ಜಿಲ್ಲೆಯ ಸಮಗ್ರ ಅಭಿವೃದ್ಧಿ ನನ್ನ ಗುರಿ- ಸಚಿವ ಮುನಿಯಪ್ಪ

ಇಂದು ದೇವನಹಳ್ಳಿ ತಾಲ್ಲೂಕಿನ ವಿಜಯಪುರ ಹೋಬಳಿ ವ್ಯಾಪ್ತಿಯ ಗ್ರಾಮ ಪಂಚಾಯಿತಿಗಳಲ್ಲಿ ಸುಮಾರು 3.63 ಕೋಟಿ ಮೊತ್ತದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಹೆಚ್. ಮುನಿಯಪ್ಪ ರವರು ಚಾಲನೆ ನೀಡಿದರು.

ನಂತರ ಮಾತನಾಡಿ, ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಹಾಗೂ ತಾಲ್ಲೂಕು ಅಭಿವೃದ್ಧಿಗೆ ಹಲವು ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಾಗಿದೆ, ಬಡವರ, ಹಿಂದುಳಿದವರ, ಮಹಿಳೆಯರ ಮಕ್ಕಳ ಅಭಿವೃದ್ಧಿ ಗೆ, ಉದ್ಯೋಗ, ಕೆರೆಗಳಿಗೆನೀರು ತುಂಬಿಸುವ ಕಾರ್ಯ ಮುಂತಾದ ಇನ್ನಷ್ಟು ಯೋಜನೆಗಳನ್ನು ಕಾರ್ಯರೂಪಕ್ಕೆ ತಂದು ಜಿಲ್ಲೆಯನ್ನು ಸಮಗ್ರ ಅಭಿವೃದ್ಧಿಯತ್ತ ಕೊಂಡೊಯ್ಯುವುದು ನನ್ನ ಗುರಿ ಎಂದರು.

ವಿಜಯಪುರ ಹೋಬಳಿಯ ವೆಂಕಟಗಿರಿ ಕೋಟೆ ಗ್ರಾಪಂ ವ್ಯಾಪ್ತಿಯಲ್ಲಿ 111 ಲಕ್ಷಗಳ ಕಾಮಗಾರಿ, ಜಿಜ್ಜವಾರ ಗ್ರಾಪಂ ವ್ಯಾಪ್ತಿಯಲ್ಲಿ 54 ಲಕ್ಷ ರೂಗಳ ಕಾಮಗಾರಿ, ಹಾರೋಹಳ್ಳಿ ಗ್ರಾಪಂ ವ್ಯಾಪ್ತಿಯಲ್ಲಿ 64 ಲಕ್ಷಗಳ ಕಾಮಗಾರಿ, ಕೋರಮಂಗಲ ಗ್ರಾಪಂ ವ್ಯಾಪ್ತಿಯಲ್ಲಿ. 54 ಲಕ್ಷಗಳ ಕಾಮಗಾರಿ, ಮಂಡಿಬೆಲೆ ಗ್ರಾಪಂ ವ್ಯಾಪ್ತಿಯಲ್ಲಿ 77 ಲಕ್ಷಗಳ ಕಾಮಗಾರಿ ಸೇರಿ ಒಟ್ಟು 3.63 ಕೋಟಿ ಮೊತ್ತದಲ್ಲಿ ವಿವಿಧ ರಸ್ತೆ-ಚರಂಡಿ ಅಭಿವೃದ್ಧಿ, ಹೈ ಮಾಸ್ಕ್ ಅಳವಡಿಸುವ ಕಾಮಗಾರಿಗಳಿಗೆ ಗುದ್ದಲಿ ಪೂಜೆ ನೆರವೇರಿಸಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿಯ ಜಿಲ್ಲಾ ಅಧ್ಯಕ್ಷರಾದ ರಾಜಣ್ಣ, ಬಯಪಾ ಅಧ್ಯಕ್ಷರಾದ ಶಾಂತಕುಮಾರ್, ತಾಲ್ಲೂಕು ಗ್ಯಾರೆಂಟಿ ಯೋಜನೆ ಅಧ್ಯಕ್ಷರಾದ ಜಗನ್ನಾಥ, ದೇವನಹಳ್ಳಿ ತಹಸೀಲ್ದಾರ್ ಬಾಲಕೃಷ್ಣ, ಇಒ ಶ್ರೀನಾಥ್ ಗೌಡ ಸೇರಿದಂತೆ, ಗ್ರಾಮ ಪಂಚಾಯಿತಿ ಅಧ್ಯಕ್ಷರು, ಉಪಾದ್ಯಾಕ್ಷರು, ಸದಸ್ಯರು, ಜನಪ್ರತಿನಿಧಿಗಳು, ಸಾರ್ವಜನಿಕರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಬೆಂಗಳೂರು ಗ್ರಾಮಾಂತರ ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ ಚಂದ್ರಕಾಂತ್ ಎಂ.ವಿ ನೇಮಕ

