ಜೀವನದಲ್ಲಿ ಶಿಸ್ತು, ಸಂಯಮ ಇದ್ದರೆ ಯಶಸ್ಸು‌ ಸಾಧ್ಯ- ಗಿರಿಧರ್ ಕಲ್ಲಾಪೂರ್

ಜೀವನದಲ್ಲಿ ಶಿಸ್ತು, ಸಂಯಮ ಅಳವಡಿಸಿಕೊಂಡ ಪ್ರತಿಯೊಬ್ಬರು ಯಶಸ್ಸನ್ನು ಕಾಣಲು ಸಾಧ್ಯ ಹಾಗೂ ಕೌಶಲ್ಯದ ಕಲಿಕೆಯೊಂದಿಗೆ ಉದ್ಯಮಿಗಳಾಗಲು ಸ್ವಪ್ರೇರಣೆಯು ಅತ್ಯಗತ್ಯ‌ ಎಂದು ರುಡ್‌ಸೆಟ್ ಸಂಸ್ಥೆಗಳ ಕಾರ್ಯನಿರ್ವಾಹಕ ನಿರ್ದೇಶಕರಾದ ಗಿರಿಧರ್ ಕಲ್ಲಾಪೂರ್ ಅವರು ಶಿಬಿರಾರ್ಥಿಗಳಿಗೆ ತಿಳಿಸಿದರು.

ನೆಲಮಂಗಲ ತಾಲ್ಲೂಕಿನ ಅರಿಶಿನಕುಂಟೆಯಲ್ಲಿರುವ ರುಡ್‌ಸೆಟ್ ಸಂಸ್ಥೆಯಲ್ಲಿ ನಡೆದ ಕಂಪ್ಯೂಟರ್ ಡಿಟಿಪಿ ತರಬೇತಿಯ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ, ಅವರು ಮಾತನಾಡಿದರು.

ಶಿಸ್ತುಬದ್ಧ ಜೀವನವನ್ನು ರೂಪಿಸಿಕೊಂಡು, ಸಮಾಜಕ್ಕೆ ಹೊರೆಯಾಗದಂತೆ ನಮ್ಮ ಹೊಣೆಗಾರಿಕೆಯನ್ನು ಅರಿತು ಜವಾಬ್ಧಾರಿಯುತ ನಾಗರಿಕರಾಗುವುದರೊಂದಿಗೆ ಸಮಾಜದ ಆಸ್ತಿಯಾಗಬೇಕೆಂದು ಹೇಳಿದರು.

ಜಿಲ್ಲಾ ಮಾರ್ಗದರ್ಶಿ ಹಾಗೂ ಬ್ಯಾಂಕ್‌ನ ಮುಖ್ಯ ಪ್ರಬಂಧಕರಾದ ಮಧುಕರ್ ಅವರು ಮಾತನಾಡಿ, ಬ್ಯಾಂಕಿನ ವ್ಯವಹಾರದ ಕುರಿತು, ಡಿಜಿಟಲ್ ಬ್ಯಾಂಕಿಂಗ್ ವ್ಯವಸ್ಥೆ ಹಾಗೂ ಸ್ವ ಉದ್ಯೋಗಿಗಳಾಗಲು ಲಭ್ಯವಿರುವ ಸಾಲ ಸೌಲಭ್ಯಗಳ ಮಾಹಿತಿಯನ್ನು ಶಿಬಿರಾರ್ಥಿಗಳಿಗೆ ನೀಡಿದರು.

ರುಡ್‌ಸೆಟ್ ಸಂಸ್ಥೆಯ ಉಜಿರೆ ಶಾಖೆಯ ನಿರ್ದೇಶಕರಾದ ಸುರೇಶ್ ಅವರು ಮಾತನಾಡಿ, ತರಬೇತಿ ಪಡೆದ ತಾವು ಕೆಲಸ ಆರಂಭಿಸುವ ಮೂಲಕ ಕಲಿತ ಕೌಶಲ್ಯದ ಸದುಪಯೋಗ ಪಡಿಸಿಕೊಳ್ಳಲು ತಿಳಿಸಿದರು.

ರುಡ್‌ಸೆಟ್ ಸಂಸ್ಥೆಯ ನಿರ್ದೇಶಕರಾದ ರವಿಕುಮಾರ ಅವರು ಮಾತನಾಡಿ, ಸಂಸ್ಥೆಯ ಕುರಿತು ಹಾಗೂ ಸಂಸ್ಥೆಯಲ್ಲಿ ನಡೆಯುವ ವಿವಿಧ ಚಟುವಟಿಕೆಗಳ ಮಾಹಿತಿಯನ್ನು ಸಂಸ್ಥೆಯ ಶಿಬಿರಾರ್ಥಿಗಳಾದ ತಾವು ಸಾರ್ವಜನಿಕರಿಗೆ ತಿಳಿಸಬೇಕೆಂದರಲ್ಲದೆ, ಶಿಬಿರಾರ್ಥಿಗಳಿಗೆ ಶುಭಕೋರಿದರು.

ಸಮಾರೋಪ ಸಮಾರಂಭದಲ್ಲಿ ಕಂಪ್ಯೂಟರ್ ಡಿಟಿಪಿ ತರಬೇತಿಯ ಶಿಬಿರಾರ್ಥಿಗಳಿಗೆ ಪ್ರಮಾಣಪತ್ರವನ್ನು ವಿತರಿಸಲಾಯಿತು.

