಮನಸ್ಸಿನ ದಾರಿಯಲ್ಲಿ ಅನಂತ ಪಯಣ….

ಜಗತ್ತಿನಲ್ಲಿ ಅತ್ಯಂತ ವೇಗವಾಗಿ ಚಲಿಸುವುದು ಮನಸ್ಸು. ಕ್ಷಣ ಮಾತ್ರದಲ್ಲಿ ಲೆಕ್ಕಕ್ಕೂ ಸಿಗದಷ್ಟು ದೂರ ಚಲಿಸಬಲ್ಲದು. ಬೆಳಕಿನ ವೇಗವೂ ಅದಕ್ಕೆ ಸಾಟಿಯಲ್ಲ.....…

4 hours ago

ನಿರ್ಜನ ಪ್ರದೇಶದಲ್ಲಿ ದೊರೆತಿದ್ದ ನವಜಾತ ಶಿಶುವಿನ ಆರೋಗ್ಯ ಸ್ಥಿರ: ಜಿಲ್ಲಾ ಸರ್ಕಾರಿ ದತ್ತು ಕೇಂದ್ರಕ್ಕೆ ಹಸ್ತಾಂತರ

ತಾಲ್ಲೂಕಿನ ಹಾಡೋನಹಳ್ಳಿ ಗ್ರಾಮದ ನಿರ್ಜನ ಪ್ರದೇಶದಲ್ಲಿ ಒಂದು ವಾರದ ಹಿಂದೆ ದೊರೆತ ಐದು ದಿನಗಳ ನವಜಾತ ಶಿಶುವಿನ ಜೀವ ಉಳಿಸುವಲ್ಲಿ…

5 hours ago

ಕೆ.ಸಿ.ವ್ಯಾಲಿಯಿಂದ ಜಿಲ್ಲೆಯ ರೈತರ ಬದುಕು ಹಸನು- ಕಾಂಗ್ರೆಸ್‌ ಮುಖಂಡ ಜನಪಹಳ್ಳಿ ನವೀನ್‌

ಕೋಲಾರ: ಕೆ.ಸಿ.ವ್ಯಾಲಿ ಯೋಜನೆಯಿಂದ ಅಂತರ್ಜಲ ಹೆಚ್ಚಿ ರೈತರ ಬದುಕು ಹಸನಾಗಿದ್ದು, ಜೆಡಿಎಸ್‌ ಪಕ್ಷ ಸೇರಿದಂತೆ ಕೆಲ ಮುಖಂಡರಿಂದ ದಾರಿ ತಪ್ಪಿಸುವ…

16 hours ago

ಸಾಲುಮರದ ತಿಮ್ಮಕ್ಕ ಅವರಿಗೆ ನುಡಿನಮನ

ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕನ್ನಡ ಜಾಗೃತ ಪರಿಷತ್ತು  ವತಿಯಿಂದ ಪದ್ಮಶ್ರೀ ಸಾಲುಮರದ ತಿಮ್ಮಕ್ಕ ಅವರಿಗೆ ನುಡಿನಮನ…

16 hours ago

ಆಲಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯ ಸಹ ಶಿಕ್ಷಕ ಅರುಣ್ ಅವರು ವರ್ಗಾವಣೆ: ಮಕ್ಕಳು, ಶಿಕ್ಷಕ ಭಾವುಕ

ಆಲಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯ ಸಹ ಶಿಕ್ಷಕ ಅರುಣ್ ಅವರು ವರ್ಗಾವಣೆಗೊಂಡಿದ್ದು, ಈ ಹಿನ್ನೆಲೆ ಇಂದು ಎಸ್…

19 hours ago