ಬೆಂಗಳೂರು ಗ್ರಾಮಾಂತರ ಪೊಲೀಸ್ ಎಸ್‌ಪಿ ಆಗಿದ್ದ ಸಿ.ಕೆ ಬಾಬಾ ಅವರಿಗೆ ಬಡ್ತಿ ನೀಡಿ ಕರ್ನಾಟಕ ರಾಜ್ಯ ಮೀಸಲು ಪಡೆಯ ಡಿಐಜಿ…

3 hours ago

ಬೆಂ. ಗ್ರಾ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ ಕೆ ಬಾಬಾ ವರ್ಗಾವಣೆ- ನೂತನ ಎಸ್ಪಿ ಯಾರು ಗೊತ್ತಾ….?

ಹೊಸ ವರ್ಷದ ಸಂಭ್ರಮದ ನಡುವೆಯೇ ರಾಜ್ಯ ಸರ್ಕಾರ ಪೊಲೀಸ್ ಇಲಾಖೆಯಲ್ಲಿ ಮಹತ್ವದ ಬದಲಾವಣೆಯಾಗಿದೆ. ರಾಜ್ಯದಾದ್ಯಂತ 48 ಐಪಿಎಸ್ ಅಧಿಕಾರಿಗಳಿಗೆ ಮುಂಬಡ್ತಿ…

4 hours ago

“ಗುಣಮಟ್ಟದ ಚಿಕಿತ್ಸೆಗೆ ಸಹ್ಯಾದ್ರಿ ಆಸ್ಪತ್ರೆ ಬದ್ಧ”

ದೊಡ್ಡಬಳ್ಳಾಪುರದ ಪಾಲನಜೋಗಿಹಳ್ಳಿ, ಗೌರಿಬಿದನೂರು ರಸ್ತೆಯ ಫ್ರೆಂಡ್ಸ್ ಫಂಕ್ಷನ್ ಹಾಲ್ ಎದುರಿನ ಸಹ್ಯಾದ್ರಿ ಆಸ್ಪತ್ರೆಯು 2025ರ ಮೇ.11ರಂದು ಪ್ರಾರಂಭವಾಗಿ ಆಧುನಿಕ ತಂತ್ರಜ್ಞಾನ,…

5 hours ago

ಚಳಿಗಾಲದ ಪಾರ್ಟಿಗಳಿಂದ ಹೊಟ್ಟೆಗೆ ಕಾಟ: ಗ್ಯಾಸ್ಟ್ರೋ ಪ್ರಕರಣಗಳಲ್ಲಿ 25% ಏರಿಕೆ

ಪ್ರತಿ ವರ್ಷ ಚಳಿಗಾಲದಲ್ಲಿ ಬರುವ ಹಬ್ಬದಲ್ಲಿ, ಬೆಂಗಳೂರು ಮೆಡಿಕವರ್ ಆಸ್ಪತ್ರೆಗಳಲ್ಲಿ ಹೊಟ್ಟೆ ಸಂಬಂಧಿತ (ಗ್ಯಾಸ್ಟ್ರೋ) ಹೊರರೋಗಿ ವಿಭಾಗ (OPD) ಮತ್ತು…

8 hours ago

ಕೇರಳದಲ್ಲಿ ಸಿಎಂ ಸಿದ್ದರಾಮಯ್ಯ ಅವರನ್ನ ಭೇಟಿಯಾದ ದೊಡ್ಡಬಳ್ಳಾಪುರ ಕಾಂಗ್ರೆಸ್ ಮುಖಂಡರು….

ಕೇರಳದ ತಿರುವನಂತಪುರಂ ಜಿಲ್ಲೆಯ ಶಿವಗಿರಿ ಮಠದಲ್ಲಿ ಶ್ರೀ ನಾರಾಯಣ ಧರ್ಮಸಂಗಮ ಟ್ರಸ್ಟ್‌ ಆಯೋಜಿಸಿರುವ ಮಠದ ಯಾತ್ರಾರ್ಥಿಗಳ‌ ಸಮಾವೇಶದಲ್ಲಿ ಸಿಎಂ ಸಿದ್ದರಾಮಯ್ಯ…

11 hours ago

ಮಡಿಕೇರಿ ಹನಿ ಟ್ರ್ಯಾಪ್ ಪ್ರಕರಣ: ಬಲೆಗೆ ಬಿದ್ದರಾ ಗಣ್ಯರು?

ಇತ್ತೀಚೆಗೆ ಮಂಡ್ಯ ಮೂಲಕ ವ್ಯಕ್ತಿ ಮಹಿಳೆ ಮತ್ತು ಆಕೆಯ ಸಹಚರರ ಜಾಲಕ್ಕೆ ಸಿಲುಕಿ ಮಾರಣಾಂತಿಕ ಹಲ್ಲೆಗೆ ಒಳಗಾಗಿ ನಂತರ ಅರೆ…

12 hours ago