ಜಿಲ್ಲೆಯ ಸೂಕ್ಷ್ಮ ವಲಯಗಳಲ್ಲಿ ಖಾಸಗಿ ಡ್ರೋನ್ ಚಟುವಟಿಕೆ ನಿಷೇಧ- ಜಿಲ್ಲಾಧಿಕಾರಿ ಎ.ಬಿ ಬಸವರಾಜು

ಭಯೋತ್ಪಾದಕರು/ದೇಶ ವಿರೋಧಿಗಳು ಡ್ರೋನ್ ಗಳು, ರಿಮೋಟ್ ಕಂಟ್ರೋಲ್ಡ್ ಮೈಕ್ರೋ-ಲೈಟ್ ಏರ್ಕ್ರಾಫ್ಟ್ ಗಳು, ಪ್ಯಾರಿ-ಗ್ಲೈಡರ್ ಗಳನ್ನು ಬಳಸಿಕೊಂಡು ದಾಳಿಯ ಮೂಲಕ ಸಾರ್ವಜನಿಕ ಆಸ್ತಿ-ಪಾಸ್ತಿ ನಾಶಪಡಿಸಿ ಕಾನೂನು ಸುವ್ಯವಸ್ಥೆಗೆ ಭಂಗ ಉಂಟುಮಾಡುವ ಸಾಧ್ಯತೆಯಿರುವುದರಿಂದ ಜಿಲ್ಲೆಯ ಸೂಕ್ಷ್ಮ ವಲಯಗಳಲ್ಲಿ ಖಾಸಗಿ ಡ್ರೋನ್ ಚಟುವಟಿಕೆ ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಎ.ಬಿ ಬಸವರಾಜು ಅವರು ತಿಳಿಸಿದ್ದಾರೆ.

ಭಾರತ ಮತ್ತು ಪಾಕಿಸ್ಥಾನ ದೇಶಗಳ ನಡುವಿನ ಬಿಗುವಿನ ವಾತಾವರಣ ಈಗ ಶಮನಗೊಂಡಿದೆ. ಅದಾಗ್ಯೂ ತುರ್ತು ಸಂದರ್ಭಗಳಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿರುವಂತಹ ಸೂಕ್ಷ್ಮವಲಯಗಳನ್ನು ಗುರುತಿಸಿ, ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ವತಿಯಿಂದ ಭದ್ರತಾ ಕಾಳಜಿಗಳ ದೃಷ್ಟಿಯಿಂದ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಲು ಸಂಬಂಧಪಟ್ಟ ಇಲಾಖೆಗಳಿಗೆ ಸೂಚಿಸಲಾಗಿದೆ.

ಕೈಗಾರಿಕಾ ಮತ್ತು ವಾಣಿಜ್ಯ ಸಂಸ್ಥೆಗಳಿಗೆ ಭದ್ರತೆಯನ್ನು ಒದಗಿಸುವ ಎಲ್ಲಾ ಖಾಸಗಿ ಭದ್ರತಾ ಏಜೆನ್ಸಿಗಳಿಗೆ ಮಾಹಿತಿ ನೀಡಲಾಗಿದ್ದು ಕಣ್ಗಾವಲು ಅಥವಾ ಇತರ ಉದ್ದೇಶಗಳಿಗಾಗಿ ಡ್ರೋನ್ ಗಳನ್ನು ನಿಯೋಜಿಸುವುದನ್ನು ತಪ್ಪಿಸಲು ಸಲಹೆಗಳನ್ನು ಸೂಚಿಸಲಾಗಿದೆ.

*ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯಲ್ಲಿ ಬರುವಂತಹ ಸೂಕ್ಷ್ಮವಲಯಗಳು*

ದೇವನಹಳ್ಳಿ: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ, ಇಂಡಿಯನ್ ಆಯಿಲ್ ಸ್ಕೈಟ್ಯಾಂಕಿಂಗ್ಲಿ

ದೊಡ್ಡಬಳ್ಳಾಪುರ: ಮುಶಾಶಿ ಆಟೋ ಪಾರ್ಟ್ಸ್ ಪ್ರೈ. ಲಿಮಿಟೆಡ್

ಹೊಸಕೋಟೆ: IOCL – ಇಂಡೇನ್ ಬಾಟ್ಲಿಂಗ್ ಪ್ಲಾಂಟ್, BPCL, IOCL, HPCL, MRPL

ನೆಲಮಂಗಲ:ಜ್ಯೋತಿಗ್ಯಾಸ್ ಪ್ರೈ ಲಿಮಿಟೆಡ್, ಇಂಡೋಗ್ಯಾಸ್, ಟೋಟಲ್ ಆಯಿಲ್ ಇಂಡಿಯಾ ಪ್ರೈ. ಲಿಮಿಟೆಡ್, ಏಜಿಸ್ ಗ್ಯಾಸ್ LPG ಪ್ರೈವೇಟ್ ಲಿಮಿಟೆಡ್, ಸ್ನೇಹಾ ಪೆಟ್ರೋಲಿಯಂ ಪ್ರೈ. ಲಿಮಿಟೆಡ್, ಜಿಂದಾಲ್ ಅಲ್ಯೂಮಿನಿಯಂ ಲಿಮಿಟೆಡ್ (ರೋಲಿಂಗ್ ಮಿಲ್ ವಿಭಾಗ), ಜ್ಯೋತಿಗ್ಯಾಸ್ ಪ್ರೈ. ಲಿಮಿಟೆಡ್

ಸಂಭವನೀಯ ವಿಧ್ವಂಸಕ ಕೃತ್ಯಗಳನ್ನು ತಡೆಗಟ್ಟಲು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪೊಲೀಸ್ ಇಲಾಖೆಗೆ ಭದ್ರತೆಯನ್ನು ಒದಗಿಸಲು ತಿಳಿಸಿದೆ. ಜೊತೆಗೆ ಅಂತಹ ಚಟುವಟಿಕೆಗಳ ಮೇಲೆ ಕೆಲವು ನಿರ್ಬಂಧಗಳನ್ನು ಹಾಕುವುದು ಅಗತ್ಯವಾಗಿದೆ. ಜಿಲ್ಲಾ ಅಗ್ನಿಶಾಮಕದಳ ತುರ್ತು ಸಂದರ್ಭಗಳಲ್ಲಿ ಸಿದ್ಧರಿರಬೇಕು. ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಆಸ್ಪತ್ರೆಗಳಲ್ಲಿ ಅಗತ್ಯ ಔಷಧಿಗಳ ಲಭ್ಯತೆಯನ್ನು ಖಚಿತಪಡಿಸಿಕೊಳ್ಳುವುದು ಮತ್ತು ವಿಶೇಷವಾಗಿ ನಾಗರಿಕರಿಗೆ ಯಾವುದೇ ತೊಂದರೆ ಮತ್ತು ಅಪಘಾತಗಳನ್ನು ನಿರ್ವಹಿಸಲು ಸನ್ನದ್ಧವಾಗಿರಲು ಜಾಗೃತಿ ಮೂಡಿಸಲಾಗುವುದು.

*ನಕಲಿ ಸುದ್ದಿಗೆ ಕಡಿವಾಣ*

ಯಾವುದೇ ನಕಲಿ ಅಥವಾ ಸುಳ್ಳು ಸುದ್ದಿ ಅಥವಾ ಸಾಮಾಜಿಕ ಮಾಧ್ಯಮಗಳಲ್ಲಿ ಪ್ರಸರಣ, ಬಿತ್ತರವಾಗುವ ಸಂಗತಿಗಳನ್ನು ತಕ್ಷಣವೇ ನೈಜ ಸಂಗತಿಯೊಂದಿಗೆ ಪರಿಶೀಲಿಸಿ ಕ್ರಮಕೈಗೊಂಡು, ಇವುಗಳ ಮೂಲವನ್ನು ಪತ್ತೆ ಹಚ್ಚಿ ಸೂಕ್ತ ಕ್ರಮ ಕೈಗೊಳ್ಳಲು ಪೊಲೀಸ್ ಇಲಾಖೆಗೆ ಸೂಚಿಸಲಾಗಿದೆ.