ಕಾರ್ಯಕ್ರಮದಲ್ಲಿ ರುಡ್‌ಸೆಟ್ ಸಂಸ್ಥೆಯ ಉಪನ್ಯಾಸಕರಾದ ರವೀಂದ್ರ ಹಾಗೂ ವಿದ್ಯಾ ಹೊಸಮನಿ ಸೇರಿದಂತೆ ಕಂಪ್ಯೂಟರ್ ಡಿಟಿಪಿ ಹಾಗೂ ಟೈಲರಿಂಗ್ ತರಬೇತಿಯ ಶಿಬಿರಾರ್ಥಿಗಳು ಉಪಸ್ಥಿತರಿದ್ದರು.

Ramesh Babu

Journalist

Recent Posts

ಭಾರತೀಯರ ಆಹಾರ ವೈವಿಧ್ಯತೆ…. ರುಚಿ – ತೃಪ್ತಿ – ಸಮಾನತೆ…..

ಭಾರತೀಯರ ಆಹಾರ ವೈವಿಧ್ಯತೆ..... ರುಚಿ - ತೃಪ್ತಿ - ಸಮಾನತೆ..... ಅಡುಗೆ ಅನುಭವದ ಮೂಸೆಯೊಳಗೆ ಬೆಳೆದು ಬರುವ ವಿಜ್ಞಾನವೆಂಬ ಕಲೆ....…

8 hours ago

ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆ: ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

2026-27 ಸಾಲಿಗೆ ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆಯಡಿ ಸಹಾಯಧನಕ್ಕಾಗಿ ಅರ್ಹ ಫಲಾನುಭವಿಗಳಿಂದ ಅರ್ಜಿಗಳನ್ನ…

21 hours ago

ಕೊಡಿಪಾಳ್ಯ ಬಳಿ ಕ್ಯಾಂಟರ್ ಪಲ್ಟಿ: ತಪ್ಪಿದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಕೊಡಿಪಾಳ್ಯ ಸಮೀಪ ಕ್ಯಾಂಟರ್‌ವೊಂದು ಪಲ್ಟಿಯಾಗಿ ಬಿದ್ದ ಘಟನೆ ನಡೆದಿದ್ದು, ಅದೃಷ್ಟವಶಾತ್ ಭಾರೀ ಅನಾಹುತ ತಪ್ಪಿದೆ.…

22 hours ago

ಮೊಬೈಲ್ ಕಳೆದುಹೋದರೆ ಗಾಬರಿ ಬೇಡ: ತಕ್ಷಣದ ಕ್ರಮವೇ ರಕ್ಷಣೆ: ಮೊಬೈಲ್‌ ಕಳೆದುಹೋದ 10 ನಿಮಿಷಗಳಲ್ಲಿ ಮಾಡಬೇಕಾದ 7 ಕೆಲಸಗಳು ಇಲ್ಲಿವೆ ನೋಡಿ…

ಬೆಂಗಳೂರು ಗ್ರಾಮಾಂತರ: ಮೊಬೈಲ್‌ ಫೋನ್‌ ಕಳೆದುಹೋಗುವುದು ಅಥವಾ ಕಳ್ಳತನವಾಗುವುದು ಇಂದಿನ ಡಿಜಿಟಲ್‌ ಯುಗದಲ್ಲಿ ಆತಂಕದ ಸಂಗತಿಯಾಗಿದೆ. ಮೊಬೈಲ್‌ ಕೇವಲ ಸಂಪರ್ಕ…

1 day ago

ಎಸ್ಐಆರ್ ಅಕ್ರಮ ಹಾಗೂ ಬರ ಪರಿಹಾರ ವಿಳಂಬ: ಕೇಂದ್ರ ಮತ್ತು ವಿಪಕ್ಷದ ವಿರುದ್ಧ ಸಚಿವ ಚಲುವರಾಯಸ್ವಾಮಿ ಆಕ್ರೋಶ

ವಿರೋಧ ಪಕ್ಷದ ನಾಯಕನಾಗಿ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು. ಅದನ್ನು ಬಿಟ್ಟು ಎಸ್‌ಐಆರ್‌ನಲ್ಲಿ ನಡೆದಿರುವ ಅಕ್ರಮಗಳ ಪರ ಮಾತನಾಡುವವರಿಗೆ ಯಾವ ಮರ್ಯಾದೆ ಇದೆ…

1 day ago

ಬರ ಪರಿಹಾರಕ್ಕೆ 60 ಸಾವಿರ ಕೋಟಿ ನಷ್ಟದ ಅಂದಾಜು- ಡಿಸಿಎಂ ಡಾ.ಜಿ ಪರಮೇಶ್ವರ್

ರಾಜ್ಯದಲ್ಲಿ ಬರ ಪರಿಸ್ಥಿತಿಯಿಂದ ಉಂಟಾಗಿರುವ ಬೆಳೆ ನಷ್ಟದ ಅಂದಾಜು 50 ರಿಂದ 60 ಸಾವಿರ ಕೋಟಿವರೆಗೆ ತಲುಪುವ ಸಾಧ್ಯತೆಯಿದ್ದು, ಕೇಂದ್ರ…

1 day ago