ಕೋಲಾರ: ಜಿಲ್ಲೆಯ ಸಹಕಾರಿ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸಲು ಸತತವಾಗಿ 7ನೇ ಬಾರಿಗೆ ಇಪ್ಕೊ ಟೋಕಿಯೋ ನಿರ್ದೇಶಕರಾಗಿ ಆಯ್ಕೆಯಾಗಿರುವ ಮಾಜಿ ಸಚಿವ ಕೆ.ಶ್ರೀನಿವಾಸಗೌಡರ ಮಾರ್ಗದರ್ಶನ ಅತ್ಯವಶ್ಯಕವಾಗಿದೆ ಎಂದು ಅರಾಭಿಕೊತ್ತನೂರು ಗ್ರಾಪಂ ಸದಸ್ಯ ಎ.ಎಸ್ ನಂಜುಂಡಗೌಡ ತಿಳಿಸಿದರು.
ನಗರದಲ್ಲಿನ ಮಾಜಿ ಸಚಿವ ಶ್ರೀನಿವಾಸಗೌಡರ ನಿವಾಸದಲ್ಲಿ ಅವರನ್ನು ಸನ್ಮಾನಿಸಿ ಮಾತನಾಡಿದ ಅವರು, ಹಿಂದಿನಿಂದಲೂ ಸಹಕಾರಿ ವ್ಯವಸ್ಥೆಯು ಒಂದು ಕುಟುಂಬದ ರೀತಿಯಲ್ಲಿ ಪರಸ್ಪರ ಸಹಕಾರದೊಂದಿಗೆ ಯಶಸ್ವಿಯಾಗಿ ನಡೆದುಕೊಂಡು ಬಂದಿದೆ. ಇದಕ್ಕೆ ಜಿಲ್ಲೆಯ ಹಿರಿಯ ಸಹಕಾರಿಗಳ ಮಾರ್ಗದರ್ಶನ ಬಹುಮುಖ್ಯವಾಗಿದೆ. ಮುಂದೆಯೂ ಇದೇ ರೀತಿ ಜಿಲ್ಲೆಯ ಸಹಕಾರಿ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸಲು ಹಿರಿಯ ಸಹಕಾರಿ ಧುರೀಣ ಕೆ.ಶ್ರೀನಿವಾಸಗೌಡರ ಮಾರ್ಗದರ್ಶನ ಅತಿ ಮುಖ್ಯವಾಗಿದೆ ಎಂದರು.
ಇವತ್ತಿನ ಸಮಾಜಕ್ಕೆ ಸಹಕಾರ ಕ್ಷೇತ್ರವು ಅನಿವಾರ್ಯವಾಗಿದೆ. ಕೊರೊನಾ ಸಂದರ್ಭದಲ್ಲಿ ಮೊದಲು ಗುರಿಯಾಗಿದ್ದು, ಆರ್ಥಿಕ ಕ್ಷೇತ್ರಕ್ಕೆ ಅದರಿಂದ ಸಾಕಷ್ಟು ನಷ್ಟ ಅನುಭವಿಸಲಾಗಿದೆ ಕೋವಿಡ್ ನಂತರದಲ್ಲಿ ಸಹಕಾರ ಕ್ಷೇತ್ರಗಳ ಸುಧಾರಣೆ ಮತ್ತು ಸಹಕಾರಿಗಳಿಗೆ ಸಂಸ್ಥೆಯ ಭದ್ರ ಬುನಾದಿ ಹಾಕುವ ಬಗ್ಗೆ ಮನವರಿಕೆ ಮಾಡಿಕೊಡುವ ಅವಶ್ಯಕತೆ ಹಿರಿಯ ಸರಕಾರಿಗಳ ಜವಾಬ್ದಾರಿಯಾಗಿದೆ ರಾಜ್ಯ ಮತ್ತು ಕೇಂದ್ರ ಸರಕಾರಗಳು ಕೂಡ ಹೆಚ್ಚಿನ ಗಮನವನ್ನು ಸಹಕಾರಿ ವ್ಯವಸ್ಥೆಯ ಮೇಲೆ ಹರಿಸಬೇಕಾಗಿದೆ ಎಂದರು.
ಈ ಸಂದರ್ಭದಲ್ಲಿ ಗ್ರಾಪಂ ಸದಸ್ಯ ಗುಟ್ಟಹಳ್ಳಿ ನಂದೀಶ್, ಹಾಪ್ ಕಾಮ್ಸ್ ನಿವೃತ್ತ ನೌಕರ ಸೊಣ್ಣೇಗೌಡ, ಅರಾಭಿಕೊತ್ತನೂರು ಶಾಲಾಭಿವೃದ್ದಿ ಸಮಿತಿ ಮಾಜಿ ಅಧ್ಯಕ್ಷ ಎಂ.ನಂಜುಂಡಗೌಡ ಇದ್ದರು,
ನಮ್ಮ ದೇಶದ ಸರ್ವೋಚ್ಚ ನ್ಯಾಯಾಲಯವು, ನಾಯಿ ಕಡಿತಕ್ಕೆ ಚಿಕಿತ್ಸೆ ನೀಡುವ ಬಗ್ಗೆ ಸರ್ಕಾರಿ- ಖಾಸಗಿ ಆಸ್ಪತ್ರೆಗಳು ಅನುಸರಿಸಬೇಕಾದ ಕ್ರಮಗಳಿಗೆ ಸಂಬಂಧಿಸಿದಂತೆ…
ಜಗತ್ತಿನಲ್ಲಿ ಅತ್ಯಂತ ವೇಗವಾಗಿ ಚಲಿಸುವುದು ಮನಸ್ಸು. ಕ್ಷಣ ಮಾತ್ರದಲ್ಲಿ ಲೆಕ್ಕಕ್ಕೂ ಸಿಗದಷ್ಟು ದೂರ ಚಲಿಸಬಲ್ಲದು. ಬೆಳಕಿನ ವೇಗವೂ ಅದಕ್ಕೆ ಸಾಟಿಯಲ್ಲ.....…
ತಾಲ್ಲೂಕಿನ ಹಾಡೋನಹಳ್ಳಿ ಗ್ರಾಮದ ನಿರ್ಜನ ಪ್ರದೇಶದಲ್ಲಿ ಒಂದು ವಾರದ ಹಿಂದೆ ದೊರೆತ ಐದು ದಿನಗಳ ನವಜಾತ ಶಿಶುವಿನ ಜೀವ ಉಳಿಸುವಲ್ಲಿ…
ಕೋಲಾರ: ಕೆ.ಸಿ.ವ್ಯಾಲಿ ಯೋಜನೆಯಿಂದ ಅಂತರ್ಜಲ ಹೆಚ್ಚಿ ರೈತರ ಬದುಕು ಹಸನಾಗಿದ್ದು, ಜೆಡಿಎಸ್ ಪಕ್ಷ ಸೇರಿದಂತೆ ಕೆಲ ಮುಖಂಡರಿಂದ ದಾರಿ ತಪ್ಪಿಸುವ…
ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕನ್ನಡ ಜಾಗೃತ ಪರಿಷತ್ತು ವತಿಯಿಂದ ಪದ್ಮಶ್ರೀ ಸಾಲುಮರದ ತಿಮ್ಮಕ್ಕ ಅವರಿಗೆ ನುಡಿನಮನ…
ಆಲಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯ ಸಹ ಶಿಕ್ಷಕ ಅರುಣ್ ಅವರು ವರ್ಗಾವಣೆಗೊಂಡಿದ್ದು, ಈ ಹಿನ್ನೆಲೆ ಇಂದು ಎಸ್…