ಸಮುದಾಯಗಳ ಮುಖಂಡರು ಮತ್ತು ಇತರ ಪ್ರಮುಖ ನಾಗರಿಕರೊಂದಿಗೆ ವಾಟ್ಸಾಪ್ ಗುಂಪುಗಳು ಸಕ್ರಿಯವಾಗಿರಬೇಕು, ಯಾವುದೇ ಸುಳ್ಳು ವದಂತಿಗಳು ಕಂಡು ಬಂದಾಗ ತಕ್ಷಣವೇ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಕಂಟ್ರೋಲ್ ರೂಂ. ಸಂಖ್ಯೆ: 080-28388005 ಗೆ ಸಂಪರ್ಕಿಸಿ ಮಾಹಿತಿಯನ್ನು ತಿಳಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

Ramesh Babu

Journalist

Recent Posts

ಅಣ್ಣನ ಮೂವರು ಮಕ್ಕಳ ಮೇಲೆ ತಮ್ಮನಿಂದ ಕ್ರೂರವಾಗಿ ಹಲ್ಲೆ: ಇಬ್ಬರು ಮಕ್ಕಳು ಸ್ಥಳದಲ್ಲೇ ಸಾವು: ಒಬ್ಬ ಬಾಲಕ ಜೀವನ್ಮರಣ ಹೋರಾಟ

ಅಣ್ಣನ ಮೂವರು ಮಕ್ಕಳ ಮೇಲೆ ತಮ್ಮನೇ ಕ್ರೂರವಾಗಿ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ಕಮ್ಮಸಂದ್ರದಲ್ಲಿ ನಡೆದಿದೆ. ಘಟನೆಯಲ್ಲಿ 9 ವರ್ಷದ…

4 hours ago

ನಟ ಪ್ರಥಮ್ ಮೇಲೆ ದುಷ್ಕರ್ಮಿಗಳಿಂದ ಹಲ್ಲೆ ಆರೋಪ: ಹಲ್ಲೆ ಎಲ್ಲಿ ಆಯ್ತು…? ಘಟನೆ ಬಗ್ಗೆ ನಟ ಪ್ರಥಮ್ ಏನಂದ್ರು… ಗೊತ್ತಾ….? ಸಂಪೂರ್ಣ ಮಾಹಿತಿ ಇಲ್ಲಿದೆ ಓದಿ….

ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…

19 hours ago

ಈ ವರ್ಷ ಕೇಂದ್ರ ಸರ್ಕಾರ ಸರಬರಾಜು ಮಾಡಿರುವ ರಸಗೊಬ್ಬರ ಸಾಕಾಗುತ್ತಿಲ್ಲ- ಸಿಎಂ ಸಿದ್ದರಾಮಯ್ಯ

ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…

1 day ago

ಹಣ ಕೇಂದ್ರೀಕೃತ ಸಮಾಜಕ್ಕೆ ಬದಲಾಗಿ ಮನುಷ್ಯತ್ವ ಕೇಂದ್ರಿತ ಸಮಾಜ ನಿರ್ಮಾಣವಾಗಲಿ…..

ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…

1 day ago

ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆದ ನಟ ದರ್ಶನ್

ನಟ ದರ್ಶನ್ ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಥಾಯ್ಲೆಂಡ್ ನಿಂದ ತಡ ರಾತ್ರಿ 11:45…

1 day ago

ಭೀಮನ ಅಮವಾಸ್ಯೆ ದಿನದಂದು ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವು

ನಿನ್ನೆ(ಜು.24 ಗುರುವಾರ) ಭೀಮನ ಅಮವಾಸ್ಯೆ ಹಿನ್ನೆಲೆ ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ…

2 days ago