ನವದೆಹಲಿಯಲ್ಲಿ ನಡೆಯುತ್ತಿರುವ ಜಿ20 ಶೃಂಗಸಭೆಯಲ್ಲಿ ಭಾಗವಹಿಸಿರುವ ಅಮೆರಿಕಾ ಅಧ್ಯಕ್ಷ ಜೋ ಬೈಡನ್ ಸೇರಿದಂತೆ ವಿವಿಧ ದೇಶಗಳ ನಾಯಕರು ಇಂದು ಬೆಳಗ್ಗೆ ರಾಜ್ ಘಾಟ್ ಗೆ ತೆರಳಿ ಮಹಾತ್ಮ ಗಾಂಧಿ ಸ್ಮಾರಕಕ್ಕೆ ಹೂ ಗುಚ್ಛವಿರಿಸುವ ಮೂಲಕ ಗೌರವ ನಮನ ಸಲ್ಲಿಸಲಾಯಿತು.
ಸೆ.9ರಿಂದ ನವದೆಹಲಿಯಲ್ಲಿ ನಡೆಯುತ್ತಿರುವ ಜಿ20 ಶೃಂಗಸಭೆ. ಈ ಶೃಂಗಸಭೆಯಲ್ಲಿ ಸುಮಾರು 20ಕ್ಕೂ ಹೆಚ್ಚು ವಿವಿಧ ದೇಶಗಳ ನಾಯಕರು ಭಾಗವಹಿಸಿದ್ದಾರೆ. ಇಂದು ಈ ಶೃಂಗಸಭೆ ಅಂತ್ಯವಾಗಲಿದೆ. ಈ ಹಿನ್ನೆಲೆ ಪ್ರಧಾನಿ ನರೇಂದ್ರ ಮೋದಿ ಜೊತೆ ರಾಜ್ ಘಾಟ್ ಗೆ ತೆರಳಿ ಮಹಾತ್ಮ ಗಾಂಧಿ ಸ್ಮಾರಕಕ್ಕೆ ನಮಿಸಿದ ವಿಶ್ವನಾಯಕರು.