ನಾವು ನಮ್ಮ ಜೀವನದ ಸಾಕಷ್ಟು ಸಮಯವನ್ನು ಯಾವ ಸ್ಥಳದಲ್ಲಿ, ಯಾವ ಪ್ರದೇಶದಲ್ಲಿ, ಯಾವ ವ್ಯಕ್ತಿಗಳೊಂದಿಗೆ, ಯಾವ ಭಾವದೊಂದಿಗೆ ಹೆಚ್ಚು ಹೆಚ್ಚು ಕಳೆಯುತ್ತೇವೆಯೋ ಅದರ ಪ್ರಭಾವ ನಮ್ಮ ಬದುಕಿನ ಗುಣಮಟ್ಟದ ಮೇಲೆ ಪರಿಣಾಮ ಬೀರುತ್ತದೆ. ಇದು ಬಹುತೇಕ ಅನಿವಾರ್ಯವಾಗಿ ಸಹಜವಾಗಿಯೇ, ಅನುಕೂಲಕ್ಕೆ ತಕ್ಕಂತೆ ನಡೆಯುತ್ತದೆ. ಇವುಗಳ ಮೇಲೆ ನಿಯಂತ್ರಣ ಸಾಧಿಸಬೇಕಿರುವುದು ನಮ್ಮ ಆಯ್ಕೆ ಮತ್ತು ವಿವೇಚನೆಗೆ ಬಿಟ್ಟಿದ್ದು. ಕೆಲವು ಉದಾಹರಣೆಗಳೆಂದರೆ………
ಆಸ್ಪತ್ರೆಗಳಲ್ಲಿ ಕಳೆಯುವ ದಿನಗಳು ಸಾಮಾನ್ಯವಾಗಿ ನೋವನ್ನು ಉಂಟುಮಾಡುತ್ತದೆ,
ಆಟದ ಮೈದಾನದಲ್ಲಿ ಕಳೆಯುವ ದಿನಗಳು ಸಾಮಾನ್ಯವಾಗಿ ನಲಿವನ್ನು ಕೊಡುತ್ತದೆ.
ಪೋಲೀಸ್ ಸ್ಟೇಷನ್, ಜೈಲು, ನ್ಯಾಯಾಲಯಗಳಲ್ಲಿ ಸವೆಸುವ ಸಮಯ ಯಾವಾಗಲೂ ಕಹಿ ನೆನಪುಗಳನ್ನು ಉಳಿಸುತ್ತದೆ.
ಗ್ರಂಥಾಲಯದಲ್ಲಿ ಸವೆಸುವ ಸಮಯ ಯಾವಾಗಲೂ ಜ್ಞಾನವನ್ನು ವೃದ್ಧಿಸುತ್ತದೆ.
ಸಾವು, ಸ್ಮಶಾನ, ತಿಥಿಗಳಲ್ಲಿ ಭಾಗವಹಿಸಿದಾಗ ಹೃದಯ ಭಾರವಾಗುತ್ತದೆ. ಮದುವೆ, ನಾಮಕರಣ, ಗೃಹ ಪ್ರವೇಶ ಕಾರ್ಯಕ್ರಮಗಳಲ್ಲಿ ಭಾಗವಹಿಸಿದಾಗ ಮನಸ್ಸು ಪ್ರಪುಲ್ಲಗೊಳ್ಳುತ್ತದೆ.
ಸಿನಿಮಾ, ನಾಟಕ, ಸರ್ಕಸ್ ಮುಂತಾದ ಸ್ಥಳಗಳು ಭಾವನೆಗಳನ್ನು ಕೆರಳಿಸುತ್ತವೆ,
ದೇವ ಮಂದಿರ, ಚರ್ಚು, ಮಸೀದಿ, ಮಠ ಮಾನ್ಯಗಳು ಮುಂತಾದ ಪ್ರಾರ್ಥನಾ ಸ್ಥಳಗಳು ಭಾವನೆಗಳನ್ನು ನಿಯಂತ್ರಿಸುತ್ತವೆ.
ಐತಿಹಾಸಿಕ ಮತ್ತು ಪೌರಾಣಿಕ ಘಟನೆಗಳು ಕುತೂಹಲ ಮೂಡಿಸುತ್ತದೆ, ಪ್ರಸ್ತುತ ರಾಜಕೀಯ ಮತ್ತು ಹಿಂಸಾತ್ಮಕ ಘಟನೆಗಳು ಅಸಹ್ಯ ಮತ್ತು ಬೇಸರ ಮೂಡಿಸುತ್ತದೆ.
ಪ್ರಕೃತಿಯೊಂದಿಗಿನ ಒಡನಾಟ ಜೀವನೋತ್ಸಾಹ ಹೆಚ್ಚಿಸುತ್ತದೆ. ಆಧುನಿಕ ತಂತ್ರಜ್ಞಾನದ ಒಡನಾಟ ಜೀವನದ ಬಗ್ಗೆ ಜಿಗುಪ್ಸೆ ಹೆಚ್ಚಿಸುತ್ತದೆ.
ಪ್ರಶ್ನಿಸುವ ಮನೋಭಾವ ಮನಸ್ಸನ್ನು ವಿಶಾಲಗೊಳಿಸಿ ಸದಾ ಜಾಗೃತವಾಗಿಟ್ಟಿರುತ್ತದೆ. ಪ್ರಶ್ನಿಸದೆ ಒಪ್ಪಿಕೊಳ್ಳುವ ಮನೋಭಾವ ಮನಸ್ಸನ್ನು ಸಂಕುಚಿತಗೊಳಿಸಿ ಅರಿವಿನ ಮಟ್ಟವನ್ನು ಕುಗ್ಗಿಸುತ್ತದೆ.
ದ್ವೇಷ, ಅಸೂಯೆ, ಅಹಂಕಾರ, ಪ್ರತಿಕಾರಗಳು, ಸಂಬಂಧಗಳನ್ನು ನಾಶಪಡಿಸುತ್ತದೆ.
ಪ್ರೀತಿ, ಸಹಕಾರ, ತ್ಯಾಗ, ತಾಳ್ಮೆ , ಕರುಣೆ, ಕ್ಷಮೆ ಸಂಬಂಧಗಳನ್ನು ಬೆಳೆಯುತ್ತವೆ.
ಈ ಎಲ್ಲಾ ಆಯ್ಕೆಗಳು ಬಹುತೇಕ ನಮ್ಮ ನಿಯಂತ್ರಣಕ್ಕೆ ಒಳಪಟ್ಟಿರುತ್ತದೆ. ಅನಿವಾರ್ಯತೆ ಹೊರತುಪಡಿಸಿ
ನಾವು ಯಾವುದನ್ನು ಎಷ್ಟು ಪ್ರಮಾಣದಲ್ಲಿ ಉಪಯೋಗಿಸಿಕೊಳ್ಳುತ್ತೇವೆ ಎಂಬುದರ ಮೇಲೆ ಬದುಕಿನ ಘನತೆ ನಿರ್ಧರಿಸಲ್ಪಡುತ್ತದೆ. ಆದಷ್ಟು ಉತ್ತಮ ವಾತಾವರಣದಲ್ಲಿ ಜೀವಿಸಲು ಪ್ರಯತ್ನಿಸಿ……….
ಪ್ರಬುದ್ಧ ಮನಸ್ಸು ಪ್ರಬುದ್ಧ ಸಮಾಜ,
ಜನರ ಜೀವನಮಟ್ಟ ಸುಧಾರಣೆಯ ಗುರಿಯೊಂದಿಗೆ,
ಮನಗಳಲ್ಲಿ – ಮನೆಗಳಲ್ಲಿ – ಮತಗಳಲ್ಲಿ – ಪರಿವರ್ತನೆಗಾಗಿ,
ಮನಸ್ಸುಗಳ ಅಂತರಂಗದ ಚಳವಳಿ
ಲೇಖಕ-ವಿವೇಕಾನಂದ. ಎಚ್. ಕೆ
ಅಪಘಾತವಾಗಿ ಬಿದ್ದಿದ್ದ ವ್ಯಕ್ತಿಯ ಮೊಬೈಲ್ ನಿಂದ ಫೋನ್ ಪೇ ಮೂಲಕ 80 ಸಾವಿರ ಮೋಸದಿಂದ ಪಡೆದು ಆಸ್ಪತ್ರೆಗೂ ಸಹ ದಾಖಲಿಸದೇ…
ಚಿಕ್ಕಬಳ್ಳಾಪುರ ನಗರದ ಬಿ ಬಿ ರಸ್ತೆಯಲ್ಲಿರುವ ಎಯು ಜ್ಯುವೆಲ್ಲರಿ ಶಾಪ್ ಗೆ ಕನ್ನ ಹಾಕಿರುವ ಕಳ್ಳರು ಸರಿಸುಮಾರು 3 ಕೋಟಿ…
ಜೆಸಿಬಿ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿ ಓರ್ವ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತೋರ್ವನಿಗೆ ಗಾಯಗಳಾಗಿರುವ ಘಟನೆ ನಿನ್ನೆ…
ದೊಡ್ಡಬಳ್ಳಾಪುರ ನಗರದ ಸಾರ್ವಜನಿಕ ಆಸ್ಪತ್ರೆಗೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಇಂದು ದಿಢೀರ್ ಭೇಟಿ ನೀಡಿ, ಆಸ್ಪತ್ರೆಯಲ್ಲಿನ…
ದೊಡ್ಡಬಳ್ಳಾಪುರ ತಾಲೂಕಿನ ಹಾದ್ರೀಪುರ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆಯನ್ನು ಆಯೋಜಿಸಲಾಗಿತ್ತು. ಗ್ರಾಮ ಸಭೆಯಲ್ಲಿ…
ಡಿ.25ರಂದು ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ ನಡೆಯಲಿದೆ.... ಬ್ರಹ್ಮರಥೋತ್ಸವವನ್ನು ಸುಸೂತ್ರವಾಗಿ ನಡೆಸಲು…